ಭಗವಾಧ್ವಜ ಹೇಳಿಕೆ ಪ್ರಕರಣ: ಕೆಎಸ್ ಈಶ್ವರಪ್ಪ ವಿರುದ್ಧ ಹೈಗ್ರೌಂಡ್ಸ್ ಠಾಣೆಗೆ ಮೊಹಮ್ಮದ್ ನಲಪಾಡ್ ದೂರು

| Updated By: ganapathi bhat

Updated on: Feb 16, 2022 | 9:48 PM

ಈ ಸಂದರ್ಭದಲ್ಲಿ ಪ್ರಚೋದನಕಾರಿ ಹೇಳಿಕೆ ನೀಡಬಾರದು. ಈಶ್ವರಪ್ಪ ಕೂಡಲೇ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ರಾಜೀನಾಮೆ ನೀಡುವವರೆಗೂ ಹೋರಾಟ ಮುಂದುವರಿಸ್ತೇವೆ ಎಂದು ದೂರು ಬಳಿಕ ಮೊಹಮ್ಮದ್ ನಲಪಾಡ್ ಹೇಳಿಕೆ ನೀಡಿದ್ದಾರೆ.

ಭಗವಾಧ್ವಜ ಹೇಳಿಕೆ ಪ್ರಕರಣ: ಕೆಎಸ್ ಈಶ್ವರಪ್ಪ ವಿರುದ್ಧ ಹೈಗ್ರೌಂಡ್ಸ್ ಠಾಣೆಗೆ ಮೊಹಮ್ಮದ್ ನಲಪಾಡ್ ದೂರು
ಸಚಿವ ಕೆ ಎಸ್​ ಈಶ್ವರಪ್ಪ
Follow us on

ಬೆಂಗಳೂರು: ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ಹೈಗ್ರೌಂಡ್ಸ್ ಠಾಣೆಗೆ ದೂರು ದಾಖಲು ಮಾಡಲಾಗಿದೆ. ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ್ದಾರೆ, ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ದೂರು ನೀಡಲಾಗಿದೆ. ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ಠಾಣೆಗೆ ದೂರು ನೀಡಲಾಗಿದೆ. ರಾಷ್ಟ್ರಧ್ವಜಕ್ಕೆ ಸಚಿವ ಈಶ್ವರಪ್ಪ ಅಪಮಾನ ಮಾಡಿದ್ದಾರೆ. ಈ ಸಂದರ್ಭದಲ್ಲಿ ಪ್ರಚೋದನಕಾರಿ ಹೇಳಿಕೆ ನೀಡಬಾರದು. ಈಶ್ವರಪ್ಪ ಕೂಡಲೇ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ರಾಜೀನಾಮೆ ನೀಡುವವರೆಗೂ ಹೋರಾಟ ಮುಂದುವರಿಸ್ತೇವೆ ಎಂದು ದೂರು ಬಳಿಕ ಮೊಹಮ್ಮದ್ ನಲಪಾಡ್ ಹೇಳಿಕೆ ನೀಡಿದ್ದಾರೆ.

ಸಂವಿಧಾನಕ್ಕೆ ಗೌರವ ನೀಡದೇ ಶಾಂತಿ ಭಂಗಕ್ಕೆ ಪ್ರಯತ್ನ ಮಾಡಲಾಗಿದೆ. ಅಶಾಂತಿ ಸೃಷ್ಟಿಸುತ್ತಿರುವವರ ವಿರುದ್ಧ ಕಾಂಗ್ರೆಸ್​ ಹೋರಾಟ ಮಾಡುತ್ತದೆ. ಕೆ.ಎಸ್. ಈಶ್ವರಪ್ಪ ರಾಜೀನಾಮೆ, ಅವರ ವಿರುದ್ಧ ಕ್ರಮಕ್ಕೆ ಒತ್ತಾಯ ಮಾಡುತ್ತೇವೆ ಎಂದು ಸಚಿವ ಈಶ್ವರಪ್ಪ ವಿರುದ್ಧ ಸಂಸದ ಡಿ.ಕೆ. ಸುರೇಶ್ ವಾಗ್ದಾಳಿ ನಡೆಸಿದ್ದಾರೆ. ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಹೊಡೆನೂರು ಗ್ರಾಮದಲ್ಲಿ ಸಂಸದ ಸುರೇಶ್ ಹೇಳಿಕೆ ನೀಡಿದ್ದಾರೆ.

ಮುಂದೊಂದು ದಿನ ಭಗವಾಧ್ವಜ (ಕೇಸರಿ ಧ್ವಜ) ಭಾರತದ ಧ್ವಜ ಆಗಬಹುದು ಎಂದು ಈಶ್ವರಪ್ಪ ಕೆಲ ದಿನಗಳ ಹಿಂದೆ ಹೇಳಿದ್ದರು. ಶಿವಮೊಗ್ಗದ ಕಾಲೇಜೊಂದರಲ್ಲಿ ಹಿಜಾಬ್- ಕೇಸರಿ ಶಾಲು ವಿವಾದದ ನಡುವೆ ನಡೆದ ಘಟನೆಯನ್ನು ಉಲ್ಲೇಖಿಸಿ ಅವರು ಮಾತನಾಡಿದ್ದರು. ಈ ಬಗ್ಗೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿತ್ತು. ಸದನದಲ್ಲಿ ಕೂಡ ಕೇಸರಿ ಧ್ವಜ ಹೇಳಿಕೆ ಪ್ರಕರಣ ಭಾರೀ ಗದ್ದಲ ಉಂಟುಮಾಡಿತ್ತು.

ಇಂದು (ಫೆಬ್ರವರಿ 16) ಕಾಂಗ್ರೆಸ್ ಸದನದ ಒಳಗೆ ಭಾರತದ ತ್ರಿವರ್ಣ ಧ್ವಜ ಹಿಡಿದು ಈಶ್ವರಪ್ಪ ವಿರುದ್ಧ ಪ್ರತಿಭಟನೆ ಮಾಡಿತ್ತು. ಈಶ್ವರಪ್ಪ ಅವರಿಂದ ರಾಜೀನಾಮೆ ಪಡೆಯುವಂತೆ ಕಾಂಗ್ರೆಸ್ ಒತ್ತಾಯಿಸಿತ್ತು. ಆದರೆ, ಕೆ.ಎಸ್. ಈಶ್ವರಪ್ಪ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದರು. ಹಿಂದೂ, ಮುಸ್ಲಿಂ ವಿದ್ಯಾರ್ಥಿಗಳನ್ನ ಬೇರ್ಪಡಿಸುವ ದುಷ್ಕೃತ್ಯ ಮಾಡಲಾಗುತ್ತಿದೆ. ಸಮಾಜದಲ್ಲಿ ಇಂತಹ ಕುಕೃತ್ಯವನ್ನು ಕಾಂಗ್ರೆಸ್​ ಮಾಡುತ್ತಿದೆ. ಭಗವಾಧ್ವಜದ ಬಗ್ಗೆ ಚರ್ಚೆ ನಡೆಯುತ್ತಿದೆ. 100 ವರ್ಷ ಅಥವಾ 200 ವರ್ಷಕ್ಕೆ ಹಾರಬಹುದು ಎಂದಿದ್ದೆ. ನನ್ನ ಹೇಳಿಕೆಯನ್ನ ಕಾಂಗ್ರೆಸ್​ ದುರುಪಯೋಗಪಡಿಸಿಕೊಂಡಿದೆ. ಧರ್ಮ ಧರ್ಮಗಳ ಮಧ್ಯೆ ಕಾಂಗ್ರೆಸ್​ ಬೆಂಕಿ ಹಚ್ಚುತ್ತಿದೆ. ನಾನು ಸಿಎಂ, ಗೃಹ ಸಚಿವರ ಜೊತೆಗೆ ಮಾತನಾಡುತ್ತೇನೆ. ರಾಷ್ಟ್ರದ್ರೋಹಿ ಕಾನೂನಿನಡಿ ಬಂಧಿಸುವಂತೆ ಒತ್ತಾಯಿಸುತ್ತೇನೆ. ಸಿಎಂ ಹಾಗೂ ಗೃಹಸಚಿವರಿಗೆ ಮನವಿ ಮಾಡುತ್ತೇನೆ ಎಂದು ಈಶ್ವರಪ್ಪ ಹೇಳಿದ್ದರು.

ಇದನ್ನೂ ಓದಿ: 100 ಅಥವಾ 200 ವರ್ಷಕ್ಕೆ ಭಗವಾಧ್ವಜ ರಾಷ್ಟ್ರಧ್ವಜ ಆಗಬಹುದು ಎಂದಿದ್ದೆ; ಹೇಳಿಕೆ ಸಮರ್ಥಿಸಿಕೊಂಡ ಕೆಎಸ್ ಈಶ್ವರಪ್ಪ

ಇದನ್ನೂ ಓದಿ: ಈಶ್ವರಪ್ಪ ವಿರುದ್ಧ ದೇಶದ್ರೋಹ ಕೇಸ್ ದಾಖಲಿಸಬೇಕು; ಸಂಪುಟದಿಂದ ಕೈಬಿಡಬೇಕು: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಆಗ್ರಹ

Published On - 8:52 pm, Wed, 16 February 22