ಬೆಂಗಳೂರು: ನಗರದಲ್ಲಿ ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳ ಮಾಹಿತಿಯನ್ನು ಬಿಬಿಎಂಪಿ (ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ) ಪಡೆದುಕೊಂಡಿದೆ. ವಲಯವಾರು ಕಟ್ಟಡಗಳ ಮಾಹಿತಿಯನ್ನು ಬಿಬಿಎಂಪಿ ಪಡೆದುಕೊಂಡಿದೆ. ಬಿಬಿಎಂಪಿ ಇತ್ತೀಚೆಗಷ್ಟೆ ವಲಯವಾರು ಸರ್ವೆ ಮಾಡಿತ್ತು. ಒಟ್ಟು 568 ಕಟ್ಟಡಗಳು ಅಪಾಯದಂಚಿನಲ್ಲಿರುವ ಮಾಹಿತಿ ಲಭಿಸಿತ್ತು.
ಯಾವ ಪ್ರದೇಶದಲ್ಲಿ ಎಷ್ಟು ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳಿವೆ?
ಬೆಂಗಳೂರು ದಕ್ಷಿಣ ವಲಯ 132
ಬೆಂಗಳೂರು ಪಶ್ಚಿಮ ವಲಯ 121
ಬೆಂಗಳೂರು ಪೂರ್ವ ವಲಯ 113
ಮಹದೇವಪುರ ವಲಯ 27
ಯಲಹಂಕ ವಲಯ 144
ಆರ್.ಆರ್. ನಗರ 11
ದಾಸರಹಳ್ಳಿ 11
ಬೊಮ್ಮನಹಳ್ಳಿ 9
ಹೀಗೆ ಒಟ್ಟು 568 ಕಟ್ಟಡಗಳು ಅಪಾಯದಂಚಿನಲ್ಲಿರುವ ಬಗ್ಗೆ ಬಿಬಿಎಂಪಿಗೆ ಮಾಹಿತಿ ಲಭ್ಯವಾಗಿದೆ.
2019 ಸಮೀಕ್ಷೆಯಂತೆ ಆರ್. ಅಶೋಕ್ ಮಾಹಿತಿ
ನಗರದಲ್ಲಿ ಸುಮಾರು 185 ಶಿಥಿಲ ಕಟ್ಟಡಗಳಿವೆ ಎಂದು 2019ರಲ್ಲಿ ನಡೆಸಿದ್ದ ಸಮೀಕ್ಷೆಯಲ್ಲಿ ತಿಳಿದುಬಂದಿತ್ತು ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದರು. ಈ ಕಟ್ಟಡಗಳ ಪೈಕಿ ಕೇವಲ 10 ಕಟ್ಟಡಗಳನ್ನು ಮಾತ್ರ ಈವರೆಗೆ ಒಡೆಯಲಾಗಿದೆ. ಶಿಥಿಲಗೊಂಡಿರುವ 175 ಕಟ್ಟಡಗಳು ಹಾಗೆಯೇ ಇವೆ. ಶಿಥಿಲ ಎಂದು ಗುರುತಿಸಿರುವ ಕಟ್ಟಡಗಳ ಮಾಲೀಕರಿಗೆ ನೋಟಿಸ್ ನೀಡುತ್ತೇವೆ. ಬೆಸ್ಕಾಂಗೆ ಪತ್ರ ಬರೆದು ವಿದ್ಯುತ್ ಕಡಿತ ಮಾಡುತ್ತೇವೆ. ಕಟ್ಟಡಗಳ ಮಾಲೀಕರು ಇಷ್ಟಕ್ಕೆ ಅವಕಾಶ ನೀಡದೆ ಸ್ವತಃ ತಾವೇ ತೆರವುಗೊಳಿಸಲು ಮುಂದಾಗಬೇಕು ಎಂದು ಅಶೋಕ್ ಸಲಹೆ ನೀಡಿದ್ದರು.
ಶಿಥಿಲಗೊಂಡಿರುವ ಕಟ್ಟಡ ಮಾಲೀಕರಿಗೆ ನೋಟಿಸ್ ನೀಡಬೇಕು. ನೋಟಿಸ್ ನೀಡದಿದ್ದರೆ ಬಿಬಿಎಂಪಿ ಜಂಟಿ ಆಯುಕ್ತರೇ ಹೊಣೆಯಾಗಬೇಕಾಗುತ್ತದೆ. ನೋಟಿಸ್ ನೀಡದ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳುತ್ತೇವೆ ಎಂದು ವಿಧಾನಸೌಧದಲ್ಲಿ ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದರು. ಶಿಥಿಲ ಕಟ್ಟಡದ ಬಗ್ಗೆ ಸಾರ್ವಜನಿಕರು ಕೂಡ ಮಾಹಿತಿ ನೀಡಬಹುದು ಎಂದು ಸ್ಪಷ್ಟಪಡಿಸಿದ್ದರು.
ಇದನ್ನೂ ಓದಿ: ಬಿನ್ನಿಮಿಲ್ನ ಪೊಲೀಸ್ ಕ್ವಾರ್ಟರ್ಸ್ ಕಟ್ಟಡ ನಿರ್ಮಾಣಗೊಂಡು ಮೂರೇ ವರ್ಷಕ್ಕೆ ಕುಸಿಯುವ ಹಂತಕ್ಕೆ ತಲುಪಲು ಕಾರಣ ಇಲ್ಲಿದೆ!
ಇದನ್ನೂ ಓದಿ: ಬೆಂಗಳೂರು ನಗರದಲ್ಲಿ 185 ಶಿಥಿಲ ಕಟ್ಟಡಗಳು: ಕಂದಾಯ ಸಚಿವ ಆರ್.ಅಶೋಕ್