ಗಾಡಿ ಬಿಟ್ಟು ಮನೆಗೆ ಹೋಗಿ ಫೈನ್ ಕಟ್ಟಿ; ವೃದ್ಧ ದಂಪತಿಗೆ ಜಯನಗರ ಸಂಚಾರಿ ಪೊಲೀಸರಿಂದ ಕಿರುಕುಳ, ದೂರು ದಾಖಲು

ಜೆ.ಪಿ.ನಗರದ ನಿವಾಸಿಗಳಾದ ಮಂಗಳ, ಮಲ್ಲೇಶ್ ದಂಪತಿ ಬೈಕ್ ಮೂಲಕ ಆಸ್ಪತ್ರೆಗೆ ತೆರಳ್ತಿದ್ದರು. ಈ ವೇಳೆ ಜಯನಗರ ಸಂಚಾರಿ ಪೊಲೀಸರು ವಾಹನವನ್ನು ತಡೆದಿದ್ದಾರೆ. ಬಳಿಕ ವಾಹನದ ಮೇಲಿದ್ದ 5 ಸಾವಿರ ದಂಡ ಪಾವತಿಸಲು ಒತ್ತಾಯಿಸಿದ್ದಾರೆ.

ಗಾಡಿ ಬಿಟ್ಟು ಮನೆಗೆ ಹೋಗಿ ಫೈನ್ ಕಟ್ಟಿ; ವೃದ್ಧ ದಂಪತಿಗೆ ಜಯನಗರ ಸಂಚಾರಿ ಪೊಲೀಸರಿಂದ ಕಿರುಕುಳ, ದೂರು ದಾಖಲು
ಜಯನಗರ ಸಂಚಾರಿ ಪೊಲೀಸ್ ಠಾಣೆ
Follow us
TV9 Web
| Updated By: ಆಯೇಷಾ ಬಾನು

Updated on: Feb 07, 2023 | 11:04 AM

ಬೆಂಗಳೂರು: ದಂಡ ವಸೂಲಿ ಭರದಲ್ಲಿ ಬೆಂಗಳೂರು ಸಂಚಾರಿ ಪೊಲೀಸರು ಮಾನವೀಯತೆಯನ್ನೇ ಮರೆತಿದ್ದಾರೆ. ಜಯನಗರ ಸಂಚಾರಿ ಪೊಲೀಸರು ವೃದ್ಧರಿಗೆ ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿದೆ. ಬೈಕ್​ನಲ್ಲಿ ಆಸ್ಪತ್ರೆಗೆ ಹೋಗುತ್ತಿದ್ದ ವೃದ್ಧ ದಂಪತಿಯನ್ನು ನಿಲ್ಲಿಸಿ 5 ಸಾವಿರ ಫೈನ್ ಕಟ್ಟುವಂತೆ ಕಿರುಕುಳ ನೀಡಿದ್ದಾರಂತೆ.

ಜೆ.ಪಿ.ನಗರದ ನಿವಾಸಿಗಳಾದ ಮಂಗಳ, ಮಲ್ಲೇಶ್ ದಂಪತಿ ಬೈಕ್ ಮೂಲಕ ಆಸ್ಪತ್ರೆಗೆ ತೆರಳ್ತಿದ್ದರು. ಈ ವೇಳೆ ಜಯನಗರ ಸಂಚಾರಿ ಪೊಲೀಸರು ವಾಹನವನ್ನು ತಡೆದಿದ್ದಾರೆ. ಬಳಿಕ ವಾಹನದ ಮೇಲಿದ್ದ 5 ಸಾವಿರ ದಂಡ ಪಾವತಿಸಲು ಒತ್ತಾಯಿಸಿದ್ದಾರೆ. ಆದ್ರೆ ಬಿಪಿ & ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದ 45 ವರ್ಷದ ಮಂಗಳ ಅವರಿಗೆ ಆಸ್ಪತ್ರೆಗೆ ಹೋಗುವುದು ತೀವ್ರ ಅನಿವಾರ್ಯವಾಗಿತ್ತು. ಹಾಗೂ ಅವರ ಬಳಿ ಕೇವಲ 2 ಸಾವಿರ ರೂಗಳು ಮಾತ್ರ ಇದ್ದವು. ಹೀಗಾಗಿ ದಂಪತಿ ಸದ್ಯಕ್ಕೆ 2 ಸಾವಿರ ರೂ. ಮಾತ್ರ ಕಟ್ಟುವುದಾಗಿ ಹೇಳಿದ್ರು. ಆಗ ಶಿವಸ್ವಾಮಿ ಎಂಬ ಅಧಿಕಾರಿ 5 ಸಾವಿರ ಕಟ್ಟಲೇಬೇಕೇಂದು ಸೂಚಿಸಿದ್ದಾರಂತೆ. ಅಷ್ಟೇ ಅಲ್ಲದೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ವೃದ್ಧ ದಂಪತಿ ಆರೋಪ ಮಾಡಿದ್ದಾರೆ.

ಇನ್ನು ಘಟನೆಯಿಂದ ವಿಚಲಿತರಾದ ದಂಪತಿ 2 ಕಿಲೋಮೀಟರ್ ಮನೆಗೆ ನಡೆದುಕೊಂಡು ಹೋಗಿ ಹಣ ತಂದಿದ್ದಾರೆ. ಇದರಿಂದಾಗಿ ಖಾಯಿಲೆಯಿಂದ ಬಳಲುತ್ತಿದ್ದ ವೃದ್ದೆ ಕುಸಿದು ಬಿದ್ದಿದ್ದು ಸದ್ಯ ವೃದ್ದ ದಂಪತಿಯ ಮಗ ಸಂಚಾರಿ ಪೊಲೀಸ್ ಅಧಿಕಾರಿಗಳ ಮೇಲೆ ಕ್ರಮ ಜರುಗಿಸುವಂತೆ ದೂರು ನೀಡಿದ್ದಾರೆ. ದೂರಿನ ಪ್ರತಿಯನ್ನ ಬೆಂಗಳೂರಿನ ಸಂಚಾರಿ ಪೊಲೀಸ್ ಟ್ವಿಟರ್ ಪೇಜ್​ಗೆ ಟ್ಯಾಗ್ ಮಾಡಿ ಪೋಸ್ಟ್ ಮಾಡಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಕ್ರಿಸ್​ಮಸ್ ಸಂಭ್ರಮ: ಬೆಂಗಳೂರಿನಲ್ಲಿ ಟ್ರಾಫಿಕ್ ​​ಜಾಮ್, ಸವಾರರು ಪರದಾಟ
ಕ್ರಿಸ್​ಮಸ್ ಸಂಭ್ರಮ: ಬೆಂಗಳೂರಿನಲ್ಲಿ ಟ್ರಾಫಿಕ್ ​​ಜಾಮ್, ಸವಾರರು ಪರದಾಟ
ಜೊಮ್ಯಾಟೊ ಡೆಲಿವರಿ ಬಾಯ್​ ಧರಿಸಿದ್ದ ಸಾಂತಾಕ್ಲಾಸ್​ ಡ್ರೆಸ್ ಬಿಚ್ಚಿಸಿದ ಹಿಂ
ಜೊಮ್ಯಾಟೊ ಡೆಲಿವರಿ ಬಾಯ್​ ಧರಿಸಿದ್ದ ಸಾಂತಾಕ್ಲಾಸ್​ ಡ್ರೆಸ್ ಬಿಚ್ಚಿಸಿದ ಹಿಂ
ಬಿಪಿಎಸ್‌ಸಿ ಪರೀಕ್ಷೆ ರದ್ದುಗೊಳಿಸಲು ಪ್ರತಿಭಟನೆ; ಪೊಲೀಸರ ಲಾಠಿ ಚಾರ್ಜ್
ಬಿಪಿಎಸ್‌ಸಿ ಪರೀಕ್ಷೆ ರದ್ದುಗೊಳಿಸಲು ಪ್ರತಿಭಟನೆ; ಪೊಲೀಸರ ಲಾಠಿ ಚಾರ್ಜ್
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುನಿರತ್ನ ಮೇಲೆ ಒತ್ತಡ: ವಿಜಯೇಂದ್ರ
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುನಿರತ್ನ ಮೇಲೆ ಒತ್ತಡ: ವಿಜಯೇಂದ್ರ
ಸಿಟಿ ರವಿ ಬಂಧನ ಕೇಸ್: ಸಿಪಿಐನ ಅಮಾನತು ಮಾಡಿದ್ಯಾಕೆ? ಕಾರಣ ಕೊಟ್ಟ ಸಿಎಂ
ಸಿಟಿ ರವಿ ಬಂಧನ ಕೇಸ್: ಸಿಪಿಐನ ಅಮಾನತು ಮಾಡಿದ್ಯಾಕೆ? ಕಾರಣ ಕೊಟ್ಟ ಸಿಎಂ
ಡಿ 31ರಿಂದ ಬಸ್​ಗಳು ಸಂಚರಿಸುವುದಿಲ್ಲ: ಪ್ರಯಾಣಿಕರಿಗೆ ಕರಪತ್ರ ಹಂಚಿಕೆ
ಡಿ 31ರಿಂದ ಬಸ್​ಗಳು ಸಂಚರಿಸುವುದಿಲ್ಲ: ಪ್ರಯಾಣಿಕರಿಗೆ ಕರಪತ್ರ ಹಂಚಿಕೆ
‘ಮ್ಯಾಕ್ಸ್’ ಸಿನಿಮಾ ನೋಡಿದ್ರೆ ನಾಲ್ಕು ಕ್ವಾಟ್ರು ಹೊಡೆದ ಕಿಕ್ಕು’
‘ಮ್ಯಾಕ್ಸ್’ ಸಿನಿಮಾ ನೋಡಿದ್ರೆ ನಾಲ್ಕು ಕ್ವಾಟ್ರು ಹೊಡೆದ ಕಿಕ್ಕು’
ಮುನಿರತ್ನ ಘಟನೆ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಾ ಮಂಜುನಾಥ್
ಮುನಿರತ್ನ ಘಟನೆ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಾ ಮಂಜುನಾಥ್
ಇಡೀ ಬಿಗ್ ಬಾಸ್ ಮನೆಯಲ್ಲಿ ರಂಪಾಟ ಶುರು ಮಾಡಿದ ರಜತ್
ಇಡೀ ಬಿಗ್ ಬಾಸ್ ಮನೆಯಲ್ಲಿ ರಂಪಾಟ ಶುರು ಮಾಡಿದ ರಜತ್
ಕುಡಿದ ಅಮಲಿನಲ್ಲಿ ಬೈಕ್​ಗೆ ಟ್ರಕ್ ಡಿಕ್ಕಿ;3 ವರ್ಷದ ಮಗು ಸೇರಿ ಇಬ್ಬರು ಸಾವು
ಕುಡಿದ ಅಮಲಿನಲ್ಲಿ ಬೈಕ್​ಗೆ ಟ್ರಕ್ ಡಿಕ್ಕಿ;3 ವರ್ಷದ ಮಗು ಸೇರಿ ಇಬ್ಬರು ಸಾವು