ತಮಿಳುನಾಡಿಗೆ ಮತ್ತೆ ಕಾವೇರಿ ನೀರು: ಕರ್ನಾಟಕಕ್ಕೆ ಮತ್ತೊಂದು ದೊಡ್ಡ ಆಘಾತ; ಹೆಚ್​ಡಿ ಕುಮಾರಸ್ವಾಮಿ

| Updated By: ಕಿರಣ್ ಹನುಮಂತ್​ ಮಾದಾರ್

Updated on: Oct 11, 2023 | 6:02 PM

ಒಂದು ಕಡೆ ವಿದ್ಯುತ್ ಆಘಾತದಿಂದ ರೈತರು ಕಂಗೆಟ್ಟಿದ್ದಾರೆ, ಮತ್ತೊಂದೆಡೆ ಕಾವೇರಿ ಬವಣೆ ರಾಜ್ಯವನ್ನು ಹಿಂಡಿಹಿಪ್ಪೆ ಮಾಡುತ್ತಿದೆ. ಕನ್ನಡಿಗರ ಕಣ್ಣೀರು ಹರಿದರೂ ಚಿಂತೆ ಇಲ್ಲ, ತಮಿಳುನಾಡಿಗೆ ನೀರು ಹರಿಯಲಿ ಎನ್ನುವ ಮನಸ್ಥಿತಿಯಲ್ಲಿ ಸರ್ಕಾರವಿದೆ. ತಮಿಳುನಾಡಿಗೆ ನೀರು ಬಿಡಲ್ಲ ಎನ್ನುವ ಎದೆಗಾರಿಕೆ ಸರ್ಕಾರಕ್ಕೆ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಟ್ವೀಟ್​ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಮಿಳುನಾಡಿಗೆ ಮತ್ತೆ ಕಾವೇರಿ ನೀರು: ಕರ್ನಾಟಕಕ್ಕೆ ಮತ್ತೊಂದು ದೊಡ್ಡ ಆಘಾತ; ಹೆಚ್​ಡಿ ಕುಮಾರಸ್ವಾಮಿ
ಹೆಚ್​ಡಿ ಕುಮಾರಸ್ವಾಮಿ
Follow us on

ಬೆಂಗಳೂರು, ಅ.11: ಮಳೆಯ ಕೊರತೆಯಿಂದ ಜಲಾಶಯಗಳೆಲ್ಲ ಖಾಲಿ ಆಗಿದ್ದರೂ ಕರ್ನಾಟಕಕ್ಕೆ ಬರೆಯ ಮೇಲೆ ಬರೆ ಎಳೆಯಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ (HD Kumaraswamy)ಅವರು ಟ್ವೀಟ್​ ಮೂಲಕ ಹೇಳಿದ್ದಾರೆ. ಹೌದು, ಇಂದು(ಅ.11) ನವದೆಹಲಿಯಲ್ಲಿ ಕಾವೇರಿ ಜಲ ನಿಯಂತ್ರಣ ಸಮಿತಿ ಸಭೆಯಲ್ಲಿ ಮತ್ತೆ 15 ದಿನ ತಮಿಳುನಾಡಿಗೆ ಪ್ರತಿನಿತ್ಯ 3000 ಕ್ಯೂಸೆಕ್​ ನೀರು ಹರಿಸಲು CWRC ಆದೇಶ ಹೊರಡಿಸಿದೆ. ಇದು ಕರ್ನಾಟಕಕ್ಕೆ ಮತ್ತೊಂದು ದೊಡ್ಡ ಆಘಾತವಾಗಿದೆ ಎಂದಿದ್ದಾರೆ.

ಒಂದೆಡೆ ರೈತರಿಗೆ ವಿದ್ಯುತ್ ಆಘಾತ, ಇನ್ನೊಂದೆಡೆ ಕಾವೇರಿ ಬವಣೆ

ಹೌದು, ಒಂದು ಕಡೆ ವಿದ್ಯುತ್ ಆಘಾತದಿಂದ ರೈತರು ಕಂಗೆಟ್ಟಿದ್ದಾರೆ, ಮತ್ತೊಂದೆಡೆ ಕಾವೇರಿ ಬವಣೆ ರಾಜ್ಯವನ್ನು ಹಿಂಡಿಹಿಪ್ಪೆ ಮಾಡುತ್ತಿದೆ. ಕನ್ನಡಿಗರ ಕಣ್ಣೀರು ಹರಿದರೂ ಚಿಂತೆ ಇಲ್ಲ, ತಮಿಳುನಾಡಿಗೆ ನೀರು ಹರಿಯಲಿ ಎನ್ನುವ ಮನಸ್ಥಿತಿಯಲ್ಲಿ ಸರ್ಕಾರವಿದೆ. ತಮಿಳುನಾಡಿಗೆ ನೀರು ಬಿಡಲ್ಲ ಎನ್ನುವ ಎದೆಗಾರಿಕೆ ಸರ್ಕಾರಕ್ಕೆ ಇಲ್ಲ. ಮಳೆಯ ಕೊರತೆಯಿಂದ ರಾಜ್ಯದ ಜಲಾಶಯಗಳೆಲ್ಲ ಖಾಲಿ ಆಗಿವೆ. ಕರ್ನಾಟಕಕ್ಕೆ ಬರೆಯ ಮೇಲೆ ಬರೆ ಎಳೆಯಲಾಗುತ್ತಿದೆ. ಇಂತಹ ಜಲಾಘಾತಗಳನ್ನು ಕೊಡುವುದಕ್ಕಾಗಿಯೇ ಪ್ರಾಧಿಕಾರ ಮತ್ತು ನಿಯಂತ್ರಣ ಸಮಿತಿಗಳನ್ನು ರಚನೆ ಮಾಡಲಾಗಿದೆಯೇ?. ಈ ಆದೇಶಗಳು ಸಂವಿಧಾನ, ಒಕ್ಕೂಟದ ಆಶಯಗಳಿಗೆ ವಿರುದ್ಧವಾಗಿವೆ. ಮಾತ್ರವಲ್ಲ ಕನ್ನಡಿಗರ ತಾಳ್ಮೆ, ಸಹನೆ ಪರೀಕ್ಷೆ ಮಾಡುವಂತಿವೆ ಎಂದು ಆಕ್ರೋಶ ಹೊರ ಹಾಕಿದ್ದಾರೆ.

ಇದನ್ನೂ ಓದಿ:ತಮಿಳುನಾಡಿಗೆ ಮತ್ತೆ ನೀರು ಹರಿಸಲು ಆದೇಶ; ಸಂಸದೆ ಸುಮಲತಾ ಅಂಬರೀಶ್​ ಹೇಳಿದ್ದಿಷ್ಟು

CWRC ಆದೇಶ ಕರ್ನಾಟಕದ ಹಿತಾಸಕ್ತಿಗೆ ಮರಣಶಾಸನವಾಗಿದೆ

ಬೆಂಗಳೂರಿನ ಜನ ಕುಡಿಯುವ ನೀರಿನ ಬಿಕ್ಕಟ್ಟು ಎದುರಿಸುತ್ತಿದ್ದಾರೆ. ಕಾವೇರಿ ಕೊಳ್ಳದಲ್ಲಿ ಒಂದು ಬೆಳೆಗೂ ಸಮರ್ಪಕವಾಗಿ ನೀರು ಹರಿದಿಲ್ಲ. ಈ ಆದೇಶ ಸಮಾನ ನ್ಯಾಯ ತತ್ವವನ್ನು ನಾಮಾವಶೇಷ ಮಾಡಿದೆ. ಕನ್ನಡಿಗರೂ ಮನುಷ್ಯರೇ, ಅವರಿಗೂ ಅನ್ನ, ನೀರು ಬೇಕು. ಅವರೂ ಒಕ್ಕೂಟ ವ್ಯವಸ್ಥೆಯ ಭಾಗ ಎನ್ನುವುದನ್ನು ಮರೆತಿರುವಂತಿದೆ. ರಾಜ್ಯ ಸರ್ಕಾರದಿಂದ ಕಾವೇರಿ ಹಿತರಕ್ಷಣೆ ಸಾಧ್ಯವಾಗಿಲ್ಲ. ಜನರು ಸಂಘಟಿತರಾಗಿ ತಮ್ಮ ಹಕ್ಕುಗಳನ್ನು ರಕ್ಷಿಸಿಕೊಳ್ಳಬೇಕು. ಕರ್ನಾಟಕದ ಜನರ ಜೊತೆ ನಾವಿದ್ದೇವೆ, ನಮ್ಮ ಪಕ್ಷವೂ ಇದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ