AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru: ಬೆಂಗಳೂರಿನ ಯಾವ ಪ್ರದೇಶದಲ್ಲಿ ಎಷ್ಟು ಕಟ್ಟಡಗಳು ಶಿಥಿಲಾವಸ್ಥೆಯಲ್ಲಿದೆ? ಇಲ್ಲಿದೆ ವಿವರ

Bengaluru News: ವಲಯವಾರು ಕಟ್ಟಡಗಳ ಮಾಹಿತಿಯನ್ನು ಬಿಬಿಎಂಪಿ ಪಡೆದುಕೊಂಡಿದೆ. ಬಿಬಿಎಂಪಿ ಇತ್ತೀಚೆಗಷ್ಟೆ ವಲಯವಾರು ಸರ್ವೆ ಮಾಡಿತ್ತು. ಒಟ್ಟು 568 ಕಟ್ಟಡಗಳು ಅಪಾಯದಂಚಿನಲ್ಲಿರುವ ಮಾಹಿತಿ ಲಭಿಸಿತ್ತು.

Bengaluru: ಬೆಂಗಳೂರಿನ ಯಾವ ಪ್ರದೇಶದಲ್ಲಿ ಎಷ್ಟು ಕಟ್ಟಡಗಳು ಶಿಥಿಲಾವಸ್ಥೆಯಲ್ಲಿದೆ? ಇಲ್ಲಿದೆ ವಿವರ
ದಾಸರಹಳ್ಳಿಯಲ್ಲಿ ಶಿಥಿಲಗೊಂಡ ಕಟ್ಟಡ (ಸಾಂದರ್ಭಿಕ ಚಿತ್ರ)
TV9 Web
| Updated By: ganapathi bhat|

Updated on: Oct 18, 2021 | 3:26 PM

Share

ಬೆಂಗಳೂರು: ನಗರದಲ್ಲಿ ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳ ಮಾಹಿತಿಯನ್ನು ಬಿಬಿಎಂಪಿ (ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ) ಪಡೆದುಕೊಂಡಿದೆ. ವಲಯವಾರು ಕಟ್ಟಡಗಳ ಮಾಹಿತಿಯನ್ನು ಬಿಬಿಎಂಪಿ ಪಡೆದುಕೊಂಡಿದೆ. ಬಿಬಿಎಂಪಿ ಇತ್ತೀಚೆಗಷ್ಟೆ ವಲಯವಾರು ಸರ್ವೆ ಮಾಡಿತ್ತು. ಒಟ್ಟು 568 ಕಟ್ಟಡಗಳು ಅಪಾಯದಂಚಿನಲ್ಲಿರುವ ಮಾಹಿತಿ ಲಭಿಸಿತ್ತು.

ಯಾವ ಪ್ರದೇಶದಲ್ಲಿ ಎಷ್ಟು ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳಿವೆ? ಬೆಂಗಳೂರು ದಕ್ಷಿಣ ವಲಯ 132 ಬೆಂಗಳೂರು ಪಶ್ಚಿಮ ವಲಯ 121 ಬೆಂಗಳೂರು ಪೂರ್ವ ವಲಯ 113 ಮಹದೇವಪುರ ವಲಯ 27 ಯಲಹಂಕ ವಲಯ 144 ಆರ್.ಆರ್. ನಗರ 11 ದಾಸರಹಳ್ಳಿ 11 ಬೊಮ್ಮನಹಳ್ಳಿ 9

ಹೀಗೆ ಒಟ್ಟು 568 ಕಟ್ಟಡಗಳು ಅಪಾಯದಂಚಿನಲ್ಲಿರುವ ಬಗ್ಗೆ ಬಿಬಿಎಂಪಿಗೆ ಮಾಹಿತಿ ಲಭ್ಯವಾಗಿದೆ.

2019 ಸಮೀಕ್ಷೆಯಂತೆ ಆರ್. ಅಶೋಕ್ ಮಾಹಿತಿ ನಗರದಲ್ಲಿ ಸುಮಾರು 185 ಶಿಥಿಲ ಕಟ್ಟಡಗಳಿವೆ ಎಂದು 2019ರಲ್ಲಿ ನಡೆಸಿದ್ದ ಸಮೀಕ್ಷೆಯಲ್ಲಿ ತಿಳಿದುಬಂದಿತ್ತು ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದರು. ಈ ಕಟ್ಟಡಗಳ ಪೈಕಿ ಕೇವಲ 10 ಕಟ್ಟಡಗಳನ್ನು ಮಾತ್ರ ಈವರೆಗೆ ಒಡೆಯಲಾಗಿದೆ. ಶಿಥಿಲಗೊಂಡಿರುವ 175 ಕಟ್ಟಡಗಳು ಹಾಗೆಯೇ ಇವೆ. ಶಿಥಿಲ ಎಂದು ಗುರುತಿಸಿರುವ ಕಟ್ಟಡಗಳ ಮಾಲೀಕರಿಗೆ ನೋಟಿಸ್ ನೀಡುತ್ತೇವೆ. ಬೆಸ್ಕಾಂಗೆ ಪತ್ರ ಬರೆದು ವಿದ್ಯುತ್ ಕಡಿತ ಮಾಡುತ್ತೇವೆ. ಕಟ್ಟಡಗಳ ಮಾಲೀಕರು ಇಷ್ಟಕ್ಕೆ ಅವಕಾಶ ನೀಡದೆ ಸ್ವತಃ ತಾವೇ ತೆರವುಗೊಳಿಸಲು ಮುಂದಾಗಬೇಕು ಎಂದು ಅಶೋಕ್ ಸಲಹೆ ನೀಡಿದ್ದರು.

ಶಿಥಿಲಗೊಂಡಿರುವ ಕಟ್ಟಡ ಮಾಲೀಕರಿಗೆ ನೋಟಿಸ್ ನೀಡಬೇಕು. ನೋಟಿಸ್ ನೀಡದಿದ್ದರೆ ಬಿಬಿಎಂಪಿ ಜಂಟಿ ಆಯುಕ್ತರೇ ಹೊಣೆಯಾಗಬೇಕಾಗುತ್ತದೆ. ನೋಟಿಸ್ ನೀಡದ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳುತ್ತೇವೆ ಎಂದು ವಿಧಾನಸೌಧದಲ್ಲಿ ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದರು. ಶಿಥಿಲ ಕಟ್ಟಡದ ಬಗ್ಗೆ ಸಾರ್ವಜನಿಕರು ಕೂಡ ಮಾಹಿತಿ ನೀಡಬಹುದು ಎಂದು ಸ್ಪಷ್ಟಪಡಿಸಿದ್ದರು.

ಇದನ್ನೂ ಓದಿ: ಬಿನ್ನಿಮಿಲ್​ನ ಪೊಲೀಸ್ ಕ್ವಾರ್ಟರ್ಸ್ ಕಟ್ಟಡ ನಿರ್ಮಾಣಗೊಂಡು ಮೂರೇ ವರ್ಷಕ್ಕೆ ಕುಸಿಯುವ ಹಂತಕ್ಕೆ ತಲುಪಲು ಕಾರಣ ಇಲ್ಲಿದೆ!

ಇದನ್ನೂ ಓದಿ: ಬೆಂಗಳೂರು ನಗರದಲ್ಲಿ 185 ಶಿಥಿಲ ಕಟ್ಟಡಗಳು: ಕಂದಾಯ ಸಚಿವ ಆರ್.ಅಶೋಕ್

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ