ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಆರೋಗ್ಯ ವಿಚಾರಿಸಿದ ರಾಜ್ಯಪಾಲ ಗೆಹ್ಲೋಟ್ ಮತ್ತು ಸಿಎಂ ಬಸವರಾಜ ಬೊಮ್ಮಾಯಿ
ಧೀರ ಯೋಧನ ಆರೋಗ್ಯ ವಿಚಾರಿಸಲು ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಸ್ಪತ್ರೆಗೆ ಭೇಟಿ ನೀಡಿದರು.
ಬೆಂಗಳೂರು: ರಕ್ಷಣಾ ಪಡೆಗಳ ಸಿಬ್ಬಂದಿ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಅವರಿದ್ದ ಹೆಲಿಕಾಪ್ಟರ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುವ ವಾಯುಪಡೆಯ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಕಮಾಂಡೊ ಆಸ್ಪತ್ರೆಗೆ ದಾಖಲಿಸಲಾಗಿದೆ. ಸುಟ್ಟಗಾಯಗಳಿಂದ ಬಳಲುತ್ತಿರುವ ಧೀರ ಯೋಧನ ಆರೋಗ್ಯ ವಿಚಾರಿಸಲು ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಸ್ಪತ್ರೆಗೆ ಭೇಟಿ ನೀಡಿದರು. ವೈದ್ಯರಿಂದ ಯೋಧನ ಆರೋಗ್ಯದ ಸ್ಥಿತಿಗತಿ ವಿಚಾರಿಸಿದರು.
ಎಚ್ಎಎಲ್ ವಿಮಾನ ನಿಲ್ದಾಣಕ್ಕೆ ಬಂದ ಏರ್ ಆಂಬುಲೆನ್ಸ್ನಿಂದ ವರುಣ್ ಸಿಂಗ್ ಅವರನ್ನು ಓಲ್ಡ್ ಏರ್ಪೋರ್ಟ್ ರಸ್ತೆಯಲ್ಲಿರುವ ಕಮಾಂಡೊ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಕಮಾಂಡೋ ಆಸ್ಪತ್ರೆ ಬಳಿ ಭದ್ರತೆಗಾಗಿ ಪೊಲೀಸರನ್ನು ನಿಯೋಜಿಸಲಾಗಿದೆ. ರಕ್ಷಣಾ ಪಡೆಗಳ ಸಿಬ್ಬಂದಿ ಮುಖ್ಯಸ್ಥ ಬಿಪಿನ್ ರಾವತ್ ಅವರೊಂದಿಗೆ ನಿನ್ನೆ ಬಿಪಿನ್ ರಾವತ್ ಸಹ ಪ್ರಯಾಣ ಬೆಳೆಸಿದ್ದರು. 14 ಮಂದಿಯ ಪೈಕಿ ವರುಣ್ ಸಿಂಗ್ ಮಾತ್ರ ಬದುಕುಳಿದಿದ್ದರು. ದೇಹದ ಬಹುತೇಕ ಭಾಗ ಸುಟ್ಟು ಹೋಗಿರುವ ಕಾರಣ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಸ್ಥಳಾಂತರಿಸಲಾಗಿದೆ.
ತಮಿಳುನಾಡಿನ ಕುನೂರ್ನಲ್ಲಿ ಬುಧವಾರ (ಡಿ.8) ಸಂಭವಿಸಿದ ಹೆಲಿಕಾಪ್ಟರ್ ಅಪಘಾತದಲ್ಲಿ ರಕ್ಷಣ ಪಡೆಗಳ ಸಿಬ್ಬಂದಿ ಮುಖ್ಯಸ್ಥ ಸಿಡಿಎಸ್ ಜನರಲ್ ಬಿಪಿನ್ ರಾವತ್ ಸೇರಿದಂತೆ 13 ಮಂದಿ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಬದುಕುಳಿದ ಏಕೈಕ ವ್ಯಕ್ತಿ ವಾಯುಪಡೆಯ ಅಧಿಕಾರಿ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಪ್ರಸ್ತುತ ವೆಲ್ಲಿಂಗ್ಟನ್ನ ಮಿಲಿಟರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 2020ರಲ್ಲಿ ತಮ್ಮ ತೇಜಸ್ ಯುದ್ಧವಿಮಾನವನ್ನು ಕಾಪಾಡಿಕೊಂಡಿದ್ದಕ್ಕಾಗಿ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರಿಗೆ ಶೌರ್ಯ ಚಕ್ರ ಪುರಸ್ಕಾರ ನೀಡಿ ಗೌರವಿಸಲಾಗಿತ್ತು. ವರುಣ್ ಸಿಂಗ್ ಸಹ ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ವಾಯುಪಡೆಯು ಟ್ವೀಟ್ ಮೂಲಕ ತಿಳಿಸಿದೆ. ಘಟನೆ ಕುರಿತು ಟ್ವೀಟ್ ಮಾಡಿರುವ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅಪಘಾತದಲ್ಲಿ ಮೃತಪಟ್ಟಿವರಿಗೆ ಸಂತಾಪ ಸೂಚಿಸಿದ್ದಾರೆ. ದುರ್ಘಟನೆಯಲ್ಲಿ ಬದುಕುಳಿದಿರುವ ಏಕೈಕ ವ್ಯಕ್ತಿ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.
ಇದನ್ನೂ ಓದಿ: ಬಿಪಿನ್ ರಾವತ್ ನಿಧನದಿಂದ ತೆರವಾದ ಸಿಡಿಎಸ್ ಹುದ್ದೆ ಮುಂದೆ ಯಾರಿಗೆ?-ಬಲವಾಗಿ ಕೇಳಿಬರುತ್ತಿರುವುದು ಇವರ ಹೆಸರು ಇದನ್ನೂ ಓದಿ: TV9 Kannada Digital Exclusive: ಸೇನಾ ಮುಖ್ಯಸ್ಥ ಬಿಪಿನ್ ರಾವತ್ರ ಸಾವಿನ ಬಗ್ಗೆ ವರ್ಷಕ್ಕೂ ಮುಂಚೆ ಎಚ್ಚರಿಸಿತ್ತು ಈ ಜ್ಯೋತಿಷ ಪತ್ರಿಕೆ