AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾವೇರಿ ನದಿ ನೀರು ವಿವಾದ: ತಮಿಳುನಾಡಿನ ಜೊತೆ ಸಂಧಾನಕ್ಕೆ ಮುಂದಾದ ಕರ್ನಾಟಕ; ಆ. 3ರಂದು ಮಾತುಕತೆಗೆ ಬರುವಂತೆ ವಿಜಯ್​​ಗೆ ಆಹ್ವಾನ

Cauvery Water Dispute: ಕಾವೇರಿ ನೀರು ಹಂಚಿಕೆ ಮತ್ತು ಮೇಕೆದಾಟು ವಿವಾದ ಇತ್ಯರ್ಥಕ್ಕೆ ಕರ್ನಾಟಕ ಸರ್ಕಾರ ಮುಂದಾಗಿದ್ದು, ಆಗಸ್ಟ್ 3 ರಂದು ಸಂಧಾನ ಮಾತುಕತೆಗೆ ಬರುವಂತೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರಿಗೆ ಆಹ್ವಾನ ನೀಡಿದೆ. ಒಂದೊಮ್ಮೆ ಕರ್ನಾಟಕದ ಆಹ್ವಾನ ಒಪ್ಪಿ ವಿಜಯ್​​ ಬಂದಿದ್ದೇ ಆದಲ್ಲಿ ಸಂಕಷ್ಟ ಪರಿಹಾರ ಸೂತ್ರದ ಬಗ್ಗೆ ಉಭಯ ರಾಜ್ಯಗಳ ಮುಖ್ಯಮಂತ್ರಿಗಳು ಮಹತ್ವದ ಚರ್ಚೆ ನಡೆಸಲಿದ್ದಾರೆ. ಕರ್ನಾಟಕದಲ್ಲಿ ಬರ ಪರಿಸ್ಥಿತಿ ಉಂಟಾಗಿರುವ ಹಿನ್ನೆಲೆ ತಮಿಳುನಾಡಿಗೆ ನೀರು ಬಿಡದಿರಲು CWMA ನಿನ್ನೆಯಷ್ಟೇ ಆದೇಶಿಸಿರುವ ನಡುವೆ ಮಹತ್ವದ ಬೆಳವಣಿಗೆ ನಡೆದಿದೆ.

ಕಾವೇರಿ ನದಿ ನೀರು ವಿವಾದ: ತಮಿಳುನಾಡಿನ ಜೊತೆ ಸಂಧಾನಕ್ಕೆ ಮುಂದಾದ ಕರ್ನಾಟಕ;  ಆ. 3ರಂದು ಮಾತುಕತೆಗೆ ಬರುವಂತೆ ವಿಜಯ್​​ಗೆ ಆಹ್ವಾನ
ಕಾವೇರಿ ನದಿ ನೀರು ವಿವಾದ: ತಮಿಳುನಾಡಿನ ಜೊತೆ ಸಂಧಾನಕ್ಕೆ ಮುಂದಾದ ಕರ್ನಾಟಕImage Credit source: PTI
ಪ್ರಸನ್ನ ಗಾಂವ್ಕರ್​
| Edited By: |

Updated on:Jul 23, 2026 | 5:02 PM

Share

ಮುಖ್ಯಾಂಶಗಳು

  • ಕಾವೇರಿ ನದಿ ನೀರು, ಮೇಕೆದಾಟು ಯೋಜನೆ ವಿವಾದ
  • ತಮಿಳುನಾಡಿನ ಜೊತೆ ಸಂಧಾನಕ್ಕೆ ಕರ್ನಾಟಕ ಮುಂದು
  • ಆ. 3ರಂದು ಮಾತುಕತೆಗೆ ಬರುವಂತೆ ವಿಜಯ್​​ಗೆ ಆಹ್ವಾನ

ಬೆಂಗಳೂರು, ಜುಲೈ 23: ಕಾವೇರಿ ನೀರು ಹಂಚಿಕೆ ಸಮಸ್ಯೆ ಮತ್ತು ಮೇಕೆದಾಟು ಯೋಜನೆ ವಿಚಾರ ಸಂಬಂಧ ಸದಾ ಒಂದಿಲ್ಲೊಂದು ಕ್ಯಾತೆ ತೆಗೆಯುತ್ತಿರುವ ನೆರೆ ರಾಜ್ಯ ತಮಿಳುನಾಡಿನೊಂದಿಗೆ ಸಂಧಾನಕ್ಕೆ ಕರ್ನಾಟಕ ಮುಂದಾಗಿದೆ. ಈ ವಿಚಾರವಾಗಿ ಆಗಸ್ಟ್ 3ರಂದು ಮಾತುಕತೆಗೆ ಬರುವಂತೆ ತಮಿಳುನಾಡು ಸಿಎಂ ವಿಜಯ್​ಗೆ ಕರ್ನಾಟಕ ಆಹ್ವಾನ ನೀಡಿದೆ. ಕರ್ನಾಟಕ ಮತ್ತು ತಮಿಳುನಾಡು ನಡುವೆ ಪತ್ರ ವ್ಯವಹಾರ ನಡೆದಿದ್ದರೂ ಮಾತುಕತೆಗೆ ಬರುವ ವಿಚಾರವಾಗಿ ವಿಜಯ್​​ರಿಂದ ಈವರೆಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎನ್ನಲಾಗಿದೆ. ಹೀಗಾಗಿ ತಮಿಳುನಾಡಿನ ಮುಂದಿನ ನಿರ್ಧಾರ ಏನಿರಬಹುದು ಎಂಬ ಕುತೂಹಲ ಹೆಚ್ಚಿದೆ. ಒಂದೊಮ್ಮೆ ಕರ್ನಾಟಕದ ಆಹ್ವಾನ ಒಪ್ಪಿ ವಿಜಯ್​​ ಬಂದಿದ್ದೇ ಆದಲ್ಲಿ ಸಂಕಷ್ಟ ಪರಿಹಾರ ಸೂತ್ರದ ಬಗ್ಗೆ ಉಭಯ ರಾಜ್ಯಗಳ ಮುಖ್ಯಮಂತ್ರಿಗಳು ಮಹತ್ವದ ಚರ್ಚೆ ನಡೆಸಲಿದ್ದಾರೆ.

ನೀರು ಬಿಡದಿರಲು ಆದೇಶಿಸಿದ್ದ CWMA

ಕರ್ನಾಟಕದಲ್ಲಿ ಬರ ಪರಿಸ್ಥಿತಿ ಉಂಟಾಗಿರುವ ಹಿನ್ನೆಲೆ ತಮಿಳುನಾಡಿಗೆ ನೀರು ಬಿಡದಿರಲು CWMA ನಿನ್ನೆಯಷ್ಟೇ ಆದೇಶಿಸಿತ್ತು. ಜುಲೈ 26ರ ಬಳಿಕ ಕರ್ನಾಟಕದಲ್ಲಿ ಮಳೆಯಾಗುವ ಸಾಧ್ಯತೆಯಿದೆ . ಈ ಹಿನ್ನೆಲೆ ಒಂದು ವಾರದ ಬಳಿಕ ಅಂದರೆ ,ಜು.28ಕ್ಕೆ ದೆಹಲಿಯಲ್ಲಿ ಕಾವೇರಿ ನೀರು ನಿರ್ವಹಣಾ ಸಮಿತಿ ಸಭೆ ನಡೆಸಿ ನೀರು ಬಿಡುವುದೋ ಅಥವಾ ಬೇಡವೋ ಎಂಬ ಬಗ್ಗೆ ನಿರ್ಧಾರ ಮಾಡುವುದಾಗಿ ತಿಳಿಸಿತ್ತು. ಈ ನಡುವೆಯೇ ಮಹತ್ವದ ಬೆಳವಣಿಗೆ ನಡೆದಿದೆ.

ಇದನ್ನೂ ಓದಿ: ಸಂಪೂರ್ಣ ಬತ್ತಿದ ಕಾವೇರಿ ನದಿ; ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರದ ಭೀತಿ

ಲೋಕಸಭೆಯಲ್ಲಿ ಪ್ರತಿಭಟಿಸಿದ್ದ ಡಿಎಂಕೆ

ಇನ್ನು ಲೋಕಸಭೆ ಅಧಿವೇಶನದ ಮೊದಲ ದಿನವೇ ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ನೆರೆ ರಾಜ್ಯ ತಮಿಳುನಾಡು ಮತ್ತೆ ಕ್ಯಾತೆ ತೆಗೆದಿತ್ತು. ಕರ್ನಾಟಕದ ಮೇಕೆದಾಟು ಯೋಜನೆಗೆ ಲೋಕಸಭೆಯಲ್ಲಿ ಡಿಎಂಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಕಲಾಪ ಆರಂಭವಾಗುತ್ತಿದ್ದಂತೆಯೇ ವಿಷಯ ಪ್ರಸ್ತಾಪ ಮಾಡಿತ್ತು. ಮೇಕೆದಾಟು ವಿಚಾರವಾಗಿ ನಿಲುವಳಿ ಸೂಚನೆಗೆ ಅವಕಾಶ ಡಿಎಂಕೆ ಕೋರಿದ್ದು, ತಕ್ಷಣವೇ ಚರ್ಚೆ ನಡೆಸಬೇಕು ಎಂದು ಪಟ್ಟು ಹಿಡಿದ ಪ್ರಸಂಗ ನಡೆದಿತ್ತು. ಆದರೆ ಪ್ರಸ್ತಾವನೆಗೆ ಸ್ಪೀಕರ್ ಓಂ ಬಿರ್ಲಾ ನಿರಾಕರಿಸಿದ ಕಾರಣ ಲೋಕಸಭೆ ಸದನದ ಬಾವಿಗಿಳಿದು ಡಿಎಂಕೆ‌ ಸಂಸದರು ಪ್ರತಿಭಟನೆ ನಡೆಸಿದ್ದರು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 4:48 pm, Thu, 23 July 26

Follow Us
ಪ್ರಸನ್ನ ಗಾಂವ್ಕರ್​
ಪ್ರಸನ್ನ ಗಾಂವ್ಕರ್​

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
ಹೈದರಾಬಾದ್‌ನಲ್ಲಿ ಮೈ ಹೋಮ್ ವ್ಯೋಮ ಗ್ರ್ಯಾಂಡ್ ಲಾಂಚ್
ಹೈದರಾಬಾದ್‌ನಲ್ಲಿ ಮೈ ಹೋಮ್ ವ್ಯೋಮ ಗ್ರ್ಯಾಂಡ್ ಲಾಂಚ್
ಇಂದು ನವರಾತ್ರಿಯ ಮೂರನೇ ದಿನ; ಚಂದ್ರಘಂಟಾ ದೇವಿಯ ಆರಾಧನೆಯಿಂದ ಕಾರ್ಯಸಿದ್ಧಿ
ಇಂದು ನವರಾತ್ರಿಯ ಮೂರನೇ ದಿನ; ಚಂದ್ರಘಂಟಾ ದೇವಿಯ ಆರಾಧನೆಯಿಂದ ಕಾರ್ಯಸಿದ್ಧಿ
'ರಾಹುಲ್ ಗಾಂಧಿ ಎಡಪಂಥೀಯ ಸಿದ್ಧಾಂತ ಹೇರಲು ಯತ್ನಿಸುತ್ತಿದ್ದಾರೆ'; ಫಡ್ನವೀಸ್
'ರಾಹುಲ್ ಗಾಂಧಿ ಎಡಪಂಥೀಯ ಸಿದ್ಧಾಂತ ಹೇರಲು ಯತ್ನಿಸುತ್ತಿದ್ದಾರೆ'; ಫಡ್ನವೀಸ್
ಅವಧಿಗೂ ಮುನ್ನ SIR ಅಂತ್ಯ: 2.01 ಲಕ್ಷ ಮತದಾರರ ಹೆಸರು ಡಿಲೀಟ್​
ಅವಧಿಗೂ ಮುನ್ನ SIR ಅಂತ್ಯ: 2.01 ಲಕ್ಷ ಮತದಾರರ ಹೆಸರು ಡಿಲೀಟ್​
ಕಾಂಗ್ರೆಸ್​​​ನ 25 ಶಾಸಕರು ಬಿಜೆಪಿ ಸೇರಲು ರೆಡಿ ಇದ್ದಾರೆ: ವಿಜಯೇಂದ್ರ
ಕಾಂಗ್ರೆಸ್​​​ನ 25 ಶಾಸಕರು ಬಿಜೆಪಿ ಸೇರಲು ರೆಡಿ ಇದ್ದಾರೆ: ವಿಜಯೇಂದ್ರ
ಹಿಂಡಲಗಾ ಜೈಲಿಗೆ ಹೋಗ್ತಿದ್ದ ಪ್ರಜ್ವಲ್ ಇದ್ದ ವಾಹನ ಅರ್ಧಕ್ಕೆ ವಾಪಸ್
ಹಿಂಡಲಗಾ ಜೈಲಿಗೆ ಹೋಗ್ತಿದ್ದ ಪ್ರಜ್ವಲ್ ಇದ್ದ ವಾಹನ ಅರ್ಧಕ್ಕೆ ವಾಪಸ್
ಬೃಹತ್ ಪ್ರತಿಭಟನೆ ಬಳಿಕ ಸುಪ್ರೀಂ ಕೋರ್ಟ್ ತಲುಪಿದ ರಾಹುಲ್ ಗಾಂಧಿ, ಖರ್ಗೆ
ಬೃಹತ್ ಪ್ರತಿಭಟನೆ ಬಳಿಕ ಸುಪ್ರೀಂ ಕೋರ್ಟ್ ತಲುಪಿದ ರಾಹುಲ್ ಗಾಂಧಿ, ಖರ್ಗೆ
ಮಂಜನಿಗೆ ಮುಂದೆ ಒಳ್ಳೆಯ ಭವಿಷ್ಯ ಇದೆ: ಸಂಗೀತಾ ಭಟ್ ಅಚ್ಚರಿಯ ಹೇಳಿಕೆ
ಮಂಜನಿಗೆ ಮುಂದೆ ಒಳ್ಳೆಯ ಭವಿಷ್ಯ ಇದೆ: ಸಂಗೀತಾ ಭಟ್ ಅಚ್ಚರಿಯ ಹೇಳಿಕೆ
ಸಿಎಂ ಡಿಕೆಶಿ​​ ಕುರ್ತಾ ಹಿಡಿದು ತಳ್ಳಿದ ರಾಹುಲ್ ಗಾಂಧಿ! ಕನ್ನಡಿಗರ ಆಕ್ರೋಶ
ಸಿಎಂ ಡಿಕೆಶಿ​​ ಕುರ್ತಾ ಹಿಡಿದು ತಳ್ಳಿದ ರಾಹುಲ್ ಗಾಂಧಿ! ಕನ್ನಡಿಗರ ಆಕ್ರೋಶ
ಕಿತ್ತೂರು ರಾಜಗುರುಗಳ ವಂಶಸ್ಥರಿಂದ ತಲೆಮಾರುಗಳ ಪರಂಪರೆ ಮುಂದುವರಿಕೆ
ಕಿತ್ತೂರು ರಾಜಗುರುಗಳ ವಂಶಸ್ಥರಿಂದ ತಲೆಮಾರುಗಳ ಪರಂಪರೆ ಮುಂದುವರಿಕೆ