ಪೊಲೀಸ್ ಇಲಾಖೆಗೆ ನಕಲಿ ದಾಖಲೆಗಳು ನೀಡಿದ್ದ ಕೇಸ್​: ಪಿಎಸ್​​ಐ ಅಮಾನತು

| Updated By: ಗಂಗಾಧರ​ ಬ. ಸಾಬೋಜಿ

Updated on: Jan 06, 2025 | 3:59 PM

ಬೆಂಗಳೂರಿನ ಬ್ಯಾಡರಹಳ್ಳಿ ಠಾಣೆಯ ಸಬ್ ಇನ್ಸ್ಪೆಕ್ಟರ್ ಕಾಶಿಲಿಂಗೇಗೌಡ ಅವರು ಪೊಲೀಸ್ ಇಲಾಖೆಗೆ ನಕಲಿ ದಾಖಲೆಗಳನ್ನು ಸಲ್ಲಿಸಿದ ಆರೋಪದ ಮೇಲೆ ಅಮಾನತುಗೊಂಡಿದ್ದಾರೆ. ಪಶ್ಚಿಮ ವಿಭಾಗದ ಡಿಸಿಪಿ ಗಿರೀಶ್ ಅವರು ಈ ಆದೇಶ ಹೊರಡಿಸಿದ್ದಾರೆ. ವಿಧಾನಸೌಧ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಅವರು ಜಾಮೀನು ಪಡೆದಿದ್ದರು.

ಪೊಲೀಸ್ ಇಲಾಖೆಗೆ ನಕಲಿ ದಾಖಲೆಗಳು ನೀಡಿದ್ದ ಕೇಸ್​: ಪಿಎಸ್​​ಐ ಅಮಾನತು
ಪೊಲೀಸ್ ಇಲಾಖೆಗೆ ನಕಲಿ ದಾಖಲೆಗಳು ನೀಡಿದ್ದ ಕೇಸ್​: ಪಿಎಸ್​​ಐ ಅಮಾನತು
Follow us on

ಬೆಂಗಳೂರು, ಜನವರಿ 06: ಪೊಲೀಸ್ ಇಲಾಖೆಗೆ ನಕಲಿ ದಾಖಲೆಗಳು ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬ್ಯಾಡರಹಳ್ಳಿ ಠಾಣೆ ಸಬ್​ಇನ್ಸ್​​ಪೆಕ್ಟರ್​ (PSI) ಕಾಶಿಲಿಂಗೇಗೌಡರನ್ನು ಅಮಾನತು ಮಾಡಿ, ಬೆಂಗಳೂರು ಪಶ್ಚಿಮ ವಿಭಾಗದ ಡಿಸಿಪಿ ಗಿರೀಶ್​ ಆದೇಶ ಹೊರಡಿಸಿದ್ದಾರೆ. ನಕಲಿ ದಾಖಲೆ ನೀಡಿದ ಸಂಬಂಧ ವಿಧಾನಸೌಧ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿತ್ತು. ಇದೇ ಪ್ರಕರಣದಲ್ಲಿ ಸಬ್​ಇನ್ಸ್​​ಪೆಕ್ಟರ್​ ಕಾಶಿಲಿಂಗೇಗೌಡ ಜಾಮೀನು‌ ಪಡೆದುಕೊಂಡಿದ್ದರು. ನಂತರ ಪೊಲೀಸ್ ಠಾಣೆಗೆ ಕರ್ತವ್ಯಕ್ಕೆ ಹಾಜರಾಗಿದ್ದರು. ಆದರೆ ಇದೀಗ ಪಿಎಸ್​ಐ ಅಮಾನತು ಮಾಡಲಾಗಿದೆ.

ನಕಲಿ ಜನ್ಮ ದಿನಾಂಕ ಹೊಂದಿರುವ ದಾಖಲೆಯನ್ನು ನೀಡಿ ಕೆಲಸ ಪಡೆದುಕೊಂಡ ಆರೋಪದಡಿ ಸಬ್​ಇನ್ಸ್​​ಪೆಕ್ಟರ್​ ಕಾಶಿಲಿಂಗೇಗೌಡ ವಿರುದ್ಧ ಬೆಂಗಳೂರು ಪೊಲೀಸ್ ಇಲಾಖೆಯ ಆಡಳಿತ ವಿಭಾಗದ ಅಧಿಕಾರಿ ಎಸ್. ಟಿ. ಚಂದ್ರಶೇಖರ್ ನೀಡಿರುವ ದೂರಿನ ಮೇರೆಗೆ ವಿಧಾನಸೌಧ ಠಾಣೆಯಲ್ಲಿ‌ ಎಫ್​ಐಆರ್​ ದಾಖಲಿಸಲಾಗಿತ್ತು.

ಇದನ್ನೂ ಓದಿ: ರಾಜು ಕಪನೂರು ಗ್ಯಾಂಗ್ ಎಲ್ಲಿ ಬಚ್ಚಿಟ್ಟಿದ್ದೀರಿ ಸುಪಾರಿ ಕಿಲ್ಲರ್ ಪ್ರಿಯಾಂಕ್ ಖರ್ಗೆ: ಬಿಜೆಪಿ ಪ್ರಶ್ನೆ

ಪಿಎಸ್ಐ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿ ವಯಸ್ಸು 30 ವರ್ಷ ಮೀರಿರಬಾರದೆಂದು ಸರ್ಕಾರದ ನಿಯಮ ಇದೆ. ಹೀಗಿರುವಾಗ ಅರ್ಹ‌‌ ಅಭ್ಯರ್ಥಿ ಅಲ್ಲದಿದ್ದರು ಕೂಡ ಕಾಶಿಲಿಂಗೇಗೌಡ ತಮ್ಮ ಜನ್ಮ ದಿನಾಂಕವನ್ನು 1988 ಏಪ್ರಿಲ್ 15 ಎಂದು ನೀಡುವ ಮೂಲಕ 2017-18ರ ಸಾಲಿನ ಸಬ್​ಇನ್ಸ್‌ಪೆಕ್ಟರ್ ಹುದ್ದೆಗೆ ಅರ್ಜಿ ಸಲ್ಲಿಸಿದ್ದಾರೆ. ಜೊತೆಗೆ ನೇಮಕವಾಗಿದ್ದಾರೆ ಎಂದು ದೂರು ನೀಡಲಾಗಿತ್ತು.

ಅಕ್ರಮ ಮರಳುಗಾರಿಕೆಗೆ ಸಹಕಾರ ಆರೋಪ: ಕಾಪು ಠಾಣಾಧಿಕಾರಿ ಅಮಾನತು

ಅಕ್ರಮ ಮರಳುಗಾರಿಕೆಗೆ ಸಹಕಾರ ಮಾಡಿರುವ ಆರೋಪದಲ್ಲಿ ಕಾಪು ಠಾಣಾಧಿಕಾರಿ ಅಬ್ದುಲ್ ಖಾದ‌ರ್ ಅಮಾನತುಗೊಂಡಿದ್ದಾರೆ. ಕಾಪು ಠಾಣಾ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ಮರಳುಗಾರಿಕೆ ಬಗ್ಗೆ ಕಾಪು ಠಾಣೆಯಲ್ಲಿ ದೂರು ದಾಖಲಾಗಿತ್ತು. ನಂತರ ಈ ಪ್ರಕರಣಕ್ಕೆ ಸಂಬಂಧಿಸಿ ಜಿಲ್ಲಾ ಎಸ್ಪಿ ಡಾ.ಅರುಣ್ ಕುಮಾರ್ ಸಿಬ್ಬಂದಿಯನ್ನು ಅಮಾನತುಗೊಳಿಸಿದ್ದರು.

ಇದನ್ನೂ ಓದಿ: ಸಾರಿಗೆ ನೌಕರರ ಕನಸು ನನಸು: ನಗದು ರಹಿತ ವೈದ್ಯಕೀಯ ಚಿಕಿತ್ಸೆ ಆರಂಭ

ಆದರೆ ಅಕ್ರಮ ಮರಳುಗಾರಿಕೆ ನಡೆಸಲು ಕಾಪು ಠಾಣಾಧಿಕಾರಿಯವರು ಸಹಕರಿಸಿದ್ದಾರೆ ಎಂಬುದನ್ನು ತಿಳಿಸುವ ಆಡಿಯೋವೊಂದು ಎಸ್ಪಿ ಡಾ.ಅರುಣ್ ಅವರಿಗೆ ಲಭಿಸಿದ್ದು, ಈ ಆಡಿಯೋವನ್ನು ಕಾರ್ಕಳ ಡಿವೈಎಸ್ಪಿ ಅರವಿಂದ್ ಕಲ್ಲುಗುಜ್ಜಿಯವರ ಮೂಲಕ ವಿಚಾರಣೆ ನಡೆಸಿದ್ದಾರೆ. ಡಿವೈಎಸ್ಪಿಯವರ ವರದಿಯಲ್ಲಿ ಕಾಪು ಠಾಣಾಧಿಕಾರಿ ವಿರುದ್ಧದ ಆರೋಪವು ಮೇಲ್ನೋಟಕ್ಕೆ ಸಾಬೀತಾದ ಹಿನ್ನಲೆಯಲ್ಲಿ ಅಮಾನತುಗೊಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:57 pm, Mon, 6 January 25