ಬೆಂಗಳೂರು: ಗೃಹಿಣಿ ಆತ್ಮಹತ್ಯೆ ಕೇಸ್, ವಾರದ ಬಳಿಕ ಹೊರಬಿತ್ತು ಸಾವಿನ ಹಿಂದಿನ ಅಸಲಿ ಕಹಾನಿ

ಮನೆಯಲ್ಲಿ ಯಾರೂ ಇಲ್ಲದ ವೇಳೆ ಫ್ಯಾನ್​ಗೆ ನೇಣು ಬಿಗಿದುಕೊಂಡು ಗೃಹಿಣಿಯೊಬ್ಬರು ಸುಸೈಡ್ ಮಾಡಿದ್ದ ಪ್ರಕರಣ ಬೆಂಗಳೂರು ನಗರದಲ್ಲಿ ನಡೆದಿತ್ತು. ಈ ಸಂಬಂಧ ಗೋವಿಂದರಾಜನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸದ್ಯ, ಮೃತೆಯ ಪತಿ ಸೇರಿದಂತೆ ಐವರನ್ನು ಪೊಲೀಸರು ಬಂಧಿಸಿದ್ದು, ವಾರದ ಬಳಿಕ ಪ್ರಕರಣದ ಹಿಂದಿನ ಅಸಲಿಯತ್ತು ಹೊರಬಿದ್ದಿದೆ.

ಬೆಂಗಳೂರು: ಗೃಹಿಣಿ ಆತ್ಮಹತ್ಯೆ ಕೇಸ್, ವಾರದ ಬಳಿಕ ಹೊರಬಿತ್ತು ಸಾವಿನ ಹಿಂದಿನ ಅಸಲಿ ಕಹಾನಿ
ಮೃತೆ ಐಶ್ವರ್ಯ ಮತ್ತು ಆಕೆಯ ಪತಿ ರಾಜೇಶ್
Follow us
Shivaprasad
| Updated By: Rakesh Nayak Manchi

Updated on:Nov 03, 2023 | 7:26 AM

ಬೆಂಗಳೂರು, ನ.3: ಮನೆಯಲ್ಲಿ ಅ.26 ರಂದು ಯಾರೂ ಇಲ್ಲದ ವೇಳೆ ಫ್ಯಾನ್​ಗೆ ನೇಣು ಬಿಗಿದುಕೊಂಡು ಗೃಹಿಣಿ ಐಶ್ವರ್ಯ ಆತ್ಮಹತ್ಯೆ ಮಾಡಿದ್ದ ಪ್ರಕರಣ ಬೆಂಗಳೂರು (Bengaluru) ನಗರದಲ್ಲಿ ನಡೆದಿತ್ತು. ಈ ಸಂಬಂಧ ಗೋವಿಂದರಾಜನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸದ್ಯ, ಮೃತೆಯ ಪತಿ ಸೇರಿದಂತೆ ಐವರನ್ನು ಪೊಲೀಸರು ಬಂಧಿಸಿದ್ದು, ವಾರದ ಬಳಿಕ ಪ್ರಕರಣದ ಹಿಂದಿನ ಅಸಲಿಯತ್ತು ಹೊರಬಿದ್ದಿದೆ.

ಐಶ್ವರ್ಯ ಪತಿ ರಾಜೇಶ್, ಮಾವ ಗಿರಿಯಪ್ಪ, ಅತ್ತೆ ಸೀತಾ, ಮೈದುನ ವಿಜಯ್, ಮೈದುನನ ಪತ್ನಿ ತಸ್ಮಿನ್ ಬಂಧಿತ ಆರೋಪಿಗಳು. ಐಶ್ವರ್ಯ ಆತ್ಮಹತ್ಯೆ ಬಳಿಕ ಮನೆ ಮಂದಿ ಗೋವಾ ಹಾಗೂ ಮುಂಬೈನಲ್ಲಿ ಪಾರ್ಟಿ ಮಾಡುತ್ತಿದ್ದರು.

ಮದುವೆ ಮಾಡಿಸಿದ್ದು ಸಂಬಂಧಿಕರೇ, ಮದುವೆ ಮುರಿದಿದ್ದೂ ಸಂಬಂಧಿಕರೇ

ಕಳೆದ 5 ವರ್ಷಗಳ ಹಿಂದೆ ರಾಜೇಶ್ ಎಂಬಾತನನ್ನ ಐಶ್ವರ್ಯ ಮದುವೆಯಾಗಿದ್ದಳು. ಕುಟುಂಬಸ್ಥರ ನಿಶ್ಚಯದಂತೆ ಇವರಿಬ್ಬರ ಮದುವೆಯಾಗಿತ್ತು. ಐಶ್ವರ್ಯ ಯುಎಸ್​ಎ ನಲ್ಲಿ ಎಂಬಿಎ ಮಾಡಿದ್ದ ಪ್ರತಿಭಾವಂತೆಯಾಗಿದ್ದಳು. ಪತಿ ರಾಜೇಶ್, ಡೈರಿ ರಿಚ್ ಐಸ್ ಕ್ರೀಮ್ ಕಂಪನಿ ಮಾಲೀಕರು.

ಇದೇ ಕಂಪನಿಯಲ್ಲಿ ಐಶ್ವರ್ಯ ತಂದೆ ಸುಬ್ರಮಣಿಯ ತಂಗಿ ಗಂಡ ರವೀಂದ್ರ ಆಡಿಟರ್ ಆಗಿ ಕೆಲಸ ಮಾಡಿಕೊಂಡಿದ್ದ. ಈತನೇ ಮುಂದೆ ನಿಂತು ರಾಜೇಶ್ ಹಾಗೂ ಐಶ್ವರ್ಯ ಮದುವೆ ಮಾಡಿಸಿದ್ದ. ಆದರೆ ಆಸ್ತಿ ವಿಚಾರವಾಗಿ ರವೀಂದ್ರ ಮತ್ತು ಸುಬ್ರಮಣಿ ಕುಟುಂಬದಲ್ಲಿ ಕಲಹ ಇದ್ದಿದ್ದರಿಂದ ತಂದೆ ಮೇಲಿನ ದ್ವೇಷಕ್ಕೆ ಮಗಳ ಸಂಸಾರದಲ್ಲಿ ದಾಯಾದಿಗಳು ಹುಳಿ ಹಿಂಡಿದ್ದಾರೆ.

ಇದನ್ನೂ ಓದಿ: ಬಂಟ್ವಾಳ: ವರದಕ್ಷಿಣೆ ಕಿರುಕುಳ ತಾಳಲಾರದೆ ಆತ್ಮಹತ್ಯೆಗೆ ಶರಣಾದ ಯುವ ವಧು

ರವೀಂದ್ರ ಕುಟುಂಬ ಐಶ್ಯರ್ಯ ಚಾರಿತ್ರ್ಯ ವಧೆ ಮಾಡಿ ಪತಿ ರಾಜೇಶ್ ಕುಟುಂಬಕ್ಕೆ ಇಲ್ಲಸಲ್ಲದ ಕಟ್ಟುಕಥೆ ಹೇಳುತ್ತಿತ್ತು. ಅಷ್ಟೇ ಅಲ್ಲದೇ ಐಶ್ವರ್ಯಳ ಪೋಟೋಗಳನ್ನ ಕಳುಹಿಸಿ ನಿಮ್ಮ ಸೊಸೆ ಸರಿಯಿಲ್ಲ ಎಂದು ಕೆಟ್ಟದಾಗಿ ಬಿಂಬಿಸಿದ್ದರಂತೆ. ಇದರಿಂದಾಗಿ ರಾಜೇಶ್ ಕುಟುಂಬದ ಸದಸ್ಯರು ಪ್ರತಿನಿತ್ಯ ಐಶ್ವರ್ಯಳಿಗೆ ಕಿರುಕುಳ ನೀಡುತ್ತಿದ್ದರಂತೆ.

ಐಶ್ವರ್ಯ ಮಾವ ಗಿರಿಯಪ್ಪ, ಅತ್ತೆ ಸೀತ ಹಾಗೂ ಮೈದುನ ವಿಜಯ್ ಹಾಗೂ ಆತನ ಪತ್ನಿ ತಸ್ಮಿನ್​ ಕಿರುಕುಳ ನೀಡುತ್ತಿದ್ದರಂತೆ. ವರದಕ್ಷಿಣೆ ತರುವಂತೆಯೂ ಕಿರುಕುಳ ನೀಡಿದ ಆರೋಪ ಕೇಳಿಬಂದಿದೆ. ಎಷ್ಟೇ ಕಿರುಕುಳ ನೀಡುತ್ತಿದ್ದರೂ ಗಂಡನಿಗಾಗಿ ಐಶ್ವರ್ಯ ಸುಮ್ಮನಿದ್ದಳು.

ತಾನು ದುಡಿದ ಹಣದಲ್ಲಿ ಗಂಡನಿಗೆ ಐಶಾರಾಮಿ ಸೂಪರ್ ಬೈಕ್ ಹಾಗೂ ಚಿನ್ನದ ಒಡವೆ ಸಹ ಕೊಡಿಸಿದ್ದಳಂತೆ. ಆದರೆ ಕುಟುಂಬಸ್ಥರ ಮಾತನ್ನ ಕೇಳಿ ಪತಿ ರಾಜೇಶ್ ಕೂಡ ಐಶ್ವರ್ಯಳನ್ನು ನಿಂದಿಸುತ್ತಿದ್ದನಂತೆ. ಇದರಿಂದ ಮನನೊಂದ ಐಶ್ವರ್ಯ, 20 ದಿನಗಳ ಹಿಂದೆ ತವರು ಸೇರಿದ್ದಳು.

ಅಲ್ಲದೆ, ಅ. 26 ರಂದು ಮನನೊಂದು ಮರಣಪತ್ರ ಬರೆದಿಟ್ಟು ಆತ್ಮಹತ್ಯತೆಗೆ ಶರಣಾಗಿದ್ದಳು. ಘಟನೆ ಸಂಬಂಧ ಐಶ್ವರ್ಯಾಳ ತಾಯಿ, ರಾಜೇಶ್ ಮತ್ತು ಅವರ ಕುಟುಂಬಸ್ಥರ ವಿರುದ್ಧ ಗೋವಿಂದರಾಜನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಜೊತೆಗೆ, ಸಂಸಾರ ಒಡೆಯಲು ಹುಳಿ ಹಿಂಡಿದ ರವೀಂದ್ರ, ಗೀತಾ, ಶಾಲಿನ, ಓಂಪ್ರಕಾಶ್ ಎಂಬುವವರ ಮೇಲೂ ದೂರು ದಾಖಲಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:19 am, Fri, 3 November 23