AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆಲಮಂಗಲ: ರಾಷ್ಟ್ರೀಯ ಹೆದ್ದಾರಿಯ ಡಿವೈಡರ್​ಗೆ ಕಾರು ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವು

ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಡಿವೈಡರ್​ಗೆ ಸ್ವಿಫ್ಟ್​ ಕಾರು ಡಿಕ್ಕಿಯಾಗಿ ಐವರ ಪೈಕಿ ಮೂವರು ಮೃತಪಟ್ಟಿದ್ದಾರೆ. ಗಾಯಗೊಂಡವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ನೆಲಮಂಗಲ: ರಾಷ್ಟ್ರೀಯ ಹೆದ್ದಾರಿಯ ಡಿವೈಡರ್​ಗೆ ಕಾರು ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವು
ಡಿವೈಡರ್​​ಗೆ ಕಾರು ಡಿಕ್ಕಿ
TV9 Web
| Edited By: |

Updated on:Sep 18, 2023 | 8:56 AM

Share

ನೆಲಮಂಗಲ ಸೆ.18: ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಡಿವೈಡರ್​ಗೆ ಕಾರು (Car) ಡಿಕ್ಕಿಯಾಗಿ (Accident) ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆಗಸ್ಟಿನ್, ದಾರೆಡ್ಡಿ, ನಿರೋಷ್ ಮೃತ ದುರ್ದೈವಿಗಳು.  ಬೆಂಗಳೂರು ಉತ್ತರ (Bengaluru North) ತಾಲೂಕಿನ ಅಂಚೆಪಾಳ್ಯ ಗ್ರಾಮದ ಬಳಿ ಘಟನೆ ನಡೆದಿದೆ. ಸ್ವಿಫ್ಟ್​ ಕಾರಿನಲ್ಲಿದ್ದ ಐವರ ಪೈಕಿ ಮೂವರು ದುರ್ಮರಣ ಹೊಂದಿದ್ದು, ಗಂಭೀರ ಗಾಯಗೊಂಡ ಇಬ್ಬರಿಗೆ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಗಳು ಮಿಥುನ್ ಯಾದವ್ (27) ದಾಸರಹಳ್ಳಿಯ ನಿವಾಸಿ ಶತ್ರುಘ್ನ (30) ನಾಗವಾರ ನಿವಾಸಿ ಗಾಯಾಳುಗಳು. ಮೃತರೆಲ್ಲರೂ ಇಂಜಿನಿಯರ್ಸ್ ಆಗಿದ್ದು, ಮಾನ್ಯತ ಟೆಕ್ ಪಾರ್ಕ್ ಬಳಿಯ Cognizant ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಐವರು ಮೈಸೂರಿಗೆ ಟ್ರೀಪ್ ಹೋಗಿ ವಾಪಸ್ ಬರುವಾಗ ಅಪಘಾತ ಸಂಭವಿಸಿದೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಕಬ್ಬಿಣದ ಸರಳುಗಳ ಮೇಲೆ ಬಿದ್ದು ಯುವಕನಿಗೆ ಗಂಭೀರ ಗಾಯ

ಬೆಂಗಳೂರು: ಜಯನಗರದ ನಾಲ್ಕನೇ ಬ್ಲಾಕ್​ನಲ್ಲಿ ನಿರ್ಮಾಣ ಹಂತದ ಕಟ್ಟಡದಲ್ಲಿನ ಕಬ್ಬಿಣದ ಸರಳುಗಳ ಮೇಲೆ ಬಿದ್ದು ಯುವಕ ಗಂಭೀರವಾಗಿ ಗಾಯಗೊಂಡಿದ್ದಾನೆ. ಸ್ಥಳೀಯರು ಕೂಡಲೇ ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಕಬ್ಬಿಣದ ಸರಳು ಕಟ್ ಮಾಡಿ ಯುವಕನನ್ನು ರಕ್ಷಿಸಿದ್ದಾರೆ. ಬಳಿಕ ಯುವಕನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಖಾಸಗಿ ಬಸ್​ಗಳ ರೇಸ್​ಗೆ ಬೈಕ್ ಸವಾರರಿಗೆ ಅಪಘಾತ

ಮಂಗಳೂರು: ಮಂಗಳೂರು ಹೊರವಲಯದ ಸುರತ್ಕಲ್ ಬಳಿಯ ಹೊಸಬೆಟ್ಟು ಜಂಕ್ಷನ್​​ನಲ್ಲಿ ಖಾಸಗಿ ಬಸ್​​ಗಳ ರೇಸ್​​​ ನಡೆದಿತ್ತು. ಈ ವೇಳೆ ಒಂದು ಬಸ್​ ಬೈಕ್ ಡಿಕ್ಕಿ ಹೊಡೆದಿದೆ.  ಬೈಕ್ ನಲ್ಲಿದ್ದ ಅಬ್ದುಲ್ ಖಾದರ್ ಅರ್ಫಾನ್ ಗೆ ಗಂಭೀರ ಗಾಯಗಳಾಗಿದ್ದು, ಅಮೀರ್ ಸಾಹಿಲ್ ಗೆ ಸಣ್ಣಪುಟ್ಟ ಗಾಯಗಳಾಗಿವೆ. ಮಂಗಳೂರು ಉತ್ತರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಖಾಸಗಿ ಬಸ್​ಗಳ ಮೇಲೆ ಕಠಿಣ ಕ್ರಮಕ್ಕೆ ರಾಜ್ಯ ಸಂಚಾರಿ ಎಡಿಜಿಪಿ ಅಲೋಕ್ ಕುಮಾರ್ ಟ್ವೀಟ್ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:55 am, Mon, 18 September 23

ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ