ಕಾವೇರಿ ವಿವಾದ: ನೀರು ಹರಿಸಲು ಒಪ್ಪದ ಕರ್ನಾಟಕ, ಸರ್ವಪಕ್ಷಗಳ ಸಭೆ ಕರೆದ ತಮಿಳುನಾಡು
ತಮಿಳುನಾಡಿಗೆ ನಿತ್ಯ 1 ಟಿಎಂಸಿ ನೀರು ಹರಿಸುವಂತೆ CWRC ಸೂಚಿಸಿದೆ. ಆದರೆ CWRC ಶಿಫಾರಸ್ಸು ಒಪ್ಪಲು ಕರ್ನಾಟಕ ಸಾಧ್ಯವಿಲ್ಲ ಎಂದಿದೆ. ಕರ್ನಾಟಕದ ನಿರ್ಧಾರದ ಬೆನ್ನಲ್ಲೆ ತಮಿಳುನಾಡಿನಲ್ಲಿ ನಾಳೆ ಸರ್ವಪಕ್ಷಗಳ ಸಭೆ ಕರೆಯಲಾಗಿದೆ. ತಮಿಳುನಾಡು ಜಲಸಂಪನ್ಮೂಲ ಸಚಿವ ದೊರೈಮುರುಗನ್ ಅವರು ನಾಳೆ ಸರ್ವಪಕ್ಷಗಳ ಸಭೆ ಕರೆದಿದ್ದಾರೆ.
ಬೆಂಗಳೂರು, ಜುಲೈ.15: ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಜುಲೈ 12 ರಿಂದ 31 ರವರೆಗೆ ತಮಿಳುನಾಡಿಗೆ ಪ್ರತಿದಿನ ಒಂದು ಟಿಎಂಸಿ ನೀರನ್ನು ಬಿಡುಗಡೆ ಮಾಡಲು ಸೂಚಿಸಿದೆ. ಆದರೆ ಕರ್ನಾಟಕ ಸರ್ಕಾರ ಈ ನಿರ್ದೇಶನವನ್ನು ತಿರಸ್ಕರಿಸಿದ್ದು ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸರ್ವಪಕ್ಷಗಳ ಸಭೆಯಲ್ಲಿ ಪ್ರತಿ ದಿನ 1 ಟಿಎಂಸಿ ನೀಡು ಬಿಡಲು ಆಗೋದಿಲ್ಲ ಎಂದು ನಿರ್ಧಾರ ಮಾಡಲಾಗಿದೆ. ಮತ್ತೊಂದೆಡೆ ಇತ್ತ ತಮಿಳುನಾಡು ಜಲಸಂಪನ್ಮೂಲ ಸಚಿವ ದೊರೈಮುರುಗನ್ ಅವರು ನಾಳೆ ಸರ್ವಪಕ್ಷಗಳ ಸಭೆ ಕರೆದಿದ್ದಾರೆ.
ಸಚಿವ ದೊರೈಮುರುಗನ್ ನೇತೃತ್ವದಲ್ಲಿ ನಾಳೆ ತಮಿಳುನಾಡಿನ ಪಕ್ಷಗಳ ಸಭೆ ಕರೆಯಲಾಗಿದೆ. ನಿತ್ಯ 1 ಟಿಎಂಸಿ ನೀರು ಹರಿಸುವಂತೆ CWRC ಸೂಚಿಸಿದೆ. ಆದರೆ CWRC ಶಿಫಾರಸ್ಸು ಒಪ್ಪಲು ಕರ್ನಾಟಕ ಸಾಧ್ಯವಿಲ್ಲ ಎಂದಿದೆ. CWMAಗೆ ಮೇಲ್ಮನವಿ ಸಲ್ಲಿಸಲು ಕರ್ನಾಟಕ ನಿರ್ಧರಿಸಿದೆ. ಕರ್ನಾಟಕದ ನಿರ್ಧಾರದ ಬೆನ್ನಲ್ಲೆ ತಮಿಳುನಾಡಿನಲ್ಲಿ ನಾಳೆ ಸರ್ವಪಕ್ಷಗಳ ಸಭೆ ಕರೆಯಲಾಗಿದೆ.
ಜುಲೈ 11ರಂದು ಕಾವೇರಿ ನೀರು ನಿಯಂತ್ರಣ ಸಮಿತಿ 3ನೇ ಸಭೆ ನಡೆಸಿ, ಜುಲೈ 12ರಂದು ಈ ತಿಂಗಳ ಕೊನೆಯವರೆಗೆ ಸುಮಾರು 20 ದಿನ ಪ್ರತೀ ದಿನ 1 ಟಿಎಂಸಿಯಂತೆ 20 ಟಿಎಂಸಿ ನೀರು ಬಿಡಲು ಆದೇಶಿಸಿತ್ತು. ನಾರ್ಮಲ್ ವರ್ಷದಲ್ಲಿ ಜೂನ್ ತಿಂಗಳಲ್ಲಿ 9.4 ಟಿಎಂಸಿ, July ನಲ್ಲಿ 31.24 ಟಿಎಂಸಿ ನೀರು ಬಿಡಬೇಕಾಗಿದೆ. ಅಂದರೆ ಒಟ್ಟು 40.43 ಟಿಎಂಸಿ ಬಿಡಬೇಕಾಗಿದೆ. ಇಲ್ಲಿಯವರೆಗೂ 5 ಟಿಎಂಸಿ ಗೂ ಹೆಚ್ಚು ನೀರು ಬಿಡಲು ಸಾಧ್ಯವಾಗಿದೆ.
ಇದನ್ನೂ ಓದಿ: ವಿಜಯನಗರ; ತುಂಗಾಭದ್ರ ಜಲಾಶಯದ ಹಿನ್ನೀರಿನಲ್ಲಿ ಪ್ರವಾಸಿಗರ ಹುಚ್ಚಾಟ, ವಿಡಿಯೋ ನೋಡಿ
ಕಾವೇರಿ ತೀರದ ಸಚಿವರು, ಶಾಸಕರು ಮತ್ತು ಸಂಬಂಧಪಟ್ಟ ಅಧಿಕಾರಿಗಳು ಜುಲೈ 12 ರಂದು ಸಭೆ ನಡೆಸಿ ನೀರು ಬಿಡದೇ ಇರಲು ಮತ್ತು ಸರ್ವಪಕ್ಷ ಸಭೆ ಕರೆಯಲು, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಮುಂದೆ ಮೇಲ್ಮನವಿ ಸಲ್ಲಿಸಲು ತೀರ್ಮಾನಿಸಿದ್ದೆವು. ಈ ಹಿನ್ನೆಲೆಯಲ್ಲಿ ಇಂದು ಸರ್ವಪಕ್ಷ ಸಭೆ ನಡೆಸಲಾಯಿತು ಎಂದು ಸಿಎಂ ವಿವರಿಸಿದರು.
ಬಿಜೆಪಿ, ಜೆಡಿಎಸ್, ರೈತ ಸಂಘದವರು, ಕಾನೂನು ತಂಡದ ಮುಖ್ಯಸ್ಥರಾದ ಮೋಹನ್ ಕಾತರಕಿ ಅವರು ಸೇರಿ ಹಲವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ನಮ್ಮ ಕಾವೇರಿ ತೀರದ ಜಲಾಶಯಗಳಲ್ಲಿ 63% ಮಾತ್ರ ಭರ್ತಿ ನೀರು ಆಗಿದೆ.ಕಬಿನಿ ಜಲಾಶಯ ಭರ್ತಿಯಾಗಿದ್ದು, ಕಳೆದ ಎರಡು ದಿನ 20 ಸಾವಿರ, 19 ಸಾವಿರ ಹಾಗೂ ಇಂದು 13 ಸಾವಿರ ಕ್ಯೂಸೆಕ್ಸ್ ನೀರು ಹರಿದು ಹೋಗಿದೆ. ಜಲಾಶಯದ ಸುರಕ್ಷತೆಗಾಗಿ ಶೇಖರಿಸಿಡಲು ಸಾಧ್ಯವಾಗದ ನೀರು ಮಾತ್ರ ಹರಿದುಹೋಗಿದೆ.ವಕೀಲರ ತಂಡದ ಸಲಹೆ ಪ್ರಕಾರ ಹೆಚ್ಚು ಮಳೆ ಬಿದ್ದರೆ ಮಾತ್ರ ಮಳೆ ಪ್ರಮಾಣಕ್ಕೆ ತಕ್ಕಂತೆ, ಕಾವೇರಿ ನೀರು ನಿರ್ವಹಣಾ ಸಮಿತಿ ಆದೇಶದ ಪ್ರಕಾರ ಪೂರ್ತಿ ನೀರು ಹರಿಸಬಹುದು. ಇಲ್ಲದಿದ್ದರೆ ಕೇವಲ 8 ಸಾವಿರ ಕ್ಯೂಸೆಕ್ಸ್ ನೀರು ಬಿಡಬೇಕಾಗುತ್ತದೆ ಇದರ ಜೊತೆಗೆ ಮೇಲ್ಮನವಿ ಹಾಕೋಣ. ನಾವು ಮೊಂಡಾಟ ಮಾಡುತ್ತಿದ್ದೇವೆ ಎಂದು ಕಾವೇರಿ ನೀರು ನಿರ್ವಹಣಾ ಸಮಿತಿಗೆ ಅನ್ನಿಸಬಾರದು ಎನ್ನುವ ಸಲಹೆ ಬಂದಿದೆ ಎಂದರು.
ರಾಜ್ಯದ ಪ್ರಮುಖ ಸುದ್ದಿಗಳನ್ನು ಒದಲು ಇದರ ಮೇಲೆ ಕ್ಲಿಕ್ ಮಾಡಿ
Published On - 1:53 pm, Mon, 15 July 24