Bulli Bai App: ಬುಲ್ಲಿ ಬಾಯ್ ಆ್ಯಪ್ ಪ್ರಕರಣ; ಬೆಂಗಳೂರಿನ ಇಂಜಿನಿಯರಿಂಗ್ ವಿದ್ಯಾರ್ಥಿ ಬಂಧನ

Bengaluru Crime News: ಇದೀಗ ಬಂಧಿತನಾಗಿರುವ ಆರೋಪಿ ಬೆಂಗಳೂರಿನ 2ನೇ ವರ್ಷದ ಸಿವಿಲ್ ಇಂಜಿನಿಯರಿಂಗ್ ವಿದ್ಯಾರ್ಥಿಯಾಗಿದ್ದು, ಆತನನ್ನು ವಿಚಾರಣೆಗಾಗಿ ಮುಂಬೈಗೆ ಕರೆದೊಯ್ಯಲಾಗಿದೆ. ಆ ಯುವಕ ತನ್ನ ಟ್ವಿಟ್ಟರ್​ ಹ್ಯಾಂಡಲ್ ಮೂಲಕ ಬುಲ್ಲಿ ಆ್ಯಪ್​ನ ಕಂಟೆಂಟ್​, ಫೋಟೋಗಳನ್ನು ಶೇರ್ ಮಾಡುತ್ತಿದ್ದ.

Bulli Bai App: ಬುಲ್ಲಿ ಬಾಯ್ ಆ್ಯಪ್ ಪ್ರಕರಣ; ಬೆಂಗಳೂರಿನ ಇಂಜಿನಿಯರಿಂಗ್ ವಿದ್ಯಾರ್ಥಿ ಬಂಧನ
ಬುಲ್ಲಿ ಬಾಯ್ ಆ್ಯಪ್
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Jan 04, 2022 | 1:46 PM

ಬೆಂಗಳೂರು: ‘ಬುಲ್ಲಿ ಬಾಯ್’ ಆ್ಯಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ಬೆಂಗಳೂರಿನ 21 ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಯನ್ನು ಬಂಧಿಸಿದ್ದಾರೆ. ಆತನನ್ನು ಮುಂಬೈಗೆ ಕರೆದುಕೊಂಡು ಹೋಗಲಾಗಿದ್ದು, ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಬುಲ್ಲಿ ಬಾಯ್​ ಆ್ಯಪ್ ಫಾಲೋ ಮಾಡುತ್ತಿದ್ದ ಐವರಲ್ಲಿ ಆ ಯುವಕ ಕೂಡ ಒಬ್ಬನಾಗಿದ್ದ. ಬಂಧಿತ ಯುವಕನ ವಯಸ್ಸನ್ನು ಹೊರತುಪಡಿಸಿ ಮುಂಬೈ ಪೊಲೀಸರು ಬೇರೇನೂ ಮಾಹಿತಿಯನ್ನು ಬಿಟ್ಟುಕೊಟ್ಟಿಲ್ಲ. ಆ ಯುವಕ ಬೆಂಗಳೂರಿನ ಯಾವ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿ ಎಂಬ ಬಗ್ಗೆಯೂ ಮಾಹಿತಿ ಬಹಿರಂಗವಾಗಿಲ್ಲ.

ಪೊಲೀಸರು ಬಂಧಿತ ವಿದ್ಯಾರ್ಥಿಯ ವಿರುದ್ಧ ಐಪಿಸಿ ಮತ್ತು ಐಟಿ ಕಾಯ್ದೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ‘ಬುಲ್ಲಿ ಬಾಯ್’ ಅಪ್ಲಿಕೇಶನ್‌ನಲ್ಲಿ ಮಹಿಳಾ ವೈದ್ಯರ ಫೋಟೋಗಳನ್ನು ಅಪ್‌ಲೋಡ್ ಮಾಡಿ ಹರಾಜು ಹಾಕಲಾಗಿದೆ ಎಂಬ ದೂರಿನ ಆಧಾರದ ಮೇಲೆ ಅಪರಿಚಿತ ವ್ಯಕ್ತಿಗಳ ವಿರುದ್ಧ ಪೊಲೀಸರು ಕೇಸ್ ದಾಖಲಿಸಿದ್ದರು. ಭಾನುವಾರ ಪಶ್ಚಿಮ ಮುಂಬೈ ಸೈಬರ್ ಪೊಲೀಸ್ ಠಾಣೆ ಪೊಲೀಸರು ‘ಬುಲ್ಲಿ ಬಾಯ್’ ಅಪ್ಲಿಕೇಶನ್ ಡೆವಲಪರ್‌ಗಳು ಮತ್ತು ಅಪ್ಲಿಕೇಶನ್ ಅನ್ನು ಪ್ರಚಾರ ಮಾಡಿದ ಟ್ವಿಟರ್ ಹ್ಯಾಂಡಲ್‌ಗಳ ವಿರುದ್ಧ ಪ್ರಕರಣ ದಾಖಲಿಸಿದ್ದರು.

ಮೂಲಗಳ ಪ್ರಕಾರ, ಇದೀಗ ಬಂಧಿತನಾಗಿರುವ ಆರೋಪಿ ಬೆಂಗಳೂರಿನ 2ನೇ ವರ್ಷದ ಸಿವಿಲ್ ಇಂಜಿನಿಯರಿಂಗ್ ವಿದ್ಯಾರ್ಥಿಯಾಗಿದ್ದು, ಆತನನ್ನು ವಿಚಾರಣೆಗಾಗಿ ಮುಂಬೈಗೆ ಕರೆದೊಯ್ಯಲಾಗಿದೆ. ಆ ಯುವಕ ತನ್ನ ಟ್ವಿಟ್ಟರ್​ ಹ್ಯಾಂಡಲ್ ಮೂಲಕ ಬುಲ್ಲಿ ಆ್ಯಪ್​ನ ಕಂಟೆಂಟ್​, ಫೋಟೋಗಳನ್ನು ಶೇರ್ ಮಾಡುತ್ತಿದ್ದ. ಆತನ ಟ್ವಿಟ್ಟರ್ ಖಾತೆಯ ಐಪಿ ಅಡ್ರೆಸ್ ಮೂಲಕ ಆ ಯುವಕನನ್ನು ಪತ್ತೆಹಚ್ಚಿ, ವಶಕ್ಕೆ ಪಡೆಯಲಾಗಿದೆ.

ಏನಿದು ಬುಲ್ಲಿ ಬಾಯ್ ಆ್ಯಪ್?: ಬುಲ್ಲಿ ಬಾಯ್ ಮೊಬೈಲ್ ಆ್ಯಪ್​ನಲ್ಲಿ ಮುಸ್ಲಿಂ ಮಹಿಳೆಯರ ಬಗ್ಗೆ ಅಸಭ್ಯವಾಗಿ ಟೀಕೆಗಳನ್ನು ಮಾಡಲಾಗುತ್ತಿದೆ. ಹಾಗೇ, ಮುಸ್ಲಿಂ ವೈದ್ಯರ, ಮಹಿಳೆಯರ ಫೋಟೋಗಳನ್ನು ಅಪ್​ಲೋಡ್ ಮಾಡಲಾಗುತ್ತಿತ್ತು. ಈ ಆ್ಯಪ್ ಸಾಮಾಜಿಕ ಜಾಲತಾಣ ಬಳಕೆದಾರರಿಂದ ಹಾಗೂ ರಾಜಕೀಯ ವಲಯಗಳಲ್ಲಿ ವ್ಯಾಪಕ ಆಕ್ರೋಶಕ್ಕೆ ಗುರಿಯಾಗಿತ್ತು.

‘ಬುಲ್ಲಿ ಬಾಯಿ’ ಮೊಬೈಲ್ ಅಪ್ಲಿಕೇಶನ್‌ನಲ್ಲಿ ನೂರಾರು ಮುಸ್ಲಿಂ ಮಹಿಳೆಯರನ್ನು “ಹರಾಜಿಗೆ” ಪಟ್ಟಿ ಮಾಡಲಾಗಿದೆ ಮತ್ತು ಅನುಮತಿಯಿಲ್ಲದೆ ಅವರ ಫೋಟೋಗಳನ್ನು ಹಾಕಲಾಗಿದೆ. ಜುಲೈನಲ್ಲಿ “ಸುಲ್ಲಿ ಡೀಲ್ಸ್” ಎಂಬ ಅಪ್ಲಿಕೇಶನ್ ನೂರಾರು ಮುಸ್ಲಿಂ ಮಹಿಳೆಯರ ಚಿತ್ರಗಳನ್ನು “ಆನ್‌ಲೈನ್ ಹರಾಜಿಗಾಗಿ” ಪೋಸ್ಟ್ ಮಾಡಿತ್ತು. “ಸುಲ್ಲಿ” ಎಂಬುದು ಮುಸ್ಲಿಂ ಮಹಿಳೆಯರನ್ನು ಉಲ್ಲೇಖಿಸಲು ಬಳಸುವ ಅವಹೇಳನಕಾರಿ ಪದವಾಗಿದೆ. ಇದೀಗ ಬುಲ್ಲಿ ಬಾಯ್ ಹೆಸರಿನ ಆ್ಯಪ್​ನಲ್ಲಿ ಅದೇ ರೀತಿ ಮಾಡಲಾಗಿದೆ.

ಆ್ಯಪ್ ಮೂಲಕ ಮುಸ್ಲಿಂ ಮಹಿಳೆಯರಿಗೆ ಕಿರುಕುಳ ನೀಡುತ್ತಿರುವುದನ್ನು ರಾಜಕೀಯ ಮುಖಂಡರು ಕೂಡ ಖಂಡಿಸಿದ್ದಾರೆ. ಈ ವೇಳೆ ಬುಲ್ಲಿ ಬಾಯಿ ಎಂಬ ಹ್ಯಾಷ್ ಟ್ಯಾಗ್ ಕೂಡ ಬಳಕೆಯಾಗುತ್ತಿದೆ. ಅವಹೇಳನಕಾರಿ ಟೀಕೆಗಳೊಂದಿಗೆ ಚಿತ್ರಗಳನ್ನು ಹಂಚಿಕೊಂಡವರ ಹೆಸರಿನೊಂದಿಗೆ ಅದನ್ನು ಸೇರಿಸಲಾಗುತ್ತಿದೆ. ಸುಲ್ಲಿ ಡೀಲ್ ಮತ್ತು ಬುಲ್ಲಿ ಬಾಯಿ ಅಪ್ಲಿಕೇಶನ್ ಎರಡನ್ನೂ ಗಿಟ್‌ಹಬ್‌ನಲ್ಲಿ ನಿರ್ಮಿಸಲಾಗಿದೆ ಎಂಬ ಅಂಶವೂ ಮುನ್ನೆಲೆಗೆ ಬಂದಿದೆ. ಈಗ GitHub ಮತ್ತು ಅದರ ಮೇಲೆ ನಿರ್ಮಿಸಲಾದ ಅಂತಹ ಅಪ್ಲಿಕೇಶನ್‌ಗಳ ಬಗ್ಗೆ ಭಾರಿ ಆಕ್ರೋಶ ವ್ಯಕ್ತವಾಗಿದೆ. ಪತ್ರಕರ್ತರು ಸಾಮಾಜಿಕ ಜಾಲತಾಣಗಳಲ್ಲಿ ಈ ವಿಚಾರವನ್ನು ಪ್ರಸ್ತಾಪಿಸಿದಾಗಿನಿಂದ ರಾಜಕೀಯ ವಲಯದಲ್ಲಿ ಚರ್ಚೆ ತೀವ್ರಗೊಂಡಿದೆ.

ಇದನ್ನೂ ಓದಿ: Crime News: ಪ್ರಿಯಕರನೊಂದಿಗೆ ಸೇರಿ ಅತ್ತೆ-ಮಾವನನ್ನೇ ಕೊಂದು, ಸುಟ್ಟು ಹಾಕಿದ ಸೊಸೆ

Bengaluru Power Cut: ಬೆಂಗಳೂರಿನ ಬಹುತೇಕ ಏರಿಯಾಗಳಲ್ಲಿ ಇಂದು ಸಂಜೆ 5ರವರೆಗೆ ಪವರ್ ಕಟ್

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ