ಬೆಂಗಳೂರು: ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ವಿರೋಧಿಸಿ ವಿದ್ಯಾರ್ಥಿಗಳು ಇಂದು (ಸೆಪ್ಟೆಂಬರ್ 14) ಪ್ರತಿಭಟನೆ ನಡೆಸಿದ್ದಾರೆ. ನೂತನ ಶಿಕ್ಷಣ ನೀತಿ ವಿರೋಧಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದಿಂದ ಪ್ರತಿಭಟನೆ ನಡೆಸಲಾಗಿದೆ. ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ ಮಾಡಲಾಗಿದೆ. ಮೈಸೂರು ಬ್ಯಾಂಕ್ ಸರ್ಕಲ್ ಬಳಿ ಲಾಠಿಚಾರ್ಜ್ ನಡೆದಿದೆ. ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ತೆರಳ್ತಿದ್ದ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ನಡೆಸಲಾಗಿದೆ.
ಪೊಲೀಸರ ಲಾಠಿಚಾರ್ಜ್ ವೇಳೆ ವಿದ್ಯಾರ್ಥಿಗಳಿಬ್ಬರಿಗೆ ಗಾಯವಾಗಿದೆ. ರಾಷ್ಟ್ರೀಯ ಶಿಕ್ಷಣ ನೀತಿ ವಿರೋಧಿಸಿ ಪ್ರತಿಭಟನೆ ವೇಳೆ ಘಟನೆ ನಡೆದಿದೆ. ಮೈಸೂರು ಬ್ಯಾಂಕ್ ಸರ್ಕಲ್ ಬಳಿ ಲಾಠಿಚಾರ್ಜ್ ಸಂದರ್ಭ ಇಬ್ಬರು ವಿದ್ಯಾರ್ಥಿಗಳಿಗೆ ಗಾಯವಾಗಿದೆ. ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ತೆರಳ್ತಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿಚಾರ್ಜ್ ಮಾಡಿದ್ದರು. ಲಾಠಿಚಾರ್ಜ್ ವೇಳೆ ಮುಖ್ತಾರ್ ಹಾಗೂ ಅರ್ಮಾನ್ ಎಂಬವರಿಗೆ ಗಾಯವಾಗಿದೆ. ಗಾಯಾಳುಗಳಿಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಈ ಮೊದಲು, ಎನ್‌ಇಪಿ ಅಂದ್ರೆ ನಾಗ್ಪುರ್ ಶಿಕ್ಷಣ ನೀತಿ ಎಂದಿದ್ದ ಕಾಂಗ್ರೆಸ್ ನಾಯಕ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ಗೆ ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥ್ ನಾರಾಯಣ ತಿರುಗೇಟು ನೀಡಿದ್ದರು. ಹೊಸ ಶಿಕ್ಷಣ ನೀತಿಯ (NEP) ಬಗ್ಗೆ ಗೊತ್ತಿಲ್ಲದಿದ್ರೆ ಬೇರೆಯವರ ಬಳಿ ಕೇಳಿ ತಿಳಿಯಲಿ. ಇಲ್ಲದಿದ್ರೆ ಪರಿಷತ್‌ನಲ್ಲಿ ನಾನೇ ಅವರಿಗೆ ತಿಳಿಸುತ್ತೇನೆ. ಡಿ.ಕೆ. ಶಿವಕುಮಾರ್ ಹೇಳಿಕೆ ಅವರಿಗೇ ತಿರುಗುಬಾಣವಾಗುತ್ತೆ. ಎನ್‌ಇಪಿ ಬಗ್ಗೆ ಡಿಕೆಶಿ ನ್ಯಾಯಬದ್ಧವಾಗಿ ವಿರೋಧಿಸುತ್ತಿಲ್ಲ. ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಶಿಕ್ಷಕರಿಗೆ ಅಪಮಾನ ಮಾಡ್ತಿದ್ದಾರೆ ಎಂದು ಬೆಂಗಳೂರಿನಲ್ಲಿ ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥ್ ನಾರಾಯಣ ಭಾನುವಾರ ಹೇಳಿಕೆ ನೀಡಿದ್ದರು.
ಭಾರತ ಅಭಿವೃದ್ಧಿ ದೇಶ ಆಗಬೇಕು, ಅಂದ್ರೆ ರಾಷ್ಟ್ರೀಯ ಶಿಕ್ಷಣ ನೀತಿ ಸಹಾಯ ಆಗುತ್ತೆ. ವಿದ್ಯಾರ್ಥಿಗಳಿಗೆ ಸದೃಢ ಹಾಗೂ ಉತ್ತಮ ಶಿಕ್ಷಣ ನೀತಿ ಕೊಡಬೇಕು. ವಿದ್ಯಾರ್ಥಿಗಳ ಸಬಲೀಕರಣ, ವಿದ್ಯಾರ್ಥಿಗಳ ಭವಿಷ್ಯ ಉತ್ತಮ ಆಗಬೇಕು ಎಂದು ಅಶ್ವತ್ಥ್ ನಾರಾಯಣ ಹೇಳಿದ್ದರು.
ಇದನ್ನೂ ಓದಿ: ಹೊಸ ಶಿಕ್ಷಣ ನೀತಿ ಬಗ್ಗೆ ಗೊತ್ತಿಲ್ಲದಿದ್ರೆ ಬೇರೆಯವರ ಬಳಿ ಕೇಳಿ ತಿಳಿಯಲಿ: ಡಿಕೆ ಶಿವಕುಮಾರ್ಗೆ ಅಶ್ವತ್ಥ್ ನಾರಾಯಣ ತಿರುಗೇಟು
ಇದನ್ನೂ ಓದಿ: NEP: ಬೆಂಗಳೂರು ನಗರ ವಿವಿಯಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನ; ಎನ್‌ಇಪಿ ವಿರೋಧಿಸಿ ಸಿದ್ದರಾಮಯ್ಯ ಪತ್ರ
Published On - 6:54 pm, Tue, 14 September 21