ಕಾವೇರಿ ವಿವಾದ: ತಮಿಳುನಾಡಿಗೆ ಮತ್ತೆ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕರ್ನಾಟಕಕ್ಕೆ ಆದೇಶ
ಬುಧವಾರ ನವದೆಹಲಿಯಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆ ನಡೆದಿದ್ದು, ತಮಿಳುನಾಡಿಗೆ ಮತ್ತೆ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕರ್ನಾಟಕಕ್ಕೆ CWRC ಸೂಚನೆ ನೀಡಿದೆ. ಅಕ್ಟೋಬರ್ 16ರಿಂದ ಅ.31ರವರೆಗೆ ನೀರು ಹರಿಸುವಂತೆ ಸೂಚನೆ ನೀಡಲಾಗಿದೆ.
ಬೆಂಗಳೂರು, ಅಕ್ಟೋಬರ್ 11: ಬುಧವಾರ ನವದೆಹಲಿಯಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿ (Cauvery Water Regulation Committee) ಸಭೆ ನಡೆದಿದ್ದು, ತಮಿಳುನಾಡಿಗೆ ಮತ್ತೆ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕರ್ನಾಟಕಕ್ಕೆ ಕಾವೇರಿ ನೀರು ನಿಯಂತ್ರಣ ಸಮಿತಿ ಸೂಚನೆ ನೀಡಿದೆ. ಅಕ್ಟೋಬರ್ 16ರಿಂದ ಅ.31ರವರೆಗೆ ನೀರು ಹರಿಸುವಂತೆ ಸೂಚನೆ ನೀಡಲಾಗಿದೆ. ಪ್ರತಿನಿತ್ಯ 16 ಸಾವಿರ ಕ್ಯೂಸೆಕ್ ನೀರಿಗೆ ತಮಿಳುನಾಡು ಬೇಡಿಕೆ ಇಟ್ಟಿತ್ತು. ಕಳೆದ ಬಾರಿ ತಮಿಳುನಾಡಿಗೆ 15 ದಿನ ನಿತ್ಯ 3 ಸಾವಿರ ಕ್ಯುಸೆಕ್ ನೀರು ಬಿಡುವಂತೆ ಸಮಿತಿ ಆದೇಶಿಸಿತ್ತು.
ಸೆಪ್ಟೆಂಬರ್ 29ರಂದು ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆಯಲ್ಲಿ ದಿನಕ್ಕೆ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕರ್ನಾಟಕಕ್ಕೆ ಸೂಚನೆ ನೀಡಲಾಗಿತ್ತು. ಅಕ್ಟೋಬರ್ 15ಕ್ಕೆ ಅವಧಿ ಮುಕ್ತಾಯವಾಗುತ್ತಿರುವುದರಿಂದ ಇಂದಿನ ಸಭೆ ಮಹತ್ವ ಪಡೆದುಕೊಂಡಿತ್ತು. ಸದ್ಯ ಮತ್ತೆ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಸೂಚಿಸಲಾಗಿದೆ.
ಇದನ್ನೂ ಓದಿ: Cauvery Water Dispute: ಇಂದು ಕಾವೇರಿ ನಿಯಂತ್ರಣ ಸಮಿತಿ ಸಭೆ, ಕರ್ನಾಟಕಕ್ಕೆ ಜಲಾತಂಕ..!
15 ದಿನಗಳ ಕಾಲ 13 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆಯಲ್ಲಿ ತಮಿಳುನಾಡು ಬೇಡಿಕೆ ಇಟ್ಟಿತ್ತು. ಕೆಲವು ದಿನಗಳಿಂದ ಕಾವೇರಿ ಜಲಾನಯನ ಪ್ರದೇಶದಲ್ಲ ಮಳೆಯಾಗುತ್ತಿದ್ದರೂ ಕರ್ನಾಟಕ ಸರಿಯಾಗಿ ನೀರು ಹರಿಸಿಲ್ಲ. ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶವನ್ನು ಕರ್ನಾಟಕ ಸರಿಯಾಗಿ ಪಾಲಿಸುತ್ತಿಲ್ಲ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಮಂಡ್ಯದಲ್ಲಿ ಮುಂದುವರೆದ ಕಾವೇರಿ ಕಿಚ್ಚು; ಅನ್ನದಾತನ ವಿಭಿನ್ನ ರೀತಿ ಹೋರಾಟ
ಮಳೆ ಹೆಚ್ಚಾಗಿರುವ ಪ್ರಮಾಣ ಆಧರಿಸಿ ನೀರು ಹರಿಸಬೇಕು. ಪ್ರತಿ ದಿನ 13 ಸಾವಿರ ಕ್ಯೂಸೆಕ್ ನೀರು ಹರಿಸಬೇಕು ಎಂದು CWRC ಸಭೆಯಲ್ಲಿ ತಮಿಳುನಾಡು ಅಧಿಕಾರಿಗಳಿಂದ ವಾದ ಮಂಡನೆ ಮಾಡಲಾಗಿದೆ. ಸಭೆಯಲ್ಲಿ ಕರ್ನಾಟಕ, ತಮಿಳುನಾಡು ಅಧಿಕಾರಿಗಳು ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಗಿಯಾಗಿದ್ದರು.
ಇನ್ನು ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ಕರ್ನಾಟಕದಲ್ಲಿ ಪ್ರತಿಭಟನೆಗಳು ಮುಂದುವರೆದಿವೆ. ಮಂಡ್ಯ, ಬೆಂಗಳೂರು ಸೇರಿ ಹಲವೆಡೆ ಕಾವೇರಿ ನೀರಿನ ವಿಷಯವಾಗಿ ಹೋರಾಟಗಳು ನಡೆದಿವೆ. ಈ ವಿಚಾರವಾಗಿ ಬೆಂಗಳೂರು ಮತ್ತು ಕರ್ನಾಟಕ ಬಂದ ಕೂಡ ಮಾಡಲಾಗಿತ್ತು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 4:06 pm, Wed, 11 October 23