ಯಲಹಂಕ ರೈಲ್ವೆ ಟ್ರ್ಯಾಕ್ ಬಳಿ ಸುಟ್ಟ ಸ್ಥಿತಿಯಲ್ಲಿ ವ್ಯಕ್ತಿಯೋರ್ವನ ಮೃತದೇಹ ಪತ್ತೆ; ಪ್ರಕರಣ ಭೇದಿಸಿದ ಬೆಂಗಳೂರು ರೈಲ್ವೆ ಪೊಲೀಸರು

| Updated By: ಕಿರಣ್ ಹನುಮಂತ್​ ಮಾದಾರ್

Updated on: Feb 27, 2024 | 5:12 PM

ಫೆಬ್ರವರಿ 25 ರಂದು ಯಲಹಂಕ ಬಳಿ ಹಾದುಹೋಗಿರುವ ರೈಲ್ವೆ ಟ್ರ್ಯಾಕ್ ಬಳಿ ಸುಟ್ಟ ಸ್ಥಿತಿಯಲ್ಲಿ 32 ವರ್ಷದ ಸಾಗರ್ ಎಂಬಾತನ ಮೃತದೇಹ ಪತ್ತೆಯಾಗಿತ್ತು. ಇದೀಗ ಈ ಘಟನೆಗೆ ಸಂಬಂಧಿಸಿದಂತೆ ಬೆಂಗಳೂರು ರೈಲ್ವೆ ಪೊಲೀಸರು(Bengaluru Railway Police) ಪ್ರಕರಣವನ್ನು ಭೇಧಿಸಿದ್ದಾರೆ.

ಯಲಹಂಕ ರೈಲ್ವೆ ಟ್ರ್ಯಾಕ್ ಬಳಿ ಸುಟ್ಟ ಸ್ಥಿತಿಯಲ್ಲಿ ವ್ಯಕ್ತಿಯೋರ್ವನ ಮೃತದೇಹ ಪತ್ತೆ; ಪ್ರಕರಣ ಭೇದಿಸಿದ ಬೆಂಗಳೂರು ರೈಲ್ವೆ ಪೊಲೀಸರು
ಮೃತ ವ್ಯಕ್ತಿ
Follow us on

ಬೆಂಗಳೂರು, ಫೆ.27: ಯಲಹಂಕ ರೈಲ್ವೆ ಟ್ರ್ಯಾಕ್ ಬಳಿ ಸುಟ್ಟ ಸ್ಥಿತಿಯಲ್ಲಿ 32 ವರ್ಷದ ಸಾಗರ್ ಎಂಬುವವರ ಮೃತದೇಹ ಪತ್ತೆಯಾಗಿತ್ತು. ಈ  ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ರೈಲ್ವೆ ಪೊಲೀಸರು(Bengaluru Railway Police)ಇದೀಗ ಪ್ರಕರಣವನ್ನು ಭೇಧಿಸಿದ್ದು, ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ಮೃತ ಸಾಗರ್​, ಫೆ.24 ರಂದುಆತ್ಮಹತ್ಯೆಗೆ ನಿರ್ಧರಿಸಿ ವಿಷ ಸೇವಿಸಿದ್ದಾನೆ. ಬಳಿಕ ರೈಲ್ವೆ ಟ್ರ್ಯಾಕ್ ಬಳಿ ತೆರಳಿ, ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಕುರಿತು ಫೆಬ್ರವರಿ 25 ರಂದು ಯಲಹಂಕ ರೈಲ್ವೈ ಟ್ರ್ಯಾಕ್ ಬಳಿ ಮೃತದೇಹ ಪತ್ತೆಯಾಗಿತ್ತು. ಇದು ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂಬ ಪ್ರಶ್ನೆ ಮೂಡಿತ್ತು. ಇದೀಗ ಪೊಲೀಸರು ಇದಕ್ಕೆಲ್ಲ ತೆರೆಎಳೆದಿದ್ದಾರೆ.

ಚರಂಡಿಗೆ ಬಿದ್ದು ಒಂದೂವರೆ ವರ್ಷದ ಮಗು ಸಾವು

ಕೊಪ್ಪಳ: ಜಿಲ್ಲೆಯ ಗಂಗಾವತಿಯ ಎಪಿಎಂಸಿ ಹಮಾಲರ ಕಾಲೋನಿಯಲ್ಲಿ ಮನೆ ಮುಂದಿನ ಚರಂಡಿಗೆ ಬಿದ್ದು ಒಂದುವರೆ ವರ್ಷದ ಮಗು ಸಾವನ್ನಪ್ಪಿದೆ. ಹಮಾಲರ ಕಾಲೋನಿಯ ಪಂಪಾವತಿ, ಅಕ್ಕಮ್ಮ ದಂಪತಿ ಪುತ್ರಿ ಪವಿತ್ರ, ಬೆಳಗ್ಗೆ ಆಟ ಆಡುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಇಂದು(ಫೆ.27) ಮಧ್ಯಾಹ್ನ ಚರಂಡಿಯಲ್ಲಿ ಮಗುವಿನ ಮೃತದೇಹ ಪತ್ತೆಯಾಗಿದೆ. ಚರಂಡಿ ಮುಚ್ಚದೆ ಹಾಗೆ ಬಿಟ್ಟಿರುವ ನಗರಸಭೆ ಅಧಿಕಾರಿಗಳ ವಿರುದ್ದ ಇದೀಗ ಆಕ್ರೋಶ ಕೇಳಿಬಂದಿದ್ದು, ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ. ನಗರಸಭೆ ಕಚೇರಿ ಬಳಿ ಮಗುವಿನ ‌ಶವ‌ವಿಟ್ಟು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಗಂಗಾವತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ವಿಜಯನಗರ: ಕೌಟುಂಬಿಕ ಕಲಹ; ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಯತ್ನ

ಮೊಬೈಲ್ ಫೋನ್ ಸುಲಿಗೆ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

ಬೆಂಗಳೂರು: ವ್ಯಕ್ತಿ ಮೇಲೆ ಹಲ್ಲೆ ಮಾಡಿ ಮೊಬೈಲ್ ಫೋನ್​ ಕದ್ದು ಪರಾರಿಯಾಗುತ್ತಿದ್ದ ಇಬ್ಬರು ಕಳ್ಳರನ್ನು ಚೇಸ್​ ಮಾಡಿ ಹೊಯ್ಸಳ ಪೊಲೀಸರು ಬಂಧಿಸಿದ್ದಾರೆ. ಸ್ಟೀಫನ್ ರಾಜ್ ಮತ್ತು ವಿನೋದ್​​ ಬಂಧಿತರು. ಮೊಬೈಲ್ ಕದ್ದು ಪರಾರಿಯಾಗುತ್ತಿದ್ದವರ ಬಗ್ಗೆ ವ್ಯಕ್ತಿಯೋರ್ವ 112 ಸಂಖ್ಯೆಗೆ ಕರೆ ಮಾಡಿ ಪೊಲೀಸರಿಗೆ ಮಾಹಿತಿ ನೀಡಿದ್ದ. ಕೂಡಲೇ ಇಂದಿರಾನಗರ ಪೊಲೀಸರಿಗೆ ಪ್ರಕರಣ ವರ್ಗಾವಣೆ ಮಾಡಲಾಗಿತ್ತು. ತಕ್ಷಣ ಎಚ್ಚೆತ್ತ ಹೊಯ್ಸಳ ಪೊಲೀಸರು ಚೇಸ್​ ಮಾಡಿ ಬಂಧಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:08 pm, Tue, 27 February 24