AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಸಕ ಭೈರತಿ ಬಸವರಾಜ್​​ಗೆ ಆರೋಗ್ಯ ಸಮಸ್ಯೆ, ತಪಾಸಣೆಗೆ ಕೋರ್ಟ್​ ಸೂಚನೆ: ನಾಳೆ ಜೈಲೋ, ಸಿಐಡಿ ಕಸ್ಟಡಿಯೋ ತೀರ್ಮಾನ

ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಸಿಐಡಿ ವಶದಲ್ಲಿರುವ ಶಾಸಕ ಭೈರತಿ ಬಸವರಾಜ್‌ಗೆ ಹೃದಯ ಸಮಸ್ಯೆ ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ, ಬೆಂಗಳೂರಿನ ನ್ಯಾಯಾಲಯವು ಅವರನ್ನು ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ಹಾಗೂ ಚಿಕಿತ್ಸೆಗೆ ಒಳಪಡಿಸಲು ಸಿಐಡಿಗೆ ನಿರ್ದೇಶನ ನೀಡಿದೆ. ವೈದ್ಯಕೀಯ ವರದಿಯ ಆಧಾರದ ಮೇಲೆ, ಆರೋಪಿಗೆ ಜೈಲು ಶಿಕ್ಷೆ ಅಥವಾ ಹೆಚ್ಚಿನ ವಿಚಾರಣೆಗಾಗಿ ಸಿಐಡಿ ಕಸ್ಟಡಿ ಮುಂದುವರಿಸುವ ಬಗ್ಗೆ ನಾಳೆ ತೀರ್ಮಾನವಾಗಲಿದೆ.

ಶಾಸಕ ಭೈರತಿ ಬಸವರಾಜ್​​ಗೆ ಆರೋಗ್ಯ ಸಮಸ್ಯೆ, ತಪಾಸಣೆಗೆ ಕೋರ್ಟ್​ ಸೂಚನೆ: ನಾಳೆ ಜೈಲೋ, ಸಿಐಡಿ ಕಸ್ಟಡಿಯೋ ತೀರ್ಮಾನ
ಶಾಸಕ ಭೈರತಿ ಬಸವರಾಜ್‌
ಅಕ್ಷಯ್​ ಪಲ್ಲಮಜಲು​​
|

Updated on: Feb 13, 2026 | 5:26 PM

Share

ಬೆಂಗಳೂರು, ಫೆ.13: ರೌಡಿಶೀಟರ್ ಶಿವಪ್ರಕಾಶ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ವಶದಲ್ಲಿರುವ ಶಾಸಕ ಹಾಗೂ ಮಾಜಿ ಸಚಿವ ಭೈರತಿ ಬಸವರಾಜ್ (Byrathi Basavaraj)​​​​​ ಅವರಿಗೆ ಚಿಕಿತ್ಸೆ ಕೊಡಿಸಲು ಕೋರ್ಟ್ ಸೂಚನೆ ನೀಡಿದೆ. ಹೃದಯ ಸಂಬಂಧಿ ಸಮಸ್ಯೆ ಬಗ್ಗೆ ಉಲ್ಲೇಖಿಸಿರುವ ಹಿನ್ನೆಲೆಯಲ್ಲಿ ಅವರನ್ನು ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆಗೆ ಒಳಪಡಿಸುವಂತೆ ಬೆಂಗಳೂರಿನ 42ನೇ ಎಸಿಜೆಎಂ ನ್ಯಾಯಾಲಯ ಸಿಐಡಿಗೆ ಸೂಚಿಸಿದೆ.

ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಸಿಐಡಿ ವಶದಲ್ಲಿರುವ ಭೈರತಿ ಬಸವರಾಜ್ ಅವರನ್ನು ಇಂದು ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿತ್ತು. ಈ ವೇಳೆ ಅವರಿಗೆ ಹೃದಯ ಸಂಬಂಧಿ ಸಮಸ್ಯೆ ಇರುವುದು ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಹೆಚ್ಚಿನ ತಪಾಸಣೆ ಮತ್ತು ಚಿಕಿತ್ಸೆಯ ಅಗತ್ಯವಿದ್ದುದರಿಂದ, ತನಿಖಾಧಿಕಾರಿ ಡಿವೈಎಸ್‌ಪಿ ಗೌತಮ್ ಅವರಿಗೆ ನ್ಯಾಯಾಲಯವು ಈ ನಿರ್ದೇಶನ ನೀಡಿದೆ.

ಇದನ್ನೂ ಓದಿ: ಬಿಕ್ಲು ಶಿವ ಕೊಲೆ ಕೇಸ್​ನಲ್ಲಿ ಶಾಸಕ ಭೈರತಿ ಬಸವರಾಜ್​​ ಪೊಲೀಸರ ವಶಕ್ಕೆ

ಅವರನ್ನು ಹಿರಿಯ ವೈದ್ಯರ ಸಮ್ಮುಖದಲ್ಲಿ ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ಸಂಪೂರ್ಣ ವೈದ್ಯಕೀಯ ತಪಾಸಣೆ ನಡೆಸಬೇಕು. ಸದ್ಯ ಭೈರತಿ ಬಸವರಾಜ್ ಸಿಐಡಿ ವಶದಲ್ಲಿರುವುದರಿಂದ, ಅವರ ಸುಪರ್ದಿಯಲ್ಲೇ ಮೆಡಿಕಲ್ ಟೆಸ್ಟ್ ನಡೆಯಲಿದೆ. ವೈದ್ಯಕೀಯ ವರದಿಯೊಂದಿಗೆ ನಾಳೆ (ಶನಿವಾರ) ನ್ಯಾಯಾಧೀಶರ ನಿವಾಸದಲ್ಲಿ ಆರೋಪಿಯನ್ನು ಹಾಜರುಪಡಿಸಬೇಕು ಎಂದು ಕೂಡ ಸೂಚನೆ ನೀಡಿದೆ. ಬೌರಿಂಗ್ ಮತ್ತು ಜಯದೇವ ಆಸ್ಪತ್ರೆಯ ವೈದ್ಯಕೀಯ ವರದಿಗಳನ್ನು ಆಧರಿಸಿ ಭೈರತಿ ಬಸವರಾಜ್ ಅವರಿಗೆ ಜೈಲು ಶಿಕ್ಷೆ ಆಗಲಿದೆಯೇ ಅಥವಾ ಹೆಚ್ಚಿನ ವಿಚಾರಣೆಗಾಗಿ ಸಿಐಡಿ ಕಸ್ಟಡಿಗೆ ನೀಡಲಾಗುವುದೇ ಎಂಬುದು ನಾಳೆ ತೀರ್ಮಾನವಾಗಲಿದೆ.

ವರದಿ: ವಿಕಾಸ್​​​ ಕ್ರೈಂ

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Akshay Pallamajalu
Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?