ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ: ಸಾವಿನ ಸಂಖ್ಯೆ 5ಕ್ಕೆ ಏರಿಕೆ

ರಾಜಧಾನಿ ಬೆಂಗಳೂರಿನಲ್ಲಿ ಮಹಾಮಳೆ ಅಬ್ಬರದ ಜತೆ ನಿರ್ಮಾಣ ಹಂತದ ಕಟ್ಟಡ ಕುಸಿದುಬಿದ್ದಿದ್ದು, ಜನರನ್ನು ಬೆಚ್ಚಿಬೀಳಿಸಿದೆ. ಇನ್ನು ಈ ದುರ್ಘಟನೆಯಲ್ಲಿ ಸತ್ತವರ ಸಂಖ್ಯೆ ಐದಕ್ಕೆ ಏರಿಕೆಯಾಗಿದ್ದು, ಹಲವರನ್ನು ರಕ್ಷಣೆ ಮಾಡಲಾಗಿದೆ. ಇನ್ನು ಕಟ್ಟಡದ ಅವೇಶಷಗಳಡಿಯಲ್ಲಿ ಸಿಲುಕಿದವರ ರಕ್ಷಣಾ ಕಾರ್ಯಚರಣೆ ಮುಂದುವರಿದಿದೆ.

ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ: ಸಾವಿನ ಸಂಖ್ಯೆ 5ಕ್ಕೆ ಏರಿಕೆ
ನಿರ್ಮಾಣ ಹಂತದ ಕಟ್ಟಡ ಕುಸಿತ
Follow us
Shivaprasad
| Updated By: ರಮೇಶ್ ಬಿ. ಜವಳಗೇರಾ

Updated on:Oct 23, 2024 | 8:58 AM

ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಬೆಂಗಳೂರಿನಲ್ಲಿ ಹಲವಾರು ಅವಘಡಗಳು ಸಂಭವಿಸುತ್ತಿವೆ. ಮಂಗಳವಾರ ಹೆಣ್ಣೂರಿನ ಬಾಬುಸಾಬ್ ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು ಬಿದ್ದಿದ್ದು, ಸಾವಿನ ಸಂಖ್ಯೆ ಐದಕ್ಕೆ ಏರಿಯಾಗಿದೆ. ಬೆಂಗಳೂರಿನ ಹೆಣ್ಣೂರು ಸಮೀಪದ ಬಾಬಾ ಸಾಬ್ ಪಾಳ್ಯದಲ್ಲಿ. 60-40 ಸೈಟ್‌ ಅಳತೆಯಲ್ಲಿ 6 ಅಂತಸ್ತಿನ ಅಪಾರ್ಟ್‌ಮೆಂಟ್ ನಿರ್ಮಿಸಲಾಗ್ತಿತ್ತು. ನಿರ್ಮಾಣಹಂತದ ಕಟ್ಟಡದಲ್ಲಿ ಬಿಹಾರ ಮತ್ತು ಉತ್ತರ ಕರ್ನಾಟಕ ಮೂಲದ 21ಮಂದಿ ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಆದ್ರೆ ಭಾರಿ ಮಳೆ ಹೊಡೆತಕ್ಕೆ, ಕಳಪೆ ಕಾಮಗಾರಿಯಿಂದ ಕೂಡಿದ್ದ ಕಟ್ಟಡ ನಿನ್ನೆ(ಅಕ್ಟೋಬರ್ 22) ಸಂಜೆ ಏಕಾಏಕಿ ದೊಪ್ಪೆಂದು ಕುಸಿದುಬಿದ್ದಿದೆ.

ಮುಂದುವರಿದ ಕಾರ್ಯಾಚರಣೆ

ಮೊಹಮ್ಮದ್ ಸಾಹಿಲ್​​, ತಿರುಪಾಲಿ, ಅರ್ಮಾನ್​​, ಶಂಕರ್​​, ಸತ್ಯರಾಜ್ ಮೃತಪಟ್ಟವರು. ರಾತ್ರಿ ಇಡೀ ಅವಶೇಷಗಳಡಿ ಸಿಲುಕಿದವರ ಪತ್ತೆಕಾರ್ಯ ನಡೆದಿದೆ. ಕಾಮಗಾರಿಯ ವೇಳೆಗೆ 21 ಕಾರ್ಮಿಕರು ಕೆಲಸ ಮಾಡುತ್ತಿದ್ದರು ಎನ್ನಲಾಗಿದ್ದು, ಈಗಾಗಲೇ ಅಗ್ನಿಶಾಮಕ, ಎನ್​​ಡಿಆರ್​ಎಫ್, ಪೊಲೀಸರು ನಿರಂತರ ಕಾರ್ಯಾಚರಣೆ ನಡೆಸಿ 13 ಕಾರ್ಮಿಕರನ್ನು ರಕ್ಷಣೆ ಮಾಡಿದ್ದಾರೆ. ಈ ಪೈಕಿ 6 ಮಂದಿ ಕಾರ್ಮಿಕರಿಗೆ ತೀವ್ರ ಗಾಯಗಳಾಗಿದ್ದು, ಓರ್ವ ಕಾರ್ಮಿಕನ ಪರಿಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.  ಗಾಯಗೊಂಡವರನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಇನ್ನು ಹಲವು ಅವೇಶಷಗಳಡಿಯಲ್ಲಿ ಸಿಲುಕಿರುವ ಶಂಕೆ ಇದ್ದು, ಒಂದು ಹ್ಯಾಮರ್, ಮೂರು ಜೆಸಿಬಿಗಳಿಂದ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ: ಮೂವರ ಶವ ಹೊರಕ್ಕೆ, ಮುಂದುವರಿದ ರಕ್ಷಣಾ ಕಾರ್ಯಾಚರಣೆ

ಮಾಲೀಕನ ವಿರುದ್ಧ ಎಫ್​ಐಆರ್​

ಮಲ್ಲೇಶ್ವರಂನಲ್ಲಿ ವಾಸವಿದ್ದ ಆಂಧ್ರ ಮೂಲದ ಮುನಿರಾಜು ರೆಡ್ಡಿ ಎಂಬುವರಿಗೆ ಸೇರಿದ ಕಟ್ಟಡ ಇದಾಗಿದೆ. 6 ಅಂತಸ್ತಿನ ಅಪಾರ್ಟ್‌ಮೆಂಟ್ ನಿರ್ಮಾಣ ಕಾರ್ಯ 8 ತಿಂಗಳಿಂದ ನಡೆಯುತ್ತಿದೆ. ಆದ್ರೆ, ಇದೀಗ ಏಕಾಏಕಿ ಕುಸಿದುಬಿದ್ದಿದೆ. ಈ ಘಟನೆ ಸಂಭವಿಸುತ್ತಿದ್ದಂತೆಯೇ ಕಟ್ಟಡ ಮಾಲೀಕ ಮುನಿರಾಜು ರೆಡ್ಡಿ ಸಂಪರ್ಕಕ್ಕೆ ಸಿಗದೇ ನಾಪತ್ತೆಯಾಗಿದ್ದಾರೆ. ನಾಲ್ಕು ಅಂತಸ್ತಿನ ಕಟ್ಟಡ ನಿರ್ಮಾಣಕ್ಕೆ ಮಾತ್ರ ಅನುಮತಿ ಪಡೆದಿರುವ ಬಗ್ಗೆ ಮಾಹಿತಿ ಇದೆ. ಆದ್ರೆ, ನೆಲಮಹಡಿ ಪಾರ್ಕಿಂಗ್​ ಬಿಟ್ಟು 7 ಅಂತಸ್ತಿನ ಕಟ್ಟಡ ನಿರ್ಮಾಣ ಆರೋಪ ಕೇಳಿಬಂದಿದೆ. ಸದ್ಯ ಮುನಿರಾಜು ರೆಡ್ಡಿ ವಿರುದ್ಧ ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ.

ಕಟ್ಟಡ ಕುಸಿತಕ್ಕೆ ಕಾರಣವೇನು?

ಕಳಪೆ ಕಾಮಗಾರಿಯಿಂದಲೇ ಕಟ್ಟಡ ಬುಡಮೇಲಾಗಿ ಉರುಳಿ ಬಿದ್ದಿರುವ ಶಂಕೆ ವ್ಯಕ್ತವಾಗಿದೆ. ಮಾಲೀಕ ಆಂಧ್ರಪ್ರದೇಶದ ಮುನಿರಾಜು ರೆಡ್ಡಿ, ಅವರ ಪುತ್ರ ಮೋಹನ್ ರೆಡ್ಡಿ ಹಾಗೂ ಕಟ್ಟಡದ ನಿರ್ಮಾಣ ಕಾಮಗಾರಿಯ ಮೇಸ್ತ್ರಿ ನಾಪತ್ತೆ ಆಗಿದ್ದಾರೆ. ಅವರಿಗೆ ಶೋಧ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಳಪಾಯದಲ್ಲಿ ಕಬ್ಬಿಣದ ರಾಡುಗಳನ್ನು ಸರಿಯಾಗಿ ಅಳವಡಿಕೆ ಮಾಡಿರಲಿಲ್ಲ. ಹಾಗೇ ಕಾಂಪೌಡ್​ ನಿರ್ಮಾಣಕ್ಕೆ ಅಗೆಯಲಾಗಿದ್ದ ಗುಂಡಿಯಲ್ಲಿ ಅಪಾರ ಪ್ರಮಾಣದ ಮಳೆ ನೀರು ಶೇಖರಣೆಗೊಂಡು ಭೂಮಿ ಸಡಿಲವಾಗಿ ಕಟ್ಟಡ ಕುಸಿದಿದೆ ಎನ್ನಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:28 am, Wed, 23 October 24

ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ