AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಸ್ ದರ ಹೆಚ್ಚಳ: ಅಶೋಕ್ ಅವಧಿಯಲ್ಲಿ ಟಿಕೆಟ್​ ದರ ಏರಿಕೆ ಪಟ್ಟಿ ರಿಲೀಸ್​ ಮಾಡಿದ ರಾಮಲಿಂಗಾರೆಡ್ಡಿ

ಬೆಂಗಳೂರಿನಲ್ಲಿ ಬಸ್ ಪ್ರಯಾಣ ದರ ಶೇಕಡಾ 15ರಷ್ಟು ಏರಿಕೆಯಾಗಿದ್ದು, ಜನರ ಆಕ್ರೋಶಕ್ಕೆ ಕಾರಣವಾಗಿದೆ. ಬಿಜೆಪಿ ನಾಯಕರು ಸರ್ಕಾರದ ವಿರುದ್ಧ ಪ್ರತಿಭಟನೆ ಕೂಡ ಮಾಡಿದ್ದಾರೆ. ಇದೀಗ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಮಾಜಿ ಸಚಿವ ಆರ್. ಅಶೋಕ್ ಅವರ ಅವಧಿಯಲ್ಲಿ ಆದ ದರ ಏರಿಕೆ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.

ಬಸ್ ದರ ಹೆಚ್ಚಳ: ಅಶೋಕ್ ಅವಧಿಯಲ್ಲಿ ಟಿಕೆಟ್​ ದರ ಏರಿಕೆ ಪಟ್ಟಿ ರಿಲೀಸ್​ ಮಾಡಿದ ರಾಮಲಿಂಗಾರೆಡ್ಡಿ
ಬಸ್ ದರ ಹೆಚ್ಚಳ: ಅಶೋಕ್ ಅವಧಿಯಲ್ಲಿ ಟಿಕೆಟ್​ ದರ ಏರಿಕೆ ಪಟ್ಟಿ ರಿಲೀಸ್​ ಮಾಡಿದ ರಾಮಲಿಂಗಾರೆಡ್ಡಿ
Kiran Surya
| Updated By: ಗಂಗಾಧರ​ ಬ. ಸಾಬೋಜಿ|

Updated on:Jan 04, 2025 | 9:24 PM

Share

ಬೆಂಗಳೂರು, ಜನವರಿ 04: ಬಸ್​​ ಪ್ರಯಾಣ ದರದಲ್ಲಿ ಶೇ.15ರಷ್ಟು ಏರಿಕೆ ಮಾಡಿರೋದು ಜನರ ಆಕ್ರೋಶಕ್ಕೆ ಕಾರಣವಾಗಿದೆ. ಮೆಜೆಸ್ಟಿಕ್​ನ ಕೆಂಪೇಗೌಡ ಬಸ್​ ನಿಲ್ದಾಣದಲ್ಲಿ ಬೆಲೆ ಏರಿಕೆ ಖಂಡಿಸಿ ಸರ್ಕಾರದ ವಿರುದ್ಧ ಬಿಜೆಪಿ (BJP) ನಾಯಕರು ಪ್ರತಿಭಟನೆ ಕೂಡ ಮಾಡಿದ್ದಾರೆ. ಇದೀಗ ಆರ್​​. ಅಶೋಕ್ ಅವಧಿಯಲ್ಲಿ ಟಿಕೆಟ್​ ದರ ಏರಿಕೆ ಪಟ್ಟಿಯನ್ನು ಬಿಡುಗಡೆ ಮಾಡುವ ಮೂಲಕ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಟಾಂಗ್​ ಕೊಟ್ಟಿದ್ದಾರೆ.

ಸಾರಿಗೆ ನಿಗಮಗಳ ಶೇ.15ರಷ್ಟು ಬಸ್ ಟಿಕೆಟ್ ದರ ಏರಿಕೆ ಸಂಬಂಧ ಸರ್ಕಾರದ ವಿರುದ್ದ ಬಿಜೆಪಿ ಸಾಕಷ್ಟು ವಿರೋಧ ವ್ಯಕ್ತಪಡಿಸಿದ್ದರು. ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಹೂ ನೀಡಿ ಪ್ರತಿಭಟನೆ ಕೂಡ ಮಾಡಿದ್ದರು. ಇದರ ಬೆನ್ನಲ್ಲೇ ಬಿಜೆಪಿ ಸರ್ಕಾರ ಇದ್ದಾಗ ವಿಪಕ್ಷ ನಾಯಕ ಆರ್​​. ಅಶೋಕ್ ಅವಧಿಯಲ್ಲಿ ಯಾವ್ಯಾವ ವರ್ಷದಲ್ಲಿ ಎಷ್ಟೆಷ್ಟು ದರ ಏರಿಕೆ‌ ಎಂದು ಪಟ್ಟಿ ರಿಲೀಸ್​ ಮಾಡಿದೆ.

          ದಿನಾಂಕ                                       ಬಸ್ ದರ ಹೆಚ್ಚಳ

  • 29/8/2008                                         12.01%
  • 7/7/2009                                             3.56%
  • 3/3/2010                                             4.76%
  • 23/6/2010                                           3.50%
  • 26/6/2011                                           6.95%
  • 19/12/2011                                          5.01%
  • 30/09/2012                                          12%

ಹೊಸ ವರ್ಷದ ಆರಂಭದಲ್ಲಿ ಬಸ್ ಪ್ರಯಾಣಿಕರಿಗೆ ಬಿಸಿ ಮುಟ್ಟಿಸಿರುವ ಸರ್ಕಾರ, ನಾಲ್ಕು ನಿಗಮಗಳ ಬಸ್ ಪ್ರಯಾಣ ದರ ಏರಿಕೆ ಮಾಡುವ ಮೂಲಕ ಜನರ ಜೇಬಿಗೆ ಕತ್ತರಿ ಹಾಕೋಕೆ ಹೊರಟಿದೆ. ಶಕ್ತಿ ಯೋಜನೆ ಮೂಲಕ ಮಹಿಳೆಯರಿಗೆ ಫ್ರೀ ಬಸ್ ಪ್ರಯಾಣದ ಭಾಗ್ಯ ನೀಡಿದ್ದ ಸರ್ಕಾರ, ಇದೀಗ ಪರ-ವಿರೋಧದ ಮಧ್ಯೆ ಟಿಕೆಟ್ ದರವನ್ನ ಶೇಕಡ 15 ರಷ್ಟು ಏರಿಕೆ ಮಾಡಿ ಆದೇಶ ಹೊರಡಿಸಿದೆ. KSRTC, BMTC ಸೇರಿದಂತೆ ನಾಲ್ಕು ನಿಗಮಗಳ ಟಿಕೆಟ್ ದರ ಏರಿಕೆಯಾಗಿದ್ದು, ಇಂದು ಮಧ್ಯರಾತ್ರಿಯಿಂದಲೇ ನೂತನ ದರ ಜಾರಿ ಮಾಡೋಕೆ ಸಾರಿಗೆ ಇಲಾಖೆ ಸಜ್ಜಾಗಿದೆ.

ಬಸ್ ದರಯೇರಿಕೆಯ ನಿರ್ಧಾರದ ವಿರುದ್ಧ ವಿಪಕ್ಷಗಳು, ಸಾರ್ವಜನಿಕರಿಂದ ವಿರೋಧ ಕೇಳಿಬಂದಿದ್ರೂ ಕೂಡ ಇದೀಗ ಸರ್ಕಾರ ಕೊನೆಗೂ ಬಸ್ ಪ್ರಯಾಣ ದರಕ್ಕೆ ಸರ್ಜರಿ ಮಾಡಿಬಿಟ್ಟಿದೆ. ಸದ್ಯ ಒಂದೆಡೆ ಮಹಿಳೆಯರಿಗೆ ಫ್ರೀ ಬಸ್ ಅಂತಾ ಖುಷಿಪಟ್ಟಿದ್ದ ರಾಜ್ಯದ ಜನರು ಇದೀಗ ಹೊಸ ಟಿಕೆಟ್ ದರ ಕೊಟ್ಟು ಸಾರಿಗೆ ಬಸ್ ಹತ್ತುವ ಸ್ಥಿತಿ ಎದುರಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:23 pm, Sat, 4 January 25

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ