AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾವೇರಿ ಜಲ ವಿವಾದ: ತಮಿಳುನಾಡಿಗೆ ಹರಿಸಬೇಕಿರುವ ನೀರಿನ ಪ್ರಮಾಣ 2000 ಕ್ಯೂಸೆಕ್​​ಗೆ ಇಳಿಸುವಂತೆ CWMAಗೆ ಕರ್ನಾಟಕ ಮನವಿ

ಕಾವೇರಿ ಜಲಾಶಯಗಳಲ್ಲಿ ಒಳಹರಿವು ಕ್ಷೀಣಿಸಿ 49 ಟಿಎಂಸಿ ನೀರು ಮಾತ್ರ ಲಭ್ಯವಿರುವ ಹಿನ್ನೆಲೆಯಲ್ಲಿ, ತಮಿಳುನಾಡಿಗೆ ಬಿಡಬೇಕಾದ ನೀರಿನ ಪ್ರಮಾಣವನ್ನು 4,000 ಕ್ಯೂಸೆಕ್ಸ್ ಬದಲು 2,000 ಕ್ಯೂಸೆಕ್ಸ್‌ಗೆ ಇಳಿಸಲು ಸಿಡಬ್ಲ್ಯೂಎಂಎಗೆ ಕರ್ನಾಟಕ ಮನವಿ ಮಾಡಿದೆ. ಕಣಿವೆಯ 47 ತಾಲೂಕುಗಳನ್ನು ತೀವ್ರ ಬರಪೀಡಿತ ಎಂದು ಘೋಷಣೆ ಮಾಡಲಾಗಿದ್ದು, ಕೆಆರ್‌ಎಸ್ ಮತ್ತು ಕಬಿನಿ ಜಲಾಶಯಗಳಿಂದ ಗಣನೀಯ ನೀರು ಬಿಡುಗಡೆ ಮಾಡಲು ಸಾಧ್ಯವಿಲ್ಲ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.

ಕಾವೇರಿ ಜಲ ವಿವಾದ: ತಮಿಳುನಾಡಿಗೆ ಹರಿಸಬೇಕಿರುವ ನೀರಿನ ಪ್ರಮಾಣ 2000 ಕ್ಯೂಸೆಕ್​​ಗೆ ಇಳಿಸುವಂತೆ CWMAಗೆ ಕರ್ನಾಟಕ ಮನವಿ
ಸಾಂದರ್ಭಿಕ ಚಿತ್ರImage Credit source: PTI
ಹರೀಶ್ ಜಿ.ಆರ್​.
| Edited By: |

Updated on:Oct 02, 2026 | 6:31 PM

Share

ಬೆಂಗಳೂರು, ಅಕ್ಟೋಬರ್​​ 02: ನೆರೆ ರಾಜ್ಯ ತಮಿಳುನಾಡಿಗೆ ಹರಿಸಲು ಆದೇಶಿಸಿರುವ ಕಾವೇರಿ ನದಿ ನೀರಿನ ಪ್ರಮಾಣವನ್ನು 2,000 ಕ್ಯೂಸೆಕ್ಸ್‌ಗೆ ಇಳಿಸಲು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ(CWMA)ಕ್ಕೆ ಕರ್ನಾಟಕ ಮನವಿ ಮಾಡಿದೆ. ಕಾವೇರಿ ಜಲಾಶಯಗಳಿಗೆ ಒಳಹರಿವು ತೀವ್ರವಾಗಿ ಕ್ಷೀಣಿಸಿದೆ. ಕೆಆರ್‌ಎಸ್ ಸೇರಿದಂತೆ ಕಾವೇರಿ ಕೊಳ್ಳದ ಪ್ರಮುಖ 4 ಜಲಾಶಯಗಳಲ್ಲಿ ಲಭ್ಯವಿರುವ ನೀರು ಕೇವಲ 49 ಟಿಎಂಸಿ ಮಾತ್ರವಾಗಿದೆ. ಈ ಪೈಕಿ ನೀರನ್ನು ಮುಂದಿನ ಜೂನ್​​ವರೆಗೆ ಕುಡಿಯಲು ಕಾಯ್ದಿರಿಸುವುದು ಅನಿವಾರ್ಯವಾಗಿದೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.

ಬಿಳಿಗುಂಡ್ಲುವಿನಲ್ಲಿ 44.21 ಟಿಎಂಸಿ ನೀರಿನ ಹರಿವು ದಾಖಲು

ಕಣಿವೆಯ 47 ತಾಲೂಕುಗಳನ್ನು ತೀವ್ರ ಬರಪೀಡಿತ ಎಂದು ಘೋಷಣೆ ಮಾಡಲಾಗಿದ್ದು, ಇಲ್ಲಿಯವರೆಗೆ ಬಿಳಿಗುಂಡ್ಲುವಿನಲ್ಲಿ 44.21 ಟಿಎಂಸಿ ನೀರಿನ ಹರಿವು ದಾಖಲಾಗಿದೆ. ಮತ್ತೆ ಕೆಆರ್‌ಎಸ್ ಮತ್ತು ಕಬಿನಿ ಜಲಾಶಯಗಳಿಂದ ಗಣನೀಯ ನೀರು ಬಿಡುಗಡೆ ಮಾಡಲು ಸಾಧ್ಯವಿಲ್ಲ. ತಮಿಳುನಾಡಿನಲ್ಲಿ ಈಶಾನ್ಯ ಮಾನ್ಸೂನ್ ಉತ್ತಮವಾಗಿರುವ ಭರವಸೆ ಇರುವ ಕಾರಣ  ಬಿಳಿಗುಂಡ್ಲುವಿನಲ್ಲಿ ಹರಿಸಬೇಕಾದ ನೀರಿನ ಪ್ರಮಾಣವನ್ನು 4 ಸಾವಿರ ಕ್ಯೂಸೆಕ್​​ ಬದಲು 2 ಸಾವಿರ ಕ್ಯೂಸೆಕ್ಸ್‌ಗೆ ತಗ್ಗಿಸುವಂತೆ ಕರ್ನಾಟಕ ಆಗ್ರಹಿಸಿದೆ.

LIVE TV

ಇದನ್ನೂ ಓದಿ:  ಕರ್ನಾಟಕಕ್ಕೆ ಗಾಯದ ಮೇಲೆ ಬರೆ ಎಳೆದ CWRC: ತಮಿಳುನಾಡಿಗೆ ನಿತ್ಯ 4 ಸಾವಿರ ಕ್ಯೂಸೆಕ್​​ ನೀರು ಹರಿಸಲು ಶಿಫಾರಸು

ತೀವ್ರ ಬರದ ಸ್ಥಿತಿಯ ನಡುವೆಯೂ ತಮಿಳುನಾಡಿಗೆ ಮುಂದಿನ 15 ದಿನಗಳವರೆಗೆ ನಿತ್ಯ 4 ಸಾವಿರ ಕ್ಯೂಸೆಕ್​​ ನೀರು ಹರಿಸಲು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಆದೇಶಿಸಿತ್ತು. ಮತ್ತೊಂದೆಡೆ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುವ ವಿಚಾರ ಸಂಬಂಧ ಸುಪ್ರೀಂಕೋರ್ಟ್​​ನಲ್ಲಿಯೂ ಅರ್ಜಿ ವಿಚಾರಣೆ ನಡೆಯುತ್ತಿದ್ದು, CWMA ಆದೇಶ ಪಾಲನೆ ಮುಂದುವರಿಸಲು ಕರ್ನಾಟಕಕ್ಕೆ ನ್ಯಾಯಾಲಯ ಸೂಚನೆ ನೀಡಿತ್ತು. ತಮಿಳುನಾಡಿನ ಆಕ್ಷೇಪಕ್ಕೆ ಒಂದು ವಾರದಲ್ಲಿ ಅಫಿಡವಿಟ್ ಸಲ್ಲಿಸಲು ತಿಳಿಸಿ ಮುಂದಿನ ವಿಚಾರಣೆಯನ್ನು ಅಕ್ಟೋಬರ್ 12ಕ್ಕೆ ಮುಂದೂಡಿಕೆ ಮಾಡಿತ್ತು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 6:29 pm, Fri, 2 October 26

Follow Us
ಹರೀಶ್ ಜಿ.ಆರ್​.
ಹರೀಶ್ ಜಿ.ಆರ್​.

ಹರೀಶ್ ಜಿ.ಆರ್ ಮೂಲತಃ ಚಿಕ್ಕಮಗಳೂರಿನವರಾಗಿದ್ದು, ಪೌಢ ಶಿಕ್ಷಣವನ್ನು ಉಜಿರೆಯ ಎಸ್ ಡಿಎಂ ಸಂಸ್ಥೆಯಲ್ಲಿ ಹಾಗೂ ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ದಲ್ಲಿ ಬಿ.ಎ ಪದವಿಯನ್ನು, ಮಾನಸ ಗಂಗೋತ್ರಿಯ EMMRC ಸಂಸ್ಥೆಯ ಎಲೆಕ್ಟ್ರಾನಿಕ್ ಮೀಡಿಯಾ ವಿಷಯದಲ್ಲಿ ಎಂಎಸ್ಸಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಸಧ್ಯ ಪತ್ರಿಕೋದ್ಯಮದಲ್ಲಿ 14 ವರ್ಷದ ಅನುಭವ ಹೊಂದಿರುವ ಇವರು, ದೆಹಲಿಯಲ್ಲಿಯೇ 10 ವರ್ಷಗಳ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದಾರೆ. ರಾಜ್ಯ, ರಾಜಕೀಯ, ರಾಷ್ಟ್ರೀಯ, ಅಂತರರಾಷ್ಟ್ರೀಯ, ಸುಪ್ರೀಂಕೋರ್ಟ್ ವರದಿಗಾರಿಕೆಯಲ್ಲಿ ಅಪಾರ ಅನುಭವ ಹೊಂದಿದ್ದಾರೆ. ಅಯೋಧ್ಯೆ ರಾಮಮಂದಿರದ ತೀರ್ಪು ನಿಂದ ಹಿಡಿದು ಮಂದಿರ ಉದ್ಘಾಟನೆವರೆಗೂ ವರದಿ ಮಾಡಿದ ಅನುಭವ ಹೊಂದಿದ್ದಾರೆ. ಪುಲ್ವಾಮ ಉಗ್ರರ ದಾಳಿ, ಪಹಲ್ಗಾಂ ಉಗ್ರರ ದಾಳಿ, ಆದಾದ ನಂತರದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಗಳನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಗ್ರೌಂಡ್ ರಿಪೋರ್ಟ್ ಮಾಡಿರುವ ಅನುಭವ ಹೊಂದಿದ್ದಾರೆ.. ಉತ್ತರಖಂಡದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪಗಳನ್ನು ಗ್ರೌಂಡ್ ರಿಪೋರ್ಟ್ ಮಾಡಿದ್ದಾರೆ. 2019‌ ಹಾಗೂ 2024ರ ಲೋಕಸಭಾ ಚುನಾವಣೆಯಲ್ಲಿ ವಿವಿಧ ರಾಜ್ಯಗಳನ್ನು ಸುತ್ತಿ ಜನರ ರಾಜಕೀಯ ನಾಡಿಮಿಡಿತದ ವರದಿ ಮಾಡಿದ್ದಾರೆ.. ಸಧ್ಯ ಇವರು ಬೆಂಗಳೂರಿನಲ್ಲಿ ರಾಜಕೀಯ ವರದಿಗಾರರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.

Read More