AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಕಾವೇರಿ ನೀರು ದುರ್ಬಳಕೆ: 692 ಜನರಿಗೆ BWSSB ದಂಡ; 34.60 ಲಕ್ಷ ರೂ ವಸೂಲಿ

BWSSB Cauvery water fine: ಬೆಂಗಳೂರಿನಲ್ಲಿ ಕಾವೇರಿ ನೀರು ದುರ್ಬಳಕೆ ಮಾಡಿದ 692 ಜನರಿಗೆ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಒಟ್ಟು 34.60 ಲಕ್ಷ ರೂ ದಂಡ ವಿಧಿಸಿದೆ. ಆ ಮೂಲಕ ಸಿಲಿಕಾನ್​ ಸಿಟಿ ಜನರಿಗೆ ಬಿಸಿ ಮುಟ್ಟಿಸಲಾಗಿದೆ.

ಬೆಂಗಳೂರಿನಲ್ಲಿ ಕಾವೇರಿ ನೀರು ದುರ್ಬಳಕೆ: 692 ಜನರಿಗೆ BWSSB ದಂಡ; 34.60 ಲಕ್ಷ ರೂ ವಸೂಲಿ
ಬಿಡಬ್ಲ್ಯೂಎಸ್‍ಎಸ್‍ಬಿImage Credit source: x.com/chairmanbwssb
ಗಂಗಾಧರ​ ಬ. ಸಾಬೋಜಿ
|

Updated on: Jul 29, 2026 | 7:31 PM

Share

ಮುಖ್ಯಾಂಶಗಳು

  • ಬೆಂಗಳೂರಿನಲ್ಲಿ ಕಾವೇರಿ ನೀರು ದುರ್ಬಳಕೆ
  • 692 ಜನರಿಗೆ ತಲಾ‌ 5 ಸಾವಿರ ರೂ. ದಂಡ ವಿಧಿಸಿರುವ BWSSB
  • ಒಟ್ಟು 34.60 ಲಕ್ಷ ರೂ. ದಂಡ ವಸೂಲಿ

ಬೆಂಗಳೂರು, ಜುಲೈ 29: ಕಾವೇರಿಯಿಂದ (Cauvery water) ಪ್ರತಿನಿತ್ಯ 3500 ಕ್ಯೂಸೆಕ್ ನೀರು ತಮಿಳುನಾಡಿಗೆ ಬಿಡುಗಡೆ ಮಾಡಬೇಕೆಂದು ಕಾವೇರಿ ನೀರು ನಿಯಂತ್ರಣ ಸಮಿತಿ ಸೂಚನೆ ನೀಡಿದೆ. ಇದು ರಾಜ್ಯದ ರೈತರ ಆಕ್ರೋಶಕ್ಕೆ ಕಾರಣವಾಗಿದೆ. ಇತ್ತ ಬೆಂಗಳೂರಿನಲ್ಲಿ ಕುಡಿಯುವ ಕಾವೇರಿ ನೀರನ್ನು ಅನಗತ್ಯವಾಗಿ ದುರ್ಬಳಕೆ ಮಾಡುತ್ತಿದ್ದ ಗ್ರಾಹಕರಿಗೆ ಬೆಂಗಳೂರು ಜಲಮಂಡಳಿ (BWSSB) ಬಿಸಿ ಮುಟ್ಟಿಸಿದೆ.  692 ಜನರಿಗೆ ತಲಾ‌ 5 ಸಾವಿರ ರೂ. ಅಂತೆ ಒಟ್ಟು 34.60 ಲಕ್ಷ ರೂ. ದಂಡ ವಸೂಲಿ ಮಾಡಿದೆ.

34 ಲಕ್ಷದ 60 ಸಾವಿರ ರೂ ದಂಡ ವಸೂಲಿ

ಬೆಂಗಳೂರಿನಲ್ಲಿ ಕಾವೇರಿ ನೀರು ದುರ್ಬಳಕೆ ಮಾಡಿದ 692 ಜನರಿಗೆ ದಂಡ ವಿಧಿಸಲಾಗಿದೆ. ವಾಹನ ತೊಳೆಯಲು ಹಾಗೂ ಕಟ್ಟಡ ನಿರ್ಮಾಣ ಕಾರ್ಯಗಳಿಗೆ ಕುಡಿಯುವ ನೀರನ್ನು ಬಳಸಿದ ಒಟ್ಟು 692 ಜನರಿಗೆ ಜಲಮಂಡಳಿ ಅಧಿಕಾರಿಗಳು ತಲಾ 5 ಸಾವಿರ ರೂ.ಗಳಂತೆ ಒಟ್ಟು 34 ಲಕ್ಷದ 60 ಸಾವಿರ ರೂ ದಂಡ ವಿಧಿಸಿದ್ದಾರೆ.

ಇದನ್ನೂ ಓದಿ: ಕಾವೇರಿ ಜಲಾನಯನ ಪ್ರದೇಶದ ಪ್ರಮುಖ ಅಣೆಕಟ್ಟುಗಳಲ್ಲಿ ಸದ್ಯ ಇರುವ ನೀರೆಷ್ಟು? ಇಲ್ಲಿದೆ ಮಾಹಿತಿ

ನಗರದ ವಿವಿಧ ವಲಯಗಳಲ್ಲಿ ಪರಿಶೀಲನೆ ನಡೆಸಿದ ಜಲಮಂಡಳಿ, ದಕ್ಷಿಣ ವಲಯದಲ್ಲಿ ಗರಿಷ್ಠ 206 ಜನರಿಗೆ ದಂಡ ವಿಧಿಸಿದೆ. ಉಳಿದಂತೆ ಪಶ್ವಿಮ ವಲಯದಲ್ಲಿ 165, ಕೇಂದ್ರ ವಲಯದಲ್ಲಿ 135, ಪೂರ್ವ ವಲಯದಲ್ಲಿ 100 ಹಾಗೂ ಉತ್ತರ ವಲಯದಲ್ಲಿ 86 ಜನರಿಂದ ನಿಯಮ ಉಲ್ಲಂಘನೆಗೆ ದಂಡ ವಸೂಲಿ ಮಾಡಲಾಗಿದೆ.

ಜುಲೈ 31 ನೀರು ಪೂರೈಕೆಯಲ್ಲಿ ತಾತ್ಕಾಲಿಕ ವ್ಯತ್ಯಯ

ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ವತಿಯಿಂದ ಕಾವೇರಿ ನೀರು ಸರಬರಾಜು ಯೋಜನೆ–5ನೇ ಹಂತದ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗುತ್ತಿರುವ ಹಿನ್ನೆಲೆ ಜುಲೈ 31 ಅಂದರೆ ಶುಕ್ರವಾರ ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ ಸಂಬಂಧಿತ ಪ್ರದೇಶಗಳಲ್ಲಿ ನೀರು ಪೂರೈಕೆಯಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ತಿಳಿಸಲಾಗಿದೆ.

ಈ ಅವಧಿಯಲ್ಲಿ ಅಗತ್ಯ ನಿರ್ವಹಣಾ ಕಾಮಗಾರಿಗಳನ್ನು ಸುರಕ್ಷಿತವಾಗಿ ಹಾಗೂ ಪರಿಣಾಮಕಾರಿಯಾಗಿ ಪೂರ್ಣಗೊಳಿಸುವ ಉದ್ದೇಶದಿಂದ ಜಲರೇಚಕ ಯಂತ್ರಾಗಾರಗಳ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತದೆ. ಆದ್ದರಿಂದ, ಸಂಬಂಧಿತ ಪ್ರದೇಶಗಳ ಸಾರ್ವಜನಿಕರು ತಮ್ಮ ಅಗತ್ಯಕ್ಕೆ ತಕ್ಕಷ್ಟು ನೀರನ್ನು ಮುಂಚಿತವಾಗಿ ಸಂಗ್ರಹಿಸಿಟ್ಟುಕೊಂಡು, ಲಭ್ಯವಿರುವ ನೀರನ್ನು ಮಿತವಾಗಿ ಹಾಗೂ ಜವಾಬ್ದಾರಿಯಿಂದ ಬಳಸುವಂತೆ ವಿನಂತಿಸಲಾಗಿದೆ.

ಇದನ್ನೂ ಓದಿ: ಕರ್ನಾಟಕದ ಜಲ ಪ್ರದೇಶಗಳನ್ನು ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ

ಇನ್ನು ಈ ತಾತ್ಕಾಲಿಕ ವ್ಯತ್ಯಯದಿಂದ ಉಂಟಾಗುವ ಅನಾನುಕೂಲತೆಗೆ ವಿಷಾದ ವ್ಯಕ್ತಪಡಿಸಿರುವ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಗರಕ್ಕೆ ನಿರಂತರ ಹಾಗೂ ವಿಶ್ವಾಸಾರ್ಹ ನೀರು ಪೂರೈಕೆಯನ್ನು ಖಚಿತಪಡಿಸಲು ಸಹಕಾರ ಕೋರಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ