‘ಮಂಚಕ್ಕೆ ಕೈ-ಕಾಲು ಕಟ್ಟಿ ಹಾಕಿ ಬೆಂಕಿ ಹಚ್ಚಿದೆ’: ಪ್ರಿಯಕರನ ಕೊಲೆ ಮಾಡಿದ್ದಾಗಿ ತಪ್ಪೊಪ್ಪಿದ ಯುವತಿ ಬಿಚ್ಚಿಟ್ಟಳು ಹಲವು ರಹಸ್ಯ!

ಬೆಂಗಳೂರಿನ ಬ್ಯಾಡರಹಳ್ಳಿಯ ಕಿರಣ್ ಕೊಲೆ ಪ್ರಕರಣದ ಆರೋಪಿ ಪ್ರೇಮಾ ಪೊಲೀಸರ ಮುಂದೆ ತಪ್ಪೊಪ್ಪಿಕೊಂಡಿದ್ದಾಳೆ. ಮದುವೆಗೆ ನಿರಾಕರಿಸಿ ಅಂತರ ಕಾಯ್ದುಕೊಂಡಿದ್ದಕ್ಕೆ ಪ್ರಿಯಕರನ ಕೈಕಾಲುಗಳನ್ನು ಮಂಚಕ್ಕೆ ಕಟ್ಟಿ ಹಾಕಿ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿರುವುದಾಗಿ ಆಕೆ ಸ್ಫೋಟಕ ಹೇಳಿಕೆ ನೀಡಿದ್ದಾಳೆ. ಆಕೆ ತಪ್ಪೊಪ್ಪಿಗೆಯಲ್ಲಿ ಇನ್ನೂ ಏನೇನು ತಿಳಿಸಿದ್ದಾಳೆ ಎಂಬ ಮಾಹಿತಿ ಇಲ್ಲಿದೆ.

‘ಮಂಚಕ್ಕೆ ಕೈ-ಕಾಲು ಕಟ್ಟಿ ಹಾಕಿ ಬೆಂಕಿ ಹಚ್ಚಿದೆ’: ಪ್ರಿಯಕರನ ಕೊಲೆ ಮಾಡಿದ್ದಾಗಿ ತಪ್ಪೊಪ್ಪಿದ ಯುವತಿ ಬಿಚ್ಚಿಟ್ಟಳು ಹಲವು ರಹಸ್ಯ!
ಆರೋಪಿ ಪ್ರೇಮಾ
Image Credit source: tv9
Edited By:

Updated on: Apr 22, 2026 | 8:56 AM

ಬೆಂಗಳೂರು, ಏಪ್ರಿಲ್ 22: ಬೆಂಗಳೂರಿನ (Bengaluru) ಬ್ಯಾಡರಹಳ್ಳಿಯಲ್ಲಿ ನಡೆದ ಕಿರಣ್ ಕೊಲೆ ಪ್ರಕರಣ ಸಂಬಂಧ ಒಂದೊಂದೇ ಭಯಾನಕ ವಿಚಾರಗಳು ಇದೀಗ ಹೊರಬರುತ್ತಿವೆ. ಸದ್ಯ ಆತನ ಪ್ರೇಯಸಿ ಪ್ರೇಮಾ ಪೊಲೀಸರ ವಶದಲ್ಲಿದ್ದು ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದಾಳೆ. ಕಿರಣ್ ಕೈಕಾಲುಗಳನ್ನು ಮಂಚಕ್ಕೆ ಕಟ್ಟಿ ಹಾಕಿ ಮೈಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದೆ ಎಂದು ಆಕೆ ನೀಡಿರುವ ಹೇಳಿಕೆ ಕೇಳಿ ಖುದ್ದು ಪೊಲೀಸರೇ ಬೆಚ್ಚಿಬಿದ್ದಿದ್ದಾರೆ.

ನಾಲ್ಕುವರೆ ಲಕ್ಷದ ಗಿಫ್ಟ್ ನೀಡಲು ಮುಂದಾಗಿದ್ದ ಪ್ರೇಮಾ!

ಪೊಲೀಸರ ತನಿಖೆಯ ವೇಳೆ ದೊರೆತ ಮಾಹಿತಿ ಪ್ರಕಾರ, ಕಳೆದ ವರ್ಷ ಆಗಸ್ಟ್‌ನಲ್ಲಿ ಪ್ರೇಮಾಗೆ ಕಿರಣ್ ಪರಿಚಯವಾಗಿದ್ದ. ಈ ವರ್ಷದ ಫೆಬ್ರವರಿ 14ರ ‘ವ್ಯಾಲೆಂಟೈನ್ಸ್ ಡೇ’ ದಿನ ಪ್ರೇಮಾ ತನ್ನ ಪ್ರೀತಿಯನ್ನು ನಿವೇದಿಸಿದ್ದಳು. ಕಿರಣ್ ಕೂಡ ಒಪ್ಪಿಕೊಂಡಿದ್ದ. ಪ್ರಿಯಕರನಿಗಾಗಿ ಪ್ರೇಮಾ ಬರೋಬ್ಬರಿ 4.5 ಲಕ್ಷ ರೂಪಾಯಿ ಮೌಲ್ಯದ ಬೈಕ್ ಮತ್ತು ಮೊಬೈಲ್ ಫೋನ್ ಕೊಡಿಸಲು ಮುಂದಾಗಿದ್ದಳು. ಕೊಲೆ ಕೃತ್ಯ ನಡೆದ ದಿನವೂ ಇಬ್ಬರೂ ಸೇರಿ ಬೈಕ್ ನೋಡಲು ಹೋಗಿದ್ದರು ಎನ್ನಲಾಗಿದೆ.

ಪ್ರೀತಿ ದ್ರೋಹವಾಗಿ ಬದಲಾದಾಗ…

ಆದರೆ, ಇತ್ತೀಚೆಗೆ ಕಿರಣ್ ಪ್ರೇಮಾಳಿಂದ ಅಂತರ ಕಾಯ್ದುಕೊಳ್ಳಲು ಶುರು ಮಾಡಿದ್ದ. ಇದರಿಂದ ಮನನೊಂದಿದ್ದ ಪ್ರೇಮಾ, ಆತನನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಳ್ಳಲು ಮೊದಲೇ ತೀರ್ಮಾನಿಸಿದ್ದಳು. ಅದಕ್ಕಾಗಿಯೇ ಪೆಟ್ರೋಲ್ ಮತ್ತು ಸೀಮೆಎಣ್ಣೆಯನ್ನು ಮೊದಲೇ ಖರೀದಿಸಿ ತಂದಿಟ್ಟುಕೊಂಡಿದ್ದಳು. ಮದುವೆ ವಿಚಾರವಾಗಿ ಮನೆಯಲ್ಲಿ ಮತ್ತೆ ಗಲಾಟೆ ಆರಂಭವಾದಾಗ, ಪ್ಲಾನ್ ಪ್ರಕಾರ ಕಿರಣ್‌ನನ್ನು ಮಂಚಕ್ಕೆ ಕಟ್ಟಿ ಹಾಕಿ ಬೆಂಕಿ ಹಚ್ಚಿದ್ದಾಳೆ.

ಇದನ್ನೂ ಓದಿ: ಪ್ರಿಯಕರನಿಗೆ ಬೆಂಕಿ ಹಚ್ಚಿ ಕೊಂದ ಪ್ರಿಯತಮೆಯ ವಿಚಾರಣೆ ವೇಳೆ ಬಯಲಾಯ್ತು ಸ್ಫೋಟಕ ವಿಚಾರ! ಅಸಲಿಗೆ ಆಗಿದ್ದೇನು ಗೊತ್ತೇ?

ಸದ್ಯ ಬ್ಯಾಡರಹಳ್ಳಿ ಪೊಲೀಸರು ಈಕೆಯನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದು, ಹತ್ಯೆಗೆ ಬಳಸಿದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಪ್ರೀತಿಯಲ್ಲಿ ಉಂಟಾದ ವೈಫಲ್ಯ ಇಷ್ಟೊಂದು ಭೀಕರ ಅಂತ್ಯ ಕಂಡಿರುವುದು ನಾಗರಿಕ ಸಮಾಜವನ್ನು ನಡುಗಿಸುವಂತೆ ಮಾಡಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಶಿವಪ್ರಸಾದ್​ ಬಿ.

2015 ರಲ್ಲಿ ಸಮಯ ವಾಹಿನಿ ಮೂಲಕ ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿ ವರದಿಗಾರನಾಗಿ ವೃತ್ತಿ ಆರಂಭಿಸಿದೆ. ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಹಿರಿಯ ಕ್ರೈಮ್ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ . ಬೆಂಗಳೂರು ನಗರದಲ್ಲಿ ನಡೆಯುವ ಅಪರಾಧ ಕೃತ್ಯಗಳ ಬಗ್ಗೆ ನಿರಂತರ ವರದಿಗಳನ್ನು ಮಾಡುತ್ತಿದ್ದೇನೆ. ಮೂಲತಃ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನವನಾಗಿದ್ದು, ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಎಂಎಸ್ (ಕಮ್ಯೂನಿಕೇಷನ್) ಸ್ನಾತಕೋತ್ತರ ಪದವಿ ಹಾಗೂ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದಲ್ಲಿ ಕಾನೂನು ಪದವೀಧರನಾಗಿದ್ದೇನೆ.

Read More
Loading...
Unable to load recommendations.
Follow Us