Bengaluru Airport: ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಬಸ್ ಅಪಘಾತ; 10ಕ್ಕೂ ಅಧಿಕ ಪ್ರಯಾಣಿಕರಿಗೆ ಗಾಯ
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಟರ್ಮಿನಲ್ 2ಯಿಂದ ಪ್ರಯಾಣಿಕರನ್ನು ಕರೆದುಕೊಂಡು ಹೋಗುತ್ತಿದ್ದ ಬಸ್ ಅಪಘಾತವಾಗಿದೆ. ಘಟನೆಯಲ್ಲಿ 10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿದ್ದು ಚಿಕಿತ್ಸೆ ಕೊಡಿಸಲಾಗುತ್ತಿದೆ.
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ(Kempegowda International Airport Bengaluru) ದುರಂತ ಸಂಭವಿಸಿದೆ. ಏರ್ಪೋಟ್ನಲ್ಲಿ ಬಸ್ ಅಪಘಾತವಾಗಿದ್ದು(Bus Accident) 17 ಕ್ಕೂ ಅಧಿಕ ಜನ ಪ್ರಯಾಣಿಕರಿಗೆ ಗಾಯಗಳಾಗಿವೆ. ಟರ್ಮಿನಲ್ 2 ರಿಂದ ಟರ್ಮಿನಲ್ 1 ಕ್ಕೆ ತೆರಳುವ ಶೆಟಲ್ ಬಸ್, ಇಂದು(ಜೂನ್ 18) ಬೆಳಗ್ಗೆ T2 ಯಿಂದ ಪ್ರಯಾಣಿಕರನ್ನ ಕರೆದೋಗುತ್ತಿತ್ತು. ಈ ವೇಳೆ ಚಾಲಕನ ನಿರ್ಲಕ್ಷ್ಯದಿಂದ ಅಪಘಾತ ಸಂಭವಿಸಿದೆ.
ಅಪಘಾತದಲ್ಲಿ ಬಸ್ಸಿನ ಮುಂಭಾಗ ಸಂಪೂರ್ಣ ಜಖಂ ಆಗಿದೆ. ಅದೃಷ್ಟವಶಾತ್ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದು ಸಣ್ಣ ಪುಟ್ಟ ಗಾಯಗಳಾಗಿವೆ. ಗಾಯಾಳುಗಳಿಗೆ ಏರ್ಪೋಟ್ನ ಖಾಸಗಿ ಆಸ್ವತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಇನ್ನು ಈ ಬಗ್ಗೆ ಬಿಐಎಎಲ್ ವಕ್ತಾರ ಮಾಹಿತಿ ನೀಡಿದ್ದು, ಜೂನ್ 18ರ ಬೆಳಗ್ಗೆ 5.15ರ ವೇಳೆ ಬೆಂಗಳೂರು ವಿಮಾನ ನಿಲ್ದಾಣದ T1 ಮತ್ತು T2 ನಡುವೆ ಕಾರ್ಯನಿರ್ವಹಿಸುತ್ತಿದ್ದ ಶಟಲ್ ಬಸ್ T2 ಆಗಮನ ನಿರ್ಗಮನ ರಸ್ತೆಯ ಬಳಿ ಕಂಬಕ್ಕೆ ಡಿಕ್ಕಿ ಹೊಡೆದು 10 ಜನರಿಗೆ ಗಾಯಗಳಾಗಿವೆ. ಬಸ್ಸಿನಲ್ಲಿ ಒಟ್ಟು 17 ಪ್ರಯಾಣಿಕರು (15 ಪ್ಯಾಕ್ಸ್ ಮತ್ತು 2 ಸಿಬ್ಬಂದಿ) ಇದ್ದರು. ಗಾಯಾಳುಗಳನ್ನು ತಕ್ಷಣದ ವೈದ್ಯಕೀಯ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿಸಿದ್ದಾರೆ.
ಬಸ್ಸಿನಲ್ಲಿದ್ದ ಚಾಲಕ ಸಮೇತ ಪ್ರಯಾಣಿಕರಿಗೆ ಸಣ್ಣಾಪುಟ್ಟ ಗಾಯಗಳಾಗಿವೆ. ಎಲ್ಲರಿಗೂ ಏರ್ಪೋಟ್ ವತಿಯಿಂದ ಚಿಕಿತ್ಸೆ ಕೊಡಿಸಿ ಕಳಿಸಿದ್ದೇವೆ. ಘಟನೆ ಹೇಗಾಯ್ತು ಅನ್ನೂ ಬಗ್ಗೆ ತನಿಖೆ ನಡೆಯುತ್ತಿದೆ. ಮತ್ತೊಮ್ಮೆ ಇಂತಹ ಘಟನೆಗಳು ನಡೆಯದಂತೆ ಮತ್ತಷ್ಟು ಎಚ್ಚರಿಕೆ ವಹಿಸುತ್ತೇವೆ ಎಂದು ಟಿವಿ9ಗೆ ಕೆಐಎಬಿ ಆಡಳಿತ ಮಂಡಳಿ ಸ್ಪಷ್ಟನೆ ನೀಡಿದೆ.
ಇದನ್ನೂ ಓದಿ: Belagavi News: ಎರಡು ಲಾರಿ-ಕಾರು ಮಧ್ಯೆ ಅಪಘಾತ; ಇಬ್ಬರ ಸಾವು, ಕಾಡಸಿದ್ದೇಶ್ವರ ಸ್ವಾಮೀಜಿ ಸೇರಿ ಇಬ್ಬರಿಗೆ ಗಾಯ
ಹಾರುತ್ತಿದ್ದ ವಿಮಾನದಲ್ಲಿ ಧೂಮಪಾನ ಮಾಡಿದ ಪ್ರಯಾಣಿಕ, ಕೆಂಪೇಗೌಡ ಏರ್ಪೋಟ್ ಪೊಲೀಸರಿಂದ ಬಂಧನ
ಹಾರುತ್ತಿದ್ದ ವಿಮಾನದ ಶೌಚಾಲಯದಲ್ಲಿ ಸಿಗರೇಟ್ (smoking) ಸೇದಿ ಆತಂಕ ಸೃಷ್ಟಿಸಿದ್ದ ಪ್ರಯಾಣಿಕನ್ನು ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಪ್ರವೀಣ್ ಕುಮಾರ್ ಬಂಧಿತ ಆರೋಪಿ. ಅಹಮದಾಬಾದ್‌ನಿಂದ ಬೆಂಗಳೂರಿಗೆ ಬರುತ್ತಿದ್ದ ಆರೋಪಿ ಆಕಾಶ್ ಏರ್ ವಿಮಾನದಲ್ಲಿ ನಿಯಮ ಉಲ್ಲಂಘಿಸಿದ್ದಾನೆ. ಕೆಐಎಬಿಯಲ್ಲಿ ಪ್ರವೀಣ್ ಕುಮಾರ್‌ನನ್ನು ಬಂಧಿಸಿ ಏರ್‌ಪೋರ್ಟ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮತ್ತೊಂದು ಪ್ರಕರಣದಲ್ಲಿ ಅಸ್ಸಾಂನಿಂದ ಬೆಂಗಳೂರಿಗೆ ಬರುತ್ತಿದ್ದ ಪ್ರಯಾಣಿಕ ಶೇಹರಿ ಚೌದರಿ ಎಂಬಾತ ವಿಮಾನದ ಶೌಚಾಲಯದಲ್ಲಿ ಸಿಗರೇಟ್ ಸೇದಿ ಆತಂಕ ಸೃಷ್ಟಿಸಿದ್ದ. 6E 716 ಇಂಡಿಗೂ ವಿಮಾನದಲ್ಲಿ ಮಧ್ಯರಾತ್ರಿ 01:30 ರ ವೇಳೆ ಈ ಘಟನೆ ನಡೆದಿತ್ತು.
ಸಿಗರೇಟ್ ಸೇದಿದ ಪ್ರಯಾಣಿಕ
ವಿಮಾನದ ಶೌಚಾಲಯದಲ್ಲಿ ಹೊಗೆ ಮತ್ತು ವಾಸನೆ ಬಂದ ಹಿನ್ನೆಲೆ ವಿಮಾನದ ಸಿಬ್ಬಂದಿ ಪರಿಶೀಲನೆ ನಡೆಸಿದ್ದರು. ಈ ವೇಳೆ ಪ್ರಯಾಣಿಕ ಸಿಗರೇಟ್ ಸೇದಿರುವುದು ಬೆಳಕಿಗೆ ಬಂದಿತ್ತು. ಹೀಗಾಗಿ ಬೆಂಗಳೂರಿಗೆ ಬಂದ ಕೂಡಲೆ ಏರ್ಲೈನ್ಸ್ ಸಿಬ್ಬಂದಿ ಪ್ರಯಾಣಿಕನನ್ನ ಭದ್ರತಾ ಪಡೆಗೆ ನೀಡಿದ್ದರು. ಪ್ರಯಾಣಿಕನ ವಿರುದ್ದ ಪ್ರಕರಣ ದಾಖಲಿಸಿಕೊಂಡು ಏರ್ಪೋಟ್ ಪೊಲೀಸರು ಬಂಧಿಸಿದ್ದರು.
ಬೆಂಗಳೂರಿಗೆ ಸಂಬಂಧಿಸಿದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
Published On - 7:19 am, Sun, 18 June 23