ಕರ್ನಾಟಕ ಬಂದ್: ಬೆಂಗಳೂರಿನಲ್ಲಿ ಇಂದು ಮಧ್ಯರಾತ್ರಿಯಿಂದಲೇ ನಿಷೇಧಾಜ್ಞೆ ಜಾರಿ, ಪ್ರತಿಭಟನೆಕಾರರಿಗೆ ಪೊಲೀಸ್ ಶಾಕ್

ಕಾವೇರಿ ನೀರು ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯ, ಕೇಂದ್ರ ಸರ್ಕಾರದ ಜೊತೆ ಸುಪ್ರೀಂಕೋರ್ಟ್​ ಗಮನಸೆಳೆಯಲು ನಾಳೆ(ಸೆ.29) ಕರ್ನಾಟಕ ಬಂದ್​ ಕರೆ ನೀಡಲಾಗಿದೆ. ಬೆಂಗಳೂರು ಸೇರಿದಂತೆ ಇತರೆ ಜಿಲ್ಲೆಗಳಲ್ಲಿ ಬೃಹತ್ ಪ್ರತಿಭಟನೆ ಮಾಡಲು ವಿವಿಧ ಸಂಘಟನೆಗಳು ಸಜ್ಜಾಗಿವೆ. ಆದ್ರೆ, ಬೆಂಗಳೂರಿನಲ್ಲಿ ಪ್ರತಿಭಟನಾಕಾರರಿಗೆ ಪೊಲೀಸ್ ಇಲಾಖೆ ಶಾಕ್ ಕೊಟ್ಟಿದೆ.

ಕರ್ನಾಟಕ ಬಂದ್: ಬೆಂಗಳೂರಿನಲ್ಲಿ ಇಂದು ಮಧ್ಯರಾತ್ರಿಯಿಂದಲೇ ನಿಷೇಧಾಜ್ಞೆ ಜಾರಿ, ಪ್ರತಿಭಟನೆಕಾರರಿಗೆ ಪೊಲೀಸ್ ಶಾಕ್
ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ
Follow us
Prajwal Kumar NY
| Updated By: ರಮೇಶ್ ಬಿ. ಜವಳಗೇರಾ

Updated on:Sep 28, 2023 | 1:51 PM

ಬೆಂಗಳೂರು, (ಸೆಪ್ಟೆಂಬರ್ 28) : ಕಾವೇರಿ ನದಿ ನೀರು (Cauvery Water Dispute) ವಿವಾದಕ್ಕೆ ಸಂಬಂಧಿಸಿದಂತೆ ನಾಳೆ(ಶುಕ್ರವಾರ) ಅಖಂಡ ಕರ್ನಾಟಕ ಬಂದ್​ಗೆ (Karnataka Bandh)ಕರೆ ನೀಡಲಾಗಿದೆ. ಈ ಬಂದ್​ಗೆ ನೂರಾರು ಸಂಘಟನೆಗಳು ಬೆಂಬಲ ನೀಡಿದ್ದು, ಬೃಹತ್ ಪ್ರತಿಭಟನೆ ಮಾಡುವ ಮೂಲಕ ಕಾಂಗ್ರೆಸ್, ರಾಜ್ಯ ಹಾಗೂ ಸುಪ್ರೀಂಕೋರ್ಟ್​ ಗಮನಸೆಳೆಯುವ ಪಯತ್ನಕ್ಕೆ ಮುಂದಾಗಿವೆ. ಆದ್ರೆ, ಬೆಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಇಂದು(ಸೆ.28) ಮಧ್ಯರಾತ್ರಿಯಿಂದಲೇ 144 ಸೆಕ್ಷನ್​ ಜಾರಿ ಮಾಡಲಾಗಿದ್ದು, ಶುಕ್ರವಾರ ದಿನವಿಡೀ ಜಾರಿಯಲ್ಲಿರಲಿದೆ.

ಇನ್ನು ಈ ಬಗ್ಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ ಪ್ರತಿಕ್ರಿಯೆ ನೀಡಿದ್ದು, ಶುಕ್ರವಾರ ಹಲವಾರು ಸಂಘಟನೆಗಳು ಕರ್ನಾಟಕ ಬಂದ್ ಗೆ ಕರೆ ನೀಡಿವೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ನಗರದಲ್ಲಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ. ನಾಳೆಯೂ ಸಹ ಪ್ರತಿಭಟನೆ ರ್ಯಾಲಿ ಮತ್ತು ಮೆರವಣಿಗೆಗೆ ಅವಕಾಶ ಇಲ್ಲ. ಇಂದು ರಾತ್ರಿ ಹನ್ನೆರಡು ಗಂಟೆಯಿಂದ ನಾಳೆ(ಸೆ.29) ರಾತ್ರಿ ಹನ್ನೆರಡು ಗಂಟೆ ವರೆಗೆ 144 ಸೆಕ್ಷನ್ ಜಾರಿಯಲ್ಲಿರಲಿದೆ. ಹೀಗಾಗಿ ಮೆರವಣಿಗೆ ಮಾಡುವುದು ಸಾರ್ವಜನಿಕ ಸಭೆ ನಿಷೇಧವಿದೆ ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿ: ಕರ್ನಾಟಕ ಬಂದ್ ಮಾಡಿದರೆ ಕಾನೂನು ಕ್ರಮ: ಸಂಘಟನೆಗಳಿಗೆ ಗೃಹ ಸಚಿವರ ಎಚ್ಚರಿಕೆ

ಸಾರ್ವಜನಿಕ ಜೀವನಕ್ಕೆ ಸಮಸ್ಯೆ ಉಂಟು ಮಾಡುವಂತಿಲ್ಲ. ಬಂದ್ ಮಾಡುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಆದೇಶ ಸಹ ಇದೆ. ಸಂಘಟನೆಗಳು ಮತ್ತು ರಾಜಕೀಯ ಪಾರ್ಟಿಗಳು ಬಂದ್ ಮಾಡುವಂತೆ ಇಲ್ಲ. ಬಂದ್ ಮಾಡಿದಾಗ ಯಾವುದೇ ನಷ್ಟ ಮತ್ತು ಆಸ್ತಿಗೆ ದಕ್ಕೆ ಉಂಟಾದರೆ ಬಂದ್ ಕರೆ ನೀಡಿದವರೇ ಹೊಣೆ. ಸಾರ್ವಜನಿಕರು ತಾವಾಗಿಯೇ ಬಂದ್ ಮಾಡಿದ್ರೆ ಸಮಸ್ಯೆ ಇಲ್ಲ. ಬದಲಾಗಿ ಬಲವಂತವಾಗಿ ಬಂದ್ ಮಾಡಿದ್ರೆ ಕಾನೂನಿನ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಖಡಕ್ ಎಚ್ಚರಿಕೆ ನೀಡಿದರು.

ನಗರದ ಎಲ್ಲಾ ಪೊಲೀಸರು ಭದ್ರತೆಯಲ್ಲಿ ಇರುತ್ತಾರೆ. ಕೆಎಸ್​ಆರ್​ಪಿ, ಹೋಮ್ ಗಾರ್ಡ್‌ ,ಆರ್​ಎಎಫ್ ಅವರು ಇರುತ್ತಾರೆ ಎಂದು ತಿಳಿಸಿದರು.

ಎಸ್‌ಪಿ ಮತ್ತು ಡಿಸಿಪಿಗಳಿಗೆ ಸೂಚನೆ

ಇನ್ನು ನಾಳಿನ ಕರ್ನಾಟಕ ಬಂದ್ ಸಲುವಾಗಿ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಅವರು ಎಲ್ಲಾ ಎಸ್‌ಪಿ ಮತ್ತು ಡಿಸಿಪಿಗಳಿಗೆ ಖಡಕ್ ಸೂಚನೆ ರವಾನಿಸಿದ್ದಾರೆ. ನಾಳೆ ಯಾವುದೇ ಕಾರಣಕ್ಕೂ ಬಲವಂತವಾಗಿ ಬಂದ್‌ ಮಾಡುಸುವಂತಿಲ್ಲ. ಸಾರ್ವಜನಿಕರಿಗೆ ತೊಂದರೆ ಕೊಟ್ಟರೆ ಕಾನೂನು ಕ್ರಮಕ್ಕೆ ಸೂಚನೆ ನೀಡಿದ್ದಾರೆ. ನಾಳಿನ ಬಂದ್‌ಗೆ ಸಕಲ ಸಿದ್ದತೆಯನ್ನ ಕೈಗೊಳ್ಳಲಾಗಿದ್ದು, ಬಲವಂತವಾಗಿ ಅಂಗಡಿ ಮುಗಟ್ಟಗಳನ್ನ ಬಂದ್ ಮಾಡಿಸಿದ್ರೆ ಕ್ರಮ ಕೈಗೊಳ್ಳಲಾಗುವುದು ಎಂದು ಎಲ್ಲಾ ಸಂಘಟನೆಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 1:32 pm, Thu, 28 September 23

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್