ಬೆಂಗಳೂರು: ತಾಯಿ, ಮಗು ಸಜೀವ ದಹನ ಪ್ರಕರಣ, ಬೆಸ್ಕಾಂನ ಐವರು ಸಿಬ್ಬಂದಿ ಅರೆಸ್ಟ್

ಬೆಂಗಳೂರು ನಗರದ ವೈಟ್​ಫೀಲ್ಡ್​​​ನ ಕಾಡುಗೋಡಿಯಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್​ ತಂತಿ ತುಳಿದು ಬಾಣಂತಿ ಹಾಗೂ 9 ತಿಂಗಳ ಹಸುಗೂಸು ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದರು. ಘಟನೆ ಸಂಬಂಧ ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಸಂಬಂಧ ಪೊಲೀಸರು ಬೆಸ್ಕಾಂನ ಐವರು ಸಿಬ್ಬಂದಿಯನ್ನು ಬಂಧಿಸಿದ್ದಾರೆ.

ಬೆಂಗಳೂರು: ತಾಯಿ, ಮಗು ಸಜೀವ ದಹನ ಪ್ರಕರಣ, ಬೆಸ್ಕಾಂನ ಐವರು ಸಿಬ್ಬಂದಿ ಅರೆಸ್ಟ್
ತಾಯಿ, ಮಗು ಸಜೀವ ದಹನ ಪ್ರಕರಣ ಸಂಬಂಧ ಬೆಸ್ಕಾಂನ ಐವರು ಸಿಬ್ಬಂದಿಯನ್ನು ಕಾಡುಗೋಡಿ ಪೊಲೀಸರು ಬಂಧಿಸಿದ್ದಾರೆ (ಸಾಂದರ್ಭಿಕ ಚಿತ್ರ)
Follow us
TV9 Web
| Updated By: Rakesh Nayak Manchi

Updated on: Nov 19, 2023 | 7:39 PM

ಬೆಂಗಳೂರು, ನ.19: ನಗರದ (Bengaluru) ವೈಟ್​ಫೀಲ್ಡ್​​​ನ ಕಾಡುಗೋಡಿಯಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್​ ತಂತಿ ತುಳಿದು ಬಾಣಂತಿ ಹಾಗೂ 9 ತಿಂಗಳ ಹಸುಗೂಸು ಇಬ್ಬರೂ ಸ್ಥಳದಲ್ಲೇ ಮೃತಪಟ್ಟ ಪ್ರಕರಣ ಸಂಬಂಧ ಪೊಲೀಸರು ಬೆಸ್ಕಾಂನ (BESCOM) ಇಇ ಶ್ರೀರಾಮ್ ಸೇರಿದಂತೆ ಐವರು ಸಿಬ್ಬಂದಿಯನ್ನು ಬಂಧಿಸಿದ್ದಾರೆ.

ಕಾರ್ಯನಿರ್ವಾಹಕ ಅಭಿಯಂತರ ಶ್ರೀರಾಮ್, ಸಹಾಯಕ ಕಾರ್ಯನಿರ್ವಕ ಅಭಿಯಂತರ ಸುಬ್ರಹ್ಮಣ್ಯ, ವೈಟ್ ಫೀಲ್ಡ್ ವಿಭಾಗದ ಸಹಾಯಕ ಅಭಿಯಂತರ ಚೇತನ್, ವೈಟ್ ಫೀಲ್ಡ್ ವಿಭಾಗದ ಕಿರಿಯ ಅಭಿಯಂತರ ರಾಜಣ್ಣ, ಸ್ಟೇಷನ್ ಆಪರೇಟರ್ ಮಂಜುನಾಥ್ ಬಂಧಿತರಾಗಿದ್ದು, ಪೊಲೀಸರಿಂದ ತನಿಖೆ ಮುಂದುವರಿದಿದೆ.

ಏನಿದು ಪ್ರಕರಣ?

ಬೆಂಗಳೂರಿನ ವೈಟ್​ಫೀಲ್ಡ್​​​ನ ಕಾಡುಗೋಡಿಯಲ್ಲಿ ಇಂದು ಬೆಳ್ಳಂ ಬೆಳಗ್ಗೆ ಬೆಸ್ಕಾಂ ಸಿಬ್ಬಂದಿ ನಿರ್ಲಕ್ಷ್ಯಕ್ಕೆ ಎರಡು ಅಮಾಯಕ ಜೀವಗಳು ಬಲಿಯಾಗಿದ್ದವು. ತುಂಡಾಗಿ ಬಿದ್ದಿದ್ದ ವಿದ್ಯುತ್​ ತಂತಿ ತುಳಿದು ಬಾಣಂತಿ ಸೌಂದರ್ಯ (23) ಮತ್ತು 9 ತಿಂಗಳ ಮಗು ಲೀಲಾ ಇಬ್ಬರೂ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದರು.

ಮೃತ ಸೌಂದರ್ಯ ಕಾಡುಗೋಡಿಯ ಎ.ಕೆ.ಗೋಪಾಲ್ ಕಾಲೋನಿಯ ನಿವಾಸಿಯಾಗಿದ್ದು, ಚೆನ್ನೈಗೆ ಮದುವೆ ಮಾಡಿಕೊಡಲಾಗಿತ್ತು. ದೀಪಾವಳಿ ಹಬ್ಬ ಆಚರಿಸಲು ಗಂಡ, ಹೆಂಡತಿ, ಮಗು ಊರಿಗೆ ಹೋಗಿದ್ದರು. ಇಂದು ಮುಂಜಾನೆ ಊರಿನಿಂದ ಹಸುಗೂಸು ಜೊತೆ ದಂಪತಿ ಬೆಂಗಳೂರಿಗೆ ಬಂದಿದ್ದರು.

ಇದನ್ನೂ ಓದಿ: ಬೆಸ್ಕಾಂ ಬೇಜವಾಬ್ದಾರಿಗೆ ತಾಯಿ, ಹಸುಗೂಸು ಬಲಿ: ಎಇ-ಎಇಇ ಅಮಾನತು

ಬಸ್ ಇಳಿದು ಮುಂಜಾನೆ ಐದು ಗಂಟೆ ಸುಮಾರಿಗೆ ಕತ್ತಲಿನಲ್ಲಿ ಮನೆಗೆ ನಡೆದು ಹೋಗುವಾಗ ರಸ್ತೆ ಬದಿ ತುಂಡಾಗಿ ಬಿದ್ದಿದ್ದ ತಂತಿಯನ್ನು ಸೌಂದರ್ಯ ತುಳಿದಿದ್ದಾರೆ. ಇದರಿಂದ ವಿದ್ಯುತ್ ಶಾಕ್ ಹೊಡೆದು ಬೆಂಕಿ ಹತ್ತಿಕೊಂಡಿದ್ದು ಪತಿ ಎದುರೇ ಪತ್ನಿ ಹಾಗೂ 9 ತಿಂಗಳ ಹಸುಗೂಸು ಲೀಲಾ ಸಜೀವದಹನವಾಗಿದ್ದರು.

ಬೆಸ್ಕಾಂಗೆ ಕರೆ ಮಾಡಿ ಒಂದು ಗಂಟೆಯಾದರೂ ಸ್ಥಳಕ್ಕೆ ಯಾರೂ ಬಂದಿಲ್ಲ. ಸೂಕ್ತ ಸಮಯಕ್ಕೆ ಸ್ಥಳೀಯ ನಿವಾಸಿಗಳೂ ಸಹಾಯಕ್ಕೆ ಬಂದಿರಲಿಲ್ಲ. ಇದರಿಂದಾಗಿ ಕಣ್ಣ ಮುಂದೆ ಹೆಂಡತಿ, ಮಗು ಪ್ರಾಣಬಿಟ್ಟರೂ ಏನು ಮಾಡಲಾಗದ ಸ್ಥಿತಿಯಲ್ಲಿ ಸಂತೋಷ್ ಇದ್ದರು. ಬೆಸ್ಕಾಂ ಅಧಿಕಾರಿಗಳು ಹಾಗೂ ಸಿಬ್ಬಂದಿ ನಿರ್ಲಕ್ಷ್ಯದ ವಿರುದ್ಧ ಸ್ಥಳೀಯರು ಆಕ್ರೋಶ ಹೊರ ಹಾಕಿದ್ದು, ಘಟನೆ ಸಂಬಂಧ ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್‌ 304ಎ ಅಡಿ ಪ್ರಕರಣ ದಾಖಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ