AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾವೇರಿ ಜಲ ವಿವಾದ: ಆ.13ರಂದು ಅಖಂಡ ಕರ್ನಾಟಕ ಬಂದ್​​ಗೆ ಕರೆ ನೀಡಿದ ಕನ್ನಡಪರ ಸಂಘಟನೆಗಳು

Cauvery Water Dispute: ಕರ್ನಾಟಕದಲ್ಲಿ ಭೀಕರ ಮಳೆ ಕೊರತೆ ಇರುವ ನಡುವೆಯೂ ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ನೀಡಿರುವ CWMA ಆದೇಶವನ್ನು ಖಂಡಿಸಿ, ಆಗಸ್ಟ್ 13 ರಂದು ಅಖಂಡ ಕರ್ನಾಟಕ ಬಂದ್‌ಗೆ ಕನ್ನಡಪರ ಸಂಘಟನೆಗಳು ಕರೆ ನೀಡಿವೆ. ಬೆಂಗಳೂರಿನ ವುಡ್​ಲ್ಯಾಂಡ್ ಹೋಟೆಲ್​ನಲ್ಲಿ ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಕನ್ನಡ ಪರ ಹೋರಾಟಗಾರ ವಾಟಾಳ್​​ ನಾಗರಾಜ್​​ ಈ ಬಗ್ಗೆ ಅಧಿಕೃತ ಮಾಹಿತಿ ನೀಡಿದ್ದಾರೆ.

ಕಾವೇರಿ ಜಲ ವಿವಾದ: ಆ.13ರಂದು ಅಖಂಡ ಕರ್ನಾಟಕ ಬಂದ್​​ಗೆ ಕರೆ ನೀಡಿದ ಕನ್ನಡಪರ ಸಂಘಟನೆಗಳು
ವಾಟಾಳ್​​ ನಾಗರಾಜ್​​ ಸುದ್ದಿಗೋಷ್ಠಿImage Credit source: Tv9 Kannada
ಕಿರಣ್​ ಸೂರ್ಯ
| Edited By: |

Updated on:Jul 31, 2026 | 2:03 PM

Share

ಮುಖ್ಯಾಂಶಗಳು

  • ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಅದೇಶ
  • CWMA ನಿರ್ಧಾರ ಖಂಡಿಸಿ ಅಖಂಢ ಕರ್ನಾಟಕ ಬಂದ್​​
  • ಆ.13ರಂದು ಬಂದ್​​ಗೆ ಕರೆ ನೀಡಿದ ಕನ್ನಡಪರ ಸಂಘಟನೆಗಳು

ಬೆಂಗಳೂರು, ಜುಲೈ 31: ಕರ್ನಾಟಕದಲ್ಲಿಯೇ ನೀರಿಲ್ಲದಿರುವಾಗ ನೆರೆ ರಾಜ್ಯ ತಮಿಳುನಾಡಿಗೆ ನೀರು ಹರಿಸುವಂತೆ ಆದೇಶಿಸಿರುವ CWMA ನಿರ್ಧಾರ ಖಂಡಿಸಿ ಕನ್ನಡಪರ ಸಂಘಟನೆಗಳು ಆಗಸ್ಟ್ 13ರ ಗುರುವಾರ ಅಖಂಡ ಕರ್ನಾಟಕ ಬಂದ್​​ಗೆ ಕರೆ ನೀಡಿವೆ. ಈ ಬಗ್ಗೆ ಕನ್ನಡ ಪರ ಸಂಘಟನೆಗಳ ಜೊತೆ ಚರ್ಚೆ ನಂತರ ಕನ್ನಡ ಪರ ಹೋರಾಟಗಾರ ವಾಟಾಳ್​ ನಾಗರಾಜ್ ಅಧಿಕೃತ ಘೋಷಣೆ ಮಾಡಿದ್ದಾರೆ. ಬೆಳಗ್ಗೆ 6ರಿಂದ ಸಂಜೆ 6ರವರೆಗೆ ಕರ್ನಾಟಕ ಬಂದ್​​ಗೆ ತೀರ್ಮಾನಿಸಲಾಗಿದೆ.

ಬಂದ್​​ಗೆ ಯಾವೆಲ್ಲ ಸಂಘಟನೆಗಳ ಬೆಂಬಲ?

  • ರಾಜ್ಯ ಸರ್ಕಾರಿ ನೌಕರರ ಸಂಘ
  • ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ
  • ಲಾರಿ ಮಾಲೀಕರು ಮತ್ತು ಚಾಲಕರ ಸಂಘ
  • ಆಟೋ ಚಾಲಕರ ಸಂಘಟನೆ
  • ಓಲಾ & ಉಬರ್ ಸಂಘಟನೆ
  • ಕಾರ್ಮಿಕರ ಸಂಘಟನೆಗಳು
  • ಬೀದಿ ಬದಿ ವ್ಯಾಪಾರಿಗಳು

ಇದನ್ನೂ ಓದಿ: ಕಾವೇರಿ ಜಲ ವಿವಾದ: ಮಂಡ್ಯದ ಕೆಆರ್​​ಎಸ್​​ ಬಳಿ ಬಿಜೆಪಿಗರಿಂದ ಬೃಹತ್​​ ಪ್ರತಿಭಟನೆ

ಬೆಂಗಳೂರಿನ ವುಡ್​ಲ್ಯಾಂಡ್ ಹೋಟೆಲ್​ನಲ್ಲಿ ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ವಾಟಾಳ್​​ ನಾಗರಾಜ್​​, ಇಂತಹ ಸಂದರ್ಭ ನಮಗೆ ಬರಬಾರದಿತ್ತು. ತಮಿಳುನಾಡಿನವರ ಜೊತೆ ಯುದ್ಧ ಮಾಡಬೇಕೆಂದ ಉದ್ದೇಶವಿರಲಿಲ್ಲ. ಆದರೆ ಅವರು ಮೊದಲಿನಿಂದ ನಮಗೆ ತೊಂದರೆ ಕೊಡುತ್ತಿದ್ದಾರೆ. 1967ರಲ್ಲಿ ನಾನು ವಿಧಾನಸಭಾ ಸದಸ್ಯನಾಗಿದ್ದೆ. ಈ ಹಿಂದೆ ತಮಿಳುನಾಡು ಸಿಎಂ ಕರುಣಾನಿಧಿ ಬೆಂಗಳೂರಿಗೆ ಬರುತ್ತಿದ್ದರು. ಅಂದಿನ ಸಿಎಂ ನಿಜಲಿಂಗಪ್ಪ ಜೊತೆ ಸೌಹಾರ್ದಯುತವಾಗಿ ಸಭೆ ನಡೆಸಿ ನೀರು ಹರಿಸುವಂತೆ ಕೇಳುತ್ತಿದ್ದರು ಎಂಬುದನ್ನೂ ಅವರು ಈ ವೇಳೆ ನೆನಪಿಸಿಕೊಂಡಿದ್ದಾರೆ.

ಏರ್​ಪೋರ್ಟ್​ಗೆ ಮುತ್ತಿಗೆ ಎಚ್ಚರಿಕೆ

ರಾಜ್ಯದಲ್ಲಿ ಪ್ರಸ್ತುತ ಮಳೆ ಅಭಾವದಿಂದ ನೀರಿನ ಕೊರತೆಯಿದೆ. ಇಂತಹ ಸಂಕಷ್ಟದ ಪರಿಸ್ಥಿತಿಯಲ್ಲಿ ತಮಿಳುನಾಡಿಗೆ 15 ದಿನ 3,500 ಕ್ಯೂಸೆಕ್ ನೀರು ಹರಿಸುವಂತೆ CWMA ಆದೇಶಿಸಿದೆ. ಸಿಎಂ ಡಿಕೆಶಿ ತಮಿಳುನಾಡು ಸಿಎಂ ವಿಜಯ್​ರನ್ನು ಆಹ್ವಾನಿಸಿದ್ದಾರೆ. ವಿಜಯ್ ರಾಜ್ಯಕ್ಕೆ ಬರುವುದನ್ನು ವಿರೋಧಿಸಲ್ಲ. ಬದಲಾಗಿ ತಮಿಳುನಾಡಿಗೆ ನೀರು ಹರಿಸುವುದು ಬೇಡವೆಂದರೆ ಸ್ವಾಗತಿಸುತ್ತೇವೆ. ಸಿಡಬ್ಲ್ಯುಎಂಎ ಆದೇಶದಂತೆ ನೀರು ಹರಿಸಿ ಎಂದು ಹೇಳುವುದಾದರೆ ವಿಜಯ್ ಬಂದಾಗ ಏರ್​ಪೋರ್ಟ್​ಗೆ ಮುತ್ತಿಗೆ ಹಾಕುತ್ತೇವೆ ಎಂದು ವಾಟಾಳ್​​ ಎಚ್ಚರಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 1:42 pm, Fri, 31 July 26

Follow Us
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು