AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರು ತರಬೇತಿ ವೇಳೆ ಯುವತಿ ಎದುರೇ ಹಸ್ತಮೈಥುನ: ತರಬೇತುದಾರನ ವಿರುದ್ಧ ಕೇಸ್ ಬುಕ್, ಲೈಸೆನ್ಸ್ ರದ್ದು

ಯುವತಿಗೆ ಕಾರು ಚಾಲನೆ ತರಬೇತಿ ನೀಡುವಾಗ ಹಸ್ತಮೈಥುನ ಮಾಡಿಕೊಂಡು ಅಸಭ್ಯವಾಗಿ ವರ್ತಿಸಿದ ಆರೋಪದಡಿ ಡ್ರೈವಿಂಗ್‌ ಸ್ಕೂಲ್‌ನ ತರಬೇತುದಾರನ ವಿರುದ್ಧ ದೂರು ದಾಖಲಾಗಿದೆ. ಅಲ್ಲದೇ ಡ್ರೈವಿಂಗ್ ಸ್ಕೂಲ್ ಪರವಾನಗಿ ಹಾಗೂ ತರಬೇತುದಾರನ ಚಾಲನಾ ಪರವಾನಗಿ ಕೂಡಲೇ ರದ್ದುಗೊಳಿಸಿ ಸಾರಿಗೆ ಸಚಿವ ರಾಮಲಿಂಗರೆಡ್ಡಿ ಆದೇಶ ಹೊರಡಿಸಿದ್ದಾರೆ. ಪ್ರಕರಣದ ವಿವರ ಇಲ್ಲಿದೆ.

ಕಾರು ತರಬೇತಿ ವೇಳೆ ಯುವತಿ ಎದುರೇ ಹಸ್ತಮೈಥುನ: ತರಬೇತುದಾರನ ವಿರುದ್ಧ ಕೇಸ್ ಬುಕ್, ಲೈಸೆನ್ಸ್ ರದ್ದು
ಪ್ರಾತಿನಿಧಿಕ ಚಿತ್ರ
Kiran Surya
| Updated By: ರಮೇಶ್ ಬಿ. ಜವಳಗೇರಾ|

Updated on: Jul 22, 2024 | 3:33 PM

Share

ಬೆಂಗಳೂರು (ಜುಲೈ 22): ಯುವತಿಗೆ ಕಾರು ಚಾಲನೆ ತರಬೇತಿ ನೀಡುವಾಗ ಹಸ್ತಮೈಥುನ ಮಾಡಿಕೊಂಡು ಅಸಭ್ಯವಾಗಿ ವರ್ತಿಸಿದ ಆರೋಪದಡಿ ಡ್ರೈವಿಂಗ್‌ ಸ್ಕೂಲ್‌ನ ತರಬೇತುದಾರನ ವಿರುದ್ಧ ಬೆಂಗಳೂರಿನ ಬಸವೇಶ್ವರನಗರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ಮಹಾಲಕ್ಷ್ಮಿಪುರದ 18 ವರ್ಷದ ಯುವತಿ ನೀಡಿದ ದೂರಿನ ಮೇರೆಗೆ ಬಸವೇಶ್ವರನಗರದ ಮಾರುತಿ ಡ್ರೈವಿಂಗ್‌ ಸ್ಕೂಲ್‌ನ ತರಬೇತುದಾರ ಅಣ್ಣಪ್ಪ ಎಂಬಾತನ ವಿರುದ್ಧ ಎಫ್‌ಐಆರ್‌ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ. ಇನ್ನು ಕಾರಿ ಚಾಲನಾ ತರಬೇತಿದಾರನ ಅಸಭ್ಯ ವರ್ತನೆಯ ಬಗ್ಗೆ ಮಾಧ್ಯಮಗಳಲ್ಲಿ ಸುದ್ದಿ ಬಿತ್ತರವಾಗಿರುವುದನ್ನು ಗಮನಿಸಿದ ಸಾರಿಗೆ ಸಚಿವ ರಾಮಲಿಂಗರೆಡ್ಡಿ, ಬಸವೇಶ್ವರನಗರ ಮಾರುತಿ ಡ್ರೈವಿಂಗ್ ಸ್ಕೂಲ್ ಪರವಾನಗಿ ಹಾಗೂ ಚಾಲಕ ಅಣ್ಣಪ್ಪ ಚಾಲನಾ ಪರವಾನಗಿ ಕೂಡಲೇ ರದ್ದುಗೊಳಿಸಿ ಆದೇಶ ಹೊರಡಿಸಿದ್ದಾರೆ. ಜೊತೆಗೆ ಡ್ರೈವಿಂಗ್ ಸ್ಕೂಲ್ ಗಳಲ್ಲಿ ಈ ರೀತಿ ಘಟನೆ ಮರುಕಳಿಸದಂತೆ ನಿರ್ದೇಶನ ನೀಡುವಂತೆ ಖಡಕ್ ಸೂಚನೆ ನೀಡಿದ್ದಾರೆ.

ಪ್ರಕರಣ ಹಿನ್ನೆಲೆ?

ಕಾರು ಚಾಲನೆ ಕಲಿಯಲು ಯುವತಿ ಬಸವೇಶ್ವರನಗರದ ಮಾರುತಿ ಡ್ರೈವಿಂಗ್‌ ಸ್ಕೂಲ್‌ನಲ್ಲಿ ನೋಂದಣಿ ಮಾಡಿಕೊಂಡು ಕೋರ್ಸ್‌ ಮುಗಿಸಿದ್ದಳು. ಡ್ರೈವಿಂಗ್‌ ಸ್ಕೂಲ್‌ನ ತರಬೇತುದಾರ ಅಣ್ಣಪ್ಪನೇ ಕಾರು ಚಾಲನೆ ಬಗ್ಗೆ ತರಬೇತಿ ನೀಡಿದ್ದ. ಕೋರ್ಸ್‌ ಮುಗಿದ ಬಳಿಕ ಅಣ್ಣಪ್ಪ, ನಿಮ್ಮ ಮನೆಯ ಕಾರಿನಲ್ಲೇ ಪರಿಪೂರ್ಣವಾಗಿ ಚಾಲನೆ ಬಗ್ಗೆ ಹೇಳಿಕೊಡುತ್ತೇನೆ. ಒಂದು ಗಂಟೆಯ ವಿಶೇಷ ಕ್ಲಾಸ್‌ಗೆ ₹750 ಕೊಡಬೇಕು ಎಂದು ಯುವತಿಗೆ ಹೇಳಿದ್ದ. ಯುವತಿ 15 ದಿನಗಳ ವಿಶೇಷ ಕ್ಲಾಸ್‌ಗೆ ಅಣ್ಣಪ್ಪನಿಗೆ 10,500 ರೂ. ಪಾವತಿಸಿದ್ದಾರೆ.

ಇದನ್ನೂ ಓದಿ: ನಕಲಿ ದಾಖಲೆ, ನಕಲಿ ವ್ಯಕ್ತಿಗಳನ್ನು ಸೃಷ್ಟಿಸಿ ಆಸ್ತಿ ಕಬಳಿಕೆ; ಕುಖ್ಯಾತ ಭೂಕಬಳಿಕೆದಾರ ಅರೆಸ್ಟ್

ಅದರಂತೆ ಜೂ.26ರಂದು ವಿಶೇಷ ಕ್ಲಾಸ್‌ ಆರಂಭಿಸಿದ್ದ ಅಣ್ಣಪ್ಪ, ಪ್ರತಿ ದಿನ ಯುವತಿಯ ಮನೆ ಬಳಿ ಬಂದು ಆಕೆ ಕಾರಿನಲ್ಲೇ ಒಂದು ಗಂಟೆ ಚಾಲನೆ ತರಬೇತಿ ನೀಡುತ್ತಿದ್ದ. ಜು.7ರಂದು ಬೆಳಗ್ಗೆ 6 ಗಂಟೆಗೆ ಯುವತಿ ಮನೆ ಬಳಿ ಬಂದಿದ್ದ ಅಣ್ಣಪ್ಪ, ಯುವತಿಗೆ ಚಾಲನೆ ಮಾಡಲು ಕಾರು ನೀಡಿದ್ದಾನೆ. ಯುವತಿ ಬಸವೇಶ್ವರನಗರದ ನ್ಯಾಷನಲ್‌ ಶಾಲೆಯ ಮೇಲ್ಸೇತುವೆಯಲ್ಲಿ ಯುವತಿ ಕಾರು ಚಾಲನೆ ಮಾಡುತ್ತಿದ್ದರು.

ಈ ವೇಳೆ ಪಕ್ಕದ ಆಸನದಲ್ಲಿ ಕುಳಿತಿದ್ದ ಅಣ್ಣಪ್ಪ, ಹಸ್ತಮೈಥುನ ಮಾಡಿಕೊಂಡಿದ್ದಾನೆ. ಇದರಿಂದ ಆತಂಕಗೊಂಡ ಯುವತಿ, ಕಾರನ್ನು ಮನೆಗೆ ಕಡೆಗೆ ತಿರುಗಿಸಿದ್ದಾರೆ. ಈ ವೇಳೆ ಅಣ್ಣಪ್ಪ ಎಚ್ಚೆತ್ತುಕೊಂಡು ಸುಮ್ಮನಾಗಿದ್ದ. ನಂತರ ಕಾರು ಚಾಲನೆ ತರಬೇತಿ ನೆಪದಲ್ಲಿ ಅನುಚಿತವಾಗಿ ವರ್ತಿಸಿ ಮುಜುಗರ ಉಂಟು ಮಾಡಿದ ಅಣ್ಣಪ್ಪ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಯುವತಿ ದೂರು ನೀಡಿದ್ದಳು. ಈ ದೂರಿನ ಮೇರೆಗೆ ಬಸವೇಶ್ವರನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ರಾಹುಲ್ ಗಾಂಧಿಯ ದಿಮಾಗ್ ಚೋರಿಯಾಗಿದೆ ಎಂದ ಪ್ರಲ್ಹಾದ್ ಜೋಶಿ
ರಾಹುಲ್ ಗಾಂಧಿಯ ದಿಮಾಗ್ ಚೋರಿಯಾಗಿದೆ ಎಂದ ಪ್ರಲ್ಹಾದ್ ಜೋಶಿ
ಬಳ್ಳಾರಿ: ಹೊತ್ತಿ ಉರಿದ ಲಾರಿ, 40 ಯಮಹಾ ಬೈಕ್​ಗಳು ಭಸ್ಮ
ಬಳ್ಳಾರಿ: ಹೊತ್ತಿ ಉರಿದ ಲಾರಿ, 40 ಯಮಹಾ ಬೈಕ್​ಗಳು ಭಸ್ಮ
ಶಿವರಾಜಕುಮಾರ್ ಹಾಡಿಗೆ ಹೆಜ್ಜೆ ಹಾಕಿದ ಶಾಸಕ ಹೆಚ್.ಸಿ.ಬಾಲಕೃಷ್ಣ
ಶಿವರಾಜಕುಮಾರ್ ಹಾಡಿಗೆ ಹೆಜ್ಜೆ ಹಾಕಿದ ಶಾಸಕ ಹೆಚ್.ಸಿ.ಬಾಲಕೃಷ್ಣ
ಶಾಮನೂರು ಶಿವಶಂಕರಪ್ಪ ಅಂತ್ಯಸಂಸ್ಕಾರ ಹೇಗೆ ನಡೆಯಲಿದೆ? ಇಲ್ಲಿದೆ ಮಾಹಿತಿ
ಶಾಮನೂರು ಶಿವಶಂಕರಪ್ಪ ಅಂತ್ಯಸಂಸ್ಕಾರ ಹೇಗೆ ನಡೆಯಲಿದೆ? ಇಲ್ಲಿದೆ ಮಾಹಿತಿ