ಪಂಚಭೂತಗಳಲ್ಲಿ ಲೀನರಾದ ಕ್ಯಾಪ್ಟನ್ ಎಂವಿ ಪ್ರಾಂಜಲ್
ಬೆಂಗಳೂರಿನ ಸೋಮಸುಂದರಪಾಳ್ಯದ ಚಿತಾಗಾರದಲ್ಲಿ ಬ್ರಾಹ್ಮಣ ಸಂಪ್ರದಾಯದಂತೆ ಎಂ.ವಿ ಪ್ರಾಂಜಲ್ ಅವರ ತಂದೆ ವೆಂಕಟೇಶ್ ಅವರು ಅಂತಿಮ ವಿಧಿವಿಧಾನ ಪೂರೈಸಿದರು. ಭಾರತೀಯ ಸೇನೆಯಿಂದ ಕುಶಾಲ ತೋಪು ಸಿಡಿಸಿದ ಸೇನಾಧಿಕಾರಿಗಳು, ಎಂ.ವಿ ಪ್ರಾಂಜಲ್ಗೆ ಅಂತಿಮ ನಮನ ಸಲ್ಲಿಸಿದರು.
ಬೆಂಗಳೂರು, ನ.25: ಜಮ್ಮುವಿನ ರಜೌರಿಯಲ್ಲಿ ಬುಧವಾರ (ನ.22) ದಂದು ಭಯೋತ್ಪಾದಕರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಹೋರಾಡಿ ಕರ್ನಾಟಕದ ಹೆಮ್ಮೆಯ ಕುವರ ಕ್ಯಾಪ್ಟನ್ ಎಂ.ವಿ ಪ್ರಾಂಜಲ್ (Captain MV Pranjal) ಹುತಾತ್ಮರಾಗಿದ್ದರು. ನಿನ್ನೆ ಕ್ಯಾಪ್ಟನ್ ಪ್ರಾಂಜಲ್ ಅವರ ಪಾರ್ಥಿವ ಶರೀರ, ಹುಟ್ಟೂರಾದ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಜಿಗಣಿ ಬಳಿಯ ನಂದನವನ ಲೇಔಟ್ನ ನಿವಾಸಕ್ಕೆ ಆಗಮಿಸಿದ್ದು, ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಮಧ್ಯಾಹ್ನ 12.30ಕ್ಕೆ ನಿವಾಸದಿಂದ ತೆರೆದ ವಾಹನದಲ್ಲಿ ಕಲ್ಲುಬಾಳು ರಸ್ತೆ ಮೂಲಕ ಜಿಗಣಿಯ ಒಡಿಸಿ ಸರ್ಕಲ್, ಜಿಗಣಿ ರಸ್ತೆ ಮೂಲಕ ಹರಪನ್ನಹಳ್ಳಿ – ಕೊಪ್ಪ ಗೇಟ್ – ಬೇಗಿಹಳ್ಳಿ – ಬನ್ನೇರುಘಟ್ಟ ರಸ್ತೆ – ನೈಸ್ ರೋಡ್ – ಕೂಡ್ಲುಗೇಟ್ ಮೂಲಕ ಸೋಮಸುಂದರಪಾಳ್ಯ ವಿದ್ಯುತ್ ಚಿತಾಗಾರದಲ್ಲಿ ಬ್ರಾಹ್ಮಣ ಸಂಪ್ರದಾಯದಂತೆ ಕ್ಯಾಪ್ಟನ್ ಪ್ರಾಂಜಲ್ ಅವರ ಅಂತ್ಯಕ್ರಿಯೆ ನೆರವೇರಿದೆ.
ಪಂಚಭೂತಗಳಲ್ಲಿ ಲೀನರಾದ ಪ್ರಾಂಜಲ್
ಬೆಂಗಳೂರಿನ ಸೋಮಸುಂದರಪಾಳ್ಯದ ಚಿತಾಗಾರದಲ್ಲಿ ಬ್ರಾಹ್ಮಣ ಸಂಪ್ರದಾಯದಂತೆ ಎಂ.ವಿ ಪ್ರಾಂಜಲ್ ಅವರ ತಂದೆ ವೆಂಕಟೇಶ್ ಅವರು ಅಂತಿಮ ವಿಧಿವಿಧಾನ ಪೂರೈಸಿದರು. ಭಾರತೀಯ ಸೇನೆಯಿಂದ ಕುಶಾಲ ತೋಪು ಸಿಡಿಸಿದ ಸೇನಾಧಿಕಾರಿಗಳು, ಎಂ.ವಿ ಪ್ರಾಂಜಲ್ಗೆ ಅಂತಿಮ ನಮನ ಸಲ್ಲಿಸಿದರು. ಬಳಿಕ ಪ್ರಾಂಜಲ್ ಪಾರ್ಥಿವ ಶರೀರದ ಮೇಲಿದ್ದ ತ್ರಿವರ್ಣಧ್ವಜವನ್ನು ಪೋಷಕರಿಗೆ ಹಸ್ತಾಂತರಿಸಿದರು. ಎಲ್ಲೇಡೆ ಕ್ಯಾಪ್ಟನ್ ಎಂ.ವಿ ಪ್ರಾಂಜಲ್ ಅಮರ್ ರಹೇ ಎಂಬ ಘೋಷಣೆ ಮುಗಿಲು ಮುಟ್ಟಿತ್ತು.
ಇದನ್ನೂ ಓದಿ:ಹೆಮ್ಮೆಯ ಕನ್ನಡಿಗ ಹುತಾತ್ಮ ಕ್ಯಾಪ್ಟನ್ ಎಂವಿ ಪ್ರಾಂಜಲ್ ಗೆ ಸಾರ್ವಜನಿಕರಿಂದ ಅಂತಿಮ ನಮನ
ಹಲವರಿಂದ ಅಂತಿಮ ನಮನ
ಇನ್ನು ಹುತಾತ್ಮ ಯೋಧ ಕ್ಯಾಪ್ಟನ್ ಎಂ.ವಿ ಪ್ರಾಂಜಲ್ಗೆ ಸರ್ಕಾರಿ ಗೌರವ ಸಲ್ಲಿಸಿದ್ದು, ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ನಂದನವನ ಲೇಔಟ್ನ ನಿವಾಸದ ಎದುರು ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್, ಬೆಂಗಳೂರು ಗ್ರಾಮಾಂತರ ಸಂಸದ ಡಿ.ಕೆ.ಸುರೇಶ್ ಹಾಗೂ ಬೆಂಗಳೂರು ಗ್ರಾಮಾಂತರ SP ಮಲ್ಲಿಕಾರ್ಜುನ ಬಾಲದಂಡಿ ಅವರು ಅಂತಿಮ ನಮನ ಸಲ್ಲಿಸಿದರು. ಜೊತೆಗೆ ಮೆರವಣಿಗೆ ವೇಳೆ ಮಹಿಳೆ, ಮಕ್ಕಳು ಸೇರಿದಂತೆ ಸಾವಿರಾರು ಜನ ದರ್ಶನ ಪಡೆದುಕೊಂಡರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ