AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡಿಗೆ 6 ಸಾವಿರ ಕ್ಯೂಸೆಕ್ ನೀರು ಹರಿಸುವ ಆದೇಶ ಮಾರ್ಪಾಡಿಗೆ ಆಗ್ರಹಿಸಿ CWMAಗೆ ಕರ್ನಾಟಕ ಮೇಲ್ಮನವಿ

ತಮಿಳುನಾಡಿಗೆ ದಿನಕ್ಕೆ 6 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ನೀಡಿದ್ದ ಆದೇಶವನ್ನು 3 ಸಾವಿರ ಕ್ಯೂಸೆಕ್‌ಗೆ ಇಳಿಸುವಂತೆ ಆಗ್ರಹಿಸಿ ಕರ್ನಾಟಕ ಸರ್ಕಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ (CWMA) ಮೇಲ್ಮನವಿ ಸಲ್ಲಿಸಿದೆ. ಕಾವೇರಿ ಕೊಳ್ಳದ 4 ಡ್ಯಾಮ್​ಗಳ ಒಳ ಹರಿವಿನಲ್ಲಿ ಭಾರಿ ಇಳಿಕೆ ಕಂಡುಬಂದಿರುವ ಹಿನ್ನೆಲೆ ಹೆಚ್ಚುವರಿ ಹೊರಹರಿವು ಸಾಧ್ಯವಿಲ್ಲ ಎಂದು ಸಿಡಬ್ಲ್ಯಎಂಎಗೆ ಕರ್ನಾಟಕ ತಿಳಿಸಿದೆ.

ತಮಿಳುನಾಡಿಗೆ 6 ಸಾವಿರ ಕ್ಯೂಸೆಕ್ ನೀರು ಹರಿಸುವ ಆದೇಶ ಮಾರ್ಪಾಡಿಗೆ ಆಗ್ರಹಿಸಿ CWMAಗೆ ಕರ್ನಾಟಕ ಮೇಲ್ಮನವಿ
CWMAಗೆ ಕರ್ನಾಟಕ ಮೇಲ್ಮನವಿImage Credit source: PTI
ಪ್ರಸನ್ನ ಹೆಗಡೆ
|

Updated on: Sep 16, 2026 | 4:50 PM

Share

ಬೆಂಗಳೂರು/ ನವದೆಹಲಿ, ಸೆಪ್ಟೆಂಬರ್​​ 16: ನೆರೆ ರಾಜ್ಯ ತಮಿಳುನಾಡಿಗೆ 6 ಸಾವಿರ ಕ್ಯೂಸೆಕ್ ನೀರು ಹರಿಸುವ ಆದೇಶ ಮಾರ್ಪಾಡಿಗೆ ಆಗ್ರಹಿಸಿ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಕರ್ನಾಟಕ ಮೇಲ್ಮನವಿ ಸಲ್ಲಿಸಿದೆ. ಸೆ.15ರ ವೇಳೆಗೆ ಕಾವೇರಿ ಕೊಳ್ಳದ 4 ಡ್ಯಾಮ್​ಗಳಲ್ಲಿ 55.389 ಟಿಎಂಸಿ ನೀರು ಮಾತ್ರ ಸಂಗ್ರಹವಿದೆ. 4 ಜಲಾಶಯಗಳ ಗರಿಷ್ಠ ಸಂಗ್ರಹ ಸಾಮರ್ಥ್ಯದ ಶೇಕಡಾ 52.97 ಮಾತ್ರ ನೀರಿದೆ. ಹೀಗಾಗಿ 6000 ಕ್ಯೂಸೆಕ್ ಬದಲು 3000 ಕ್ಯೂಸೆಕ್​ಗೆ ನೀರಿನ ಪ್ರಮಾಣ ಇಳಿಕೆ ಮಾಡುವಂತೆ ಮನವಿಯಲ್ಲಿ ಆಗ್ರಹಿಸಲಾಗಿದೆ. ತಮಿಳುನಾಡಿಗೆ 15 ದಿನಗಳ ಕಾಲ ಪ್ರತಿದಿನ 6 ಸಾವಿರ ಕ್ಯೂಸೆಕ್​​ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಈ ಹಿಂದೆ ಆದೇಶಿಸಿತ್ತು.

ಹೆಚ್ಚುವರಿ ಹೊರಹರಿವು ಸಾಧ್ಯವಿಲ್ಲ ಎಂದ ಕರ್ನಾಟಕ

ಜೂ.1ರಿಂದ ಸೆ.15ರವರೆಗೆ 4 ಡ್ಯಾಮ್​ಗಳಿಗೆ ಒಳಹರಿವು 111 ಟಿಎಂಸಿ ಮಾತ್ರ ಇದ್ದು, ಇದೇ ಅವಧಿಯ 30 ವರ್ಷಗಳ ಸರಾಸರಿ ಒಳಹರಿವು 228.108 ಟಿಎಂಸಿಯಾಗಿದೆ. ಈ ವರ್ಷ ಶೇಕಡಾ 51ಕ್ಕೂ ಹೆಚ್ಚು ಒಳಹರಿವು ಕೊರತೆಯಿದೆ. ಆ.27ರಂದು 26,930 ಕ್ಯೂಸೆಕ್ ಇದ್ದ 4 ಡ್ಯಾಮ್​ಗಳ ಒಳಹರಿವು ಸೆ.8ರಂದು 3,887 ಕ್ಯೂಸೆಕ್​ಗೆ ಕುಸಿದಿದೆ. ಸುಮಾರು 15 ದಿನಗಳಲ್ಲಿ ಶೇಕಡಾ 85.57ರಷ್ಟು ಇಳಿಕೆ ಕಂಡುಬಂದಿದೆ. ಸೆ.15ರ ವೇಳೆ ಒಳಹರಿವು ಸುಮಾರು 3 ಸಾವಿರ ಕ್ಯೂಸೆಕ್​ಗೆ ಇಳಿದಿದ್ದು, ಈ ಹಿನ್ನೆಲೆ ಹೆಚ್ಚುವರಿ ಹೊರಹರಿವು ಸಾಧ್ಯವಿಲ್ಲ ಎಂದು ಸಿಡಬ್ಲ್ಯಎಂಎಗೆ ಸಲ್ಲಿಸಿದ ಮೇಲ್ಮನವಿಯಲ್ಲಿ ಕರ್ನಾಟಕ ಸರ್ಕಾರ ಉಲ್ಲೇಖಿಸಿದೆ.

LIVE TV

ಇದನ್ನೂ ಓದಿ: ಕರ್ನಾಟಕಕ್ಕೆ ಮತ್ತೊಮ್ಮೆ ಆಘಾತ: ತಮಿಳುನಾಡಿಗೆ ಮತ್ತೆ ಕಾವೇರಿ ನೀರು ಹರಿಸುವಂತೆ ಆದೇಶ

ಒಳಹರಿವಿನ ಕುಸಿತಕ್ಕೆ ಸೆಪ್ಟೆಂಬರ್ 8ರಂದು ನಡೆದ ಕಾವೇರಿ ನೀರು ನಿಯಂತ್ರಣ ಸಮಿತಿಯ 142ನೇ ಸಭೆಯಲ್ಲಿ ಭಾರತೀಯ ಹವಾಮಾನ ಇಲಾಖೆ (IMD) ಪ್ರತಿನಿಧಿ ನೀಡಿದ ಹೇಳಿಕೆಯೂ ಪೂರಕವಾಗಿದೆ. ಸೆಪ್ಟೆಂಬರ್ 8ರಿಂದ 18ರವರೆಗೆ ಕಾವೇರಿ ಜಲಾನಯನ ಪ್ರದೇಶದಲ್ಲಿ ಯಾವುದೇ ಪ್ರಮುಖ ಮಳೆಯ ಅವಧಿ ಇರುವ ಸಾಧ್ಯತೆ ಇಲ್ಲ. ಈ ಅವಧಿಯಲ್ಲಿ ನದಿಯ ಜಲಾನಯನ ಪ್ರದೇಶದಲ್ಲಿ ಒಟ್ಟಾರೆ ವಾಡಿಕೆಗಿಂತ ಕಡಿಮೆ ಮಳೆಯಾಗುವ ನಿರೀಕ್ಷೆಯಿದ್ದು, ಈ ಪರಿಸ್ಥಿತಿ 2026ರ ಅಕ್ಟೋಬರ್ ಮಧ್ಯಭಾಗದವರೆಗೂ ಮುಂದುವರಿಯುವ ಸಾಧ್ಯತೆಯಿದೆ ಎಂದು ಅವರು ತಿಳಿಸಿದ್ದರು. ಇಷ್ಟಾದರೂ, ಪ್ರಸಕ್ತ ಜಲ ವರ್ಷದಲ್ಲಿ ಕರ್ನಾಟಕವು ನೀಡಲಾದ ಪ್ರತಿಯೊಂದು ನಿರ್ದೇಶನವನ್ನೂ ವಾಸ್ತವವಾಗಿ ನಿಗದಿತ ಪ್ರಮಾಣಕ್ಕಿಂತ ಹೆಚ್ಚಿನ ರೀತಿಯಲ್ಲಿ ಪಾಲಿಸಿದೆ ಎಂದು ವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಕರ್ನಾಟಕ ಮನವರಿಕೆ ಮಾಡಿದೆ.

ವರದಿ: ನಟರಾಜ್​​, ಟಿವಿ9 ನವದೆಹಲಿ

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಪ್ರಸನ್ನ ಹೆಗಡೆ
ಪ್ರಸನ್ನ ಹೆಗಡೆ

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More
ಕಾಲು ಮುರಿದು ಬಿದ್ದಿದ್ದ ದ್ರೋಣ ಆನೆ ಈಗ ಫುಲ್ ಫಿಟ್
ಕಾಲು ಮುರಿದು ಬಿದ್ದಿದ್ದ ದ್ರೋಣ ಆನೆ ಈಗ ಫುಲ್ ಫಿಟ್
ಸ್ವಂತ ಹಣದಲ್ಲಿ ಹೆದ್ದಾರಿಯ ನೂರಾರು ಗುಂಡಿಗಳನ್ನು ಮುಚ್ಚಿದ ಯುವಕರಪಡೆ
ಸ್ವಂತ ಹಣದಲ್ಲಿ ಹೆದ್ದಾರಿಯ ನೂರಾರು ಗುಂಡಿಗಳನ್ನು ಮುಚ್ಚಿದ ಯುವಕರಪಡೆ
ಮೈಸೂರು ದಸರಾ 2026: ಗಜಪಡೆ, ಅಶ್ವಪಡೆಗೆ ಸಿಡಿಮದ್ದು ತಾಲೀಮು
ಮೈಸೂರು ದಸರಾ 2026: ಗಜಪಡೆ, ಅಶ್ವಪಡೆಗೆ ಸಿಡಿಮದ್ದು ತಾಲೀಮು
ಕೊಪ್ಪಳ: ತಾನೇ ನಲ್ಲಿ ತಿರುಗಿಸಿ ದಾಹ ಇಂಗಿಸಿಕೊಂಡ ಗೋಮಾತೆ!
ಕೊಪ್ಪಳ: ತಾನೇ ನಲ್ಲಿ ತಿರುಗಿಸಿ ದಾಹ ಇಂಗಿಸಿಕೊಂಡ ಗೋಮಾತೆ!
4 ಗಂಟೆಗೂ ಹೆಚ್ಚು ಕಾಲ ನಿಂತಲ್ಲೇ ನಿಂತ ವಂದೇ ಭಾರತ್ ಸೇರಿ 4 ರೈಲುಗಳು!
4 ಗಂಟೆಗೂ ಹೆಚ್ಚು ಕಾಲ ನಿಂತಲ್ಲೇ ನಿಂತ ವಂದೇ ಭಾರತ್ ಸೇರಿ 4 ರೈಲುಗಳು!
ಪ್ರಧಾನಿ ಮೋದಿಯವರ 25 ವರ್ಷಗಳ ಸಾರ್ಥಕ ಆಡಳಿತ: ಅಭಿವೃದ್ಧಿಯ ಪಥದಲ್ಲಿ ಭಾರತ
ಪ್ರಧಾನಿ ಮೋದಿಯವರ 25 ವರ್ಷಗಳ ಸಾರ್ಥಕ ಆಡಳಿತ: ಅಭಿವೃದ್ಧಿಯ ಪಥದಲ್ಲಿ ಭಾರತ
ವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಪ್ರಧಾನಿ ನರೇಂದ್ರ ಮೋದಿ
ವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಪ್ರಧಾನಿ ನರೇಂದ್ರ ಮೋದಿ
ಆಹಾರದಾಸೆಗೆ ಕಾರಿನ ಮೇಲೆ ಕಾಲಿಟ್ಟ ಕಾಡಾನೆ! ಪ್ರಯಾಣಿಕರು ಜಸ್ಟ್ ಮಿಸ್
ಆಹಾರದಾಸೆಗೆ ಕಾರಿನ ಮೇಲೆ ಕಾಲಿಟ್ಟ ಕಾಡಾನೆ! ಪ್ರಯಾಣಿಕರು ಜಸ್ಟ್ ಮಿಸ್
‘ಸ್ತ್ರೀ ವ್ಯಾಮೋಹ ಇರುವ ಕಳ್ಳ ನಾಯಿ’; ಯಶಸ್ ವಿರುದ್ಧ ಮಿತಿಮೀರಿದ ಮಂಜು ಮಾತು
‘ಸ್ತ್ರೀ ವ್ಯಾಮೋಹ ಇರುವ ಕಳ್ಳ ನಾಯಿ’; ಯಶಸ್ ವಿರುದ್ಧ ಮಿತಿಮೀರಿದ ಮಂಜು ಮಾತು
ಪ್ರಧಾನಿ ನರೇಂದ್ರ ಮೋದಿ ಅವರ 25 ವರ್ಷಗಳ ಆಡಳಿತ: ಒಂದು ಅವಲೋಕನ
ಪ್ರಧಾನಿ ನರೇಂದ್ರ ಮೋದಿ ಅವರ 25 ವರ್ಷಗಳ ಆಡಳಿತ: ಒಂದು ಅವಲೋಕನ