
ನವದೆಹಲಿ/ಬೆಂಗಳೂರು, ಸೆಪ್ಟೆಂಬರ್ 24: ತೀವ್ರ ಬರದ ಸ್ಥಿತಿಯ ನಡುವೆಯೂ ತಮಿಳುನಾಡಿಗೆ ಮುಂದಿನ 15 ದಿನಗಳವರೆಗೆ ನಿತ್ಯ 4 ಸಾವಿರ ಕ್ಯೂಸೆಕ್ ನೀರು ಹರಿಸಲು ಕಾವೇರಿ ನೀರು ನಿಯಂತ್ರಣ ಸಮಿತಿ (ಸಿಡಬ್ಲ್ಯೂಆರ್ಸಿ) ಶಿಫಾರಸು ಮಾಡಿದೆ. ಆ ಮೂಲಕ ಈಗಾಗಲೇ ನೀರಿನ ಭೀಕರ ಅಭಾವದಿಂದ ಕಂಗೆಟ್ಟಿರುವ ಕರ್ನಾಟಕಕ್ಕೆ ಗಾಯದ ಮೇಲೆ ಬರೆ ಎಳೆದಿದೆ. ಕಾವೇರಿ ನದಿ ನೀರು ಹಂಚಿಕೆ ವಿಚಾರ ಸಂಬಂಧ ದೆಹಲಿಯ ಕಚೇರಿಯಲ್ಲಿ ವಿನೀತ್ ಗುಪ್ತಾ ನೇತೃತ್ವದಲ್ಲಿ ನಡೆದ ಮಹತ್ವದ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ.
ತಮಿಳುನಾಡಿಗೆ ನಿತ್ಯ 4,000 ಕ್ಯೂಸೆಕ್ ನೀರು ಹರಿಸಲು ಶಿಫಾರಸು ವಿಚಾರ ಸಂಬಂಧ ಪ್ರತಿಕ್ರಿಯಿಸಿರುವ ಸಿಎಂ ಡಿಕೆ ಶಿವಕುಮಾರ್, ಕಾವೇರಿ ಜಲಾಶಯಗಳಲ್ಲಿ ಒಳಹರಿವು ಕಡಿಮೆಯಾಗಿದೆ. ಹೀಗಾಗಿ ಸಿಡಬ್ಲ್ಯುಆರ್‌ಸಿ ಶಿಫಾರಸು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲಾಗುವುದು. ನಮ್ಮ ಮೇಲೆ ಒತ್ತಡ ಇದೆ, ಆದರೆ ಮಳೆ ಬರುತ್ತಿಲ್ಲ. ಸಂಜೆ ಈ ಬಗ್ಗೆ ಚರ್ಚೆ ನಡೆಸುತ್ತೇನೆ ಎಂದು ಅವರು ತಿಳಿಸಿದ್ದಾರೆ.
ಇದನ್ನೂ ಓದಿ: ಕಾವೇರಿ ಜಲ ವಿವಾದ: CWMA ಆದೇಶ ಪಾಲನೆ ಮುಂದುವರಿಸಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ
ಮತ್ತೊಂದೆಡೆ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುವ ವಿಚಾರ ಸಂಬಂಧ ಸುಪ್ರೀಂಕೋರ್ಟ್ನಲ್ಲಿಯೂ ಅರ್ಜಿ ವಿಚಾರಣೆ ನಡೆಯುತ್ತಿದೆ. CWMA ಆದೇಶ ಪಾಲನೆ ಮುಂದುವರಿಸಲು ಕರ್ನಾಟಕ್ಕೆ ನ್ಯಾಯಾಲಯ ಸೂಚನೆ ನೀಡಿದ್ದು, ತಮಿಳುನಾಡಿನ ಆಕ್ಷೇಪಕ್ಕೆ ಒಂದು ವಾರದಲ್ಲಿ ಅಫಿಡವಿಟ್ ಸಲ್ಲಿಸಲು ತಿಳಿಸಿ ಮುಂದಿನ ವಿಚಾರಣೆಯನ್ನು ಅಕ್ಟೋಬರ್ 12ಕ್ಕೆ ಮುಂದೂಡಿಕೆ ಮಾಡಿದೆ. ಕರ್ನಾಟಕ ಎಲ್ಲಾ ನೀರನ್ನು ಬಳಸಿಕೊಳ್ಳುತ್ತಿದೆ ಎಂದು ತಮಿಳುನಾಡು ಆರೋಪಿಸಿದರೆ, ಇದಕ್ಕೆ ಪ್ರತಿಯಾಗಿ ರಾಜ್ಯದಲ್ಲಿ ಬರ ಪರಿಸ್ಥಿತಿ ಎದುರಾಗಿದೆ ಎಂದು ಕರ್ನಾಟಕ ಕೋರ್ಟ್ ಗಮನಕ್ಕೆ ತಂದಿದೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 1:20 pm, Thu, 24 September 26