ಬೆಂಗಳೂರು: ಸಾರ್ವಜನಿಕರಿಗೆ ಉಚಿತವಾಗಿ ಕೊಡಬೇಕಿದ್ದ ನೀರು ಹೋಟೆಲ್‌ಗಳಿಗೆ ಮಾರಾಟ; ಸಾರ್ವಜನಿಕರ ಆಕ್ರೋಶ

ಬೇಸಿಗೆಯಲ್ಲಿ ಹನಿ ಹನಿ ನೀರಿಗಾಗಿ ಆಹಾಕಾರ ಎದ್ದಿದೆ. ಕುಡಿಯುವ ನೀರಿನ ದುರ್ಬಳಕೆ ಮಾಡಿದರೆ ದಂಡ ವಿಧಿಸುವುದಾಗಿ ಬೆಂಗಳೂರು ಜಲಮಂಡಳಿ ಎಚ್ಚರಿಕೆ ನೀಡಿದ್ದು, ಲಕ್ಷಕ್ಕೂ ಅಧಿಕ ದಂಡ ವಸೂಲಿ ಮಾಡಿದೆ. ಈ ನಡುವೆ, ಟಿ.ದಾಸರಹಳ್ಳಿಯಲ್ಲಿ ಸಾರ್ವಜನಿಕರಿಗೆ ಉಚಿತವಾಗಿ ನೀಡಬೇಕಿದ್ದ ನೀರನ್ನು ಹೊಟೇಲ್, ಅಂಗಡಿಗಳಿಗೆ ಮಾರಾಟ ಮಾಡುತ್ತಿರುವ ಆರೋಪ ಕೇಳಿಬಂದಿದೆ. ಈ ಬಗ್ಗೆ ಜಲ ಮಂಡಳಿ ವಿರುದ್ಧ ಜನರು ಆಕ್ರೋಶ ಹೊರಹಾಕಿದ್ದಾರೆ.

ಬೆಂಗಳೂರು: ಸಾರ್ವಜನಿಕರಿಗೆ ಉಚಿತವಾಗಿ ಕೊಡಬೇಕಿದ್ದ ನೀರು ಹೋಟೆಲ್‌ಗಳಿಗೆ ಮಾರಾಟ; ಸಾರ್ವಜನಿಕರ ಆಕ್ರೋಶ
ಬೆಂಗಳೂರಿನ ಟಿ.ದಾಸರಹಳ್ಳಿಯಲ್ಲಿ ಸಾರ್ವಜನಿಕರಿಗೆ ಉಚಿತವಾಗಿ ಕೊಡಬೇಕಿದ್ದ ನೀರು ಹೋಟೆಲ್‌ಗಳಿಗೆ ಮಾರಾಟ
Follow us
ಬಿ ಮೂರ್ತಿ, ನೆಲಮಂಗಲ
| Updated By: Rakesh Nayak Manchi

Updated on: Mar 25, 2024 | 5:16 PM

ನೆಲಮಂಗಲ, ಮಾ.25: ಬೇಸಿಗೆಯಲ್ಲಿ ಹನಿ ಹನಿ ನೀರಿಗಾಗಿ ಆಹಾಕಾರ(Water Crisis) ಎದ್ದಿದೆ. ಕುಡಿಯುವ ನೀರಿನ ದುರ್ಬಳಕೆ ಮಾಡಿದರೆ ದಂಡ ವಿಧಿಸುವುದಾಗಿ ಬೆಂಗಳೂರು (Bengaluru) ಜಲಮಂಡಳಿ ಎಚ್ಚರಿಕೆ ನೀಡಿದ್ದು, ಲಕ್ಷಕ್ಕೂ ಅಧಿಕ ದಂಡ ವಸೂಲಿ ಮಾಡಿದೆ. ಈ ನಡುವೆ, ಟಿ.ದಾಸರಹಳ್ಳಿಯಲ್ಲಿ ಸಾರ್ವಜನಿಕರಿಗೆ ಉಚಿತವಾಗಿ ನೀಡಬೇಕಿದ್ದ ನೀರನ್ನು ಹೊಟೇಲ್, ಅಂಗಡಿಗಳಿಗೆ ಮಾರಾಟ ಮಾಡುತ್ತಿರುವ ಆರೋಪ ಕೇಳಿಬಂದಿದೆ.

ಸಾರ್ವಜನಿಕರಿಗೆ ಉಚಿತವಾಗಿ ಹಂಚಬೇಕಿದ್ದ ನೀರನ್ನು ಟಿ.ದಾಸರಹಳ್ಳಿಯಲ್ಲಿ ಖಾಸಗಿ ಅಂಗಡಿ ಹಾಗೂ ಹೋಟೆಲ್​ಗಳಿಗೆ ನೀರು ಮಾರಾಟ ಮಾಡಲಾಗುತ್ತಿದೆ. ಅಂಗಡಿ ಹಾಗೂ ಹೊಟೇಲ್​ಗಳಿಗೆ ನೀರು ಬಿಟ್ಟು 500 ರೂಪಾಯಿ ಪಡೆಯುತ್ತಿದ್ದಾರೆ ಎಂದು ಅರೋಪಿಸಲಾಗಿದೆ. ನೀರು ಮಾರಾಟ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಇದರ ಬೆನ್ನಲ್ಲೇ ಸಾರ್ವಜನಿಕರು BWSSB ಸಿಬ್ಬಂದಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: Bangalore Water Crisis: ಕುಡಿಯಲು ಯೋಗ್ಯ ನೀರಿನ ದುರ್ಬಳಕೆ, 1 ಲಕ್ಷ ರೂಪಾಯಿಗೂ ಹೆಚ್ಚು ದಂಡ ಸಂಗ್ರಹಿಸಿದ ಜಲ ಮಂಡಳಿ

ಈ ಬಗ್ಗೆ ಟಿವಿ9 ಸುದ್ದಿ ಪ್ರಸಾರ ಮಾಡುತ್ತಿದ್ದಂತೆ ಎಚ್ಚೆತ್ತ BWSSB, ಟಿ.ದಾಸರಹಳ್ಳಿಯಲ್ಲಿ ನೀರು ಮಾರಾಟ ಮಾಡಿದ್ದ ಸಿಬ್ಬಂದಿ ವಿರುದ್ಧ ಬಾಗಲಗುಂಟೆ ಪೊಲೀಸ್​ ಠಾಣೆಗೆ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ನೀರಿಲ್ಲದೆ ಪರದಾಡುತ್ತಿದ್ದರೂ ರೈನ್​ ವಾಟರ್​ ಡ್ಯಾನ್ಸ್

ಹೋಳಿ ಸಂಭ್ರಮದ ವೇಳೆ ಬೆಂಗಳೂರು ಜಲಮಂಡಳಿಯ ನಿಯಮಗಳನ್ನು ಉಲ್ಲಂಘನೆ ಮಾಡಲಾಗುತ್ತಿದೆ. ನಗರದ ಸರ್ಜಾಪುರ ಚಿಕ್ಕನಾಯಕನಹಳ್ಳಿಯ ಖಾಸಗಿ ಅಪಾರ್ಟ್ಮೆಂಟ್​ನಲ್ಲಿ ಹೋಳಿ ಆಚರಿಸಿದ್ದಾರೆ. ಮನ ಟ್ರೋಪಿಕಲ್ ಅಪಾರ್ಟ್ಮೆಂಟ್ ಅಸೋಸಿಯೇಷನ್, ಡ್ರೈ ಡೇ ಹೋಲಿ ಬಿಟ್ಟು ರೈನ್ಸ್ ಡ್ಯಾನ್ಸ್ ಆಯೋಜಿಸಿದೆ. ನಗರದಲ್ಲಿ‌ ನೀರಿಲ್ಲದ್ದರೂ ಕ್ಯಾರೇ ಎನ್ನದೆ ಹೋಲಿ ಆಚರಿಸಿದ್ದಾರೆ. ವರ್ತೂರಿನ ಖಾಸಗಿ ರೆಸಾರ್ಟ್​​ನಲ್ಲೂ ಹೋಳಿ ಆಚರಿಸಲಾಗಿದೆ.

ಹೋಳಿ ಹಬ್ಬದ ಪ್ರಯುಕ್ತ ರೈನ್ ವಾಟರ್ ಡ್ಯಾನ್ಸ್ ಮಾಡದಂತೆ ಜಲಮಂಡಳಿ ಸೂಚನೆ ನೀಡಿದೆ. ಆದರೂ ನಿಯಮವನ್ನು ಗಾಳಿಗೆ ತೂರಿ ಸ್ವಿಮ್ಮಿಂಗ್ ಪೂಲ್​ಗಳನ್ನು ಹೋಳಿ ಆಚರಣೆ ಮಾಡಲಾಗಿದೆ. ನಗರದ ಪ್ರತಿಷ್ಠಿತ ಹೋಟೆಲ್, ರೆಸಾರ್ಟ್​ಗಳಲ್ಲಿ ರೈನ್ ವಾಟರ್ ಡ್ಯಾನ್ಸ್ ಮಾಡಲಾಗಿದೆ. ಈ ಕುರಿತು ಜಲಮಂಡಳಿ ಮಾಹಿತಿ ಪಡೆಯುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್