ಸ್ಟಾರ್ಟ್​ಅಪ್​ ನೀತಿ, ಕಿತ್ತೂರು, ಕಲ್ಯಾಣ ಕರ್ನಾಟಕದ 13 ನೀರಾವರಿ ಯೋಜನೆಗೆ ಸಚಿವ ಸಂಪುಟ ಅಸ್ತು

ಕಿತ್ತೂರು ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕದ ಒಟ್ಟು 5701.38 ಕೋಟಿ ವೆಚ್ಚದ 13 ನೀರಾವರಿ ಯೋಜನೆಗಳಿಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.

ಸ್ಟಾರ್ಟ್​ಅಪ್​ ನೀತಿ, ಕಿತ್ತೂರು, ಕಲ್ಯಾಣ ಕರ್ನಾಟಕದ 13 ನೀರಾವರಿ ಯೋಜನೆಗೆ ಸಚಿವ ಸಂಪುಟ ಅಸ್ತು
ಸಿಎಂ ಬಸವರಾಜ ಬೊಮ್ಮಾಯಿ (ಸಂಗ್ರಹ ಚಿತ್ರ)
Follow us
| Updated By: ಗಂಗಾಧರ​ ಬ. ಸಾಬೋಜಿ

Updated on: Dec 22, 2022 | 8:55 PM

ಬೆಳಗಾವಿ: ಕಿತ್ತೂರು ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕದ ಒಟ್ಟು 5701.38 ಕೋಟಿ ವೆಚ್ಚದ 13 ನೀರಾವರಿ ಯೋಜನೆಗಳಿಗೆ (irrigation projects) ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಸಿಎಂ ಬೊಮ್ಮಾಯಿ (Cm Bommai) ನೇತೃತ್ವದ ಸಂಪುಟ ಸಭೆಯಲ್ಲಿ ಇಂದು (ಡಿ. 22) ಅನುಮೋದನೆ ಮಾಡಲಾಗಿದೆ. ಮೆಳ್ಳಿಗೇರಿ-ಹಲಗಲಿ ಏತ ನೀರಾವರಿ, ಅಮ್ಮಾಜೇಶ್ವರಿ ಏತ ನೀರಾವರಿ, ಅರಭಾವಿ ಕ್ಷೇತ್ರ ವ್ಯಾಪ್ತಿಯ 20 ಕೆರೆಗಳ ನೀರು ತುಂಬುವ ಯೋಜನೆ, ಮಹಾಲಕ್ಷ್ಮೀ ಹಾಗೂ ಶ್ರೀಚನ್ನವೃಷಬೇಂದ್ರ, ಶ್ರೀ ಸತ್ತೀಗೇರಿ ಹಾಗೂ ಮೆಹಕರ್, ಔರಾದ್ ತಾಲೂಕಿನ 36 ಕೆರೆಗಳಿಗೆ ನೀರು ತುಂಬಿಸುವ ಯೋಜನೆ. ಕಲಬುರಗಿ ನಗರಕ್ಕೆ ಕುಡಿಯುವ ನೀರು ಸರಬರಾಜು, ಯಲ್ಲಾಪೂರ ತಾಲೂಕಿನ 100 ಕೆರೆಗಳನ್ನು ತುಂಬಿಸುವ, ಆಳಂದ ತಾಲೂಕಿನ 8 ಕೆರೆಗಳಿಗೆ ನೀರು ತುಂಬಿಸುವ, ಚಿಂಚೋಳಿ ತಾಲೂಕಿನ ಐನಾಪುರ ಏತ ನೀರಾವರಿ ಯೋಜನೆ, ಅಮೃತ ಸರೋವರ ನಿರ್ಮಾಣ ಯೋಜನೆಗೆ ಸಂಪುಟ ಸಭೆ ಒಪ್ಪಿಗೆ ನೀಡಿದೆ.

ನೂತನ ಸ್ಟಾರ್ಟ್​ಅಪ್​ ನೀತಿಗೆ ಸಚಿವ ಸಂಪುಟ ಸಭೆ ಅನುಮೋದನೆ

ನೂತನ ಸ್ಟಾರ್ಟ್​ಅಪ್​ ನೀತಿಗೆ ಸಚಿವ ಸಂಪುಟ ಸಭೆ ಅನುಮೋದನೆ ಮಾಡಿದ್ದು, 2022-2027ರ ನಡುವೆ 5 ವರ್ಷಗಳಲ್ಲಿ 10 ಸಾವಿರ ಕಂಪನಿ ಸ್ಥಾಪನೆ ಗುರಿ ಹೊಂದಿರುವ ಸ್ಟಾರ್ಟ್​ಅಪ್​ ನೀತಿಗೆ ಸಂಪುಟ ಸಭೆ ಸಮ್ಮತಿ ನೀಡಿದೆ.

ಇದನ್ನೂ ಓದಿ: ಪೊಲೀಸ್ ಸಿಬ್ಬಂದಿ ಅಂತರ್ ಜಿಲ್ಲಾ ವರ್ಗಾವಣೆಗೆ ಅವಕಾಶ: ಬೊಮ್ಮಾಯಿ ನೇತೃತ್ವದ ಸಂಪುಟ ಸಭೆಯಲ್ಲಿ ತೀರ್ಮಾನ

ಭೂಕಂದಾಯ 2ನೇ ತಿದ್ದುಪಡಿ ವಿಧೇಯಕ ಅಂಗೀಕಾರ

ಭೂಕಂದಾಯ ಕಾಯ್ದೆ ಸೆಕ್ಷನ್ 95, 96ಕ್ಕೆ ತಿದ್ದುಪಡಿ ತರುವ ಮೂಲಕ ವಿಧೇಯಕ ಅಂಗೀಕಾರ ಮಾಡಲಾಗಿದೆ. ಕೃಷಿಯೇತರ ಉದ್ದೇಶಕ್ಕೆ ಭೂಪರಿವರ್ತನೆ ಪ್ರಕ್ರಿಯೆ ಸರಳೀಕರಣ. ಕೃಷಿ ಭೂಮಿ ಕೈಗಾರಿಕಾ ಉದ್ದೇಶಗಳಿಗಾಗಿ ಪರಿವರ್ತಿಸಲು ಅನುಕೂಲ. ಕೃಷಿ ಭೂಮಿ ನಿವಾಸಿಗಳು ಸಂಪೂರ್ಣವಾಗಿ ಅಥವಾ ಭಾಗವಾಗಿ ವರ್ಗಾವಣೆ ಮಾಡಲಾಗಿದೆ. ಬೇರೆ ಯಾವುದೇ ಉದ್ದೇಶಕ್ಕೆ ಬೇರೆಡೆಗೆ ವರ್ಗಾವಣೆ ಬಯಸಿದರೆ ಅಫಿಡವಿಟ್​ ಸಲ್ಲಿಸಬಹುದು. ಅರ್ಜಿ ಸ್ವೀಕರಿಸಿದ 7 ದಿನಗಳಲ್ಲಿ ಜಿಲ್ಲಾಧಿಕಾರಿ ಅನುಮೋದನೆ ನೀಡುತ್ತಾರೆ.

ಪೊಲೀಸ್ ಸಿಬ್ಬಂದಿ ಅಂತರ್ ಜಿಲ್ಲಾ ವರ್ಗಾವಣೆಗೆ ಅವಕಾಶ

ಕರ್ನಾಟಕ ಪೊಲೀಸ್ ಇಲಾಖೆ ಸಿಬ್ಬಂದಿಗೆ ನಿರ್ಬಂಧಿತವಾಗಿದ್ದ ಅಂತರ್ ಜಿಲ್ಲಾ ವರ್ಗಾವಣೆಗೆ ಇದೀಗ ಅವಕಾಶ ನೀಡಲಾಗಿದೆ. ಇಂದು(ಡಿಸೆಂಬರ್ 22) ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟದಲ್ಲಿ ಪೊಲೀಸ್ ಸಿಬ್ಬಂದಿ ಅಂತರ್ ಜಿಲ್ಲಾ ವರ್ಗಾವಣೆಗೆ ಅವಕಾಶ ನೀಡಲು ತೀರ್ಮಾನಿಸಲಾಗಿದೆ.ಆದ್ರೆ, ಕೆಲ ಷರತ್ತುಗಳೊಂದಿಗೆ ಪೊಲೀಸ್ ಸಿಬ್ಬಂದಿ ವರ್ಗಾವಣೆಗೆ ಅವಕಾಶ ನೀಡಲಾಗಿದೆ.

ಇದನ್ನೂ ಓದಿ: ಭೂಕಂದಾಯ 2ನೇ ತಿದ್ದುಪಡಿ ವಿಧೇಯಕ ಅಂಗೀಕಾರ, ಇನ್ಮುಂದೆ ಕೃಷಿಯೇತರ ಉದ್ದೇಶಕ್ಕೆ ಭೂಪರಿವರ್ತನೆ ಪ್ರಕ್ರಿಯೆ ಸರಳೀಕರಣ

ಪೊಲೀಸ್ ಇಲಾಖೆಗೆ ನೇಮಕವಾಗಿ ಕನಿಷ್ಠ 3 ವರ್ಷ ಸೇವೆ ಸಲ್ಲಿಸಿರಬೇಕು. ಹಾಗೂ ಮಾಜಿ ಯೋಧರು ಸಹ ಬೇರೆ ಜಿಲ್ಲೆಗಳಿಗೆ ವರ್ಗಾವಣೆ ಆಗಬಹುದು. ಯಾವುದೇ ಒಂದು ಜಿಲ್ಲೆಯಲ್ಲಿ, ನೇಮಕಾತಿ ಹೊಂದಿದ ಹಾಗೂ ಅದೇ ಜಿಲ್ಲೆಯಲ್ಲಿ ಏಳು ವರ್ಷಗಳ ಕಾಲ ಸೇವೆ ಸಲ್ಲಿಸಿದ ಯಾವುದೇ ಸಿಬ್ಬಂದಿ, ಇತರೆ ಜಿಲ್ಲೆಗಳು ಅಥವಾ ತಮ್ಮ ಸ್ವಂತ ಜಿಲ್ಲೆಗೆ ವರ್ಗಾವಣೆ ಹೊಂದಲು ಅರ್ಹತೆ ಹೊಂದಿರುತ್ತಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.