ನೆಲಮಂಗಲ ಸೆ.18: ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಡಿವೈಡರ್ಗೆ ಕಾರು (Car) ಡಿಕ್ಕಿಯಾಗಿ (Accident) ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆಗಸ್ಟಿನ್, ದಾರೆಡ್ಡಿ, ನಿರೋಷ್ ಮೃತ ದುರ್ದೈವಿಗಳು. ಬೆಂಗಳೂರು ಉತ್ತರ (Bengaluru North) ತಾಲೂಕಿನ ಅಂಚೆಪಾಳ್ಯ ಗ್ರಾಮದ ಬಳಿ ಘಟನೆ ನಡೆದಿದೆ. ಸ್ವಿಫ್ಟ್ ಕಾರಿನಲ್ಲಿದ್ದ ಐವರ ಪೈಕಿ ಮೂವರು ದುರ್ಮರಣ ಹೊಂದಿದ್ದು, ಗಂಭೀರ ಗಾಯಗೊಂಡ ಇಬ್ಬರಿಗೆ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಗಳು ಮಿಥುನ್ ಯಾದವ್ (27) ದಾಸರಹಳ್ಳಿಯ ನಿವಾಸಿ ಶತ್ರುಘ್ನ (30) ನಾಗವಾರ ನಿವಾಸಿ ಗಾಯಾಳುಗಳು. ಮೃತರೆಲ್ಲರೂ ಇಂಜಿನಿಯರ್ಸ್ ಆಗಿದ್ದು, ಮಾನ್ಯತ ಟೆಕ್ ಪಾರ್ಕ್ ಬಳಿಯ Cognizant ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಐವರು ಮೈಸೂರಿಗೆ ಟ್ರೀಪ್ ಹೋಗಿ ವಾಪಸ್ ಬರುವಾಗ ಅಪಘಾತ ಸಂಭವಿಸಿದೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಬೆಂಗಳೂರು: ಜಯನಗರದ ನಾಲ್ಕನೇ ಬ್ಲಾಕ್ನಲ್ಲಿ ನಿರ್ಮಾಣ ಹಂತದ ಕಟ್ಟಡದಲ್ಲಿನ ಕಬ್ಬಿಣದ ಸರಳುಗಳ ಮೇಲೆ ಬಿದ್ದು ಯುವಕ ಗಂಭೀರವಾಗಿ ಗಾಯಗೊಂಡಿದ್ದಾನೆ. ಸ್ಥಳೀಯರು ಕೂಡಲೇ ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಕಬ್ಬಿಣದ ಸರಳು ಕಟ್ ಮಾಡಿ ಯುವಕನನ್ನು ರಕ್ಷಿಸಿದ್ದಾರೆ. ಬಳಿಕ ಯುವಕನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಂಗಳೂರು: ಮಂಗಳೂರು ಹೊರವಲಯದ ಸುರತ್ಕಲ್ ಬಳಿಯ ಹೊಸಬೆಟ್ಟು ಜಂಕ್ಷನ್ನಲ್ಲಿ ಖಾಸಗಿ ಬಸ್ಗಳ ರೇಸ್ ನಡೆದಿತ್ತು. ಈ ವೇಳೆ ಒಂದು ಬಸ್ ಬೈಕ್ ಡಿಕ್ಕಿ ಹೊಡೆದಿದೆ. ಬೈಕ್ ನಲ್ಲಿದ್ದ ಅಬ್ದುಲ್ ಖಾದರ್ ಅರ್ಫಾನ್ ಗೆ ಗಂಭೀರ ಗಾಯಗಳಾಗಿದ್ದು, ಅಮೀರ್ ಸಾಹಿಲ್ ಗೆ ಸಣ್ಣಪುಟ್ಟ ಗಾಯಗಳಾಗಿವೆ. ಮಂಗಳೂರು ಉತ್ತರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಖಾಸಗಿ ಬಸ್ಗಳ ಮೇಲೆ ಕಠಿಣ ಕ್ರಮಕ್ಕೆ ರಾಜ್ಯ ಸಂಚಾರಿ ಎಡಿಜಿಪಿ ಅಲೋಕ್ ಕುಮಾರ್ ಟ್ವೀಟ್ ಮಾಡಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 6:55 am, Mon, 18 September 23