AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಜಲ ಸರಬರಾಜು ಮತ್ತು ಒಳಚರಂಡಿ ಮಂಡಳಿಯಿಂದ ಮಹತ್ವದ ಆದೇಶ: ಕುಡಿಯುವ ನೀರಿನ ಬಳಕೆಗೆ ಹೊಸ ಮಾರ್ಗಸೂಚಿ

Bengaluru News: ಮಳೆ ಕೊರತೆಯಿಂದ ಅಂತರ್ಜಲ ಕುಸಿತ ಹಿನ್ನೆಲೆ, ಬೆಂಗಳೂರಿನಲ್ಲಿ ಈಜುಕೊಳ, ವಾಹನ ತೊಳೆಯಲು ಮತ್ತು ಕಟ್ಟಡ ನಿರ್ಮಾಣಕ್ಕೆ ಕುಡಿಯುವ ನೀರು ಬಳಸುವುದನ್ನು ನಿಷೇಧಿಸಿ ಬೆಂಗಳೂರು ಜಲ ಸರಬರಾಜು ಮತ್ತು ಒಳಚರಂಡಿ ಮಂಡಳಿ ಕಟ್ಟುನಿಟ್ಟಿನ ಹೊಸ ಮಾರ್ಗಸೂಚಿ ಹೊರಡಿಸಿದೆ. ಬೆಂಗಳೂರು ನಗರದ ಶಾಶ್ವತ ಹಾಗೂ ತಾತ್ಕಾಲಿಕ ನಿವಾಸಿಗಳನ್ನು ಸೇರಿಸಿ ಸುಮಾರು 1.4 ಕೋಟಿ ಜನಸಂಖ್ಯೆ ಇರುವುದರಿಂದ ಕುಡಿಯುವ ನೀರನ್ನು ಸಮಾನವಾಗಿ ಮತ್ತು ವಿವೇಕಪೂರ್ವಕವಾಗಿ ಬಳಸುವುದು ಅತ್ಯಗತ್ಯವಾಗಿದೆ ಎಂದು BWSSB ತಿಳಿಸಿದೆ.

ಬೆಂಗಳೂರು ಜಲ ಸರಬರಾಜು ಮತ್ತು ಒಳಚರಂಡಿ ಮಂಡಳಿಯಿಂದ ಮಹತ್ವದ ಆದೇಶ: ಕುಡಿಯುವ ನೀರಿನ ಬಳಕೆಗೆ ಹೊಸ ಮಾರ್ಗಸೂಚಿ
ಸಾಂದರ್ಭಿಕ ಚಿತ್ರImage Credit source: PTI
ಪ್ರಸನ್ನ ಹೆಗಡೆ
|

Updated on: Jul 05, 2026 | 6:43 AM

Share

ಮುಖ್ಯಾಂಶಗಳು

  • ಬೆಂಗಳೂರು ಜಲ ಸರಬರಾಜು & ಒಳಚರಂಡಿ ಮಂಡಳಿಯಿಂದ ಮಹತ್ವದ ಆದೇಶ
  • ಬೆಂಗಳೂರಿನಲ್ಲಿ ಕುಡಿಯುವ ನೀರಿನ ಬಳಕೆಗೆ ಹೊಸ ಮಾರ್ಗಸೂಚಿ ಬಿಡುಗಡೆ
  • ಈಜುಕೊಳ, ಕಟ್ಟಡ ನಿರ್ಮಾಣ ಕಾಮಗಾರಿಗೆ ಕುಡಿಯುವ ನೀರು ಬಳಸುವಂತಿಲ್ಲ

ಬೆಂಗಳೂರು, ಜುಲೈ 05: ಮಳೆ ಕೊರತೆಯಿಂದ ನಗರದ ಕೆಲ ಭಾಗಗಳಲ್ಲಿ ಅಂತರ್ಜಲ ಮಟ್ಟ ಕುಸಿಯುತ್ತಿರುವ ಹಿನ್ನೆಲೆ, ಕುಡಿಯುವ ನೀರಿನ ಸಂರಕ್ಷಣೆಗೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವ ಉದ್ದೇಶದಿಂದ ಬೆಂಗಳೂರು ಜಲ ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ಬಿಡಬ್ಲ್ಯೂಎಸ್​​ಎಸ್​ಬಿ ಕಾಯ್ದೆ, 1964ರ ಕಲಂ 33 ಮತ್ತು 34ರ ಅಡಿಯಲ್ಲಿ ಮೂರು ನಿಷೇಧಾತ್ಮಕ ಹಾಗೂ ನಿಯಂತ್ರಣ ಆದೇಶಗಳನ್ನು ಹೊರಡಿಸಿದೆ. ಆ ಪ್ರಕಾರ ಈಜುಕೊಳಗಳನ್ನು ತುಂಬಿಸಲು ಕುಡಿಯುವ ನೀರನ್ನು ಬಳಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಆದರೆ, ರಾಜ್ಯ ಹಾಗೂ ರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಿಗೆ ಕ್ರೀಡಾಪಟುಗಳ ತರಬೇತಿಗಾಗಿ ಬಳಸುವ ಈಜುಕೊಳಗಳಿಗೆ ಮಂಡಳಿಯ ಪೂರ್ವಾನುಮತಿ ಪಡೆದಿದ್ದರೆ ಈ ನಿಷೇಧ ಅನ್ವಯಿಸುವುದಿಲ್ಲ.

ಅಗತ್ಯವಲ್ಲದ ಉದ್ದೇಶಗಳಿಗೆ ಕುಡಿಯುವ ನೀರಿನ ಬಳಕೆ ನಿಷೇಧ

ಇದರ ಜೊತೆಗೆ, ಹಲವು ಅಗತ್ಯವಲ್ಲದ ಉದ್ದೇಶಗಳಿಗೆ ಕುಡಿಯುವ ನೀರಿನ ಬಳಕೆಯನ್ನೂ BWSSB ನಿಷೇಧಿಸಿದೆ. ವಾಹನ ತೊಳೆಯುವುದು, ಕಟ್ಟಡ ನಿರ್ಮಾಣ ಕಾಮಗಾರಿಗಳು, ಕಾರಂಜಿಗಳಂತಹ ಅಲಂಕಾರಿಕ ಜಲಸೌಲಭ್ಯಗಳು, ಸಿನಿಮಾ ಮಂದಿರಗಳು ಹಾಗೂ ಮಾಲ್‌ಗಳಲ್ಲಿ ಕುಡಿಯುವ ಉದ್ದೇಶವಲ್ಲದ ನೀರಿನ ಬಳಕೆ, ರಸ್ತೆ ನಿರ್ಮಾಣ ಹಾಗೂ ರಸ್ತೆ ಸ್ವಚ್ಛತಾ ಕಾಮಗಾರಿಗಳಿಗೆ ಕುಡಿಯುವ ನೀರನ್ನು ಬಳಸುವುದನ್ನು ನಿಷೇಧಿಸಲಾಗಿದೆ.

ಇದನ್ನೂ ಓದಿ:  ಶ್ರೀರಾಮನ ಚಿನ್ನಾಭರಣ ದೋಚಲು 200 ಖದೀಮರ ಜಾಲ; ಅಯೋಧ್ಯೆಯಿಂದ ರೈಲಿನಲ್ಲಿ ಕರ್ನಾಟಕಕ್ಕೆ ಬರ್ತಿತ್ತಾ ಕದ್ದ ಚಿನ್ನ?

ಅಪಾರ್ಟ್‌ಮೆಂಟ್‌ಗಳು, ಮಾಲ್‌ಗಳು, ವಾಣಿಜ್ಯ ಸಂಕೀರ್ಣಗಳು, ಸರ್ಕಾರಿ ಕಟ್ಟಡಗಳು, ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು ಹಾಗೂ ಧಾರ್ಮಿಕ ಸ್ಥಳಗಳನ್ನು ಒಳಗೊಂಡಂತೆ ಸಾರ್ವಜನಿಕ ಸ್ಥಳಗಳಲ್ಲಿ ಸ್ವಚ್ಛತಾ ಉದ್ದೇಶಕ್ಕಾಗಿ ಬಳಸುವ ನಳಿಕೆಗಳು ಹಾಗೂ ನೀರಿನ ಔಟ್‌ಲೆಟ್‌ಗಳಿಗೆ ಫ್ಲೋ ರಿಸ್ಟ್ರಿಕ್ಟರ್‌ಗಳು (Flow Restrictors) ಅಥವಾ ಏರೇಟರ್‌ಗಳನ್ನು (Aerators) ಅಳವಡಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಈ ಎಲ್ಲಾ ನಿಯಮಗಳನ್ನು ಜುಲೈ 31ರೊಳಗೆ ಕಡ್ಡಾಯವಾಗಿ ಜಾರಿಗೊಳಿಸಬೇಕು ಎಂದು ಮಂಡಳಿ ಸೂಚಿಸಿದೆ.

ಕುಡಿಯುವ ನೀರಿನ ವಿವೇಕಪೂರ್ವ ಬಳಕೆ ಅತ್ಯಗತ್ಯ

ಬೆಂಗಳೂರು ನಗರದ ಶಾಶ್ವತ ಹಾಗೂ ತಾತ್ಕಾಲಿಕ ನಿವಾಸಿಗಳನ್ನು ಸೇರಿಸಿ ಸುಮಾರು 1.4 ಕೋಟಿ ಜನಸಂಖ್ಯೆ ಇರುವುದರಿಂದ ಕುಡಿಯುವ ನೀರನ್ನು ಸಮಾನವಾಗಿ ಮತ್ತು ವಿವೇಕಪೂರ್ವಕವಾಗಿ ಬಳಸುವುದು ಅತ್ಯಗತ್ಯವಾಗಿದೆ ಎಂದು BWSSB ತಿಳಿಸಿದೆ. ಕಡಿಮೆ ಮಳೆಯಿಂದ ನಗರದ ಕೆಲವು ಪ್ರದೇಶಗಳಲ್ಲಿ ಅಂತರ್ಜಲ ಮಟ್ಟ ಕುಸಿದಿರುವ ಹಿನ್ನೆಲೆಯಲ್ಲಿ ನೀರಿನ ವ್ಯರ್ಥ ಬಳಕೆಯನ್ನು ತಡೆಯಲು ಈ ನಿರ್ಬಂಧಗಳನ್ನು ಜಾರಿಗೆ ತರಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಜಲಾಶಯಗಳಲ್ಲಿ ನೀರಿನ ಸಂಗ್ರಹ ಗಣನೀಯ ಇಳಿಕೆ

ನಗರಕ್ಕೆ ಲಭ್ಯವಿರುವ ನೀರಿನ ಪ್ರಮಾಣದ ಕುರಿತು ಪ್ರತಿಕ್ರಿಯಿಸಿದ BWSSB ಅಧ್ಯಕ್ಷೆ ಮಂಜುಳಾ ಎನ್., ಕಡಿಮೆ ಮಳೆಯ ಹಿನ್ನೆಲೆಯಲ್ಲಿ ಈ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ, ಶನಿವಾರ ಸಂಜೆ ವೇಳೆಗೆ ಜಲಾಶಯಗಳಲ್ಲಿ ಕೇವಲ 23 ಶೇಕಡಾ ನೀರು ಮಾತ್ರ ಸಂಗ್ರಹವಾಗಿತ್ತು. ಒಟ್ಟು 895.6 ಟಿಎಂಸಿ ಸಂಗ್ರಹ ಸಾಮರ್ಥ್ಯದಲ್ಲಿ ಸದ್ಯ 203 ಟಿಎಂಸಿ ನೀರು ಮಾತ್ರ ಲಭ್ಯವಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಒಟ್ಟು 114.5 ಟಿಎಂಸಿ ಸಾಮರ್ಥ್ಯದ ಬದಲಾಗಿ ಕೇವಲ 36 ಟಿಎಂಸಿ ನೀರು ಸಂಗ್ರಹವಾಗಿದೆ ಎಂದು ಅವರು ತಿಳಿಸಿರೋದಾಗಿ ದಿ ಟೈಮ್ಸ್​​ ಆಫ್​​ ಇಂಡಿಯಾ ವರದಿ ಮಾಡಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ನಾನಿನ್ನೂ ಬದುಕಿದ್ದೇನೆ; ಬಂಡಾಯ ನಾಯಕರಿಗೆ ಮಮತಾ ಬ್ಯಾನರ್ಜಿ ಎಚ್ಚರಿಕೆ
ನಾನಿನ್ನೂ ಬದುಕಿದ್ದೇನೆ; ಬಂಡಾಯ ನಾಯಕರಿಗೆ ಮಮತಾ ಬ್ಯಾನರ್ಜಿ ಎಚ್ಚರಿಕೆ
‘ಏನಾದ್ರು ಆಗ್ಲಿ, ನಾನು ಕ್ಷಮೆ ಕೇಳಲ್ಲ’: ಸೋನು ಗೌಡ ದಿಟ್ಟ ಮಾತು
‘ಏನಾದ್ರು ಆಗ್ಲಿ, ನಾನು ಕ್ಷಮೆ ಕೇಳಲ್ಲ’: ಸೋನು ಗೌಡ ದಿಟ್ಟ ಮಾತು
‘ಪ್ಯಾಟೆ ಮಂದಿ..’ ರಿಯಾಲಿಟಿ ಶೋ ಸ್ಪರ್ಧಿ ಪದ್ದು ನಿಧನ: ನಡೆದಿದ್ದೇನು?
‘ಪ್ಯಾಟೆ ಮಂದಿ..’ ರಿಯಾಲಿಟಿ ಶೋ ಸ್ಪರ್ಧಿ ಪದ್ದು ನಿಧನ: ನಡೆದಿದ್ದೇನು?
ಬೆಳಗಾವಿ: ಧಾರಾಕಾರ ಮಳೆಗೆ ಕುಸಿದ ಮನೆ ಗೋಡೆ; 7 ಜನರು ಜಸ್ಟ್ ಮಿಸ್​!
ಬೆಳಗಾವಿ: ಧಾರಾಕಾರ ಮಳೆಗೆ ಕುಸಿದ ಮನೆ ಗೋಡೆ; 7 ಜನರು ಜಸ್ಟ್ ಮಿಸ್​!
ಮಳೆಯಿಂದಾಗಿ ಭೂಕುಸಿತದ ಭೀತಿ: ಆಗುಂಬೆ ಘಾಟಿಯಲ್ಲಿ ಘನ ವಾಹನಗಳ ಸಂಚಾರ ಬಂದ್!
ಮಳೆಯಿಂದಾಗಿ ಭೂಕುಸಿತದ ಭೀತಿ: ಆಗುಂಬೆ ಘಾಟಿಯಲ್ಲಿ ಘನ ವಾಹನಗಳ ಸಂಚಾರ ಬಂದ್!
ದಾವಣಗೆರೆ: ಹಳ್ಳ ಹಿಡಿದ 'ಎಸ್ಐಆರ್' ಪ್ರಕ್ರಿಯೆ
ದಾವಣಗೆರೆ: ಹಳ್ಳ ಹಿಡಿದ 'ಎಸ್ಐಆರ್' ಪ್ರಕ್ರಿಯೆ
ರಾಮಮಂದಿರ ದೇಣಿಗೆ ಕಳ್ಳತನ; RSS ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದೇನು?
ರಾಮಮಂದಿರ ದೇಣಿಗೆ ಕಳ್ಳತನ; RSS ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದೇನು?
ಪ್ರಧಾನಿ ಮೋದಿಯಿಂದ ಜೋಧ್‌ಪುರ ವಿಮಾನ ನಿಲ್ದಾಣದ ನೂತನ ಟರ್ಮಿನಲ್ ಉದ್ಘಾಟನೆ
ಪ್ರಧಾನಿ ಮೋದಿಯಿಂದ ಜೋಧ್‌ಪುರ ವಿಮಾನ ನಿಲ್ದಾಣದ ನೂತನ ಟರ್ಮಿನಲ್ ಉದ್ಘಾಟನೆ
ರಾಜ್ಯದಲ್ಲಿ SIR ಪ್ರಕ್ರಿಯೆ ಸರಿಯಾಗಿ ನಡೆಯುತ್ತಿಲ್ಲ: ಪ್ರಹ್ಲಾದ್​ ಜೋಶಿ
ರಾಜ್ಯದಲ್ಲಿ SIR ಪ್ರಕ್ರಿಯೆ ಸರಿಯಾಗಿ ನಡೆಯುತ್ತಿಲ್ಲ: ಪ್ರಹ್ಲಾದ್​ ಜೋಶಿ
ನೆಲಮಂಗಲ: ಮನೆ ಮನೆಗೆ ಹೋಗುವ ಬದಲು ಮಸೀದಿಯಲ್ಲೇ ಕುಳಿತು SIR ಪತ್ರ ವಿತರಣೆ
ನೆಲಮಂಗಲ: ಮನೆ ಮನೆಗೆ ಹೋಗುವ ಬದಲು ಮಸೀದಿಯಲ್ಲೇ ಕುಳಿತು SIR ಪತ್ರ ವಿತರಣೆ