AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿ.ಜೆ. ರಾಯ್ ಸತ್ತಿದ್ದು​​ ಐಟಿ ಅಧಿಕಾರಿಗಳ ಕಿರುಕುಳದಿಂದಲ್ಲ?: ರಿವೀಲ್​​ ಆಯ್ತು ಅಸಲಿ ಸತ್ಯ

ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣದ ತನಿಖೆ ಮುಂದುವರಿದಿದೆ. ಆರಂಭದಲ್ಲಿ ಐಟಿ ಅಧಿಕಾರಿಗಳ ಕಿರುಕುಳವೇ ಸಾವಿಗೆ ಕಾರಣವೆಂದು ಆರೋಪಿಸಲಾಗಿತ್ತಾದರೂ, ಎಸ್ಐಟಿ ತನಿಖೆಯಲ್ಲಿ ಇದಕ್ಕೆ ಯಾವುದೇ ಸಾಕ್ಷ್ಯ ದೊರೆತಿಲ್ಲ. ಡೈರಿಯಲ್ಲಿಯೂ ಉಲ್ಲೇಖವಿಲ್ಲ, ಘಟನೆ ದಿನ ವಿಚಾರಣೆಯೂ ನಡೆದಿರಲಿಲ್ಲ. ಬದಲಿಗೆ, ರಾಯ್ ಅವರ ವ್ಯಾಪಾರದಲ್ಲಿನ ಕುಸಿತ ಮತ್ತು ಆರ್ಥಿಕ ನಷ್ಟವೇ ಸಾವಿಗೆ ಮುಖ್ಯ ಕಾರಣವಿರಬಹುದು ಎಂದು ತನಿಖಾ ತಂಡ ಊಹಿಸುತ್ತಿದ್ದು, ಆ ದಿಕ್ಕಿನಲ್ಲಿ ತನಿಖೆ ಮುಂದುವರಿದಿದೆ.

ಸಿ.ಜೆ. ರಾಯ್ ಸತ್ತಿದ್ದು​​ ಐಟಿ ಅಧಿಕಾರಿಗಳ ಕಿರುಕುಳದಿಂದಲ್ಲ?: ರಿವೀಲ್​​ ಆಯ್ತು ಅಸಲಿ ಸತ್ಯ
ಮೃತಪಟ್ಟ ಉದ್ಯಮಿ ಸಿ.ಜೆ.ರಾಯ್Image Credit source: Google
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on:Feb 11, 2026 | 6:32 PM

Share

ಬೆಂಗಳೂರು, ಫೆಬ್ರವರಿ 11: ಸಿ.ಜೆ.ರಾಯ್ ಆತ್ಮಹತ್ಯೆ ಪ್ರಕರಣ ವಿಚಾರವಾಗಿ ಬಿಗ್​​ ಅಪ್ಡೇಟ್​​ ಸಿಕ್ಕಿದ್ದು, ಉದ್ಯಮಿ ಸಾವಿಗೆ ಐಟಿ ಅಧಿಕಾರಿಗಳ ಕಿರುಕುಳವೇ ಕಾರಣ ಎಂದು ಆರೋಪಿಸಲಾಗಿತ್ತಾದರೂ ಈ ಬಗ್ಗೆ ಪ್ರಕರಣ ದಾಖಲಿಸುವಷ್ಟು ಸಾಕ್ಷ್ಯಗಳೂ ತನಿಖೆ ವೇಳೆ ಪೊಲೀಸರಿಗೆ ಸಿಕ್ಕಿಲ್ಲ. ಪ್ರಕರಣ ಸಂಬಂಧ ತನಿಖೆಗೆ ಡಿಐಜಿ ಮತ್ತು ಎಸ್​ಪಿ ಹಂತದ ಅಧಿಕಾರಿಗಳನ್ನೊಳಗೊಂಡ ಎಸ್ಐಟಿ ತಂಡ ರಚನೆ ಮಾಡಿ ಬೆಂಗಳೂರು ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ಆದೇಶಿಸಿದ್ದರು. ಎಸ್​ಐಟಿ ಇಷ್ಟು ದಿನಗಳ ಕಾಲ ನಡೆಸಿರುವ ತನಿಖೆ ವೇಳೆ FIR ದಾಖಲಿಸು ಅಗತ್ಯವಿರುವ ಕನಿಷ್ಠ ಸಾಕ್ಷ್ಯವೂ ದೊರೆತಿಲ್ಲ ಎನ್ನಲಾಗಿದೆ.

ಅಸಲಿಗೆ ತನಿಖೆ ವೇಳೆ ಸಿ.ಜೆ.ರಾಯ್ ಆತ್ಮಹತ್ಯೆಗೆ ಇಂತಹ ವ್ಯಕ್ತಿ ಅಥವಾ ಸಂಸ್ಥೆ ಪ್ರಚೋದನೆ ನೀಡಿದೆ ಎಂದು ಸಾಭೀತು ಮಾಡಬಹುದಾದ ಯಾವುದೇ ಮಾಹಿತಿ ಸಿಕ್ಕಿಲ್ಲ. ರಾಯ್​​ ಡೈರಿಯಲ್ಲಿಯೂ ಈ ಬಗ್ಗೆ ಯಾವುದೇ ಉಲ್ಲೇಖ ಇಲ್ಲ. ಜೊತೆಗೆ ಉದ್ಯಮಿ ಆತ್ಮಹತ್ಯೆ ಮಾಡಿಕೊಂಡಿರುವ ದಿನದಂದು ಐಟಿ ಅಧಿಕಾರಿಗಳು ಅವರ ವಿಚಾರಣೆಯನ್ನು ನಡೆಸಿಯೇ ಇಲ್ಲ. ಹೀಗಾಗಿ ವಿಚಾರಣೆ ಹೆಸರಲ್ಲಿ ಮಾನಸಿಕ ಒತ್ತಡಕ್ಕೆ ಒಳಗಾಗಿ ರಾಹ್​​ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಹೇಳುವುದೂ ಕಷ್ಟಸಾಧ್ಯ. ಅಲ್ಲದೆ ಹಲವಾರು ಬಾರಿ ಅದಾಗಲೇ ರಾಯ್​​ ಐಟಿ ವಿಚಾರಣೆಯನ್ನೂ ಎದುರಿಸಿದ್ದು, ಹಿಂದೆ ಆ ಸಮಯದಲ್ಲಿ ಅವರು ಯಾವುದೇ ದುಡುಕಿನ ನಿರ್ಧಾರ ಮಾಡಿರಲಿಲ್ಲ. ಹೀಗಾಗಿ ಅತ್ಮಹತ್ಯೆಗೆ ಪ್ರಚೋದನೆಯಾಗಿಲ್ಲ ಎಂಬ ಲೆಕ್ಕಾಚಾರದಲ್ಲಿ ಎಸ್​ಐಟಿ ಇದೆ ಎನ್ನಲಾಗಿದೆ.

ಇದನ್ನೂ ಓದಿ: ಸಿ.ಜೆ ರಾಯ್ ಸಾವಿನ ಹಿಂದಿತ್ತಾ ಬೇರೆಯದೇ ಕಾರಣ? ಆತ್ಮಹತ್ಯೆಯ ಹಿಂದಿನ ದಿನ ನಡೆದಿದ್ದೇನು?

ಉದ್ಯಮಿ ಜೀವ ಪಡೆದಿದ್ದು ವ್ಯವಹಾರ?

ಆದರೆ ಉದ್ಯಮಿಯ ಆತ್ಮಹತ್ಯೆಗೆ ಅಸಲೀ ಕಾರಣ ಏನೆಂದು ಬಯಲು ಮಾಡಬೇಕಾದ ಅನಿವಾರ್ಯತೆ ತನಿಖಾ ತಂಡದ ಮುಂದಿದೆ. ಈ ಹಿನ್ನೆಲೆ ಎಲ್ಲಾ ಆಯಾಮಗಳಲ್ಲಿಯೂ ತನಿಖೆ ಮುಂದುವರಿದಿದೆ. ವ್ಯಾವಹಾರಿಕವಾಗಿ ರಾಯ್​​ ಕುಗ್ಗಿದ್ದ ರಾಯ್​​, ಅದೇ ಕಾರಣಕ್ಕೆ ಪ್ರಾಣ ಕಳೆದುಕೊಂಡಿದ್ದಾರೆ ಎಂಬ ಪ್ರಾಥಮಿಕ ಮಾಹಿತಿ ತನಿಖಾ ತಂಡಕ್ಕೆ ಸಿಕ್ಕಿದೆ ಎನ್ನಲಾಗಿದೆ. ಹೀಗಾಗಿ ರಾಯ್ ವ್ಯವಹಾರ, ಲಾಭ ಹಾಗೂ ನಷ್ಟದ ವಿಚಾರವಾಗಿ ಅಧಿಕಾರಿಗಳು ಪರಿಶೀಲನೆಗೆ ಮುಂದಾಗಿದ್ದಾರೆ. ಆದ್ರೆ ಇದುವರೆಗೆ ಜಪ್ತಿ ಮಾಡಿರುವ ದಾಖಲೆಗಳ ಬಗ್ಗೆ ಐಟಿ ಅಧಿಕಾರಿಗಳು ಪೊಲೀಸರಿಗೆ ಮಾಹಿತಿ ನೀಡುತ್ತಿಲ್ಲವಂತೆ. ಹೀಗಾಗಿ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣವನ್ನ ಯುಡಿಆರ್ ಆಗಿಯೇ ಪರಿಗಣಿಸಿ ತನಿಖೆ ನಡೆಸಲಾಗುತ್ತಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 6:32 pm, Wed, 11 February 26

Follow Us
ಟಿವಿ9 ವಾರ್ಷಿಕ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಸ್ಫೂರ್ತಿದಾಯಕ ಭಾಷಣ
ಟಿವಿ9 ವಾರ್ಷಿಕ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಸ್ಫೂರ್ತಿದಾಯಕ ಭಾಷಣ
ಪ್ರಧಾನಿ ಮೋದಿಗೆ ಮೈ ಹೋಮ್ ಗ್ರೂಪ್ ಚೇರ್ಮನ್ ರಾಮೇಶ್ವರ ರಾವ್ ಸನ್ಮಾನ
ಪ್ರಧಾನಿ ಮೋದಿಗೆ ಮೈ ಹೋಮ್ ಗ್ರೂಪ್ ಚೇರ್ಮನ್ ರಾಮೇಶ್ವರ ರಾವ್ ಸನ್ಮಾನ
ಪ್ರಧಾನಿ ಮೋದಿ ನಾಯಕತ್ವದಿಂದ ಇಡೀ ಜಗತ್ತು ಭಾರತವನ್ನ ಗೌರವದಿಂದ ಕಾಣುತ್ತಿದೆ
ಪ್ರಧಾನಿ ಮೋದಿ ನಾಯಕತ್ವದಿಂದ ಇಡೀ ಜಗತ್ತು ಭಾರತವನ್ನ ಗೌರವದಿಂದ ಕಾಣುತ್ತಿದೆ
ಒಂದು ಕ್ಷಿಪಣಿ ಜಾಗತಿಕ ಮಾರುಕಟ್ಟೆಗಳನ್ನೇ ಅಸ್ತವ್ಯಸ್ತಗೊಳಿಸುತ್ತಿದೆ
ಒಂದು ಕ್ಷಿಪಣಿ ಜಾಗತಿಕ ಮಾರುಕಟ್ಟೆಗಳನ್ನೇ ಅಸ್ತವ್ಯಸ್ತಗೊಳಿಸುತ್ತಿದೆ
ಅಥಣಿಯಿಂದ ಶಿವಣ್ಣನ ನೋಡಲು ಬೆಂಗಳೂರಿಗೆ ಬಂದ ವಿಶೇಷ ಚೇತನ ಅಭಿಮಾನಿ
ಅಥಣಿಯಿಂದ ಶಿವಣ್ಣನ ನೋಡಲು ಬೆಂಗಳೂರಿಗೆ ಬಂದ ವಿಶೇಷ ಚೇತನ ಅಭಿಮಾನಿ
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ
ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ
ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಮಹತ್ವದ ಸಲಹೆ
ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಮಹತ್ವದ ಸಲಹೆ