ಬೆಂಗಳೂರು: ನೀರಿಗಾಗಿ ಪರದಾಟ; ಸಮಸ್ಯೆ ಹೇಳಿದಕ್ಕೆ ಕಾಂಗ್ರೆಸ್ ಮುಖಂಡನಿಂದ ಧಮ್ಕಿ

ನೀರು ಬರುತ್ತಿಲ್ಲವೆಂದು ಹೇಳಿದಕ್ಕೆ ಕಾಂಗ್ರೆಸ್ ಮುಖಂಡ ಜನರಿಗೆ ಧಮ್ಕಿ ಹಾಕಿರುವ ಆರೋಪ ಕೇಳಿಬಂದಿದೆ. ನೀವು ಏನಾದರೂ ಸಮಸ್ಯೆ ಹೇಳಿದರೇ, ನಾಳೆಯಿಂದ ನಿಮ್ಮ ಮನೆಗಳಿಗೆ ನೀರು ಬಿಡುವುದಿಲ್ಲ ಎಂದು ಕಾಂಗ್ರೆಸ್ ಮುಖಂಡ ಶಿವಣ್ಣ ಧಮ್ಕಿ ಹಾಕಿದ್ದಾರೆ.

ಬೆಂಗಳೂರು: ನೀರಿಗಾಗಿ ಪರದಾಟ; ಸಮಸ್ಯೆ ಹೇಳಿದಕ್ಕೆ ಕಾಂಗ್ರೆಸ್ ಮುಖಂಡನಿಂದ ಧಮ್ಕಿ
ನೀರಿಗಾಗಿ ಪರದಾಟ
Follow us
TV9 Web
| Updated By: ವಿವೇಕ ಬಿರಾದಾರ

Updated on:Sep 22, 2023 | 8:26 AM

ಬೆಂಗಳೂರು ಸೆ.22: ಕಾವೇರಿ ನದಿ (Cauvery water Dispute) ನೀರು ವಿಚಾರವಾಗಿ ಸುಪ್ರೀಂಕೋರ್ಟ್ ನೀಡಿದ ತೀರ್ಪು ಕಾವೇರಿ ಜಲಾಶಯನ ಪ್ರದೇಶ ಹಾಗೂ ಬೆಂಗಳೂರಿಗರನ್ನು (Bengaluru) ಮತ್ತೆ ಸಂಕಷ್ಟಕ್ಕೆ ಸಿಲುಕಿಸಿದೆ. ನಗರದ ಬೋರ್​​​ವೆಲ್​​ಗಳಲ್ಲಿ ನೀರು ಬರುತ್ತಿಲ್ಲ, ವಾರಕ್ಕೊಮ್ಮೆ ಬರುತ್ತಿದ್ದ ಕಾವೇರಿ ನೀರು ಹದಿನೈದು ದಿನವಾದರೂ ಪೂರೈಕೆಯಾಗುತ್ತಿಲ್ಲ. ಇದರಿಂದ ಕುಡಿಯಲು, ಬಳಸಲು ನೀರಿಲ್ಲದೆ ಇಲ್ಲಿನ ಜನರು ಪರದಾಡುತ್ತಿದ್ದಾರೆ. ಕುಡಿಯಲು ನೀರಿಲ್ಲದೆ ಬೊಮ್ಮನಹಳ್ಳಿ, ಬೆಂಗಳೂರು ದಕ್ಷಿಣ, ಆನೇಕಲ್ ಕ್ಷೇತ್ರದ ನಿವಾಸಿಗಳಿಗೆ ಸಾಕಷ್ಟು ತೊಂದರೆಯಾಗುತ್ತಿದೆ.

ಬೊಮ್ಮನಹಳ್ಳಿ, ಬೆಂಗಳೂರು ದಕ್ಷಿಣ ಹಾಗೂ ಆನೇಕಲ್ ಮೂರು ವಿಧಾನಸಭಾ ಕ್ಷೇತ್ರದಲ್ಲಿ ಒಳಪಡುವ ಬಿಬಿಎಂಪಿಯ ಹೊಸ ವಾರ್ಡ್​ ​ಕೂಡ್ಲು ವಿಲೇಜ್​​ನಲ್ಲಿ ಕುಡಿಯಲು ನೀರು ಬರುತ್ತಿಲ್ಲ. ಈ ಕೂಡ್ಲು ವಾರ್ಡ್​​​ನಲ್ಲಿ ಎರಡು ವಾರಕ್ಕೊಮ್ಮೆ ಅಥವಾ ಮೂರು ವಾರಕ್ಕೊಮ್ಮೆ ನೀರು ಬಿಡಲಾಗುತ್ತಿದ್ದು, ಕುಡಿಯಲು ಯೋಗ್ಯವಾಗಿರುವುದಿಲ್ಲ. ಮನೆ ಬಳಕೆಗೆ ಟ್ಯಾಂಕರ್ ನೀರು ಸರಬರಾಜು ಮಾಡಲಾಗುತ್ತಿದೆ. ಆದರೆ ಈ ನೀರು ಕೂಡ ಶುದ್ಧವಾಗಿ ಇರುವುದಿಲ್ಲ. ಮನೆ ಮಾಲೀಕರಿಗೆ ಮಾತ್ರ ಟ್ಯಾಂಕರ್​ ನೀರು ಪೂರೈಕೆ ಮಾಡಲಾಗುತ್ತಿದ್ದು, ಬಾಡಿಗೆ ಮನೆಯವರು ದುಡ್ಡು ಕೊಟ್ಟು ಟ್ಯಾಂಕರ್ ಮೂಲಕ ನೀರು ಹಾಕಿಸಿಕೊಳ್ಳಬೇಕು.

ಇದನ್ನೂ ಓದಿ: ಕರ್ನಾಟಕದಲ್ಲಿ ಭುಗಿಲೆದ್ದ ಕಾವೇರಿ ಕಿಚ್ಚು: ಬೆಂಗಳೂರಿನಲ್ಲಿ ತಮಿಳರು ವಾಸಿಸುವ ಏರಿಯಾಗಳಲ್ಲಿ ಕಟ್ಟೆಚ್ಚರ

ನೀರು ಬರುತ್ತಿಲ್ಲವೆಂದು ಹೇಳಿದಕ್ಕೆ ಕಾಂಗ್ರೆಸ್ ಮುಖಂಡ ಜನರಿಗೆ ಧಮ್ಕಿ ಹಾಕಿರುವ ಆರೋಪ ಕೇಳಿಬಂದಿದೆ. ನೀವು ಏನಾದರೂ ಸಮಸ್ಯೆ ಹೇಳಿದರೇ, ನಾಳೆಯಿಂದ ನಿಮ್ಮ ಮನೆಗಳಿಗೆ ನೀರು ಬಿಡುವುದಿಲ್ಲ ಎಂದು ಕಾಂಗ್ರೆಸ್ ಮುಖಂಡ ಶಿವಣ್ಣ ಧಮ್ಕಿ ಹಾಕಿದ್ದಾರೆ. ಕಳೆದ ವರ್ಷ ನೆಪಮಾತ್ರಕ್ಕೆ ಎರಡು ಬೋರ್​​ವೆಲ್​ಗಳನ್ನು ಕೊರೆಯಲಾಯಿತು. ಆದರೆ ಆ ಬೋರ್ ವೆಲ್​ಗಳಲ್ಲಿ ಕೆಲವು ದಿನಗಳು ಮಾತ್ರ ನೀರು ಬಂತು. ಆದರೆ ಈಗ ನೀರು ಬರುತ್ತಿಲ್ಲ.

ಇದನ್ನೇ ಬಂಡವಾಳ ಮಾಡಿಕೊಂಡಿರುವ ಕೆಲ ಟ್ಯಾಂಕರ್ ಮಾಲೀಕರು ಒಂದು ವಾಟರ್ ಟ್ಯಾಂಕ್ ನೀರಿಗೆ ಸಾವಿರದಿಂದ ಒಂದೂವರೆ, ಎರಡು ಸಾವಿರ ರುಪಾಯಿವರೆಗೆ ತೆಗೆದುಕೊಳ್ಳುತ್ತಿದ್ದಾರಂತೆ. ಇದರಲ್ಲಿ ಕಾಂಗ್ರೆಸ್ ಮುಖಂಡ ಶಿವಣ್ಣ, ಮತ್ತು ವಾಟರ್ ಟ್ಯಾಂಕರ್​​ ಮಾಲಿಕನೊಂದಿಗೆ ಮಾಫಿಯಾಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 8:21 am, Fri, 22 September 23

ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ