ಬೆಂಗಳೂರು, (ನವೆಂಬರ್ 28): ಇದೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಆಯೋಜಿಸಲಾಗಿದ್ದ ಕಂಬಳ (Kambla) ಅದ್ಧೂರಿಯಾಗಿ ತೆರೆ ಕಂಡಿದೆ. ಲಕ್ಷಾಂತರ ಜನರು ಕೋಣಗಳ ಓಟವನ್ನು ನೋಡಿ ಫುಲ್ ಖುಷ್ ಆಗಿದ್ದಾರೆ. ಮತ್ತೊಂದೆಡೆ ಕಂಬಳ ಆಯೋಜಕರ ವಿರುದ್ಧ ಪ್ರಕರಣ ದಾಖಲಾಗಿದೆ. ನಿಯಮ ಉಲ್ಲಂಘಿಸಿ ಸಾರ್ವಜನಿಕ ಸ್ಥಳದಲ್ಲಿ ಫ್ಲೆಕ್ಸ್, ಬ್ಯಾನರ್ ಅಳವಡಿಸಿದ್ದಕ್ಕೆ ಬಿಬಿಎಂಪಿ ವಾರ್ಡ್ ನ ಕಂದಾಯ ನಿರೀಕ್ಷಕ ನೀಡಿದ ದೂರಿನ ಮೇರೆಗೆ ಕಂಬಳ ಆಯೋಜಕರ ವಿರುದ್ಧ ಸದಾಶಿವನಗರ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ಇದೇ ಮೊದಲ ಬಾರಿಗೆ ಸಿಲಿಕಾನ್ ಸಿಟಿಯಲ್ಲಿ ಕಾರವಳಿ ಭಾಗದ ಪ್ರಮುಖ ಕ್ರೀಡೆಯಾದ ಕಂಬಳವನ್ನು ನಗರದ ಅರಮನೆ ಮೈದಾನದಲ್ಲಿ ಆಯೋಜಿಸಲಾಗಿತ್ತು. ಈ ಹಿನ್ನಲೆ ಕಂಬಳಕ್ಕೆ ಶುಭಾಶಯ ಕೋರಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಫ್ಲೆಕ್ಸ್, ಬ್ಯಾನರ್ ಹಾಕಿದ್ದರು. ಆದ್ರೆ, ಕಂಬಳ ಆಯೋಜಕರು ಯಾವುದೇ ಅನುಮತಿ ಪಡೆದಿರಲಿಲ್ಲ.
ಇದನ್ನೂ ಓದಿ: ಬೆಂಗಳೂರು ಕಂಬಳ ಆಯೋಜಕರಿಗೆ ಬಿಬಿಎಂಪಿ ಶಾಕ್; ಬ್ಯಾನರ್, ಫ್ಲೆಕ್ಸ್ ಹಾಕಿದ್ದಕ್ಕೆ ದಂಡ
ಈ ಹಿನ್ನೆಲೆಯಲ್ಲಿ ಬಿಬಿಎಂಪಿ ಅಧಿಕಾರಿಗಳು ದಾಳಿ ಮಾಡಿ ಫ್ಲೆಕ್ಸ್, ಬ್ಯಾನರ್ ತೆರವುಗೊಳಿಸಿತ್ತು. ಅಲ್ಲದೇ ದಂಡ ಸಹ ವಿಧಿಸಿತ್ತು. ಇದೀಗ ಪ್ರಕರವನ್ನೂ ದಾಖಲಿಸಿದೆ. ಬೆಂಗಳೂರಿನಲ್ಲಿ ಅನಧಿಕೃತವಾಗಿ ಫ್ಲೆಕ್ಸ್, ಬ್ಯಾನರ್ ಸಂಬಂಧ ಬಿಬಿಎಂಪಿಗೆ ಹಲವು ಬಾರಿ ತರಾಟೆಗೆ ತೆಗೆದುಕೊಂಡಿತ್ತು. ಅಲ್ಲದೇ ಈ ಬಗ್ಗೆ ಖಡಕ್ ಎಚ್ಚರಿಕೆಯನ್ನು ಸಹ ನೀಡಿತ್ತು. ಇದರಿಂದ ಎಚ್ಚೆತ್ತುಕೊಂಡಿರುವ ಬಿಬಿಎಂಪಿ, ಅನಧಿಕೃತ ಫ್ಲೆಕ್ಸ್, ಬ್ಯಾನರ್ಗಳ ಮೇಲೆ ಹದ್ದಿನ ಕಣ್ಣಿಟ್ಟಿದ್ದು, ಯಾರೆಲ್ಲಾ ಬ್ಯಾನರ್ ಹಾಕಿದ್ದಾರೋ ಅವರಿಗೆ ದಂಡ ವಿಧಿಸುವ ಕಾರ್ಯ ಮಾಡುತ್ತಿದೆ.
ಇತ್ತೀಚೆಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ 50 ಸಾವಿರ ರೂಪಾಯಿ ದಂಡ ವಿಧಿಸಿದ್ದನ್ನು ಇಲ್ಲಿ ಸ್ಮರಿಸಬಹುದು.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ