ಕಾವೇರಿ ವಿವಾದ; ತಮಿಳುನಾಡಿಗೆ ನೀರು ಬಿಡುವುದನ್ನು ಖಂಡಿಸಿ ಮಂಗಳವಾರ ಬೆಂಗಳೂರು ಬಂದ್

Bangalore Bandh: ಬೆಂಗಳೂರು ಬಂದ್ ದಿನ ಟೌನ್ ಹಾಲ್​​ನಿಂದ ಫ್ರೀಡಂ ಪಾರ್ಕ್ ವರೆಗೆ ಬೃಹತ್ ರ್ಯಾಲಿ ಹಮ್ಮಿಕೊಳ್ಳಲು ಉದ್ದೇಶಿಸಲಾಗಿದೆ.ಕೆಲವೇ ಕ್ಷಣಗಳಲ್ಲಿ ಸಭೆಯಿಂದ ಬಂದ್ ದಿನಾಂಕ ಅಧಿಕೃತ ಘೋಷಣೆಯಾಗುವ ಸಾಧ್ಯತೆ ಇದೆ. ಆ ಬಳಿಕ, ಬಂದ್ ದಿನ ಏನೆಲ್ಲ ಸೇವೆಗಳು ಲಭ್ಯವಿರಲಿವೆ, ಯಾವೆಲ್ಲ ಸೇವೆಗಳು ಬಂದ್ ಆಗಲಿವೆ ಎಂಬ ಮಾಹಿತಿ ದೊರೆಯಲಿದೆ.

ಕಾವೇರಿ ವಿವಾದ; ತಮಿಳುನಾಡಿಗೆ ನೀರು ಬಿಡುವುದನ್ನು ಖಂಡಿಸಿ ಮಂಗಳವಾರ ಬೆಂಗಳೂರು ಬಂದ್
ತಮಿಳುನಾಡಿಗೆ ನೀರು ಬಿಡುವುದನ್ನು ಖಂಡಿಸಿ ಮದ್ದೂರಿನಲ್ಲಿ ಪ್ರತಿಭಟನೆ
Follow us
| Updated By: ಗಣಪತಿ ಶರ್ಮ

Updated on:Sep 23, 2023 | 1:11 PM

ಬೆಂಗಳೂರು, ಸೆಪ್ಟೆಂಬರ್ 23: ತಮಿಳುನಾಡಿಗೆ ಕಾವೇರಿ ನೀರು (Cauvery Water) ಹರಿಸುವುದನ್ನು ಖಂಡಿಸಿ ಮಂಗಳವಾರ ಬೆಂಗಳೂರು ನಗರ ಬಂದ್​​ಗೆ (Bangalore Bandh) ಕರೆ ನೀಡಲಾಗಿದೆ. ವಿವಿಧ ಸಂಘಟನೆಗಳು ಬಂದ್​ಗೆ ಕರೆ ನೀಡಿದ್ದು, ಅಧಿಕೃತ ಘೋಷಣೆ ಇನ್ನಷ್ಟೇ ಮಾಡಬೇಕಿದೆ. ಈ ಮಧ್ಯೆ, ತಮಿಳುನಾಡಿಗೆ ನೀರು ಬಿಡುವ ಸರ್ಕಾರದ ನಿರ್ಧಾರ ಖಂಡಿಸಿ ಮಂಡ್ಯ, ಮದ್ದೂರು, ಬೆಂಗಳೂರು, ಬೆಂಗಳೂರು ಗ್ರಾಮಾಂತರ ಪ್ರದೇಶಗಳಲ್ಲಿ ಶನಿವಾರ ಭಾರಿ ಪ್ರತಿಭಟನೆ ನಡೆದಿದೆ. ಬೆಂಗಳೂರಿನಲ್ಲಿ ಪ್ರತಿಭಟನಾ ನಿರತ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಹಾಗೂ ಇತರ ಬಿಜೆಪಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬೆಂಗಳೂರು ಬಂದ್ ದಿನ ಟೌನ್ ಹಾಲ್​​ನಿಂದ ಫ್ರೀಡಂ ಪಾರ್ಕ್ ವರೆಗೆ ಬೃಹತ್ ರ್ಯಾಲಿ ಹಮ್ಮಿಕೊಳ್ಳಲು ಉದ್ದೇಶಿಸಲಾಗಿದೆ. ಕೆಲವೊಂದು ಸಂಘಟನೆಗಳ ನಾಯಕರು ಸೋಮವಾರವೇ ಬೆಂಗಳೂರು ಬಂದ್ ಮಾಡೋಣ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಬೆಂಗಳೂರು ಬಂದ್ ಆದರೆ ರಾಜ್ಯಕ್ಕೆ ದೊಡ್ಡ ಸಂದೇಶ ಹೋಗುತ್ತದೆ. ಹಾಗಾಗಿ ಬೆಂಗಳೂರಿನಲ್ಲಿ ದೊಡ್ಡ ಮಟ್ಟದಲ್ಲಿ ಶಕ್ತಿ ಪ್ರದರ್ಶನ ಮಾಡಬೇಕು ಎಂದು ಸಂಘಟನೆಗಳ ನಾಯಕರು ಅಭಿಪ್ರಾಯ ವ್ಯಕ್ತಪಡಿಸ್ತಿದ್ದಾರೆ.

ಕೆಲವೇ ಕ್ಷಣಗಳಲ್ಲಿ ಸಭೆಯಿಂದ ಬಂದ್ ದಿನಾಂಕ ಅಧಿಕೃತ ಘೋಷಣೆಯಾಗುವ ಸಾಧ್ಯತೆ ಇದೆ. ಆ ಬಳಿಕ, ಬಂದ್ ದಿನ ಏನೆಲ್ಲ ಸೇವೆಗಳು ಲಭ್ಯವಿರಲಿವೆ, ಯಾವೆಲ್ಲ ಸೇವೆಗಳು ಬಂದ್ ಆಗಲಿವೆ ಎಂಬ ಮಾಹಿತಿ ದೊರೆಯಲಿದೆ. ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಅಧಿಕೃತವಾಗಿ ಘೋಷಣೆ ಮಾಡುವ ಸಾಧ್ಯತೆ ಇದೆ. ಎಲ್ಲರೂ ಒಟ್ಟಾಗಿ ಹೋಗೋಣ ಎಂದು ಸಂಘಟನೆ ಮುಖಂಡರು ಅಭಿಪ್ರಾಯ ಪಟ್ಟಿದ್ದಾರೆ.

ನುಡಿದಂತೆ ಸರ್ಕಾರ ನಡೆದಿಲ್ಲ; ಅಶ್ವತ್ಥನಾರಾಯಣ

ತಮಿಳುನಾಡಿಗೆ ನೀರು ಬಿಡುವ ವಿಚಾರವಾಗಿ ಸರ್ಕಾರ ಯಡವಟ್ಟಿನ ನಿರ್ಧಾರ ಕೈಗೊಂಡಿದೆ. ಮಳೆ ಕೊರತೆಯ ಕಾರಣ ನೀರು ಬಿಡುವುದು ಬೇಡ. ನೀರು ಇರುವುದು ಕೇವಲನ ತಮಿಳುನಾಡಿಗೆ ಮಾತ್ರವಲ್ಲ. ನುಡಿದಂತೆ ಸರ್ಕಾರ ನಡೆದಿಲ್ಲ ಎಂದು ಬಿಜೆಪಿ ನಾಯಕ, ಮಾಜಿ ಸಚಿವ ಅಶ್ವತ್ಥನಾರಾಯಣ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಆಗಸ್ಟ್​​, ಸೆಪ್ಟೆಂಬರ್​​ನಲ್ಲೇ ಕಾವೇರಿ ನದಿ ನೀರು ಹಂಚಿಕೆ ವಿವಾದ ಉಲ್ಬಣಗೊಳ್ಳುವುದೇಕೆ? ಇಲ್ಲಿವೆ ಕೆಲವು ಕಾರಣ

ಬೆಂಗಳೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ನೀರು ಬಿಡಲ್ಲ ಎಂದು ಮೊದಲು ಹೇಳಿದ್ದರು. ಆದರೆ ಈಗ ಬಿಡುತ್ತಿದ್ದಾರೆ. ತಮ್ಮ ಅಧಿಕಾರ ಉಳಿಸಿಕೊಳ್ಳಲು ಈ ರೀತಿ ನಿರ್ಧಾರ ಕೈಗೊಂಡಿದ್ದಾರೆ. ನೀರು ಬಿಡುಗಡೆ ಮಾಡುವುದನ್ನ ತಕ್ಷಣವೇ ನಿಲ್ಲಿಸಬೇಕು ಎಂದು ಆಗ್ರಹಿಸಿದ್ದಾರೆ. ಎಲ್ಲಾ ಹಂತದಲ್ಲೂ ಸರ್ಕಾರ ವಿಫಲ ವಾಗಿದೆ ಎಂದು ಅವರು ಟೀಕಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:06 pm, Sat, 23 September 23