AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೀವಂತ ಸುಟ್ಟು ಹಾಕುವುದಾಗಿ MLC ಛಲವಾದಿ ನಾರಾಯಣಸ್ವಾಮಿಗೆ ಬಹಿರಂಗ ಬೆದರಿಕೆ: ಕೇಸ್ ಬುಕ್

ಜೀವಂತ ಸುಟ್ಟು ಹಾಕುವುದಾಗಿ ವಿಧಾನಪರಿಷತ್ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿಗೆ ಬಹಿರಂಗ ಬೆದರಿಕೆ ಹಾಕಲಾಗಿದೆ. ಛಲವಾದಿ ನಾರಾಯಣಸ್ವಾಮಿಯವರನ್ನು ಜೀವಂತ ಸುಟ್ಟುಹಾಕುವುದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ ಹಾಕಲಾಗಿದ್ದು, ಈ ಸಂಬಂಧ ಮಾಜಿ ಶಾಸಕ ವೈ.ಸಂಪಂಗಿ ಮತ್ತು ರಾಜ್ಯ ಬಿಜೆಪಿ ಕಾನೂನು ವಿಭಾಗದ ಸಂಚಾಲಕ ವಸಂತಕುಮಾರ್ ನೇತೃತ್ವದಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಲಾಗಿದೆ.

ಜೀವಂತ ಸುಟ್ಟು ಹಾಕುವುದಾಗಿ MLC ಛಲವಾದಿ ನಾರಾಯಣಸ್ವಾಮಿಗೆ ಬಹಿರಂಗ ಬೆದರಿಕೆ: ಕೇಸ್ ಬುಕ್
Chaluvadi Narayana Swamy
ಕಿರಣ್​ ಹನಿಯಡ್ಕ
| Updated By: ರಮೇಶ್ ಬಿ. ಜವಳಗೇರಾ|

Updated on:Sep 23, 2025 | 8:26 PM

Share

ಬೆಂಗಳೂರು, (ಸೆಪ್ಟೆಂಬರ್ 23): ಛಲವಾದಿ ನಾರಾಯಣಸ್ವಾಮಿಯವರನ್ನು ( Chaluvadi narayana swamy) ಜೀವಂತ ಸುಟ್ಟು ಹಾಕುವುದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಲಾಗಿದ್ದು, ಈ ಸಂಬಂಧ ಸಿದ್ದಣ್ಣ ತೇಜಿ ಮತ್ತು ಶಿವರಾಜ್ ಮುತ್ತಣ್ಣವರ್ ಎಂಬವರ ವಿರುದ್ಧ ದೂರು ದಾಖಲಾಗಿದೆ. ವಿಧಾನಪರಿಷತ್ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಪರವಾಗಿ ಮಾಜಿ ಶಾಸಕ ವೈ.ಸಂಪಂಗಿ ಮತ್ತು ರಾಜ್ಯ ಬಿಜೆಪಿ ಕಾನೂನು ವಿಭಾಗದ ಸಂಚಾಲಕ ವಸಂತಕುಮಾರ್ ನೇತೃತ್ವದಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ (Bengaluru Police commissioner )ದೂರು ಸಲ್ಲಿಕೆ ಮಾಡಲಾಗಿದೆ.

ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಬಿಜೆಪಿ ಕಾನೂನು ವಿಭಾಗದ ಸಂಚಾಲಕ ವಸಂತಕುಮಾರ್, ತಮ್ಮ ವಿರುದ್ಧ ಮಾತನಾಡದಂತೆ ಸರ್ಕಾರ ಕೆಟ್ಟದಾಗಿ ನಡೆದುಕೊಳ್ಳುತ್ತಿದೆ. ಜೀವಂತ ಸುಟ್ಟು ಹಾಕುವುದಾಗಿ ಸೋಷಿಯಲ್ ಮೀಡಿಯಾ ಪೋಸ್ಟ್ ಮಾಡಲಾಗಿದೆ. ಅಲ್ಲದೇ ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿ ಆವರಣದಲ್ಲೇ ಸರ್ಕಾರಿ ಕಚೇರಿ, ಸರ್ಕಾರಿ ವಾಹನಗಳಿಗೆ ಬೆಂಕಿ ಹಚ್ಚುವ ಹೇಳಿಕೆ ಹಿನ್ನೆಲೆ ದೂರು ನೀಡಲಾಗಿದೆ ಎಂದರು.

ಛಲವಾದಿ ನಾರಾಯಣಸ್ವಾಮಿ ಅವರ ಹೇಳಿಕೆ ಸ್ಪಷ್ಟವಾಗಿದೆ. ಅವರು ಯಾವುದೇ ಜಾತಿ ನಿಂದನೆ ಮಾಡಿಲ್ಲ. ವಿಪಕ್ಷ ನಾಯಕರ ಮೇಲೆ ಅನುಮತಿ ಪಡೆಯದೇ ಎಫ್ಐಆರ್ ಮಾಡಲಾಗಿದೆ. ಸಭಾಪತಿ, ರಾಜ್ಯಪಾಲರ ಅನುಮತಿ ಪಡೆಯದೇ ಎಫ್ಐಆರ್ ದಾಖಲಿಸಿದ್ದಾರೆ. ವಿಧಾನಸೌಧ ಮತ್ತು ಹೈಗ್ರೌಂಡ್ಸ್‌ ಪೊಲೀಸ್ ಠಾಣೆಗಳಲ್ಲಿ ಬಿಜೆಪಿ ಹಾಗೂ ಹಿಂದೂ ಕಾರ್ಯಕರ್ತರ ವಿರುದ್ಧ ತುಂಬಾ ಎಫ್ಐಆರ್ ದಾಖಲಿಸುತ್ತಿದ್ದಾರೆ ಎಂದು ಕಿಡಿಕಾರಿದರು.

Published On - 8:25 pm, Tue, 23 September 25

Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!