BS Yediyurappa Birthday: ಹುಟ್ಟುಹಬ್ಬ ಹಿನ್ನೆಲೆ ಸಂಜಯನಗರದ ರಾಧಾಕೃಷ್ಣ ದೇವಸ್ಥಾನದಲ್ಲಿ ಯಡಿಯೂರಪ್ಪ ಪೂಜೆ
ಕುಮಾರಕೃಪ ರಸ್ತೆಯಲ್ಲಿರುವ ಕಾವೇರಿ ನಿವಾಸದಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಪುತ್ರರಾದ ಬಿ.ವೈ.ರಾಘವೇಂದ್ರ, ಬಿ.ವೈ.ವಿಜಯೇಂದ್ರ, ಸಚಿವ ಭೈರತಿ ಬಸವರಾಜ್, ಎಸ್.ಆರ್.ವಿಶ್ವನಾಥ್ ಕೂಡ ಶುಭಾಶಯ ತಿಳಿಸಿದ್ದಾರೆ.
ಬೆಂಗಳೂರು: ಫೆಬ್ರವರಿ 27. ಇಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ(BS Yediyurappa) ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಇಂದು ಹುಟ್ಟುಹಬ್ಬ ಹಿನ್ನೆಲೆ ಬೆಂಗಳೂರಿನ ಸಂಜಯನಗರದಲ್ಲಿರುವ ರಾಧಾಕೃಷ್ಣ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಪೂಜೆಯಲ್ಲಿ ಬಿಡಿಎ ಅಧ್ಯಕ್ಷ ವಿಶ್ವನಾಥ್, ಎಂಎಲ್ಸಿ ನಾರಾಯಣಸ್ವಾಮಿ ಭಾಗಿಯಾಗಿದ್ದಾರೆ. ಇನ್ನು ಹುಟ್ಟುಹಬ್ಬದ ಅಂಗವಾಗಿ ಯಡಿಯೂರಪ್ಪ ಕಾವೇರಿ ನಿವಾಸದಲ್ಲಿ ರೈತರಿಗೆ ಉಚಿತ ಟ್ರ್ಯಾಕ್ಟರ್ಗಳನ್ನು ವಿತರಣೆ ಮಾಡಿದ್ರು. ಸಿದ್ದಗಂಗಾ ಮಠದ ಸಿದ್ದಲಿಂಗ ಶ್ರೀ, ಸಚಿವರಾದ ಎಸ್.ಟಿ. ಸೋಮಶೇಖರ್, ಕೆ. ಗೋಪಾಲಯ್ಯ ಯಡಿಯೂರಪ್ಪರಿಗೆ ಶುಭಾಶಯ ಕೋರಿದ್ದಾರೆ.
ಕುಮಾರಕೃಪ ರಸ್ತೆಯಲ್ಲಿರುವ ಕಾವೇರಿ ನಿವಾಸದಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಪುತ್ರರಾದ ಬಿ.ವೈ.ರಾಘವೇಂದ್ರ, ಬಿ.ವೈ.ವಿಜಯೇಂದ್ರ, ಸಚಿವ ಭೈರತಿ ಬಸವರಾಜ್, ಎಸ್.ಆರ್.ವಿಶ್ವನಾಥ್ ಕೂಡ ಶುಭಾಶಯ ತಿಳಿಸಿದ್ದಾರೆ. ಅಲ್ಲದೆ ಮಾಜಿ ಸಿಎಂ ಯಡಿಯೂರಪ್ಪ ಹುಟ್ಟುಹಬ್ಬ ಹಿನ್ನೆಲೆ ಬೆಂಗಳೂರಿನ ಅಣ್ಣಮ್ಮ ದೇವಿ ದೇವಸ್ಥಾನದಲ್ಲಿ ಯಡಿಯೂರಪ್ಪ ಬೆಂಬಲಿಗರು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಮತ್ತೊಂದೆಡೆ ಸಚಿವ ಕೆ.ಗೋಪಾಲಯ್ಯ, ಸಂಸದ ಡಿ.ವಿ.ಸದಾನಂದಗೌಡ ನಂದಿನಿ ಬಡಾವಣೆಯಲ್ಲಿ ಉಚಿತ ಆರೋಗ್ಯ ತಪಾಸಣೆ, ವಿಕಲಚೇತನರಿಗೆ ತ್ರಿಚಕ್ರ ವಾಹನ ವಿತರಣೆ ಮಾಡಿದ್ದಾರೆ.