AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾವೇರಿ ಜಲ ವಿವಾದ: CWRC ಆದೇಶದ ವಿರುದ್ಧ CWMAಗೆ ಮೇಲ್ಮನವಿ ಸಲ್ಲಿಸಲು ಕರ್ನಾಟಕ ನಿರ್ಧಾರ

Cauvery Row: ಕಾವೇರಿ ನೀರು ನಿಯಂತ್ರಣ ಸಮಿತಿಯು (CWRC) ತಮಿಳುನಾಡಿಗೆ ಮುಂದಿನ 15 ದಿನಗಳ ಕಾಲ 3,500 ಕ್ಯೂಸೆಕ್ ನೀರು ಹರಿಸುವಂತೆ ನೀಡಿರುವ ಆದೇಶದ ವಿರುದ್ಧ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ (CWMA) ಮೇಲ್ಮನವಿ ಸಲ್ಲಿಸಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ. ವಿಧಾನಸೌಧದ ಸಚಿವರ ಕೊಠಡಿಯಲ್ಲಿ ಜಲಸಂಪನ್ಮೂಲ ಸಚಿವ ರಾಮಲಿಂಗಾ ರೆಡ್ಡಿ ನೇತೃತ್ವದ ಸಭೆಯಲ್ಲಿ ಈ ಬಗ್ಗೆ ನಿರ್ಧರಿಸಲಾಗಿದ್ದು, ನಮ್ಮಲ್ಲೇ ಶೇ. 66ರಷ್ಟು ಮಳೆ ಕಡಿಮೆ ಆಗಿದೆ ಎಂದು ಸಚಿವರು ತಿಳಿಸಿದ್ದಾರೆ.

ಕಾವೇರಿ ಜಲ ವಿವಾದ: CWRC ಆದೇಶದ ವಿರುದ್ಧ CWMAಗೆ ಮೇಲ್ಮನವಿ ಸಲ್ಲಿಸಲು ಕರ್ನಾಟಕ ನಿರ್ಧಾರ
CWMAಗೆ ಮೇಲ್ಮನವಿ ಸಲ್ಲಿಸಲು ಕರ್ನಾಟಕ ನಿರ್ಧಾರImage Credit source: Tv9 Kannada
Anil Kalkere
| Edited By: |

Updated on:Jul 29, 2026 | 6:58 PM

Share

ಮುಖ್ಯಾಂಶಗಳು

  • ಕರ್ನಾಟಕದಲ್ಲಿ ತಾರಕಕ್ಕೇರಿದ ಕಾವೇರಿ ಜಲ ವಿವಾದ
  • CWRC ಆದೇಶದ ವಿರುದ್ಧ CWMAಗೆ ಮೇಲ್ಮನವಿಗೆ ನಿರ್ಧಾರ
  • ಸಚಿವ ರಾಮಲಿಂಗಾರೆಡ್ಡಿ ನೇತೃತ್ವದ ಸಭೆಯಲ್ಲಿ ತೀರ್ಮಾನ

ಬೆಂಗಳೂರು, ಜುಲೈ 29: ಕರ್ನಾಟಕದಲ್ಲಿಯೇ ಭೀಕರ ಬರದ ಸ್ಥಿತಿ ಇರುವ ನಡುವೆ ಕೆಆರ್​​ಎಸ್​​ ಜಲಾಶಯದಿಂದ ತಮಿಳುನಾಡಿಗೆ ಮುಂದಿನ‌ 15 ದಿನ 3,500 ಕ್ಯೂಸೆಕ್ ನೀರು ಹರಿಸಲು ಕಾವೇರಿ ನೀರು ನಿಯಂತ್ರಣ ಸಮಿತಿ ಕರ್ನಾಟಕಕ್ಕೆ ಸೂಚಿಸಿದೆ. ಈ ಬೆನ್ನಲ್ಲೇ ರಾಜ್ಯದಲ್ಲಿ ಆಕ್ರೋಶ ಭುಗಿಲೆದ್ದಿದ್ದು, ನೀರು ಬಿಟ್ಟರೆ ತೀವ್ರ ಹೋರಾಟ ಎಚ್ಚರಿಕೆಯನ್ನು ರೈತರು ಸರ್ಕಾರಕ್ಕೆ ನೀಡಿದ್ದಾರೆ. ಹೀಗಾಗಿ ವಿಧಾನಸೌಧದ ಸಚಿವರ ಕೊಠಡಿಯಲ್ಲಿ ಜಲಸಂಪನ್ಮೂಲ ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ ನಡೆಸಿದ್ದು, ಮೀಟಿಂಗ್​​ನಲ್ಲಿ CWRC ಆದೇಶದ ವಿರುದ್ಧ CWMAಗೆ ಮೇಲ್ಮನವಿ ಸಲ್ಲಿಸಲು ತೀರ್ಮಾನಿಸಲಾಗಿದೆ.

ಮಹತ್ವದ ಚರ್ಚೆ

ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುವ ವಿಚಾರ ಸಂಬಂಧ ಒಂದು ಕಡೆ ದೆಹಲಿಯಲ್ಲಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಭೆ ಮಾಡಿದ್ದರೆ, ಇತ್ತ ವಿಧಾನಸೌಧದಲ್ಲಿ ಜಲಸಂಪನ್ಮೂಲ ಸಚಿವ ರಾಮಲಿಂಗರೆಡ್ಡಿ ಮೀಟಿಂಗ್​​ ನಡೆಸಿದ್ದರು. ನೀರಾವರಿ ಇಲಾಖೆಯ ಹಿರಿಯ ಅಧಿಕಾರಿಗಳು, ಕಾವೇರಿ ಜಲಾನಯನದ ಅಧಿಕಾರಿಗಳು ಹಾಗೂ ವಕೀಲರ ಜೊತೆ ಮಹತ್ವದ ಚರ್ಚೆ ನಡೆದಿದ್ದು, KRS ಡ್ಯಾಂನಲ್ಲಿ ಹಾಲಿ ಲಭ್ಯವಿರುವ ನೀರಿನ ಬಗ್ಗೆ ಸಚಿವರು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ: ಪರಿಸ್ಥಿತಿ ಅರ್ಥ ಮಾಡಿಕೊಳ್ಳದೇ ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿದ್ದು ಸರಿಯಲ್ಲ: ದರ್ಶನ ಪುಟ್ಟಣಯ್ಯ

ಸಭೆ ಮುಕ್ತಾಯದ ಬೆನ್ನಲ್ಲೇ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿರುವ ರಾಮಲಿಂಗಾರೆಡ್ಡಿ, ಸದ್ಯ 46 ಟಿಎಂಸಿ ನೀರು ಮಾತ್ರ ಲಭ್ಯವಿದೆ, ಇದರಲ್ಲಿ 10 ಜಿಲ್ಲೆಗೆ ಕುಡಿಯೋಕೆ 12 ಟಿಎಂಸಿ ನೀರು ಬೇಕಾಗುತ್ತೆ. ಹೀಗಾಗಿ CWRC ಆದೇಶ ಪಾಲಿಸಲು ಸಾಧ್ಯವಿಲ್ಲದ ಕಾರಣ, ಮೇಲ್ಮನವಿ ಸಲ್ಲಿಸಲು ನಿರ್ಧಾರ ಮಾಡಿದ್ದೇವೆ. ಇಂದೇ ಅದನ್ನು ಸಲ್ಲಿಸುತ್ತೇವೆ. ಅವರ ಲೆಕ್ಕದ ಪ್ರಕಾರ 39 ಟಿಎಂಸಿ ನೀರು ಬಿಡಬೇಕಿತ್ತು. ಸುಗಮವಾಗಿ ಮಳೆ ಬಂದಿದ್ರೆ ಮಾತ್ರ ಕೇಳಿದಷ್ಟು ಕೊಡಬೇಕಿತ್ತು. ಹೀಗಾಗಿನಮ್ಮ ವಾದವನ್ನ ಶ್ರೀರಾಮಯ್ಯನವರು ಮುಂದುವರಿಸುತ್ತಾರೆ. ನಮ್ಮಲ್ಲೇ ಶೇ. 66ರಷ್ಟು ಮಳೆ ಕಡಿಮೆ ಆಗಿದೆ ಎಂದವರು ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 2:06 pm, Wed, 29 July 26

Follow Us