ಕಾವೇರಿ ವಿವಾದ: ಸುಪ್ರಿಂಕೋರ್ಟ್​​​ನಲ್ಲಿ ಮರು ಪರಿಶೀಲನೆ ಅರ್ಜಿ ಸಲ್ಲಿಸಿದ ಕರ್ನಾಟಕ

ಈಗಾಗಲೇ ಕಾವೇರಿ ಜಲ ನಿಯಂತ್ರಣ ಸಮಿತಿ (CWRC) ಆದೇಶವನ್ನು ಎತ್ತಿ ಹಿಡಿದಿರುವ ಕಾವೇರಿ ನದಿ ನಿರ್ವಹಣಾ ಪ್ರಾಧಿಕಾರದ (CWMA) ನಿರ್ಧಾರವನ್ನು ಮರು ಪರಿಶೀಲಿಸುವಂತೆ ಇದೀಗ ರಾಜ್ಯ ಸರ್ಕಾರ ಪ್ರಾಧಿಕಾರ ಹಾಗೂ ಸುಪ್ರಿಂಕೋರ್ಟ್​​ಗೆ (Supreme court) ಮರು ಪರಿಶೀಲನೆ ಅರ್ಜಿ ಸಲ್ಲಿಸಿದೆ.

ಕಾವೇರಿ ವಿವಾದ: ಸುಪ್ರಿಂಕೋರ್ಟ್​​​ನಲ್ಲಿ ಮರು ಪರಿಶೀಲನೆ ಅರ್ಜಿ ಸಲ್ಲಿಸಿದ ಕರ್ನಾಟಕ
ವಿಧಾನಸೌಧ
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on:Sep 30, 2023 | 6:07 PM

ಬೆಂಗಳೂರು ಸೆ.30:  ರಾಜ್ಯಾದ್ಯಂತ ಕಾವೇರಿ ವಿವಾದ ಭುಗಿಲೆದ್ದಿದೆ. ಈ ಹಿನ್ನಲೆ ಈಗಾಗಲೇ ಕಾವೇರಿ ಜಲ ನಿಯಂತ್ರಣ ಸಮಿತಿ (CWRC) ಆದೇಶವನ್ನು ಎತ್ತಿ ಹಿಡಿದಿರುವ ಕಾವೇರಿ ನದಿ ನಿರ್ವಹಣಾ ಪ್ರಾಧಿಕಾರದ (CWMA) ನಿರ್ಧಾರವನ್ನು ಮರು ಪರಿಶೀಲಿಸುವಂತೆ ಇದೀಗ ರಾಜ್ಯ ಸರ್ಕಾರ ಪ್ರಾಧಿಕಾರ ಹಾಗೂ ಸುಪ್ರಿಂಕೋರ್ಟ್​​ಗೆ (Supreme court) ಮರು ಪರಿಶೀಲನೆ ಅರ್ಜಿ ಸಲ್ಲಿಸಿದೆ. ಅದರಲ್ಲಿ ಎರಡು ಭೇಡಿಕೆಗಳನ್ನು ಇಡಲಾಗಿದೆ.

ಹೌದು, 1) ನೀರು ಬಿಡಲು ಸಾಧ್ಯವಿಲ್ಲ. 2) ಮೇಕೆದಾಟು ಯೋಜನೆಗೆ ಅನುಮತಿ ಕೊಡಬೇಕು ಎಂದು ಭೇಡಿಕೆ ಇಡಲಾಗಿದೆ. ಇನ್ನು ಕಾವೇರಿ ಕಾನೂನು ಹೋರಾಟ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ(ಸೆ.29) ಹಿರಿಯ ನ್ಯಾಯಾಧೀಶರು, ನಿವೃತ್ತ ನ್ಯಾಯಮೂರ್ತಿಗಳ ಜೊತೆ ಸಭೆ ನಡೆಸಿದ್ದರು. ಈ ವೇಳೆ ಸಭೆಯಲ್ಲಿ ಕಾನೂನಿನ ಹೋರಾಟ ಮುಂದುವರೆಸುವಂತೆ ಸಲಹೆ ನೀಡಿದ ಹಿನ್ನೆಲೆಯಲ್ಲಿ ಸರ್ಕಾರ ಇಂದು ಅರ್ಜಿ ಸಲ್ಲಿಸಿದೆ. ಇನ್ನು ನಿನ್ನೆ ನಡೆದ ಸಭೆಯಲ್ಲಿ ರಾಜ್ಯದ ಸಮಸ್ಯೆಯನ್ನು ಮನವರಿಕೆ ಮಾಡಿಕೊಡಿ. ಪ್ರಾಧಿಕಾರದ ಆದೇಶ ಪಾಲನೆ ಅಸಾಧ್ಯ ಎಂದು ಹೇಳಿ. ಡ್ಯಾಂಗಳ ಮತ್ತು ಬೆಳೆಯ ಜಮೀನಿನ ಫೋಟೋ ಮತ್ತು ವಿಡಿಯೋಗಳನ್ನು ಕೋರ್ಟ್​ಗೆ ಸಲ್ಲಿಸಿ ಎಂದು ಸಲಹೆ ಕೂಡ ನೀಡಿದ್ದಾರೆ.

ಇದನ್ನೂ ಓದಿ:ತಮಿಳುನಾಡಿಗೆ ಕಾವೇರಿ ನೀರು: ವಿವಿಧ ಕನ್ನಡಪರ ಸಂಘಟನೆ ಕಾರ್ಯಕರ್ತರಿಂದ ಮಳವಳ್ಳಿಯಲ್ಲಿ ರಕ್ತ ಚಳುವಳಿ

ಇದರ ಜೊತೆಗೆ ನ್ಯಾಯಮೂರ್ತಿಗಳು ಹಾಗೂ ವಕೀಲರು ‘ಕಾವೇರಿ ವಿಚಾರದಲ್ಲಿ ರಾಜಕೀಯ ಮಾಡಿದರೇ ಜನರಿಗೆ ಉಳಿಗಾಲವಿಲ್ಲ. ಮೂರು ಪಕ್ಷಗಳ ನಾಯಕರು ಒಂದಾಗಿ, ವಿಪಕ್ಷಗಳು ಮತ್ತು ಸರ್ಕಾರದ ಕೆಲ ಸಚಿವರು ನೀರಾವರಿ ಅಂಕಿ-ಅಂಶಗಳನ್ನ ಹೊರಗಡೆ ಹೇಳುವುದು ಸರಿಯಲ್ಲ ಎಂದು  ಸಲಹೆ ನೀಡಿದ್ದರು. ಇನ್ನು ನ್ಯಾಯಮೂರ್ತಿಗಳ ಸಭೆ ಬಳಿಕ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್​ ಸರ್ಕಾರದ ಮುಖ್ಯ ಕಾರ್ಯದರ್ಶಿ ಎಜಿ ಶಶಿಕಿರಣ್ ಶೆಟ್ಟಿ ಜೊತೆಗೆ ಪ್ರತ್ಯೇಕ ಸಭೆ ನಡೆಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:54 pm, Sat, 30 September 23

ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ