ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿಂದು ಸರ್ವಪಕ್ಷ ಸಭೆ; ಬಿಜೆಪಿ, ಜೆಡಿಎಸ್ ಮಾಜಿ ಸಿಎಂಗಳಿಗೆ ಆಹ್ವಾನ

ಕಾವೇರಿ, ಮಹದಾಯಿ, ಕಳಸಾ ಬಂಡೂರಿ ವಿಚಾರವಾಗಿ ಇಂದು ಸರ್ವಪಕ್ಷ ಸಭೆ ಕರೆಯಲಾಗಿದೆ. ಸರ್ವಪಕ್ಷ ಸಭೆಗೆ ಬಿಜೆಪಿಯ ಮೂವರು ಮಾಜಿ ಸಿಎಂಗಳಿಗೆ ಆಹ್ವಾನ ನೀಡಲಾಗಿದೆ. ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಜೀರ್ ಅಹ್ಮದ್​ ಅವರು ನಿವಾಸಕ್ಕೆ ತೆರಳಿ ಮಾಜಿ ಸಿಎಂಗಳಾದ ಬಿಎಸ್​​ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಅವರನ್ನು ಆಹ್ವಾನಿಸಿದ್ದು ದೂರವಾಣಿ ಕರೆ ಮೂಲಕ ಡಿ.ವಿ.ಸದಾನಂದಗೌಡಗೆ ಸಭೆಗೆ ಆಹ್ವಾನಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿಂದು ಸರ್ವಪಕ್ಷ ಸಭೆ; ಬಿಜೆಪಿ, ಜೆಡಿಎಸ್ ಮಾಜಿ ಸಿಎಂಗಳಿಗೆ ಆಹ್ವಾನ
ಸಿದ್ದರಾಮಯ್ಯ(ಸಂಗ್ರಹ ಚಿತ್ರ)
Follow us
TV9 Web
| Updated By: ಆಯೇಷಾ ಬಾನು

Updated on: Aug 23, 2023 | 7:09 AM

ಬೆಂಗಳೂರು, ಆಗಸ್ಟ್ 23: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ(Cauvery Water Dispute) ಆಡಳಿತ ಪಕ್ಷ ಕಾಂಗ್ರೆಸ್(Congress) ಮತ್ತು ಪ್ರತಿಪಕ್ಷ ಬಿಜೆಪಿ(BJP) ನಡುವೆ ಆರೋಪ ಪ್ರತ್ಯಾರೋಪಗಳು ನಡೆಯುತ್ತಿವೆ. ರಾಜ್ಯದ ಹಲವೆಡೆ ಈ ವಿಚಾರಕ್ಕೆ ಪ್ರತಿಭಟನೆಗಳು ಕೂಡ ನಡೆಯುತ್ತಿವೆ. ಮತ್ತೊಂದೆಡೆ ಕೆಆರ್‌ಎಸ್ ಜಲಾಶಯದ(KRS Dam) ನೀರಿನ ಮಟ್ಟ ಕುಸಿಯುತ್ತಿದ್ದು ತಮಿಳುನಾಡಿಗೆ ನೀರು ಬಿಡಲು ಸಾಧ್ಯವಿಲ್ಲ ಎಂದು ರಾಜ್ಯ ಸರ್ಕಾರ ಸುಪ್ರೀಂಕೋರ್ಟ್‌ ಮೊರೆ ಹೋಗಿದ್ದು ಹೊಸ ಪೀಠ ರಚಿಸುವುದಾಗಿ ಸುಪ್ರೀಂಕೋರ್ಟ್ ಹೇಳಿದೆ. ಇನ್ನು ಕಾವೇರಿ, ಮಹದಾಯಿ, ಕಳಸಾ ಬಂಡೂರಿ ವಿಚಾರವಾಗಿ ಇಂದು ಸರ್ವಪಕ್ಷ ಸಭೆ ಕರೆಯಲಾಗಿದೆ. ವಿಧಾನಸೌಧದಲ್ಲಿ CM ಸಿದ್ದರಾಮಯ್ಯ(Siddaramaiah) ನೇತೃತ್ವದಲ್ಲಿ ಸರ್ವಪಕ್ಷ ಸಭೆ ನಡೆಯಲಿದೆ.

ಸರ್ವಪಕ್ಷ ಸಭೆಗೆ ಬಿಜೆಪಿಯ ಮೂವರು ಮಾಜಿ ಸಿಎಂಗಳಿಗೆ ಆಹ್ವಾನ ನೀಡಲಾಗಿದೆ. ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಜೀರ್ ಅಹ್ಮದ್​ ಅವರು ನಿವಾಸಕ್ಕೆ ತೆರಳಿ ಮಾಜಿ ಸಿಎಂಗಳಾದ ಬಿಎಸ್​​ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಅವರನ್ನು ಆಹ್ವಾನಿಸಿದ್ದು ದೂರವಾಣಿ ಕರೆ ಮೂಲಕ ಡಿ.ವಿ.ಸದಾನಂದಗೌಡಗೆ ಸಭೆಗೆ ಆಹ್ವಾನಿಸಿದ್ದಾರೆ. ಮಾಜಿ ಪ್ರಧಾನಿ ಹೆಚ್​​.ಡಿ.ದೇವೇಗೌಡ, ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ, ಮಾಜಿ ಸಚಿವ ಗೋವಿಂದ ಕಾರಜೋಳರನ್ನೂ ಸಭೆಗೆ ಕರೆಯಲಾಗಿದೆ.

ಇದನ್ನೂ ಓದಿ: ತಮಿಳುನಾಡುಗೆ ಕಾವೇರಿ ನೀರು ಬಿಡುಗಡೆ ವಿರೋಧಿಸಿ ಪ್ರತಿಭಟನೆ, ಸಿಎಂ ಸಿದ್ದರಾಮಯ್ಯ ಮತ್ತು ಸರ್ಕಾರವನ್ನು ಶಪಿಸಿದ ರೈತ ಮಹಿಳೆ!

ತಮಿಳುನಾಡಿಗೆ ಕಾವೇರಿ ನೀರು ಬಿಡುವ ವಿಚಾರ ರಾಜಕೀಯ ವಲಯದಲ್ಲಿ ಆರೋಪ-ಪ್ರತ್ಯಾರೋಪ, ಪ್ರತಿಭಟನೆಗೆ ಕಾರಣವಾಗಿದೆ. ರಾಜ್ಯದಲ್ಲಿ ಮುಂಗಾರು ಮಳೆ ಕೈ ಕೊಟ್ಟ ಕಾರಣ ರಾಜ್ಯದ ಬಹುತೇಕ ಡ್ಯಾಂಗಳಲ್ಲಿ ನೀರಿನ ಮಟ್ಟ ಕುಸಿದಿದೆ. ಇದರಿಂದ ರಾಜ್ಯಕ್ಕೆ ನೀರಿನ ಸಮಸ್ಯೆಯ ಭೀತಿ ಇದೆ. ಇಂತಹ ಪರಿಸ್ಥಿತಿಯಲ್ಲಿ ತಮಿಳುನಾಡಿಗೆ ಕಾವೇರಿ ನೀರು ಹರಿಸುವುದು ಸೂಕ್ತವಲ್ಲ ಎಂದು ಬಿಜೆಪಿ ಆಕ್ಷೇಪ ವ್ಯಕ್ತಪಡಿಸಿದೆ. ರಾಜ್ಯದ ಕೆಲವು ಕಡೆ ಬಿಜೆಪಿ, ರೈತರು ಈ ವಿಚಾರವಾಗಿ ಪ್ರತಿಭಟನೆಗಳನ್ನು ಮಾಡುತ್ತಿದ್ದಾರೆ.

ಡಿಸಿಎಂ ಡಿಕೆ ಶಿವಕುಮಾರ್ ಸಭೆ ಸಂಬಂಧ ಟ್ವೀಟ್ ಮಾಡಿದ್ದು ಬುಧವಾರ ಸಭೆ ಕರೆಯಲಾಗಿದೆ, ಸಭೆಯಲ್ಲಿ ಏನು ತೀರ್ಮಾನ ಆಗುತ್ತದೆಯೋ ಅದರಂತೆ ಹೋಗುತ್ತೀವಿ. ಸರ್ವಪಕ್ಷ ನಿಯೋಗ ಹೋಗಲು ಸೂಚಿಸಿದರೆ ಅದಕ್ಕೂ ಸಿದ್ಧ ಎಂದಿದ್ದಾರೆ.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ