ಕೆಂಗೇರಿಯ ರಾಮಸಂದ್ರ ಬಳಿ ಸುಟ್ಟು ಕೊಳೆತ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ; ಅತ್ಯಾಚಾರವೆಸಗಿ ಕೊಂದಿರುವ ಶಂಕೆ

ಸ್ಥಳದಿಂದ ರಾಜರಾಜೇಶ್ವರಿ ಆಸ್ಪತ್ರೆಗೆ ಮಹಿಳೆಯ ಮೃತದೇಹ ರವಾನಿಸಲಾಗಿದೆ. ಮರಣೋತ್ತರ ಪರೀಕ್ಷೆ ನಂತರ ನಿಖರ ಕಾರಣ ಗೊತ್ತಾಗಲಿದೆ. ಕೃತ್ಯ ನಡೆದ ಜಾಗದಲ್ಲಿ ಒಂದಷ್ಟು ಮದ್ಯದ ಬಾಟಲಿಗಳು ಪತ್ತೆಯಾಗಿವೆ. ಮದ್ಯ ಸೇವಿಸಿದ ಗ್ಲಾಸ್ ಗಳು ಕೂಡ ಪತ್ತೆಯಾಗಿವೆ.

ಕೆಂಗೇರಿಯ ರಾಮಸಂದ್ರ ಬಳಿ ಸುಟ್ಟು ಕೊಳೆತ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ; ಅತ್ಯಾಚಾರವೆಸಗಿ ಕೊಂದಿರುವ ಶಂಕೆ
ಘಟನಾ ಸ್ಥಳ
Updated By: ಆಯೇಷಾ ಬಾನು

Updated on: Jul 03, 2022 | 6:26 PM

ಬೆಂಗಳೂರು: ನಗರದ ಕೆಂಗೇರಿಯ ರಾಮಸಂದ್ರ ಬಳಿ ಮಹಿಳೆ ಮೇಲೆ ಅತ್ಯಾಚಾರವೆಸಗಿ ಕೊಂದು ಸುಟ್ಟಿರುವ ಸ್ಥಿತಿಯಲ್ಲಿ ಶವ(Woman Dead Body Found) ಪತ್ತೆಯಾಗಿದೆ. ನಿರ್ಮಾಣ ಹಂತದ ಕಟ್ಟಡದಲ್ಲಿ ದುಷ್ಕರ್ಮಿಗಳು ಅತ್ಯಾಚಾರವೆಸಗಿ(Rape) ಮಹಿಳೆಯನ್ನು ಕೊಲೆಗೈದಿದ್ದಾರೆ. ನಿರ್ಜನ ಪ್ರದೇಶದಲ್ಲಿ ಮರದ ಕೆಳಗೆ ಮಹಿಳೆ ಶವಕ್ಕೆ ಬೆಂಕಿ ಹಚ್ಚಿದ್ದಾರೆ. ಅರೆಸುಟ್ಟು ಕೊಳೆತ ಸ್ಥಿತಿಯಲ್ಲಿ ಮಹಿಳೆ ಮೃತದೇಹ ಪತ್ತೆಯಾಗಿದೆ. 2ರಿಂದ 3 ದಿನಗಳ ಹಿಂದೆ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು ಸ್ಥಳಕ್ಕೆ ಪಶ್ಚಿಮ ವಿಭಾಗದ ಪ್ರಭಾರ ಡಿಸಿಪಿ ಡಾ.ಶರಣಪ್ಪ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಇನ್ನು ಘಟನಾ ಸ್ಥಳದಲ್ಲಿ ಪರಿಶೀಲನೆ ನಡೆಸಿದ ಬಳಿಕ ಮಾತನಾಡಿದ ಪಶ್ಚಿಮ ವಿಭಾಗ ಪ್ರಭಾರ ಡಿಸಿಪಿ ಶರಣಪ್ಪ, ಕೊಳೆತ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿದೆ. ಪ್ರಾಥಮಿಕ ಮಾಹಿತಿಯಂತೆ ಕೊಲೆ ಮಾಡಿ ಸುಟ್ಟುಹಾಕಿದ್ದಾರೆ. ಕೊಲೆಯಾದ ಮಹಿಳೆಯ ಪತ್ತೆ ಕಾರ್ಯ ನಡೆಯುತ್ತಿದೆ ಎಂದು ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಎಫ್‌ಎಸ್‌ಎಲ್‌ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೆಂಗೇರಿ ಪೊಲೀಸರು ಬೇರೆ ಬೇರೆ ಠಾಣೆಗಳಿಗೆ ಮಾಹಿತಿ ನೀಡಿ ಕಾಣೆಯಾದ ಮಹಿಳೆಯರ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಇದನ್ನೂ ಓದಿ: ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ: ಹಿಂದೂಗಳಿಗೆ ಸೀಮಿತವಾಗದೆ ಎಲ್ಲಾ ವಂಚಿತ, ದೀನದಲಿತ ಸಮುದಾಯಗಳನ್ನು ತಲುಪುವಂತೆ ಮೋದಿ ಕರೆ

ಘಟನಾ ಸ್ಥಳದಿಂದ ರಾಜರಾಜೇಶ್ವರಿ ಆಸ್ಪತ್ರೆಗೆ ಮಹಿಳೆಯ ಮೃತದೇಹ ರವಾನಿಸಲಾಗಿದೆ. ಮರಣೋತ್ತರ ಪರೀಕ್ಷೆ ನಂತರ ನಿಖರ ಕಾರಣ ಗೊತ್ತಾಗಲಿದೆ. ಕೃತ್ಯ ನಡೆದ ಜಾಗದಲ್ಲಿ ಒಂದಷ್ಟು ಮದ್ಯದ ಬಾಟಲಿಗಳು ಪತ್ತೆಯಾಗಿವೆ. ಮದ್ಯ ಸೇವಿಸಿದ ಗ್ಲಾಸ್ ಗಳು ಕೂಡ ಪತ್ತೆಯಾಗಿವೆ.

Published On - 6:26 pm, Sun, 3 July 22