ಉದ್ಯಮಿಗಳು ದೇಣಿಗೆ ನೀಡಿ ತೃಪ್ತರಾಗಬಾರದು, ಸರ್ಕಾರಿ ಕಾಲೇಜುಗಳಿಗೆ ಭೇಟಿ ನೀಡಿ ಅನುಭವ ಹಂಚಿಕೊಳ್ಳಬೇಕು: ಸಿಎಂ ಬೊಮ್ಮಾಯಿ

| Updated By: ಗಂಗಾಧರ​ ಬ. ಸಾಬೋಜಿ

Updated on: Sep 16, 2022 | 10:47 PM

ಸಮಾವೇಶದಲ್ಲಿ 22 ಸರಕಾರಿ ಡಿಗ್ರಿ ಕಾಲೇಜುಗಳ ಅಭಿವೃದ್ಧಿಗೆ ವಿವಿಧ ಉದ್ಯಮಿಗಳು ಒಲವು ತೋರಿದ್ದಾರೆ. ಮುಂಬರುವ ದಿನಗಳಲ್ಲಿ ರಾಜ್ಯದ ಉಳಿದ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳ ಅಭಿವೃದ್ಧಿಗೂ ನೆರವು ನೀಡುವ ಭರವಸೆ ನೀಡಲಾಗಿದೆ.

ಉದ್ಯಮಿಗಳು ದೇಣಿಗೆ ನೀಡಿ ತೃಪ್ತರಾಗಬಾರದು, ಸರ್ಕಾರಿ ಕಾಲೇಜುಗಳಿಗೆ ಭೇಟಿ ನೀಡಿ ಅನುಭವ ಹಂಚಿಕೊಳ್ಳಬೇಕು: ಸಿಎಂ ಬೊಮ್ಮಾಯಿ
ಸಿಎಂ ಬೊಮ್ಮಾಯಿ
Follow us on

ಬೆಂಗಳೂರು: ಉದ್ಯಮಿಗಳು ದೇಣಿಗೆ ನೀಡಿ ತೃಪ್ತರಾಗಬಾರದು. ಸರ್ಕಾರಿ ಕಾಲೇಜುಗಳಿಗೆ ಭೇಟಿ ನೀಡಿ ಅನುಭವ ಹಂಚಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದರು. ವಿಧಾನಸೌಧದಲ್ಲಿ ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ ಸಮಾವೇಶದಲ್ಲಿ ಮಾತನಾಡಿದ ಅವರು ತಮ್ಮ ಅನುಭವ ಹಂಚಿಕೊಂಡ್ರೆ ಮಕ್ಕಳ ಆತ್ಮವಿಶ್ವಾಸ ಹೆಚ್ಚುತ್ತದೆ. ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ದುರ್ಬಲವಾಗಿರುವ ಕುಟುಂಬಗಳಿಂದ ಬರುವ ಮಕ್ಕಳ ಆತ್ಮವಿಶ್ವಾಸ ಹೆಚ್ಚುತ್ತದೆ. ಸುಂದರ ಸಮಾಜ ಸೃಷ್ಟಿಸುವ ಕೆಲಸಕ್ಕೆ ಎಲ್ಲರೂ ಹೆಗಲು ನೀಡಬೇಕು. ಶಿಕ್ಷಣ ಕ್ಷೇತ್ರದಲ್ಲಿ ಸರ್ಕಾರ ಸಾಮಾಜಿಕ ನ್ಯಾಯ ಪಾಲಿಸಬೇಕಾಗುತ್ತೆ.

ಆಗ ಮಾತ್ರ ಸಮಾನತೆಯ ಬಗ್ಗೆ ನಿರೀಕ್ಷೆ ಇಟ್ಟುಕೊಳ್ಳಬಹುದು. ಉದ್ಯಮಿಗಳು ಸಮಾಜದ ಬಗ್ಗೆ ಕಳಕಳಿ ಇಟ್ಟುಕೊಳ್ಳಬೇಕು. ಕಳಕಳಿ ಇಟ್ಟುಕೊಂಡು ದುರ್ಬಲರ ಏಳಿಗೆಗೆ ಮುಂದಾಗಬೇಕು. ಸರ್ಕಾರಿ ಕಾಲೇಜುಗಳು ಕೂಡ ನಮಗೆ ಸೇರಿದ್ದು ಎನ್ನುವ ಅಭಿಮಾನ ಬೆಳೆಸಿಕೊಳ್ಳಬೇಕೆಂದು ಮುಖ್ಯಮಂತ್ರಿ ಬೊಮ್ಮಾಯಿ ಕರೆ ನೀಡಿದರು.

ಕಾಲೇಜುಗಳ ಅಭಿವೃದ್ಧಿಗೆ ಉದ್ಯಮಿಗಳ ಒಲವು:

ಇನ್ನೂ ಸಮಾವೇಶದಲ್ಲಿ 22 ಸರಕಾರಿ ಡಿಗ್ರಿ ಕಾಲೇಜುಗಳ ಅಭಿವೃದ್ಧಿಗೆ ವಿವಿಧ ಉದ್ಯಮಿಗಳು ಒಲವು ತೋರಿದ್ದಾರೆ. ಮುಂಬರುವ ದಿನಗಳಲ್ಲಿ ರಾಜ್ಯದ ಉಳಿದ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳ ಅಭಿವೃದ್ಧಿಗೂ ನೆರವು ನೀಡುವ ಭರವಸೆ ನೀಡಲಾಗಿದೆ. ಶೌಚಾಲಯ, ಪ್ರಯೋಗಾಲಯ, ಗ್ರಂಥಾಲಯ ಮತ್ತು ಇತರ ಸಾಧನ ಸಲಕರಣೆಗಳ ವ್ಯವಸ್ಥೆಗೆ ಸಹಕಾರ ನೀಡಲಿದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.