AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ಸವಾಲಿನ ಸಂದರ್ಭದಲ್ಲಿ ಸಿಎಂ ಆಗಿ ಆತ್ಮಸ್ಥೈರ್ಯದಿಂದ ಕೆಲಸ ಮಾಡಿದ್ದೇನೆ: ಸಿಎಂ ಬೊಮ್ಮಾಯಿ

ಬಜೆಟ್​ ಅಧಿವೇಶನ ಪ್ರಾರಂಭವಾಗಿದ್ದು, ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ ವಂದನಾ ನಿರ್ಣಯದ ಮೇಲೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉತ್ತರ ನೀಡಿದ್ದು, ರಾಜ್ಯಪಾಲರ ಭಾಷಣದಲ್ಲಿ ರಾಜಕೀಯ ಇಲ್ಲ, ಸತ್ಯವನ್ನೇ ಹೇಳಿದ್ದಾರೆ. ಸಮ್ಮಿಶ್ರ ಸರ್ಕಾರ ಹೇಗೆ ರಚನೆಯಾಯ್ತು ಎಂದು ಎಲ್ಲರಿಗೂ ಗೊತ್ತಿದೆ ಎಂದು ಹೇಳಿದರು.

ನಾನು ಸವಾಲಿನ ಸಂದರ್ಭದಲ್ಲಿ ಸಿಎಂ ಆಗಿ ಆತ್ಮಸ್ಥೈರ್ಯದಿಂದ ಕೆಲಸ ಮಾಡಿದ್ದೇನೆ: ಸಿಎಂ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
TV9 Web
| Updated By: ವಿವೇಕ ಬಿರಾದಾರ|

Updated on:Feb 20, 2023 | 1:07 PM

Share

ಬೆಂಗಳೂರು: ಬಜೆಟ್​ ಅಧಿವೇಶನ ಪ್ರಾರಂಭವಾಗಿದ್ದು, ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ ವಂದನಾ ನಿರ್ಣಯದ ಮೇಲೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ಅವರು ಉತ್ತರ ನೀಡಿದ್ದು, ರಾಜ್ಯಪಾಲರ ಭಾಷಣದಲ್ಲಿ (Governor speech) ರಾಜಕೀಯ ಇಲ್ಲ, ಸತ್ಯವನ್ನೇ ಹೇಳಿದ್ದಾರೆ. ಸಮ್ಮಿಶ್ರ ಸರ್ಕಾರ ಹೇಗೆ ರಚನೆಯಾಯ್ತು ಎಂದು ಎಲ್ಲರಿಗೂ ಗೊತ್ತಿದೆ. ಸವಾಲಿನ ಸಂದರ್ಭದಲ್ಲಿ ನಾನು ಸಿಎಂ ಆಗಿದ್ದೇನೆ. ನಾವು ಆತ್ಮಸ್ಥೈರ್ಯದಿಂದ ಕೆಲಸ ಮಾಡಿದ್ದೇವೆ. ನಾವು ಒಂದು ದಿನವೂ ಸರಕಾರಿ ನೌಕರರಿಗೆ ಸಂಬಳ ನಿಲ್ಲಿಸಲಿಲ್ಲ. ತೆರಿಗೆ ಸುಧಾರಣೆಯಲ್ಲಿ ಗಣನೀಯ ಸುಧಾರಣೆ ಆಗಿದೆ ಎಂದರು.

ವಿಧಾನಸಭೆಯಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ ಬಿಎಸ್​ ಯಡಿಯೂರಪ್ಪ (BS Yediyurappa) ಅವರ ನೇತೃತ್ವದ ಸರ್ಕಾರ ರಚನೆಯಾದಾಗ ಪ್ರವಾಹ ಬಂದಿತ್ತು. ಬಳಿಕ ಕೊರೊನಾ ಬಂದಾಗ ಜೀವನ ನಡೆಸಲು ಸಮಸ್ಯೆಯಾಗಿತ್ತು. ಆಕ್ಸಿಜನ್ ಪೂರೈಕೆ ಮಾಡಲು ಸೂಕ್ತ ಕ್ರಮ ತೆಗೆದುಕೊಂಡೆವು. ಒಂದು ದಿನವೂ ಆಕ್ಸಿಜನ್ ಕೊರತೆಯಾಗದಂತೆ ಕ್ರಮ ಕೈಗೊಂಡಿದ್ದೇವೆ ಕೊರೊನಾ ಲಸಿಕೆ ನೀಡುವಾಗ ಅಪನಂಬಿಕೆಯ ಮಾತುಗಳು ಬಂದವು. ಆದರೆ ನಾವು ನೀಡಿದ ಲಸಿಕೆ ದೊಡ್ಡ ಪ್ರಮಾಣದಲ್ಲಿ ಯಶಸ್ವಿಯಾಗಿದೆ ಎಂದು ಹೇಳಿದ್ದಾರೆ.

ಉತ್ತಮವಾಗಿ ತೆರಿಗೆ ಸಂಗ್ರಹ ಹಿನ್ನೆಲೆ ಉತ್ತಮ ಬಜೆಟ್ ಕೊಟ್ಟಿದ್ದೇವೆ

ಉತ್ತಮವಾಗಿ ತೆರಿಗೆ ಸಂಗ್ರಹ ಹಿನ್ನೆಲೆ ಉತ್ತಮ ಬಜೆಟ್ ಕೊಟ್ಟಿದ್ದೇವೆ. ರೈತರು ಬೆಳೆದ ಬೆಳೆಗೆ ಬೆಂಬಲ ಬೆಲೆ ನೀಡಿ ಖರೀದಿಸಿದ್ದೇವೆ. ಕಳೆದ 7-8 ವರ್ಷಗಳಿಂದ ಶಾಲಾ ಕೊಠಡಿಗಳ ನಿರ್ಮಿಸಿಲ್ಲ. ಸರ್ವಶಿಕ್ಷಣ ಅಭಿಯಾನ ನಿಂತ ಮೇಲೆ ಕೊಠಡಿ ನಿರ್ಮಿಸಿರಲಿಲ್ಲ. ರಾಜ್ಯಾದ್ಯಂತ 8 ಸಾವಿರ ಶಾಲಾ ಕೊಠಡಿಗಳನ್ನು ನಿರ್ಮಿಸುತ್ತಿದ್ದೇವೆ. ನೂತನಾ ಶಾಲಾ ಕೊಠಡಿಗಳಿಗೆ ವಿವೇಕ ಎಂದು ಹೆಸರಿಟ್ಟಿದ್ದೇವೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಾಲಾ ಕೊಠಡಿಗಳ ನಿರ್ಮಾಣ ಮಾಡಿದ್ದೇವೆ ಎಂದರು.

15 ಸಾವಿರ ಶಿಕ್ಷಕರ ನೇಮಕ ಮಾಡಿದ್ದೇವೆ

15 ಸಾವಿರ ಶಿಕ್ಷಕರ ನೇಮಕ ಮಾಡಿದ್ದೇವೆ. ಕಲ್ಯಾಣ ಕರ್ನಾಟ ಭಾಗಕ್ಕೆ 5 ಸಾವಿರ ಶಾಲಾ ಶಿಕ್ಷಕರ ನೇಮಕ ಮಾಡಿದ್ದೇವೆ. ಕೋರ್ಟ್​ ಆದೇಶದ ನಂತರ ನೇಮಕಾತಿ ಆದೇಶ ನೀಡುತ್ತೇವೆ. ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ಎಲ್ಲ ಸಿದ್ಧತೆ ಮಾಡಿಕೊಂಡಿದ್ದೇವೆ. ಕೃಷಿಗೆ ಬಹಳ ದೊಡ್ಡ ಬೆಂಬಲವನ್ನು ಕೊಡಬೇಕಾಗಿದೆ. ಗೊಬ್ಬರ ಮತ್ತು ಬೀಜದ ಸಬ್ಸಿಡಿ ಕೊಡಲಾಗುತ್ತಿದೆ. ಯಶಸ್ವಿನಿ ಯೋಜನೆಯ ವಿಸ್ತರಣೆ ಬೇಡಿಕೆಗೆ ಸ್ಪಂದಿಸಿದ್ದೇವೆ. 300 ಕೋಟಿ ರೂ. ಮೂಲಕ ಈ ಯೋಜನೆ ವಿಸ್ತರಿಸಿದ್ದೇವೆ. ಇದರಿಂದ ರೈತರಿಗೆ ಒಂದು ರೀತಿಯ ಧೈರ್ಯ ಬಂದಿದೆ. ದಾಖಲೆ ಪ್ರಮಾಣದಲ್ಲಿ ರಾಗಿ ಖರೀದಿ ಮಾಡಿದ್ದೇವೆ. ಜೋಳ, ಕುಚ್ಚಲಕ್ಕಿಯನ್ನು ಸಹ ಖರೀದಿ ಮಾಡಿದ್ದೇವೆ. ತೊಗರಿಬೆಳೆಗೆ ರೋಗ ಬಂದಾಗ ದೊಡ್ಡ ಪ್ರಮಾಣದಲ್ಲಿ ಪರಿಹಾರ ಕೊಟ್ಟೆವು. ಎಕರೆಗೆ 10 ಸಾವಿರ ರೂ. ಪರಿಹಾರ ಕೊಟ್ಟಿದ್ದೇವೆ ಎಂದು ತಿಳಿಸಿದರು.

ಬೊಮ್ಮಾಯಿ ಉತ್ತರ ನೀಡುತ್ತಿದ್ದಂತೆ ಮಧ್ಯಪ್ರವೇಶಿಸಿದ ಬಿ ಎಸ್​ ಯಡಿಯೂರಪ್ಪ

ಸಿಎಂ ಬೊಮ್ಮಾಯಿ ಉತ್ತರ ವೇಳೆ ಶಾಲಾ ಶೌಚಾಲಯಗಳ ಬಗ್ಗೆ ಪ್ರಸ್ತಾಪಿಸುತ್ತಿದ್ದಂತೆ, ಮಾಜಿ ಮುಖ್ಯಮಂತ್ರಿ ಬಿ.ಎಸ್​​.ಯಡಿಯೂರಪ್ಪ ಮಧ್ಯಪ್ರವೇಶ ಮಾಡಿದ್ದಾರೆ. ಶೇ.90ರಷ್ಟು ಸಾರ್ವಜನಿಕ ಶೌಚಾಲಯ ಬಳಕೆಗೆ ಯೋಗ್ಯವಾಗಿಲ್ಲ. ನೀರಿನ ಕೊರತೆಯಿಂದ ಶೌಚಾಲಯ ನಿರ್ವಹಣೆ ಮಾಡಲಾಗುತ್ತಿಲ್ಲ. ಬಹುತೇಕ ಸಾರ್ವಜನಿಕ ಶೌಚಾಲಯಗಳನ್ನು ಮುಚ್ಚಲಾಗಿದೆ. ಹೀಗಾಗಿ ಮನೆ ಮನೆಯಲ್ಲೂ ಶೌಚಾಲಯ ನಿರ್ಮಾಣಕ್ಕೆ ಕ್ರಮಕೈಗೊಳ್ಳಿ. ಈ ಬಗ್ಗೆ ಸಿಎಂ ಬೊಮ್ಮಾಯಿ ಗಮನಹರಿಸಬೇಕು ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:59 pm, Mon, 20 February 23

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್