ಪಾನಮತ್ತ ಯುವತಿ ಮೇಲೆ ಕ್ಯಾಬ್​ ಚಾಲಕನಿಂದ ಅತ್ಯಾಚಾರ ಆರೋಪ; ಕ್ಯಾಬ್ ಚಾಲಕನ ಬಂಧನ

ಪಾರ್ಟಿ ಮುಗಿದ ಮೇಲೆ ಯುವತಿ ಮಲ್ಲೇಶ್‌ಪಾಳ್ಯಕ್ಕೆ ಹೋಗಲು ಕ್ಯಾಬ್ ಬುಕ್ ಮಾಡಿದ್ದಳು. ಈ ವೇಳೆ ಕ್ಯಾಬ್ ಚಾಲಕ ಆಕೆಯ ಮೇಲೆ ಎಸಗಿದ್ದಾನೆ. ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಪಾನಮತ್ತ ಯುವತಿ ಮೇಲೆ ಚಾಲಕನಿಂದ ಅತ್ಯಾಚಾರವಾಗಿದೆ ಎಂದು ದೂರು ದಾಖಲಾಗಿತ್ತು.

ಪಾನಮತ್ತ ಯುವತಿ ಮೇಲೆ ಕ್ಯಾಬ್​ ಚಾಲಕನಿಂದ ಅತ್ಯಾಚಾರ ಆರೋಪ; ಕ್ಯಾಬ್ ಚಾಲಕನ ಬಂಧನ
ಸಾಂಕೇತಿಕ ಚಿತ್ರ
Updated By: guruganesh bhat

Updated on: Sep 22, 2021 | 4:54 PM

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕ್ಯಾಬ್ ಚಾಲಕನಿಂದ ಯುವತಿ ಮೇಲೆ  ಅತ್ಯಾಚಾರ ಆರೋಪ ಕೇಳಿಬಂದಿದ್ದು, ಆರೋಪಿಯನ್ನು 24 ಗಂಟೆಗಳಲ್ಲಿ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನಲ್ಲಿ ಕ್ಯಾಬ್ ಚಾಲಕನಿಂದ ಆತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಕ್ಯಾಬ್ ಚಾಲಕ ದೇವರಾಜ್ ಎಂಬ ವ್ಯಕ್ತಿಯನ್ನು ಜೀವನ್‌ಭೀಮಾನಗರ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಘಟನೆ ನಡೆದ 24ಗಂಟೆಯೊಳಗೆ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ ಮುರುಗನ್ ತಿಳಿಸಿದ್ದಾರೆ.

ರಾತ್ರಿ ಪಾರ್ಟಿ ಮುಗಿಸಿ ಮನೆಗೆ ಹೋಗುವ ವೇಳೆ ಘಟನೆ ಸಂಭವಿಸಿದೆ. ಪಾರ್ಟಿ ಮುಗಿದ ಮೇಲೆ ಯುವತಿ ಮಲ್ಲೇಶ್‌ಪಾಳ್ಯಕ್ಕೆ ಹೋಗಲು ಕ್ಯಾಬ್ ಬುಕ್ ಮಾಡಿದ್ದಳು. ಈ ವೇಳೆ ಕ್ಯಾಬ್ ಚಾಲಕ ಆಕೆಯ ಮೇಲೆ ಎರಗಿದ್ದಾನೆ. ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಪಾನಮತ್ತ ಯುವತಿ ಮೇಲೆ ಚಾಲಕನಿಂದ ಅತ್ಯಾಚಾರವಾಗಿದೆ ಎಂಬ ದೂರು ದಾಖಲಾಗಿತ್ತು.

ನಿನ್ನೆ ರಾತ್ರಿ ಪಾರ್ಟಿ ಮುಗಿಸಿಕೊಂಡು ಮನೆಗೆ ಹೋಗಲು ಯುವತಿ ಮಲ್ಲೇಶ್‌ಪಾಳ್ಯಕ್ಕೆ ಕ್ಯಾಬ್ ಬುಕ್ ಮಾಡಿದ್ದಳು.  ಕ್ಯಾಬ್ ಚಾಲಕ ಯುವತಿ ಪಾನಮತ್ತಳಾಗಿರುವುದನ್ನು ಗಮನಿಸಿ ಆಕೆಯನ್ನು ಆಕೆ ಬುಕ್ ಮಾಡಿದ್ದ ಜಾಗಕ್ಕೆ ಕರೆದುಕೊಂಡು ಹೋಗದೆ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಚಾರ ಎಸಗಿದ್ದಾನೆ. ಈ ಸಂಬಂಧ ಜೀವನ್‌ಭಿಮಾ ನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ವಿಧಾನಸಭೆಯಲ್ಲಿಂದು ಮೈಸೂರು ಯುವತಿ ಮೇಲಿನ ಅತ್ಯಾಚಾರ ಪ್ರಕರಣ ಚರ್ಚೆಗೆ ಬಂದಿದೆ. ಇದರ ನಡುವೆ ಬೆಂಗಳೂರಿನಲ್ಲೂ ಅತ್ಯಾಚಾರದ ಪ್ರಕರಣ ದಾಖಲಾಗಿದೆ. ವಿಪಕ್ಷ ಕಾಂಗ್ರೆಸ್ ನೀಡಿದ್ದ ನಿಲುವಳಿ ನೋಟಿಸ್ ಆಧರಿಸಿ ನಿಯಮ 69ರ ಅಡಿಯಲ್ಲಿ ಚರ್ಚೆ ನಡೆಯುತ್ತಿದೆ. ಈ ಚರ್ಚೆ ವೇಳೆ ರಾಜ್ಯದಲ್ಲಿನ ಕಾನೂನು ಮತ್ತು ಸುವ್ಯವಸ್ಥೆ ಸಂಬಂಧ ವಿಪಕ್ಷ ಕಾಂಗ್ರೆಸ್ ಇಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ.

ಇದನ್ನೂ ಓದಿ: ಮುಂಬೈ ರೇಪ್​ ಕೇಸ್​: ‘ಸಂತ್ರಸ್ತೆ-ಆರೋಪಿಗೆ ಮೊದಲೇ ಪರಿಚಯ ಇತ್ತು..‘-ಪೊಲೀಸರು ಬಿಚ್ಚಿಟ್ಟ ಭಯಾನಕ ಮಾಹಿತಿ

Published On - 1:12 pm, Wed, 22 September 21