AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಯನಗರದ ಮಸೀದಿ ಒಳಗೆ ಎಸ್ಐಆರ್!: ಸ್ಫೋಟಕ ಆರೋಪ ಮಾಡಿದ ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ

Voter List Verification: ಬಿಎಲ್‌ಒಗಳನ್ನು ದುರ್ಬಳಕೆ ಮಾಡಿಕೊಂಡು ಬೆಂಗಳೂರಿನ ಜಯನಗರದ ಮಸೀದಿ ಒಳಗೆ ಎಸ್‌ಐಆರ್ ಪ್ರಕ್ರಿಯೆ ನಡೆಸಲಾಗುತ್ತಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಕಾಂಗ್ರೆಸ್ ಸರ್ಕಾರದ ವಿರುದ್ಧ ಸ್ಫೋಟಕ ಆರೋಪ ಮಾಡಿದ್ದಾರೆ. ರಾಜ್ಯ ಸರ್ಕಾರ ಇಲ್ಲಿ ಷಡ್ಯಂತ್ರ ಮಾಡುತ್ತಿದೆ ಎಂದವರು ದೂರಿದ್ದು, ಕೇಂದ್ರ ಸಚಿವ ಕುಮಾರಸ್ವಾಮಿ ಕೂಡ ರಾಮನಗರದ ಚೌಲ್ಟ್ರಿಗಳಲ್ಲಿ ಜನರನ್ನು ಕೂರಿಸಿ ಎಸ್​ಐಆರ್​ ಪ್ರಕ್ರಿಯೆ ನಡೆಸುತ್ತಿದ್ದಾರೆ ಎಂದು ನಿನ್ನೆಯಷ್ಟೇ ಕಿಡಿ ಕಾರಿದ್ದರು.

ಜಯನಗರದ ಮಸೀದಿ ಒಳಗೆ ಎಸ್ಐಆರ್!: ಸ್ಫೋಟಕ ಆರೋಪ ಮಾಡಿದ ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ
ಬಿ.ವೈ. ವಿಜಯೇಂದ್ರ Image Credit source: PTI
ಕಿರಣ್​ ಹನಿಯಡ್ಕ
| Edited By: |

Updated on: Jul 03, 2026 | 11:56 AM

Share

ಮುಖ್ಯಾಂಶಗಳು

  • ಕುಮಾರಸ್ವಾಮಿ ಬೆನ್ನಲ್ಲೇ ವಿಜಯೇಂದ್ರರಿಂದಲೂ ಸ್ಫೋಟಕ ಆರೋಪ
  • 'ಜಯನಗರದಲ್ಲಿ ಮಸೀದಿ ಒಳಗೆ ಎಸ್ಐಆರ್ ಪ್ರಕ್ರಿಯೆ ಮಾಡುತ್ತಿದ್ದಾರೆ'
  • ರಾಜ್ಯ ಸರ್ಕಾರ ಇಲ್ಲಿ ಷಡ್ಯಂತ್ರ ಮಾಡುತ್ತಿದೆ: ಬಿ.ವೈ. ವಿಜಯೇಂದ್ರ

ಬೆಂಗಳೂರು, ಜುಲೈ 03: ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಹೋಗಿ ಪರಿಶೀಲನೆ ನಡೆಸುವ ಬದಲು, ರಾಮನಗರದ ಚೌಲ್ಟ್ರಿಗಳಲ್ಲಿ ಜನರನ್ನು ಕೂರಿಸಿ ಎಸ್​ಐಆರ್​ ಪ್ರಕ್ರಿಯೆ ನಡೆಸುತ್ತಿದ್ದಾರೆ ಎಂದು ನಿನ್ನೆಯಷ್ಟೇ ಕೇಂದ್ರ ಸಚಿವ ಹೆಚ್​​.ಡಿ. ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದರು. ಈ ಬೆನ್ನಲ್ಲೇ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಕೂಡ ಇಂತಹುದ್ದೇ ಸ್ಫೋಟಕ ಹೇಳಿಕೆಯನ್ನು ನೀಡಿದ್ದಾರೆ. ಬೆಂಗಳೂರಿನ ಜಯನಗರದಲ್ಲಿ ಮಸೀದಿ ಒಳಗೆ ಎಸ್ಐಆರ್ ಮಾಡಲಾಗುತ್ತಿದೆ ಎಂದವರು ದೂರಿದ್ದಾರೆ.

ಬಿ.ವೈ. ವಿಜಯೇಂದ್ರ ಹೇಳಿದ್ದೇನು?

ಆಗಸ್ಟ್​ ತಿಂಗಳಿನಲ್ಲಿ ಮುಂಗಾರು ಅಧಿವೇಶನ ಮಾಡುತ್ತಾರಂತೆ. ಆದರೆ ಅಧಿವೇಶನ ಮುಂದೂಡಲು ಎಸ್​ಐಆರ್​​​ ಕಾರಣ ಅಲ್ಲ. ರೇಟ್​ ಫಿಕ್ಸ್ ಆಗದೆ ಸಂಪುಟ ವಿಸ್ತರಣೆ ಡೇಟ್​ ಫಿಕ್ಸ್​ ಆಗುತ್ತಿಲ್ಲ. ಶಾಸಕರು ಏನು ಮನೆ ಮನೆಗೆ ಹೋಗಿ ಎಸ್ಐಆರ್ ಮಾಡುತ್ತಿದ್ದಾರಾ? ಬದಲಾಗಿ ಕಾಂಗ್ರೆಸ್ ಶಾಸಕರು ಬಿಎಲ್ಒಗಳನ್ನು ದುರ್ಬಳಕೆ ಮಾಡಿಕೊಳ್ತಿದ್ದಾರೆ. ಜಯನಗರದಲ್ಲಿ ಮಸೀದಿ ಒಳಗೆ ಎಸ್ಐಆರ್ ಮಾಡುತ್ತಿದ್ದಾರೆ. ಹಿಂದೂಗಳು ಮಸೀದಿ ಒಳಗೆ ಹೋಗಲು ಸಾಧ್ಯವಾಗದ ರೀತಿ ಆಗಿದೆ. ರಾಜ್ಯ ಸರ್ಕಾರ ಇಲ್ಲಿ ಷಡ್ಯಂತ್ರ ಮಾಡುತ್ತಿದೆ ಎಂದವರು ಆರೋಪಿಸಿದ್ದಾರೆ.

ಇದನ್ನೂ ಓದಿ: ಎಸ್​ಐಆರ್​ ಪ್ರಕ್ರಿಯೆಯಲ್ಲಿ ಅಕ್ರಮ, ಬಾಂಗ್ಲಾದೇಶದಿಂದ ಬಂದವರ ಪೋಷಣೆ; ಕುಮಾರಸ್ವಾಮಿ ಗಂಭೀರ ಆರೋಪ

ಇಂತಹುದ್ದೇ ಆರೋಪ ಮಾಡಿದ್ದ ಕುಮಾರಸ್ವಾಮಿ

ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್​ಐಆರ್​ ಪ್ರಕ್ರಿಯೆ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಕೂಡ ನಿನ್ನೆ (ಜುಲೈ 02) ಆಕ್ಷೇಪ ತೆಗೆದಿದ್ದರು. ಕಾಂಗ್ರೆಸ್ ಸರ್ಕಾರ​ ಚುನಾವಣಾ ಅಧಿಕಾರಿಗಳ ಮೇಲೆ ಪ್ರಭಾವ ಬೀರಿ ಅಕ್ರಮಗಳಿಗೆ ಪ್ರೇರಣೆ ನೀಡುತ್ತಿದೆ ಎಂದವರು ಗಂಭೀರ ಆರೋಪ ಮಾಡಿದ್ದರು. ಬಾಂಗ್ಲಾದೇಶದಿಂದ ಬಂದವರನ್ನು ಪೋಷಿಸಿ, ಅವರನ್ನು ಮತದಾರರ ಪಟ್ಟಿಗೆ ಸೇರಿಸಲಾಗುತ್ತಿದೆ. ರಾಮನಗರದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಇಂತಹ ಅಕ್ರಮ ಮತದಾರರಿದ್ದು, ಕಳ್ಳ ಮತದಾರರನ್ನು ಅರ್ಹರನ್ನಾಗಿ ಪರಿವರ್ತಿಸಲು ಯತ್ನಿಸಲಾಗುತ್ತಿದೆ. ಚೌಲ್ಟ್ರಿಗಳಲ್ಲಿ ಜನರನ್ನು ಕೂರಿಸಿ ಎಸ್​ಐಆರ್​ ಪ್ರಕ್ರಿಯೆ ನಡೆಸುತ್ತಿದ್ದಾರೆ ಎಂದವರು ಹೇಳಿದ್ದರು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಗೃಹಜ್ಯೋತಿ ಪರಿಷ್ಕರಣೆ ಅಲ್ಲ; ಇದು ಮಾಹಿತಿ ಸಂಗ್ರಹ ಅಷ್ಟೇ ಎಂದ ಚೆಸ್ಕಾಂ MD
ಗೃಹಜ್ಯೋತಿ ಪರಿಷ್ಕರಣೆ ಅಲ್ಲ; ಇದು ಮಾಹಿತಿ ಸಂಗ್ರಹ ಅಷ್ಟೇ ಎಂದ ಚೆಸ್ಕಾಂ MD
ಗೃಹ ಸಚಿವರ ತವರಲ್ಲೇ ಪೊಲೀಸ್ ಠಾಣೆಯಿಂದಲೇ ಪೋಕ್ಸೋ ಕೇಸ್ ಆರೋಪಿ ಪರಾರಿ!
ಗೃಹ ಸಚಿವರ ತವರಲ್ಲೇ ಪೊಲೀಸ್ ಠಾಣೆಯಿಂದಲೇ ಪೋಕ್ಸೋ ಕೇಸ್ ಆರೋಪಿ ಪರಾರಿ!
ಫುಟ್​ಪಾತ್ ವ್ಯಾಪಾರಿಗಳಿಗೆ ಮತ್ತೆ ಸಚಿವರ ಖಡಕ್ ವಾರ್ನಿಂಗ್
ಫುಟ್​ಪಾತ್ ವ್ಯಾಪಾರಿಗಳಿಗೆ ಮತ್ತೆ ಸಚಿವರ ಖಡಕ್ ವಾರ್ನಿಂಗ್
ಇಂದು ಈ ರಾಶಿಯವರು ಕೋಪ, ಆವೇಶಗಳನ್ನು ಬದಿಗಿಟ್ಟರೆ ಕೆಲಸ ಕಾರ್ಯಗಳಲ್ಲಿ ಶುಭ
ಇಂದು ಈ ರಾಶಿಯವರು ಕೋಪ, ಆವೇಶಗಳನ್ನು ಬದಿಗಿಟ್ಟರೆ ಕೆಲಸ ಕಾರ್ಯಗಳಲ್ಲಿ ಶುಭ
1800 ಕಿ.ಮೀ ಸೈಕಲ್ ಜರ್ನಿ; ಅಭಿಮಾನಿಯ ಅಭಿಮಾನಕ್ಕೆ ಹಾರ್ದಿಕ್ ಫಿದಾ
1800 ಕಿ.ಮೀ ಸೈಕಲ್ ಜರ್ನಿ; ಅಭಿಮಾನಿಯ ಅಭಿಮಾನಕ್ಕೆ ಹಾರ್ದಿಕ್ ಫಿದಾ
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ