ಸೆ.26ರಂದು ಬೆಂಗಳೂರು ಬಂದ್ ಫಿಕ್ಸ್, ಏನಿರುತ್ತೆ? ಏನಿರಲ್ಲ? ಇಲ್ಲಿದೆ ಸಂಪೂರ್ಣ ವಿವರ

Bengaluru Bandh: ಸೆಪ್ಟೆಂಬರ್ 26ರಂದು ರಾಜ್ಯ ರಾಜಧಾನಿ ಬೆಂಗಳೂರು ಸಂಪರ್ಣ ಸ್ತಬ್ಧವಾಗಲಿದೆ. ಅಗತ್ಯ ಸೇವೆಗಳನ್ನು ಹೊರತುಪಡಿಸಿ ಬಹುತೇಕ ಸೇವೆಗಳು ಬಂದ್​ ದಿನ ಇರುವುದಿಲ್ಲ. ಹಾಗಾದರೆ ಬೆಂಗಳೂರು ಬಂದ್ ವೇಳೆ ಏನಿರುತ್ತೆ? ಏನಿರುವುದಿಲ್ಲ ಎನ್ನುವುದನ್ನು ಈ ಕೆಳಗಿನಂತಿದೆ ನೋಡಿ.

ಸೆ.26ರಂದು ಬೆಂಗಳೂರು ಬಂದ್ ಫಿಕ್ಸ್, ಏನಿರುತ್ತೆ? ಏನಿರಲ್ಲ? ಇಲ್ಲಿದೆ ಸಂಪೂರ್ಣ ವಿವರ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Sep 25, 2023 | 12:30 PM

ಬೆಂಗಳೂರು, (ಸೆಪ್ಟೆಂಬರ್ 24): ಕಾವೇರಿ ನೀರಿಗಾಗಿ(Cauvery Water Dispute) ಪ್ರತಿಭಟನೆ ಮತ್ತಷ್ಟು ತೀವ್ರಗೊಳಿಸಲು ವಿವಿಧ ಸಂಘಟನೆಗಳು ತೀರ್ಮಾನಿಸಿದ್ದು, ಸೆಪ್ಟೆಂಬರ್ 26 ಮಂಗಳವಾರ ಬೆಂಗಳೂರು ಬಂದ್(Bengaluru Bandh) ಮಾಡಲು ನಿರ್ಧರಿಸಿವೆ. ಇಂದು (ಸೆ.24) ಬೆಂಗಳೂರಿನ ಫ್ರೀಡಂ ಪಾರ್ಕ್​ನಲ್ಲಿ ನಡೆದ ಸಭೆಯಲ್ಲಿ ಕಾವೇರಿ ನೀರಿಗಾಗಿ ಬೆಂಗಳೂರು ಬಂದ್‌ಗೆ ಒಮ್ಮತದ ತೀರ್ಮಾನ ಕೈಗೊಳ್ಳಲಾಗಿದ್ದು, ವಿವಿಧ ಸಂಘಟನೆಗಳು ಬಂದ್​ಗೆ ಬೆಂಬಲ ಘೋಷಿಸಿವೆ. ಹೀಗಾಗಿ ಮಂಗಳವಾರ ಬೆಂಗಳೂರು ಸಂಪೂರ್ಣವಾಗಿ ಬಂದ್ ಆಗಲಿದೆ. ಹಾಗಾದ್ರ, ಅಂದು ಏನೆಲ್ಲ ಇರುತ್ತೆ? ಏನೇನು ಇರಲ್ಲ ಎನ್ನುವು ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ ನೋಡಿ.

ಇನ್ನು ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ನಡೆದ ಹೋರಾಟಗಾರರ ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಚಂದ್ರು, ಸೆಪ್ಟೆಂಬರ್‌ 26ರಂದು ಬೆಂಗಳೂರಿನಲ್ಲಿ ಬೆಳಗ್ಗೆ 6ರಿಂದ ಸಂಜೆ 6ಗಂಟೆವರೆಗೆ ಬಂದ್‌ ಆಚರಣೆ ಮಾಡುತ್ತೇವೆ. ಟೌನ್‌ಹಾಲ್‌ನಿಂದ ಮೈಸೂರು ಬ್ಯಾಂಕ್‌ ಸರ್ಕಲ್‌ವರೆಗೆ ರ್ಯಾಲಿ ನಡೆಸುತ್ತೇವೆ ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ: ಸೆ.26ಕ್ಕೆ ಬೆಂಗಳೂರು ಬಂದ್ ಫಿಕ್ಸ್?: ರಸ್ತೆಗಳಿಯಲ್ಲ ಬಸ್, ಓಲಾ, ಉಬರ್; ಯಾರ್ಯಾರ ಬೆಂಬಲ?

ಸೆ.26ರ ಬೆಂಗಳೂರು ಬಂದ್​ಗೆ ಖಾಸಗಿ ಸಾರಿಗೆ ಸಂಘಟನೆ, ಬಂದ್‌ಗೆ ಶಾಲಾ ಮಕ್ಕಳ ಪೋಷಕರ ಸಂಘಟನೆ, ಆಟೋ ಚಾಲಕರ ಸಂಘ, ಖಾಸಗಿ ಶಾಲಾ ಒಕ್ಕೂಟ, ಐಟಿ-ಬಿಟಿ ಕನ್ನಡ ಬಳಗ, ಕೆಎಸ್​ಆರ್​ಟಿಸಿ, ಬಿಎಂಟಿಸಿ ಚಾಲಕ ಅಸೋಸಿಯೇಷನ್​ ಸೇರಿದಂತೆ ಹಲವು ಸಂಘ, ಸಂಸ್ಥೆಗಳು ಬಂದ್​ಗೆ ಬೆಂಬಲ ಸೂಚಿಸಿವೆ. ಹೀಗಾಗಿ ಮಂಗಳವಾರ ಬೆಂಗಳೂರು ಸಂಪೂರ್ಣ ಸ್ತಬ್ಧವಾಗುವುದು ಗ್ಯಾರಂಟಿಯಾಗಿದೆ.

ಏನಿರುತ್ತೆ?

* ಆಂಬುಲೆನ್ಸ್ ಸೇವೆ * ತರಕಾರಿ, ಹಾಲು * ಮೆಡಿಕಲ್ಸ್ * ಆಸ್ಪತ್ರೆ * ಬ್ಯಾಂಕ್ * ನಮ್ಮ ಮೆಟ್ರೋ

ಏನಿರಲ್ಲ?

* ಆಟೋ * ಮ್ಯಾಕ್ಸಿ ಕ್ಯಾಬ್ * ಹೋಟೆಲ್ * ಬಿಎಂಟಿಸಿ, ಕೆಎಸ್​ಆರ್​ಟಿಸಿ * ಲಾರಿ * ಚಿಕ್ಕಪೇಟೆಯಲ್ಲಿ ವ್ಯಾಪಾರ ವಹಿವಾಟು * ಓಲಾ, ಊಬರ್ * ಬಿಬಿಎಂಪಿ * ಖಾಸಗಿ ಶಾಲೆ, ಕಾಲೇಜುಗಳು

ಸರ್ಕಾರಿ ಶಾಲೆಗಳ ರಜೆ ಬಗ್ಗೆ ಗೊಂದಲ

ಮಂಗಳವಾರದ ಬಂದ್​ಗೆ ಶಿಕ್ಷಣ ಇಲಾಖೆಯಿಂದ ನಿರ್ಧಾರ ಪ್ರಕಟವಾಗಿಲ್ಲ. ಹೀಗಾಗಿ ಸರ್ಕಾರಿ ಶಾಲೆಗಳು ಕಾರ್ಯ ನಿರ್ವಹಿಸುವ ಸಾಧ್ಯತೆ ಇದೆ. ಆದರೆ ನಾಳೆಯ ಬಂದ್ ತೀವ್ರತೆ ಮೇಲೆ ನಿರ್ಧಾರ ಕೈಗೊಳ್ಳಲಾಗುತ್ತೆ. ಮಂಗಳವಾರ ಸರ್ಕಾರಿ ಶಾಲೆಗೆ ರಜೆ ಬಗ್ಗೆ ಯಾವುದೇ ನಿರ್ಧಾರವಿಲ್ಲ. ಸರ್ಕಾರಿ ಶಾಲೆಗಳು ಇರುತ್ತಾ ಇಲ್ವಾ ಎಂಬ ಗೊಂದಲದಲ್ಲಿ ಶಾಲಾ ಮಕ್ಕಳಿದ್ದಾರೆ. ಇನ್ನು ಸರ್ಕಾರಿ ಕಚೇರಿಗಳು ಓಪನ್ ಇರಲಿವೆಯಾ ಎನ್ನುವ ಬಗ್ಗೆ ಇನ್ನೂ ಮಾಹಿತಿ ತಿಳಿದುಬಂದಿಲ್ಲ. ಈ ಬಗ್ಗೆ ಸೋಮವಾರ ಸರ್ಕಾರಿ ಶಾಲೆ ಹಾಗೂ ಕಚೇರಿಗಳ ಇರುತ್ತವೆಯೋ ಇಲ್ವೋ ಎನ್ನುವ ಸೋಮವಾರ ಸ್ಪಷ್ಟವಾಗಿ ತಿಳಿಯಲಿದೆ.

ಒಟ್ಟಿನಲ್ಲಿ ಸೆಪ್ಟೆಂಬರ್ 26ರಂದು ಬೆಂಗಳೂರು ಬಂದ್​ಗೆ ನೂರಾರು ಸಂಘ-ಸಂಸ್ತೆಗಳು ಬೆಂಬಲ ಘೋಷಿಸಿದ್ದರಿಂದ ರಾಜಧಾನಿ ಸ್ತಬ್ಧವಾಗುಗುವುದು ಗ್ಯಾರಂಟಿ. ಹಾಗಾಗಿ ಸಾರ್ವಜನಿಕರು ಮಂಗಳವಾರ ಕಾರ್ಯಕ್ರಮಗಳನ್ನು ಮುಂದೂಡುವುದು ಒಳಿತು.

Published On - 5:17 pm, Sun, 24 September 23

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್