AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Kambala: ಬೆಂಗಳೂರು ಕಂಬಳ ಆಯೋಜಕರ ವಿರುದ್ಧ ದೂರು ದಾಖಲು, ಕಾರಣವೇನು?

Bengaluru Kambala: ಬೆಂಗಳೂರಿನಲ್ಲಿ ಕಂಬಳ ಆಯೋಜಿಸಿದ್ದ ಸಂಘಟಕರ ವಿರುದ್ಧ ದೂರು ದಾಖಲಾಗಿದೆ. ಅನುಮತಿ ಪಡೆಯದೇ ಬ್ಯಾನರ್, ಫ್ಲೆಕ್ಸ್​ ಅವಳಡಿಸಿದ್ದಕ್ಕೆ ಸದಾಶಿವನಗರದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Bengaluru Kambala: ಬೆಂಗಳೂರು ಕಂಬಳ ಆಯೋಜಕರ ವಿರುದ್ಧ ದೂರು ದಾಖಲು, ಕಾರಣವೇನು?
TV9 Web
| Updated By: ರಮೇಶ್ ಬಿ. ಜವಳಗೇರಾ|

Updated on: Nov 28, 2023 | 12:44 PM

Share

ಬೆಂಗಳೂರು, (ನವೆಂಬರ್ 28): ಇದೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಆಯೋಜಿಸಲಾಗಿದ್ದ ಕಂಬಳ (Kambla) ಅದ್ಧೂರಿಯಾಗಿ ತೆರೆ ಕಂಡಿದೆ. ಲಕ್ಷಾಂತರ ಜನರು ಕೋಣಗಳ ಓಟವನ್ನು ನೋಡಿ ಫುಲ್ ಖುಷ್​ ಆಗಿದ್ದಾರೆ. ಮತ್ತೊಂದೆಡೆ ಕಂಬಳ ಆಯೋಜಕರ ವಿರುದ್ಧ ಪ್ರಕರಣ ದಾಖಲಾಗಿದೆ. ನಿಯಮ ಉಲ್ಲಂಘಿಸಿ ಸಾರ್ವಜನಿಕ ಸ್ಥಳದಲ್ಲಿ ಫ್ಲೆಕ್ಸ್​, ಬ್ಯಾನರ್​ ಅಳವಡಿಸಿದ್ದಕ್ಕೆ ಬಿಬಿಎಂಪಿ ವಾರ್ಡ್ ನ ಕಂದಾಯ ನಿರೀಕ್ಷಕ ನೀಡಿದ ದೂರಿನ ಮೇರೆಗೆ ಕಂಬಳ ಆಯೋಜಕರ ವಿರುದ್ಧ ಸದಾಶಿವನಗರ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಇದೇ ಮೊದಲ ಬಾರಿಗೆ ಸಿಲಿಕಾನ್​ ಸಿಟಿಯಲ್ಲಿ ಕಾರವಳಿ ಭಾಗದ ಪ್ರಮುಖ ಕ್ರೀಡೆಯಾದ ಕಂಬಳವನ್ನು ನಗರದ ಅರಮನೆ ಮೈದಾನದಲ್ಲಿ ಆಯೋಜಿಸಲಾಗಿತ್ತು. ಈ ಹಿನ್ನಲೆ ಕಂಬಳಕ್ಕೆ ಶುಭಾಶಯ ಕೋರಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಫ್ಲೆಕ್ಸ್, ಬ್ಯಾನರ್ ಹಾಕಿದ್ದರು. ಆದ್ರೆ, ಕಂಬಳ ಆಯೋಜಕರು ಯಾವುದೇ ಅನುಮತಿ ಪಡೆದಿರಲಿಲ್ಲ.

ಇದನ್ನೂ ಓದಿ: ಬೆಂಗಳೂರು ಕಂಬಳ ಆಯೋಜಕರಿಗೆ ಬಿಬಿಎಂಪಿ ಶಾಕ್; ಬ್ಯಾನರ್, ಫ್ಲೆಕ್ಸ್ ಹಾಕಿದ್ದಕ್ಕೆ ದಂಡ

ಈ ಹಿನ್ನೆಲೆಯಲ್ಲಿ ಬಿಬಿಎಂಪಿ ಅಧಿಕಾರಿಗಳು ದಾಳಿ ಮಾಡಿ ಫ್ಲೆಕ್ಸ್​, ಬ್ಯಾನರ್ ತೆರವುಗೊಳಿಸಿತ್ತು. ಅಲ್ಲದೇ ದಂಡ ಸಹ ವಿಧಿಸಿತ್ತು. ಇದೀಗ ಪ್ರಕರವನ್ನೂ ದಾಖಲಿಸಿದೆ. ಬೆಂಗಳೂರಿನಲ್ಲಿ ಅನಧಿಕೃತವಾಗಿ ಫ್ಲೆಕ್ಸ್, ಬ್ಯಾನರ್ ಸಂಬಂಧ ಬಿಬಿಎಂಪಿಗೆ ಹಲವು ಬಾರಿ ತರಾಟೆಗೆ ತೆಗೆದುಕೊಂಡಿತ್ತು. ಅಲ್ಲದೇ ಈ ಬಗ್ಗೆ ಖಡಕ್ ಎಚ್ಚರಿಕೆಯನ್ನು ಸಹ ನೀಡಿತ್ತು. ಇದರಿಂದ ಎಚ್ಚೆತ್ತುಕೊಂಡಿರುವ ಬಿಬಿಎಂಪಿ, ಅನಧಿಕೃತ ಫ್ಲೆಕ್ಸ್, ಬ್ಯಾನರ್​ಗಳ ಮೇಲೆ ಹದ್ದಿನ ಕಣ್ಣಿಟ್ಟಿದ್ದು, ಯಾರೆಲ್ಲಾ ಬ್ಯಾನರ್​ ಹಾಕಿದ್ದಾರೋ ಅವರಿಗೆ ದಂಡ ವಿಧಿಸುವ ಕಾರ್ಯ ಮಾಡುತ್ತಿದೆ.

ಇತ್ತೀಚೆಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ 50 ಸಾವಿರ ರೂಪಾಯಿ ದಂಡ ವಿಧಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ