ನೀರು ಪೋಲು ತಡೆಗೆ ಜಲಮಂಡಳಿ ಪ್ಲ್ಯಾನ್: ನಲ್ಲಿಗಳಿಗೆ ಏರಿಯೇಟರ್ ಅಳವಡಿಕೆ ಕಡ್ಡಾಯ, ಮಾರ್ಚ್​ 31ರ ಗಡುವು

ಬೆಂಗಳೂರಿನ ನೀರಿನ ಬಿಕ್ಕಟ್ಟು ಕಡಿಮೆ ಮಾಡುವ ನಿಟ್ಟಿನಲ್ಲಿ ಮತ್ತೊಂದು ಕ್ರಮಕ್ಕೆ ಮುಂದಾಗಿರುವ ಬೆಂಗಳೂರು ಜಲ ಮಂಡಳಿ, ನಗರದಲ್ಲಿರುವ ಎಲ್ಲಾ ನಲ್ಲಿಗಳಿಗೆ ಅಳವಡಿಕೆ ಕಡ್ಡಾಯಗೊಳಿಸಿದೆ.ಮಾರ್ಚ್ 31ರ ಒಳಗೆ ಎಲ್ಲ ನಲ್ಲಿಗಳಿಗೆ ಅಳವಡಿಕೆ ಮಾಡುವಂತೆ ನಂಬರ್​​ಗಳಿಗೆ ಸೂಚನೆ ನೀಡಿದೆ.

ನೀರು ಪೋಲು ತಡೆಗೆ ಜಲಮಂಡಳಿ ಪ್ಲ್ಯಾನ್: ನಲ್ಲಿಗಳಿಗೆ ಏರಿಯೇಟರ್ ಅಳವಡಿಕೆ ಕಡ್ಡಾಯ, ಮಾರ್ಚ್​ 31ರ ಗಡುವು
ಸಾಂದರ್ಭಿಕ ಚಿತ್ರImage Credit source: Neoperl
Follow us
Vinayak Hanamant Gurav
| Updated By: Ganapathi Sharma

Updated on: Mar 20, 2024 | 6:44 AM

ಬೆಂಗಳೂರು, ಮಾರ್ಚ್​ 20: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕುಡಿಯುವ ನೀರಿಗೆ ಹಾಹಾಕಾರ (Bengaluru Water Crisis) ಎದುರಾಗಿದೆ. ನೀರು ಉಳಿತಾಯಕ್ಕೆ ಯೋಜನೆ ಮಾಡುತ್ತಿರುವ ಜಲಮಂಡಳಿ, ಮತ್ತೊಂದು ಸಿದ್ಧತೆ ಮಾಡಿದೆ. ನಲ್ಲಿಗಳಲ್ಲಿ ನೀರು ಪೋಲಾಗುವುದನ್ನ ತಪ್ಪಿಸಲು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ಮುಂದಾಗಿದೆ.

ಅನಗತ್ಯವಾಗಿ ನೀರು ಪೋಲಾಗುವುದನ್ನು ತಡೆಯಲು ಜಲಮಂಡಳಿ ಮುಂದಾಗಿದೆ. ಅದಕ್ಕಾಗಿ ನಲ್ಲಿಗಳಿಗೆ ಏರಿಯೇಟರ್ ಅಳವಡಿಸುವುದನ್ನ ಕಡ್ಡಾಯ ಮಾಡಿದೆ. ಅನಗತ್ಯವಾಗಿ ನೀರು ಪೋಲಾಗುವುದನ್ನು ತಡೆಯುವ ನಿಟ್ಟಿನಲ್ಲಿ ಜಲಮಂಡಳಿ ಪ್ರಧಾನ ಕಚೇರಿಯಲ್ಲಿ ಸೋಮವಾರ ಮಂಡಳಿ ಅಧ್ಯಕ್ಷ ರಾಮ್‌ ಪ್ರಸಾತ್‌ ಮನೋಹರ್‌ ಪ್ಲಂಬರ್‌ ಅಸೋಸಿಯೇಷನ್‌ ಪದಾಧಿಕಾರಿಗಳ ಸಭೆ ನಡೆಸಿ ಈ ನಿರ್ಣಯ ಕೈಗೊಂಡಿದ್ದಾರೆ.

ಮಾರ್ಚ್ 31ರ ಗಡುವು

ನೀರು ಪೋಲು ತಡೆಗೆ ಮಾರ್ಚ್‌ 21 ರಿಂದ ಮಾರ್ಚ್ 31ರ ಒಳಗೆ ನಲ್ಲಿಗಳಿಗೆ ವಾಟರ್‌ ಟ್ಯಾಪ್ ಮಾಸ್ಕ್‌, ಅಂದರೆ ಏರಿಯೇಟರ್‌ ಅಳವಡಿಕೆ ಕಡ್ಡಾಯ ಮಾಡಲಾಗಿದೆ. ನಗರದಲ್ಲಿ ಪರವಾನಗಿ ಹೊಂದಿದ 1,500 ಪ್ಲಂಬರ್‌ಗಳಿದ್ದು, ಏರಿಯೇಟರ್ ಅಳವಡಿಕೆಗೆ ಜಾಗೃತಿ ಮೂಡಿಸಬೇಕಿದೆ. ಏರಿಯೇಟರ್‌ ಅಳವಡಿಸುವುದರಿಂದ ಶೇಕಡಾ 60 ರಿಂದ 85 ರಷ್ಟು ನೀರಿನ ಉಳಿತಾಯ ಮಾಡಬಹುದಾಗಿದೆ.

ವಾಣಿಜ್ಯ ಮಳಿಗೆಗಳು, ಕೈಗಾರಿಕೆಗಳು, ಅಪಾರ್ಟ್‌ಮೆಂಟ್‌ಗಳು, ಐಷಾರಾಮಿ ಹೋಟೆಲ್ ಗಳು ಮತ್ತು ರೆಸ್ಟೋರೆಂಟ್ ಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿನ ನಲ್ಲಿಗಳಿಗೆ ಏರಿಯೇಟರ್ ಅಳವಡಿಕೆ ಕಡ್ಡಾಯ. ಮನೆಗಳಲ್ಲಿ ಸ್ವಯಂ ಪ್ರೇರಿತವಾಗಿ ಏರಿಯೇಟರ್‌ ಅಳವಡಿಕೆ ಮಾಡಿಕೊಳ್ಳಬಹುದು. ಈ ಬಗ್ಗೆ ಜಲಮಂಡಳಿ ಇಂದು ಅಧಿಕೃತ ಆದೇಶ ಹೊರಡಿಸಲಿದೆ.

ಜಲಮಂಡಳಿಯ ಕೇಂದ್ರ ಕಚೇರಿಯಲ್ಲಿಯ ನಲ್ಲಿಗಳಿಗೂ ಏರಿಯೇಟರ್‌ ಅಳವಡಿಸುವ ಕಾರ್ಯ ಪ್ರಾರಂಭಿಸಲಾಗಿದ್ದು, ಜಲಮಂಡಳಿಯ ಇತರೆ ಕಚೇರಿಗಳಲ್ಲಿ ಏರಿಯೇಟರ್‌ ಅಳವಡಿಸಲು ಸೂಚನೆ ನೀಡಲಾಗಿದೆ.

ಬೆಂಗಳೂರು ನಗರಕ್ಕೆ ಪ್ರತಿದಿನ 2,600 ಮಿಲಿಯನ್ ಲೀಟರ್ ನೀರು (ಎಂಎಲ್‌ಡಿ) ಅಗತ್ಯವಿದ್ದು, ಸುಮಾರು 500 ಎಂಎಲ್‌ಡಿ ನೀರಿನ ಕೊರತೆಯಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆಯ ನಂತರ ತಿಳಿಸಿದ್ದರು. ಬೆಂಗಳೂರಿಗೆ ಅಗತ್ಯ ಇರುವ ನೀರಿನಲ್ಲಿ 1,450 ಎಂಎಲ್‌ಡಿ ಕಾವೇರಿ ನದಿಯಿಂದ ಮತ್ತು 650 ಎಂಎಲ್‌ಡಿ ನಗರದ ಬೋರ್‌ವೆಲ್‌ಗಳಿಂದ ಪೂರೈಸಲಾಗುತ್ತಿದೆ. 500 ಎಂಎಲ್‌ಡಿ ನೀರಿನ ಕೊರತೆ ಇದೆ ಎಂದು ಅವರು ಹೇಳಿದ್ದರು.

ಇದನ್ನೂ ಓದಿ: ಬೆಂಗಳೂರಿಗೆ ದಿನಕ್ಕೆಷ್ಟು ಬೇಕು ನೀರು, ಎಷ್ಟಿದೆ ಕೊರತೆ: ಸಿಎಂ ಸಿದ್ದರಾಮಯ್ಯ ಕೊಟ್ಟ ಮಾಹಿತಿ ಇಲ್ಲಿದೆ

ಹೀಗಾಗಿ ನೀರಿನ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಜಲ ಮಂಡಳಿ ಸಭೆಗಳ ಮೇಲೆ ಸಭೆ ನಡೆಸುತ್ತಿದ್ದು, ಹಲವಾರು ಕ್ರಮಗಳನ್ನು ಕೈಗೊಳ್ಳುತ್ತಿದೆ. ಇದರ ಭಾಗವಾಗಿ ಇದೀಗ ಏರಿಯೇಟರ್ ಅಳವಡಿಕೆಗೆ ಕ್ರಮ ಕೈಗೊಳ್ಳಲಾಗುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್